Easy Take it Easy…; ಮಧ್ಯಮ ವರ್ಗದ ಸುತ್ತ ಮರ್ಯಾದೆ ಪ್ರಶ್ನೆ
Team Udayavani, Oct 20, 2024, 11:49 AM IST
“ಮರ್ಯಾದೆ ಪ್ರಶ್ನೆ’ -ಹೀಗೊಂದು ಸಿನಿಮಾ ಬಿಡುಗಡೆಗೆ ಸಿದ್ಧವಾಗಿದ್ದು, ನವೆಂಬರ್ 22ಕ್ಕೆ ತೆರೆಕಾಣುತ್ತಿದೆ. ಈಗ ಈ ಚಿತ್ರದ ಮೊದಲ ಹಾಡು ಬಿಡುಗಡೆಯಾಗಿದೆ. ಮೊದಲ ಹಾಡನ್ನು ಪ್ರಮೋದ್ ಮರವಂತೆ ಅವರು ಬರೆದು ನಟ ಶರಣ್ ಹೃದಯಾ ಅವರು ಹಾಡಿದ್ದಾರೆ.
ಮರ್ಯಾದೆ ಪ್ರಶ್ನೆ ಸಿನಿಮಾದ ಸಂಗೀತ ನಿರ್ದೇಶಕ ಅರ್ಜುನ್ ರಾಮು ಈ ಹಾಡನ್ನು ಜಾನಪದ ಶೈಲಿಯಲ್ಲಿ ಕಂಪೋಸ್ ಮಾಡಿದ್ದಾರೆ. ಈ ಹಾಡಿನಲ್ಲಿ ನಟರ ಪಾತ್ರದ ಪರಿಚಯದ ಜೊತೆ ಅವರು ಬದುಕುತ್ತಿರುವ ಮಧ್ಯಮ ವರ್ಗದ ಸಮಾಜವನ್ನು ಪರಿಚಯಿಸುವ ಸಲುವಾಗಿ ಸಾಂದರ್ಭಿಕವಾಗಿ ಈ ಹಾಡನ್ನು ಬಳಸಲಾಗಿದೆ ಎಂದು ಚಿತ್ರದ ನಿರ್ದೇಶಕ ನಾಗರಾಜ ಸೋಮಯಾಜಿ ತಿಳಿಸಿದ್ದಾರೆ.
ಈಗಾಗಲೇ ಬಿಡುಗಡೆ ಮಾಡಿರುವ ಕ್ಯಾರೆಕ್ಟರ್ ಪೋಸ್ಟರ್ನಲ್ಲಿ ರಾಕೇಶ್ ಅಡಿಗ ಅವರು ಒಬ್ಬ ಕಾರ್ಯಕರ್ತನಾಗಿ ಸುನಿಲ್ ರಾವ್ ಅವರು ಒಬ್ಬ ಡೆಲಿವರಿ ಬಾಯ್ ಆಗಿ, ಪೂರ್ಣಚಂದ್ರ ಮೈಸೂರು ಕ್ಯಾಬ್ ಡ್ರೈವರ್ ಆಗಿ, ತೇಜು ಬೆಳ್ವಾಡಿ ಅವರು ಸೇಲ್ಸ್ ಗರ್ಲ್ ಆಗಿ ತಮ್ಮ ಪಾತ್ರವನ್ನು ನಿರ್ವಹಿಸಿದ್ದಾರೆ. ಮಧ್ಯಮ ವರ್ಗದ ಬಗ್ಗೆ ಇರುವ ಈ ಕತೆಯಲ್ಲಿ ಈ ಹಾಡು ತುಂಬಾ ಸೊಗಸಾದ ಸಾಹಿತ್ಯವನ್ನು ಒಳಗೊಂಡಿದೆ.
ಈ ಹಾಡಿನ ಸಾಹಿತ್ಯದಲ್ಲಿ ಬರುವ ಪ್ರತಿ ಸಾಲುಗಳು ಧನಾತ್ಮಕ ಚಿಂತನೆಗೆ ಕರೆದೊಯ್ಯುತ್ತದೆ. ದಿನ ಬೆಳಗಾದರೆ ಕೇಳುವ ಹಾಡಾಗಿರಬೇಕು ಎಂಬುದು ಈ ಹಾಡಿನ ಮುಖ್ಯ ಉದ್ದೇಶವಾಗಿ ಕಾಣುತ್ತಿದೆ. ಈ ಹಾಡು ಸಕ್ಕತ್ ಸ್ಟುಡಿಯೋ ಯುಟ್ಯೂಬ್ ಚಾನೆಲ್ ನಲ್ಲಿ ಬಿಡುಗಡೆಯಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Director Guruprasad: ʼಮಠʼ ನಿರ್ದೇಶಕ ಗುರುಪ್ರಸಾದ್ ವಿರುದ್ಧ ದೂರು; ಆಗಿದ್ದೇನು?
Mayur Patel: ಭೂಮಿ ಅತಿಕ್ರಮಣ ಆರೋಪ; ನಟ ಮಯೂರ್ ವಿರುದ್ಧ ಎಫ್ಐಆರ್
Saroja Sanjeev: ಕಿಚ್ಚನಿಗೆ ಮಾತೃ ವಿಯೋಗ; ಸುದೀಪ್ ತಾಯಿ ಸರೋಜಾ ಸಂಜೀವ್ ಇನ್ನಿಲ್ಲ
Devaru Ruju Madidanu Movie ಸುನಿ ಸಿನಿಮಾದ ನಾಯಕಿಯರಿವರು..
BBK11: ಬಿಗ್ ಬಾಸ್ ಮನೆಯಿಂದ ಹೊರ ಹೋದ ಕೂಡಲೇ ಆಡಿಯೋ ಹರಿಬಿಟ್ಟ ಜಗದೀಶ್ ; ವೈರಲ್
MUST WATCH
ಹೊಸ ಸೇರ್ಪಡೆ
World Osteoporosis Day: ಆಸ್ಟಿಯೊಪೊರೋಸಿಸ್ ಅಥವಾ ಮೂಳೆ ಸವಕಳಿ ಎಂದರೇನು?
Maha Election: ಬಿಜೆಪಿ ಮೊದಲ ಪಟ್ಟಿ ಬಿಡುಗಡೆ; ಫಡ್ನವೀಸ್, ರಾಣೆ ಸೇರಿ ಹಲವರಿಗೆ ಟಿಕೆಟ್
Belthangady: ರಾಷ್ಟ್ರೀಯ ಹೆದ್ದಾರಿ ಗುಂಡಿಗೆ ತೇಪೆ
WTC 2025: ಭಾರತದ ಸೋಲಿನ ಬಳಿಕ ಹೇಗಿದೆ ಟೆಸ್ಟ್ ಚಾಂಪಿಯನ್ ಶಿಪ್ ಅಂಕಪಟ್ಟಿ
BBK11: ಆತ ಹೀರೋ, ಸಿಂಹವಲ್ಲ ಅವನು ಇಲಿ.. ಜಗದೀಶ್ ಬಗ್ಗೆ ರಂಜಿತ್ ಮಾತು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.