ಲಾಸ್ ಏಂಜಲೀಸ್ ಚಿತ್ರೋತ್ಸವಕ್ಕೆ ಎಡಕಲ್ಲು
Team Udayavani, May 1, 2018, 10:57 AM IST
ಸಿನಿಮಾದ ಟ್ರೇಲರ್, ಟೀಸರ್ ಹಿಟ್ ಆದರೆ, ಸಿನಿಮಾ ಹಿಟ್ ಆಗುತ್ತದೆ ಎಂಬ ನಂಬಿಕೆ ಅನೇಕರಲ್ಲಿದೆ. ಅದಕ್ಕೆ ಸರಿಯಾಗಿ ಕೆಲವು ಸಿನಿಮಾಗಳು ಕೂಡಾ ಹಿಟ್ ಆಗಿವೆ. ಈಗ ಇದೇ ನಿರೀಕ್ಷೆಯೊಂದಿಗೆ “ಎಡಕಲ್ಲು ಗುಡ್ಡದ ಮೇಲೆ’ ಚಿತ್ರತಂಡ ಕೂಡಾ ಎದುರು ನೋಡುತ್ತಿದೆ. ಪುಟ್ಟಣ ಕಣಗಾಲ್ ನಿರ್ದೇಶನದ “ಎಡಕಲ್ಲು ಗುಡ್ಡದ ಮೇಲೆ’ ಟೈಟಲ್ ಅನ್ನೇ ತಮ್ಮ ಚಿತ್ರಕ್ಕೂ ಶೀರ್ಷಿಕೆಯನ್ನಾಗಿಸಿಕೊಂಡಿರುವ ಹೊಸಬರ ತಂಡ ಇತ್ತೀಚೆಗೆ ಚಿತ್ರದ ಟೀಸರ್ ಬಿಡುಗಡೆ ಮಾಡಿದೆ.
ಟೀಸರ್ ನೋಡಿದವರಿಂದ ಮೆಚ್ಚುಗೆ ವ್ಯಕ್ತವಾಗಿದ್ದು, ಚಿತ್ರತಂಡದ ವಿಶ್ವಾಸ ಹೆಚ್ಚಿಸಿದೆ. ಇದರ ಜೊತೆಗೆ “ಎಡಕಲ್ಲು ಗುಡ್ಡದ ಮೇಲೆ’ ಚಿತ್ರ ಎರಡು ಚಿತ್ರೋತ್ಸವಗಳಿಗೆ ಆಯ್ಕೆಯಾಗಿದೆ. ಲಾಸ್ ಏಂಜಲೀಸ್‌ನಲ್ಲಿ ನಡೆಯುತ್ತಿರುವ ಚಿತ್ರೋತ್ಸವಕ್ಕೆ ಚಿತ್ರ ಆಯ್ಕೆಯಾಗಿದೆ. ಅಮೆರಿಕಾದಲ್ಲಿ ಒಂದು ತಿಂಗಳುಗಳ ಕಾಲ ನಡೆಯುವ ಈ ಚಿತ್ರೋತ್ಸವದಲ್ಲಿ ಅನಿವಾಸಿ ಭಾರತೀಯರಿಗೆ “ಎಡಕಲ್ಲು ಗುಡ್ಡದ ಮೇಲೆ’ ಸಿನಿಮಾ ನೋಡುವ ಅವಕಾಶ ಸಿಗಲಿದೆ ಎಂಬ ಖುಷಿಯೂ ಚಿತ್ರತಂಡಕ್ಕಿದೆ.
ಇದರ ಜೊತೆಗೆ ಸ್ವೀಡನ್‌ನ ಸಿಕೆಎಫ್ ಇಂಟರ್‌ನ್ಯಾಶನಲ್ ಫಿಲಂ ಫೆಸ್ಟಿವಲ್, ವೆನಿಜುಲಾದಲ್ಲಿನ 5 ಕಾಂಟಿನೆಂಟಲ್ ಇಂಟರ್‌ನ್ಯಾಶನಲ್ ಫಿಲಂ ಫೆಸ್ಟಿವಲ್‌ಗಳಿಗೂ “ಎಡಕಲ್ಲು ಗುಡ್ಡದ ಮೇಲೆ’ ಚಿತ್ರ ಆಯ್ಕೆಯಾಗಿದೆ. ಅಂದಹಾಗೆ, ಪುಟ್ಟಣ್ಣ ಅವರ “ಎಡಕಲ್ಲು ಗುಡ್ಡದ ಮೇಲೆ’ ಚಿತ್ರಕ್ಕೂ ಇದಕ್ಕೂ ಯಾವುದೇ ಸಂಬಂಧವಿಲ್ಲವಂತೆ. ಈ ಚಿತ್ರವನ್ನು ವಿವಿನ್ ಸೂರ್ಯ ನಿರ್ದೇಶನ ಮಾಡಿದ್ದಾರೆ.
ಚಿತ್ರದಲ್ಲಿ ತಂದೆ-ತಾಯಿಯ, ಸಂಬಂಧಗಳ ಮೇಲೆ ಪ್ರೀತಿ ತೋರಿಸದೇ, ಹಣ, ಆಸ್ತಿ ಹಿಂದೆ ಬಿದ್ದಾಗ ಏನೇನಾಗುತ್ತದೆ ಎಂಬ ಅಂಶವನ್ನಿಟ್ಟುಕೊಂಡು ಈ ಸಿನಿಮಾ ಮಾಡಿದ್ದಾರಂತೆ. ಈ ಚಿತ್ರದಲ್ಲಿ ಭಾರತಿ ವಿಷ್ಣುವರ್ಧನ್, ಶ್ರೀನಾಥ್, ಸುಮಿತ್ರಾ, ದತ್ತಣ್ಣ, ಮೂಗೂರು ಸುರೇಶ್, ಚಿದಾನಂದ್, ಭವ್ಯಶ್ರೀ ರೈ, ಜ್ಯೋತಿ ರೈ, ವೀಣಾ ಸುಂದರ್, ಲಕ್ಷ್ಮೀ ಸಿದ್ದಯ್ಯ, ಪದ್ಮಜಾರಾವ್, ಸಿಹಿಕಹಿ ಚಂದ್ರು, ರವಿ ಭಟ್, ಉಷಾ ಭಂಡಾರಿ, ಧರ್ಮೆಂದ್ರ, ಸ್ವಾತಿ ಶರ್ಮ, ಪ್ರಗತಿ, ವೈಭವಿ ಸೇರಿದಂತೆ ಅನೇಕರು ನಟಿಸಿದ್ದಾರೆ. ಚಿತ್ರವನ್ನು ಜಿ.ಪಿ.ಪ್ರಕಾಶ್ ನಿರ್ಮಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
BJP ಸಂಘಟನೆ, ತಂತ್ರಗಾರಿಕೆಯಲ್ಲಿ ವಿಫಲ: ವಿಜಯೇಂದ್ರ ಮೇಲೂ ಪರಿಣಾಮ?
IPL Auction 2025: ಇಂದು, ನಾಳೆ ಐಪಿಎಲ್ ಬೃಹತ್ ಹರಾಜು
Mangaluru: ಕುಖ್ಯಾತ ರೌಡಿಶೀಟರ್ ದಾವೂದ್ ಬಂಧಿಸಿದ ಸಿಸಿಬಿ ಪೊಲೀಸರು
Channapatna; ಜನಾದೇಶಕ್ಕೆ ತಲೆಬಾಗುತ್ತೇನೆ, ಪಲಾಯನ ಮಾಡಲ್ಲ: ನಿಖಿಲ್
Karnataka; ಕೇಂದ್ರ ಸ್ವಾಮ್ಯದ ಸಂಸ್ಥೆಗಳಲ್ಲಿ ಕನ್ನಡಿಗರೇಕೆ ವಿರಳ? ಆಗಬೇಕಿರುವುದೇನು?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.