Kannada Cinema; ಐಟಿ ಉದ್ಯೋಗಿಯ ಸುತ್ತ ‘ಎಲೆಕ್ಟ್ರಾನಿಕ್ ಸಿಟಿ’
Team Udayavani, Nov 9, 2023, 6:23 PM IST
ಬೆಂಗಳೂರಿನಲ್ಲಿ ಬಹುಶಃ “ಎಲೆಕ್ಟ್ರಾನಿಕ್ ಸಿಟಿ’ ಎಂಬ ಹೆಸರನ್ನು ಕೇಳದವರು ಯಾರು ಇಲ್ಲ ಎನ್ನಬಹುದು. ಅದರಲ್ಲೂ ಐಟಿ ಕಂಪನಿಯಲ್ಲಿ ಕಾರ್ಯ ನಿರ್ವಹಿಸುವರಿಗಂತೂ ಈ ಹೆಸರು ಚಿರಪರಿಚಿತ. ಬೆಂಗಳೂರಿನ ಈ ಸುಪ್ರಸಿದ್ಧ ಬಡಾವಣೆಯಲ್ಲಿ ಸಾಕಷ್ಟು ಐಟಿ ಕಂಪನಿಗಳಿದೆ. ಈಗ ಇದೇ “ಎಲೆಕ್ಟ್ರಾನಿಕ್ ಸಿಟಿ’ ಎಂಬ ಹೆಸರಿನಲ್ಲಿ ಸಿನಿಮಾವೊಂದು ನಿರ್ಮಾಣವಾಗಿದ್ದು, ಇದೇ ನವೆಂಬರ್ 24ರಂದು ತೆರೆಗೆ ಬರುತ್ತಿದೆ.
ಈವರೆಗೂ ಕೆಲವು ಕಿರುಚಿತ್ರಗಳನ್ನು ನಿರ್ದೇಶಿಸಿರುವ, ಮೂಲತಃ ಐಟಿ ಉದ್ಯೋಗಿಯಾಗಿರುವ ಆರ್. ಚಿಕ್ಕಣ್ಣ ಈ “ಎಲೆಕ್ಟ್ರಾನಿಕ್ ಸಿಟಿ’ ಸಿನಿಮಾವನ್ನು ನಿರ್ಮಿಸಿ, ನಿರ್ದೇಶಿಸಿದ್ದಾರೆ. ಈಗಿನ ಬಹುಪಾಲು ಯುವಕರು ಐಟಿ ಉದ್ಯೋಗಿಗಳಾಗಿದ್ದು, ಸದಾ ಕೆಲಸದ ಒತ್ತಡದಲ್ಲಿರುತ್ತಾರೆ. ಅಂತಹ ಐಟಿ ಕಂಪನಿಯ ಉದ್ಯೋಗಿಯ ವರ್ಕ್ ಲೈಫ್ ಹೇಗಿರುತ್ತದೆ? ಎಂಬ ಪ್ರಮುಖ ಕಥಾಹಂದರ ಹೊಂದಿರುವ ಈ ಚಿತ್ರದಲ್ಲಿ ತ್ರಿಕೋನ ಪ್ರೇಮ ಕಥೆ ಸಹ ಇದೆ.
ಆರ್ಯನ್ ಹರ್ಷ “ಎಲೆಕ್ಟ್ರಾನಿಕ್ ಸಿಟಿ’ ಸಿನಿಮಾದ ನಾಯಕನಾಗಿದ್ದು, ದಿಯಾ ಆಶ್ಲೇಶ, ರಕ್ಷಿತಾ ಕೆರೆಮನೆ ನಾಯಕಿಯರಾಗಿ ನಟಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Mangaluru: ಪಾಲಿಕೆ ಕಚೇರಿ ಪಕ್ಕದಲ್ಲೇ ಫುಟ್‌ಪಾತ್ ಅವ್ಯವಸ್ಥೆ
Nanthoor: ಮನೆಯಿಂದ ಮಣ್ಣು ತಂದು ರಸ್ತೆಗುಂಡಿ ಮುಚ್ಚುವ ಹಿರಿಯ!
Gadag; ಶಿರಹಟ್ಟಿ ಕ್ಷೇತ್ರದ ಶಾಸಕ ಚಂದ್ರು ಲಮಾಣಿ ಕಾರು ಚಾಲಕ ಆತ್ಮಹತ್ಯೆ
Vijayapura: ಕುರಿಗಾಯಿ, ಕೂಲಿಕಾರ, ರೈತರ ಮಕ್ಕಳಿಗೆ ‘ಬಂಗಾರ’ದ ಕಳೆ…
ಕಂಬಳದಲ್ಲಿ ನಿಯಮಗಳು ಆಟಕ್ಕುಂಟು ಲೆಕ್ಕಕ್ಕಿಲ್ಲ..? ಸಮಸ್ಯೆ ನೂರು- ಪರಿಹಾರ ಕೊಡುವವರು ಯಾರು?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.