Kannada Cinema; ‘ಎಲ್ಲಾ ನೀನೇನೆ…’: ಕೆಟಿಎಂನಿಂದ ಬಂತು ಮೇಲೋಡಿ ಸಾಂಗ್


Team Udayavani, Feb 5, 2024, 5:46 PM IST

ella neenene KTM movie song

ಕನ್ನಡದ “ದಿಯಾ’ ಹಾಗೂ ತೆಲುಗಿನ “ದಸರಾ’ ಸಿನಿಮಾ ಖ್ಯಾತಿಯ ದೀಕ್ಷಿತ್‌ ಶೆಟ್ಟಿ ಅಭಿನಯದ “ಕೆಟಿಎಂ’ ಸಿನಿಮಾ ತನ್ನ ಟೀಸರ್‌ ಮೂಲಕ ಒಂದಷ್ಟು ಸಿನಿಪ್ರಿಯರ ಗಮನ ಸೆಳೆಯುವಲ್ಲಿ ಯಶಸ್ವಿಯಾಗಿತ್ತು. ಇದೀಗ ಚಿತ್ರತಂಡ ಹಾಡುಗಳ ಮೂಲಕ ಪ್ರೇಕ್ಷಕರಿಗೆ ಆಮಂತ್ರಣ ನೀಡುತ್ತಿದೆ.

ಕೆಟಿಎಂ ಸಿನಿಮಾದ ಹಾಡುಗಳು ಕೇಳುಗರನ್ನು ಮೋಡಿ ಮಾಡುತ್ತಿವೆ. ಈ ಹಿಂದೆ ಬಿಡುಗಡೆಯಾಗಿದ್ದ ಎರಡು ಹಾಡುಗಳಿಗೆ ಭರ್ಜರಿ ರೆಸ್ಪಾನ್ಸ್‌ ಸಿಕ್ಕಿದೆ. ಇದೀಗ ಕೆಟಿಎಂ ಸಿನಿಮಾದ ಮೂರನೇ ಹಾಡು ಅನಾವರಣಗೊಂಡಿದೆ.

“ಎಲ್ಲಾ ನೀನೇನೆ..’ ಎಂಬ ಮೆಲೋಡಿ ಗಾನಬಜಾನಕ್ಕೆ ಧನಂಜಯ್‌ ರಂಜನ್‌ ಸಾಹಿತ್ಯ ಬರೆದಿದ್ದು, ಚೇತನ್‌ ರಾವ್‌, ಸಂಚಿತ್‌ ಹೆಗ್ಡೆ ಜೊತೆಗೂಡಿ ಧ್ವನಿಯಾಗುವುದರ ಜೊತೆಗೆ ಸಂಗೀತ ಒದಗಿಸಿದ್ದಾರೆ. ಎಲ್ಲಾ ನೀನೇನೆ ಎನ್ನುತ್ತಾ ದೀಕ್ಷಿತ್‌ ಸಂಜನಾ ದಾಸ್‌ ಗೆ ಕ್ಲೀನ್‌ ಬೋಲ್ಡ್ ಆಗಿದ್ದಾರೆ.

ಈ ಹಿಂದೆ “ಅಥರ್ವ’ ಸಿನಿಮಾ ನಿರ್ದೇಶಿಸಿದ್ದ ಅರುಣ್‌ “ಕೆಟಿಎಂ’ ಸಿನಿಮಾಕ್ಕೆ ಆ್ಯಕ್ಷನ್‌-ಕಟ್‌ ಹೇಳಿದ್ದಾರೆ. ಮಹಾಸಿಂಹ ಮೂವೀಸ್‌ ಬ್ಯಾನರ್‌ನಲ್ಲಿ ವಿನಯ್‌ ಈ ಸಿನಿಮಾ ನಿರ್ಮಾಣ ಮಾಡಿದ್ದಾರೆ. ನವಿರಾದ ಪ್ರೇಮಕಹಾನಿ ಇರುವ “ಕೆಟಿಎಂ’ ಸಿನಿಮಾದಲ್ಲಿ ದೀಕ್ಷಿತ್‌ ಶೆಟ್ಟಿ ನಾಲ್ಕು ವಿಭಿನ್ನ ಶೇಡ್ನ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ.

ಸಿನಿಮಾದಲ್ಲಿ ಕಾಜಲ್‌ ಕುಂದರ ಹಾಗೂ ಸಂಜನಾ ನಾಯಕಿಯರಾಗಿದ್ದಾರೆ. ಉಳಿದಂತೆ ಉಷಾ ಭಂಡಾರಿ, ಪ್ರಕಾಶ್‌ ತುಮ್ಮಿನಾಡು, ತುಕಾಲಿ ಸಂತು, ರಘು ರಾಮನಕೊಪ್ಪ, ಶಾನಿಲ್‌ ಗುರು, ಬಾಬು ಹಿರಣಯ್ಯ, ದೇವ್‌ ದೇವಯ್ಯ, ಅಭಿಷೇಕ್‌ ಮೊದಲಾದವರು ಸಿನಿಮಾದ ಇತರ ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ.

ಸಿನಿಮಾಕ್ಕೆ ನವೀನ್‌ ಛಾಯಾಗ್ರಹಣ, ಅರ್ಜುನ್‌ ಕಿಟ್ಟು ಸಂಕಲನವಿದೆ. ಉಡುಪಿ, ಮಂಗಳೂರು, ಕಾರ್ಕಳ, ಬೆಂಗಳೂರು ಸುತ್ತಮುತ್ತ “ಕೆಟಿಎಂ’ ಸಿನಿಮಾದ ಚಿತ್ರೀಕರಣ ಮಾಡಲಾಗಿದೆ. ಇದೇ ಫೆಬ್ರವರಿ 16ರಂದು ಸಿನಿಮಾ ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ.

ಟಾಪ್ ನ್ಯೂಸ್

Shirola: ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಿಬ್ಬಂದಿ ಕೊರತೆ… ರೋಗಿಗಳ ಪರದಾಟ

Shirola: ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಿಬ್ಬಂದಿ ಕೊರತೆ… ರೋಗಿಗಳ ಪರದಾಟ

Missing: 3 ದಿನದಿಂದ ಕೆಪಿಸಿ ಭದ್ರತಾ ಸಿಬ್ಬಂದಿ ನಾಪತ್ತೆ… ಮಾಣಿ ಡ್ಯಾಂ ಬಳಿ ಬೈಕ್ ಪತ್ತೆ

Missing: 3 ದಿನದಿಂದ ಕೆಪಿಸಿ ಭದ್ರತಾ ಸಿಬ್ಬಂದಿ ನಾಪತ್ತೆ… ಮಾಣಿ ಡ್ಯಾಂ ಬಳಿ ಬೈಕ್ ಪತ್ತೆ

ಅಬಕಾರಿ ಇಲಾಖೆಯಲ್ಲಿ ಭ್ರಷ್ಟಾಚಾರ ಆರೋಪ: ನ.20ರಂದು ರಾಜ್ಯದಲ್ಲಿ ಮದ್ಯ ಮಾರಾಟ ಬಂದ್‌

Excise: ಅಬಕಾರಿ ಇಲಾಖೆಯಲ್ಲಿ ಭ್ರಷ್ಟಾಚಾರ ಆರೋಪ: ನ.20ರಂದು ರಾಜ್ಯದಲ್ಲಿ ಮದ್ಯ ಮಾರಾಟ ಬಂದ್‌

DGP: ಮಹಾರಾಷ್ಟ್ರದ ನೂತನ ಡಿಜಿಪಿ ಆಗಿ ಐಪಿಎಸ್ ಅಧಿಕಾರಿ ಸಂಜಯ್ ವರ್ಮಾ ನೇಮಕ

DGP: ಮಹಾರಾಷ್ಟ್ರದ ನೂತನ ಡಿಜಿಪಿ ಆಗಿ ಐಪಿಎಸ್ ಅಧಿಕಾರಿ ಸಂಜಯ್ ವರ್ಮಾ ನೇಮಕ

12

Gadaga: ನರಿ-ನಾಯಿ, ತೋಳ-ನಾಯಿ ಮಿಶ್ರ ತಳಿ ಪತ್ತೆ!

Wadi: ನಿರ್ಜನ ಪ್ರದೇಶದಲ್ಲಿ ಎಸೆದ ನವಜಾತ ಶಿಶುವನ್ನು ಬದುಕಿಸಲು ಪೊಲೀಸರ ಪರದಾಟ

Wadi: ನಿರ್ಜನ ಪ್ರದೇಶದಲ್ಲಿ ಎಸೆದ ನವಜಾತ ಶಿಶುವನ್ನು ಬದುಕಿಸಲು ಪೊಲೀಸರ ಪರದಾಟ

Digital arrest: ವೃದ್ಧೆಗೆ ಡಿಜಿಟಲ್‌ ದಿಗ್ಬಂಧನ ಹಾಕಿ 10.21 ಲ. ರೂ. ಕಿತ್ತ ಸೈಬರ್‌ ವಂಚಕ

Digital arrest: ವೃದ್ಧೆಗೆ ಡಿಜಿಟಲ್‌ ದಿಗ್ಬಂಧನ ಹಾಕಿ 10.21 ಲ. ರೂ. ಕಿತ್ತ ಸೈಬರ್‌ ವಂಚಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Anthamthana Kannada Movie: ಶೂಟಿಂಗ್‌ನತ್ತ ಅಣ್ತಮ್ತನ

Anthamthana Kannada Movie: ಶೂಟಿಂಗ್‌ನತ್ತ ಅಣ್ತಮ್ತನ

45 Movie: ಕರಾಟೆ ಗೊತ್ತುಂಟು, ಹತ್ತಿರ ಬಂದ್ರೆ ಜಾಗ್ರತೆ!

45 Movie: ಕರಾಟೆ ಗೊತ್ತುಂಟು, ಹತ್ತಿರ ಬಂದ್ರೆ ಜಾಗ್ರತೆ!

6

Director Guruprasad: ಗುರುಪ್ರಸಾದ್‌ಗೆ ಸಾಲ ಕೊಟ್ಟವರ ತನಿಖೆಗೆ ಸಿದ್ಧತೆ

Sandalwood: ಕರಾವಳಿ ಸಂಸ್ಕೃತಿ ಸುತ್ತ ದಿಂಸೋಲ್‌

Sandalwood: ಕರಾವಳಿ ಸಂಸ್ಕೃತಿ ಸುತ್ತ ದಿಂಸೋಲ್‌

Bhairathi Ranagal Trailer: ʼರೋಣಪುರʼದ ರಣ ಬೇಟೆಗಾರ ಈ ʼಭೈರತಿ ರಣಗಲ್ʼ; ಟ್ರೇಲರ್‌ ಔಟ್

Bhairathi Ranagal Trailer: ʼರೋಣಪುರʼದ ರಣ ಬೇಟೆಗಾರ ಈ ʼಭೈರತಿ ರಣಗಲ್ʼ; ಟ್ರೇಲರ್‌ ಔಟ್

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

Shirola: ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಿಬ್ಬಂದಿ ಕೊರತೆ… ರೋಗಿಗಳ ಪರದಾಟ

Shirola: ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಿಬ್ಬಂದಿ ಕೊರತೆ… ರೋಗಿಗಳ ಪರದಾಟ

6

Karkala: ದುರ್ಗಾ ಗ್ರಾಮ ಪಂಚಾಯತ್; ರಸ್ತೆ ಸಂಪೂರ್ಣ ದುರವಸ್ಥೆ

5

Udupi: ಜಿಲ್ಲೆಯ ಬ್ಲ್ಯಾಕ್‌ ಸ್ಪಾಟ್‌ 30ರಿಂದ 20ಕ್ಕೆ ಇಳಿಕೆ

Suvarna-obama

Belagavi Session: ಬರಾಕ್‌ ಒಬಾಮಾ ಆಹ್ವಾನಕ್ಕೆ ಸರಕಾರ ತೀರ್ಮಾನ

Missing: 3 ದಿನದಿಂದ ಕೆಪಿಸಿ ಭದ್ರತಾ ಸಿಬ್ಬಂದಿ ನಾಪತ್ತೆ… ಮಾಣಿ ಡ್ಯಾಂ ಬಳಿ ಬೈಕ್ ಪತ್ತೆ

Missing: 3 ದಿನದಿಂದ ಕೆಪಿಸಿ ಭದ್ರತಾ ಸಿಬ್ಬಂದಿ ನಾಪತ್ತೆ… ಮಾಣಿ ಡ್ಯಾಂ ಬಳಿ ಬೈಕ್ ಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.