ಹಿಮಾಲಯದಲ್ಲಿ ಜೋಗಪ್ಪ!
Team Udayavani, Jun 12, 2023, 3:32 PM IST
“ಕಂಬ್ಳಿಹುಳ’ ಖ್ಯಾತಿಯ ಅಂಜನ್ ನಾಗೇಂದ್ರ ನಾಯಕ ನಟನಾಗಿ ನಟಿಸುತ್ತಿರುವ, ಹಯವದನ ಸಾರಥ್ಯದಲ್ಲಿ ಮೂಡಿಬರುತ್ತಿರುವ ಚೊಚ್ಚಲ ಸಿನಿಮಾ “ಎಲ್ಲೋ ಜೋಗಪ್ಪ ನಿನ್ನರಮನೆ’. ಸದ್ಯ ಈ ಚಿತ್ರದ ಚಿತ್ರೀಕರಣ ಬಹುತೇಕ ಪೂಣಗೊಂಡಿದೆ. ಕೇವಲ ಒಂದು ಹಾಡಷ್ಟೇ ಬಾಕಿ ಉಳಿಸಿಕೊಂಡಿದೆ. ನಿರ್ದೇಶಕ ಹಯವದನ ಯಾರು ಸಲೀಸಾಗಿ ಚಿತ್ರೀಕರಣ ಮಾಡಲಾಗದ ಜಾಗದಲ್ಲಿ ಸಿನಿಮಾವನ್ನು ಚಿತ್ರೀಕರಿಸಬೇಕೆಂಬ ಕನಸು ಇಟ್ಟುಕೊಂಡಿದ್ದರಂತೆ.
ಅದರಂತೆ ಮಹಾರಾಷ್ಟ್ರ, ಉತ್ತರಖಂಡ, ದೆಹಲಿ, ಹಿಮಾಚಲ ಪ್ರದೇಶ, ಉತ್ತರ ಪ್ರದೇಶ ಸೇರಿದಂತೆ ಹಿಮಾಲಯದ ಕೊರೆಯುವ ಚಳಿಯಲ್ಲಿಯೂ “ಎಲ್ಲೋ ಜೋಗಪ್ಪ ನಿನ್ನರಮನೆ’ವನ್ನು ಶೂಟಿಂಗ್ ನಡೆಸಿದ್ದಾರೆ. ಸುಂದರ ಸ್ಥಳಗಳಲ್ಲಿ ಸಿನಿಮಾ ಶೂಟ್ ಮಾಡಿರುವ ಖುಷಿ ಚಿತ್ರತಂಡದಲ್ಲಿದೆ.
ಶೂಟಿಂಗ್ ಮುಗಿಸಿ ಈಗ “ಎಲ್ಲೋ ಜೋಗಪ್ಪ ನಿನ್ನರಮನೆ’ ಸಿನಿಬಳಗ ಮಾತಿನ ಜೋಡಣೆ ಕೆಲಸದಲ್ಲಿ ನಿರತರಾಗಿದ್ದಾರೆ. ಈ ಚಿತ್ರ ಒಂದು ಜರ್ನಿಯ ಕಥೆ. ತಂದೆ-ಮಗನ ನಡುವಿನ ಭಾವನಾತ್ಮಕ ಸಂಬಂಧ ಈ ಸಿನಿಮಾ ಹೈಲೈಟ್ಸ್. ತಂದೆಯ ಮಾತಿಗೆ ಮುನಿಸಿಕೊಂಡು ಮನೆ ಬಿಟ್ಟು ಹೋಗುವ ಹುಡುಗನ ಕಥೆ ಸಿನಿಮಾದಲ್ಲಿದೆ.
ಲವ್, ಸೆಂಟಿಮೆಂಟ್, ಕಾಮಿಡಿ ಎಲ್ಲವನ್ನೂ ಒಳಗೊಂಡಿರುವ ಈ ಚಿತ್ರದಲ್ಲಿ ಅಂಜನ್ ನಾಗೇಂದ್ರಗೆ ಜೋಡಿಯಾಗಿ ಯುವ ನಟಿ ವೆನ್ಯ ರೈ ನಟಿಸಿದ್ದು, ಸಂಜನಾ ದಾಸ್ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಉಳಿದಂತೆ ಶರತ್ ಲೋಹಿತಾಶ್ವ, ಸ್ವಾತಿ, ದಾನಪ್ಪ, ದಿನೇಶ್ ಮಂಗಳೂರು, ಬಿರಾದಾರ್ ತಾರಾಬಳಗದಲ್ಲಿದ್ದಾರೆ.
ಪವನ್ ಸಿಮಿಕೇರಿ ಮತ್ತು ಸಿಂಧು ಹಯವದನ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ. ಶಿವ ಪ್ರಸಾದ್ ಸಂಗೀತ, ನಟರಾಜ್ ಮದ್ದಾಲ ಛಾಯಾಗ್ರಹಣ, ರವಿಚಂದ್ರನ್ ಸಂಕಲನದಲ್ಲಿ ಸಿನಿಮಾ ಮೂಡಿ ಬರಲಿದೆ. ಸದ್ಯ ಡಬ್ಬಿಂಗ್‌ನಲ್ಲಿ ಬಿಝಿಯಾಗಿರುವ ಚಿತ್ರತಂಡ ಆದಷ್ಟು ಬೇಗ ಎಲ್ಲಾ ಕೆಲಸವನ್ನು ಮುಗಿಸಿ ಸೆಪ್ಟಂಬರ್ ವೇಳೆಗೆ ಸಿನಿಮಾವನ್ನು ತೆರೆಗೆ ತರುವ ಯೋಜನೆ ಹಾಕಿಕೊಂಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sandalwood: ಯಾರೋ ನಾ ಕಾಣೆ, ಚಂದಾಗೌಳೆ ಶಾಣೆ..: ಕಟ್ಲೆ ಹಾಡು ಬಂತು
Viral Photo: ಬಾಲಿವುಡ್ ನಟ ಆಮಿರ್ ಖಾನ್ ಭೇಟಿಯಾದ ಕಿಚ್ಚ ಸುದೀಪ್; ಫ್ಯಾನ್ಸ್ ಥ್ರಿಲ್
Renukaswamy Case: ದರ್ಶನ್ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ
ZEBRA Movie: ಜೀಬ್ರಾ ಮೇಲೆ ಡಾಲಿ ಕಣ್ಣು
Drone Prathap: ಸಿನಿಮಾರಂಗಕ್ಕೆ ಡ್ರೋನ್ ಪ್ರತಾಪ್ ಎಂಟ್ರಿ; ಮೊದಲ ಚಿತ್ರದಲ್ಲೇ ಹೀರೋ
MUST WATCH
ಹೊಸ ಸೇರ್ಪಡೆ
Kundapura: ಅಕ್ರಮ ಮರಳು ಸಾಗಾಟ: ಟಿಪ್ಪರ್ ಸಹಿತ ಮರಳು ವಶಕ್ಕೆ ;ಚಾಲಕ ಪರಾರಿ
Puttur: ಸ್ಕೂಲ್ ಬಸ್‌ಗೆ ಢಿಕ್ಕಿಯಾಗುವುದನ್ನು ತಪ್ಪಿಸಿ ಮನೆಗೆ ನುಗ್ಗಿದ ಖಾಸಗಿ ಬಸ್
Puttur: ಕಾರು ಚಾಲಕನಿಗೆ ಮೂರ್ಛೆ ರೋಗ: ಅಪಾಯದಿಂದ ಪಾರು
Kasaragod: ಫ್ಯಾಶನ್ ಗೋಲ್ಡ್ ವಂಚನೆ ಪ್ರಕರಣ: ಪೂಕೋಯ ತಂಙಳ್ ಮತ್ತೆ ಬಂಧನ
Actress Kasthuri; ನನ್ನನ್ನು ಕೆರಳಿದ ಬಿರುಗಾಳಿಯಂತೆ ಮಾಡಿದವರಿಗೆ ಧನ್ಯವಾದ!!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.