ಬೆಂಗಳೂರಿನಲ್ಲೂ ಏಕಕಾಲದಲ್ಲಿ ಬಿಡುಗಡೆಯಾಗಲಿದೆ ‘ ಇಂಗ್ಲೀಷ್’
Team Udayavani, Mar 14, 2021, 11:07 AM IST
ಸಾಮಾನ್ಯವಾಗಿ ತುಳು ಸಿನಿಮಾಗಳು ಬೆಂಗಳೂರಿನಲ್ಲಿ ಒಂದು ದಿನ ಅಥವಾ ಒಂದು ವಾರ ತಡವಾಗಿ ಬಿಡುಗಡೆಯಾಗುತ್ತವೆ. ತುಳು ಸಿನಿಮಾಗಳ ಮೊದಲ ಮಾರುಕಟ್ಟೆ ಕರಾವಳಿಯಾಗಿರುವುದೇ ಇದಕ್ಕೆ ಕಾರಣ. ಆದರೆ, ಇಲ್ಲೊಂದು ತುಳು ಸಿನಿಮಾ ಬೆಂಗಳೂರಿನಲ್ಲೂ ಒಂದೇ ದಿನ ರಿಲೀಸ್ ಆಗಲಿದೆ. ಅದು “ಇಂಗ್ಲೀಷ್’.
ಈ ಚಿತ್ರ ಮಾರ್ಚ್ 26ರಂದು ಮಂಗಳೂರು ಹಾಗೂ ಬೆಂಗಳೂರಿನಲ್ಲಿ ತೆರೆಕಾಣಲಿದೆ. ಈ ಮೂಲಕ ಬೆಂಗಳೂರಿನಲ್ಲಿರುವ ತುಳು ಸಿನಿಮಾ ಪ್ರಿಯರಿಗೂ ತುಳು ಸಿನಿಮಾವನ್ನು ಕಣ್ತುಂಬಿಕೊಳ್ಳುವ ಅವಕಾಶ ಸಿಗುತ್ತಿದೆ.
“ಇಂಗ್ಲೀಷ್’ ಚಿತ್ರವನ್ನು ಹರೀಶ್ ಶೇರಿಗಾರ್ ಮತ್ತು ಶರ್ಮಿಳಾ ಶೇರಿಗಾರ್ ಸೇರಿ ನಿರ್ಮಿಸಿದ್ದಾರೆ. ಸೂರಜ್ ಶೆಟ್ಟಿ ಈ ಚಿತ್ರದ ನಿರ್ದೇಶಕರು. ಈ ಹಿಂದೆ “ಪಿಲಿಬೈಲ್ ಯಮುನಕ್ಕ’ ಚಿತ್ರವನ್ನು ನಿರ್ದೇಶಿಸಿರುವ ಸೂರಜ್ ಈಗ “ಇಂಗ್ಲೀಷ್’ ಮೇಲೆ ನಂಬಿಕೆ ಇಟ್ಟಿದ್ದಾರೆ.
ಇದನ್ನೂ ಓದಿ:‘ಮೈಲಾಪುರ’ದಲ್ಲಿ ರಿಯಾಲಿಟಿ ಶೋ
ಚಿತ್ರದ ಬಗ್ಗೆ ಮಾತನಾಡುವ ನಿರ್ಮಾಪಕ ಹರೀಶ್ ಶೇರಿಗಾರ್, “ಇಂಗ್ಲಿಷ್ – ಎಂಕ್ಲೆಗ್ ಬರ್ಪುಜಿ ಬ್ರೋ’ ತುಳು ಭಾಷೆಯಲ್ಲಿ ಇದು ನನ್ನ ಮೊದಲ ಚಿತ್ರ. ಇಂದು ದೇಶ ವಿದೇಶಗಳಲ್ಲಿ ತುಳು ಭಾಷೆಯ ಚಿತ್ರಗಳು ಪ್ರದರ್ಶನಗೊಂಡು ಉತ್ತಮ ಯಶಸ್ಸು ಕಂಡಿದೆ. ಅದೇ ರೀತಿ ಕರ್ನಾಟಕದಲ್ಲಿ ಕನ್ನಡ ಭಾಷೆಯಂತೆ ತುಳು ಭಾಷೆಯ ಚಿತ್ರಕ್ಕೂ ಹೆಚ್ಚಿನ ಮನ್ನಣೆ ಸಿಗಬೇಕಾದರೆ ಕರ್ನಾಟಕದ ಜನತೆಯ ಆಶೀರ್ವಾದ ಬೇಕು. ಸಮಸ್ತ ಕನ್ನಡಿಗರು ತುಳು ಭಾಷೆಯ ಚಿತ್ರಗಳಿಗೂ ಬೆಂಬಲ ನೀಡಿದರೆ ತುಳು ಭಾಷೆಯ ಚಿತ್ರಗಳು ಮತ್ತಷ್ಟು ಖ್ಯಾತಿ ಪಡೆಯಲು ಸಾಧ್ಯ’ ಎಂದರು.
“ಒಂದು ಉತ್ತಮ ಚಿತ್ರ ನಿರ್ಮಿಸ ಬೇಕೆಂಬ ಕನಸಿನೊಂದಿಗೆ ಉತ್ತಮ ನಿರ್ಮಾಪಕರ ಹುಡುಕಾಟದಲ್ಲಿದೆ. ಈ ಸಂದರ್ಭದಲ್ಲಿ ಹರೀಶ್ ಶೇರಿಗಾರ್ ಅವರು ಈ ಚಿತ್ರ ಮಾಡಲು ಮುಂದೆ ಬಂದರು. ದೊಡ್ಡ ಬಜೆಟ್ ಚಿತ್ರ ನಿರ್ಮಿಸುವಾಗ ಬಹಳಷ್ಟು ಕಠಿಣ ಸಂದರ್ಭಗಳನ್ನು ಎದುರಿಸಬೇಕಾಗುತ್ತದೆ. ಆದರೆ ನಮ್ಮ ನಿರ್ಮಾಪರು ಯಾವುದೇ ವಿಷಯಗಳ ಬಗ್ಗೆ ರಾಜಿ ಮಾಡದೇ ಚಿತ್ರ ಉತ್ತಮವಾಗಿ ಮೂಡಿ ಬರಬೇಕೆಂಬ ಏಕೈಕ ಉದ್ದೇಶದಿಂದ ಎಲ್ಲಾ ರೀತಿಯ ಸಹಕಾರ ನೀಡಿದ್ದಾರೆ. ಹಾಗಾಗಿ, ಒಂದು ಉತ್ತಮ ಚಿತ್ರವನ್ನು ಮಾಡಿದ್ದೇವೆ’ ಎನ್ನುವುದು ನಿರ್ದೇಶಕ ಸೂರಜ್ ಶೆಟ್ಟಿ ಮಾತು.
ಇದನ್ನೂ ಓದಿ:ಮಾ.15ಕ್ಕೆ ಭಜರಂಗಿ 2 ಲಿರಿಕಲ್ ವಿಡಿಯೋ ರಿಲೀಸ್
ಚಿತ್ರದಲ್ಲಿ ತುಳು ರಂಗಭೂಮಿಯ ಖ್ಯಾತ ಹಾಸ್ಯ ನಟರಾದ ಅರವಿಂದ್ ಬೋಳಾರ್, ನವೀನ್ ಡಿ ಪಡೀಲ್, ಭೋಜರಾಜ್ ವಾಮಂಜೂರ್, ನಾಯಕ- ನಟನಾಗಿ ದಿಯಾ ಖ್ಯಾತಿಯ ಪೃಥ್ವಿ ಅಂಬರ್ ನಾಯಕಿ ನಟಿ ನವ್ಯ ಪೂಜಾರಿ ನಟಿಸಿದ್ದಾರೆ. ಹಿರಿಯ ನಟ ಅನಂತ್ ನಾಗ್ ಈ ಚಿತ್ರದಲ್ಲಿ ಅತಿಥಿ ಪಾತ್ರದಲ್ಲಿ ನಟಿಸಿದ್ದಾರೆ. ನಾಯಕ ಪೃಥ್ವಿ ಕೂಡಾ ಚಿತ್ರದ ಬಗ್ಗೆ ಮಾತನಾಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gurunandan: ಡಿ.27ಕ್ಕೆ ತೆರೆಗೆ ಬರುತ್ತಿಲ್ಲ ʼರಾಜು ಜೇಮ್ಸ್ ಬಾಂಡ್’ ಚಿತ್ರ
Nodidavaru Enanthare Movie: ನವೀನ್ ಶಂಕರ್ ಚಿತ್ರದ ಟೀಸರ್ ಬಂತು
BBK11: ಸತತ ಮೂರನೇ ವಾರವೂ ಕಳಪೆ ಪಟ್ಟಿ: ಖುಷಿಯಿಂದಲೇ ಜೈಲು ಸೇರಿದ ಚೈತ್ರಾ
Dhruva-Prem: ಡಿ.24ಕ್ಕೆ ʼಕೆಡಿʼ ಶಿವ ಶಿವ ಹಾಡು ರಿಲೀಸ್
Dhruva Sarja: ಪ್ರತಿ ಸಿನಿಮಾವೂ ನನಗೆ ಹೊಸ ಪಾಠ…: ಧ್ರುವ ಹೇಳಿದ್ದೇನು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.