ಸ್ಟೈಲಿಶ್ ಲುಕ್ನಲ್ಲಿ ಎಂಟ್ರಿ ಕೊಟ್ಟ “ಕೋಟಿಗೊಬ್ಬ’
Team Udayavani, Jan 14, 2020, 10:06 PM IST
ಅಭಿನಯ ಚಕ್ರವರ್ತಿ ಬಾದ್‌ಷಾ ಕಿಚ್ಚ ಸುದೀಪ್ ಅಭಿನಯದ “ಕೋಟಿಗೊಬ್ಬ 3′ ಚಿತ್ರದ ಮೋಶನ್ ಪೋಸ್ಟರ್ ಸಂಕ್ರಾಂತಿ ಹಬ್ಬದ ಹಿನ್ನೆಲೆಯಲ್ಲಿ ಬಿಡುಗಡೆಯಾಗಿದ್ದು, ಮೋಶನ್ ಪೋಸ್ಟರಿನಲ್ಲಿ ಸುದೀಪ್ ಲುಕ್ ಜಬರ್ದಸ್ತ್ ಆಗಿ ಮೂಡಿಬಂದಿದೆ. ಕಣ್ಣಿಗೆ ಕೂಲಿಂಗ್ ಗ್ಲಾಸ್, ಹ್ಯಾಟ್ ಹಾಕಿಕೊಂಡು ಕೈಯಲ್ಲಿ ಸಿಗಾರ್ ಹಿಡಿದುಕೊಂಡು ಮಾಸ್ ಆಗಿ ಸ್ಟೈಲಿಶ್ ಲುಕ್ನಲ್ಲಿ ಸುದೀಪ್ ಎಂಟ್ರಿ ಕೊಟ್ಟಿದ್ದಾರೆ. ಮುಖ್ಯವಾಗಿ ಕೂಲಿಂಗ್ ಗ್ಲಾಸ್ನಲ್ಲಿ ವಿಲನ್ಗಳು ತೂರಿ ಹೋಗುತ್ತಿರುವ ದೃಶ್ಯಗಳನ್ನು ತೋರಿಸಿರುವುದು ಸಖತ್ ಆಗಿ ಮೂಡಿಬಂದಿದ್ದು, ಅರ್ಜುನ್ ಜನ್ಯ ಥೀಮ್ ಮ್ಯೂಸಿಕ್ ರೋಮಾಂಚನಕಾರಿಯಾಗಿದೆ.
ಅಲ್ಲದೇ ಸುದೀಪ್ ಕೂಡಾ ಮೋಶನ್ ಪೋಸ್ಟರ್ ರಿಲೀಸ್ ಆಗಿರುವ ಬಗ್ಗೆ ಟ್ವೀಟ್ ಮಾಡಿದ್ದು, ಪೋಸ್ಟರ್ ಬಿಡುಗಡೆಯಾಗಿನಿಂದ ಇಲ್ಲಿಯವರೆಗೂ 4 ಲಕ್ಷಕ್ಕೂ ಅಧಿಕ ವೀವ್ಸ್ ಕಂಡಿದೆ. ಅಲ್ಲದೇ 44 ಸಾವಿರಕ್ಕೂ ಹೆಚ್ಚು ಮಂದಿ ಲೈಕ್ಸ್ ಮಾಡಿದ್ದು, ಸಾವಿರಾರು ಸಿನಿಪ್ರಿಯರು ಕಮೆಂಟ್ ಮಾಡುವ ಮೂಲಕ ಮೋಶನ್ ಪೋಸ್ಟರ್ ಅದ್ಭುತವಾಗಿ ಮೂಡಿ ಬಂದಿದೆ. ಅಲ್ಲದೇ ಸಿನಿಮಾಗಾಗಿ ಕಾಯುತ್ತಿದ್ದೇವೆ ಎಂದು ಹೇಳುತ್ತಿದ್ದಾರೆ. ಇನ್ನು ಚಿತ್ರಕ್ಕೆ ಶಿವ ಕಾರ್ತಿಕ್ ಆಯಕ್ಷನ್ ಕಟ್ ಹೇಳಿದ್ದು, ಸೂರಪ್ಪ ಬಾಬು ನಿರ್ಮಾಣವಿದೆ.
#K3MotionPoster
In jus a bit ….
????https://t.co/MOuzYGOJH5— Kichcha Sudeepa (@KicchaSudeep) January 14, 2020
ಮಾಡೋನ ಸೆಬಾಸ್ಟಿಯನ್ ಮತ್ತು ಶ್ರದ್ಧಾ ದಾಸ್ ಸುದೀಪ್‌ಗೆ ನಾಯಕಿಯರಾಗಿದ್ದಾರೆ. ಬಾಲಿವುಡ್ ನಟ ಅಫ್ತಾಬ್ ಶಿವದಾಸನಿ ಇದೇ ಮೊದಲ ಬಾರಿಗೆ ಕನ್ನಡಕ್ಕೆ “ಕೋಟಿಗೊಬ್ಬ 3′ ಚಿತ್ರದ ಮೂಲಕ ಎಂಟ್ರಿ ನೀಡುತ್ತಿದ್ದು, ಪ್ರಮುಖ ಪಾತ್ರದಲ್ಲಿ ಅಫ್ತಾಬ್ ಕಾಣಿಸಿಕೊಳ್ಳಲಿದ್ದಾರೆ. ಒಟ್ಟಾರೆ ಸಂಕ್ರಾಂತಿಯ ಸಂದರ್ಭದಲ್ಲಿ ಮೋಶನ್ ಪೋಸ್ಟರ್ ಬಿಡುಗಡೆಯ ಮೂಲಕ ಚಿತ್ರದ ಪ್ರಮೋಶನ್ ಕೆಲಸಗಳಿಗೆ ಚಾಲನೆ ನೀಡಲು ಚಿತ್ರತಂಡ ಪ್ಲಾನ್ ಹಾಕಿಕೊಂಡಿದ್ದು, ಮಾರ್ಚ್ ಅಥವಾ ಏಪ್ರಿಲ್ ವೇಳೆಗೆ “ಕೋಟಿಗೊಬ್ಬ 3′ ತೆರೆಗೆ ಬರುವ ಸಾಧ್ಯತೆಯಿದೆ ಎನ್ನಲಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
BBK11: ಕಣ್ಣೀರುಡುತ್ತಲೇ ಬಿಗ್ ಬಾಸ್ ಮನೆಯಿಂದ ಆಚೆ ಬಂದ ಧರ್ಮ ಕೀರ್ತಿರಾಜ್
NCP Vs NCP: ಶರದ್ ಬಣದ ವಿರುದ್ಧ 29 ಕ್ಷೇತ್ರ ಗೆದ್ದ ಅಜಿತ್ ಬಣ
Maharashtra: ಉದ್ದವ್ ಬಣದ 36 ಅಭ್ಯರ್ಥಿ ಸೋಲಿಸಿದ ಶಿಂಧೆ ಶಿವ ಸೇನೆ
Achievement: ಮಹಾಲಿಂಗಪುರದ ಬಿಸನಾಳ ಹಾಲಿನ ಡೇರಿಗೆ ಕೇಂದ್ರದ ಪ್ರಶಸ್ತಿ ಗರಿ!
PM Modi: ಜ.11ರಿಂದ 2 ದಿನ ವಿಕಸಿತ ಭಾರತ ಯುವ ನಾಯಕರ ಸಮಾವೇಶ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.