‘ಫೇಸ್ 2 ಫೇಸ್’ ಟ್ರೈಲರ್ ಬಂತು !
Team Udayavani, Feb 18, 2019, 6:12 AM IST
ಕನ್ನಡ ಚಿತ್ರರಂಗದಲ್ಲಿ ಹೊಸ ನಿರ್ದೇಶಕರ, ಹೊಸ ನಟ-ನಟಿ, ತಂತ್ರಜ್ಞರ ಚಿತ್ರಗಳು ಬಿಡುಗಡೆಯಾಗುತ್ತಿವೆ. ಈ ಪಟ್ಟಿಗೆ ಹೊಸ ಸೇರ್ಪಡೆಯಾಗಿ ಉಪೇಂದ್ರ ಗರಡಿಯಲ್ಲಿ ಪಳಗಿರುವ ಸಂದೀಪ್ ಜನಾರ್ಧನ್ ಅವರ ನಿರ್ದೇಶನದಲ್ಲಿ ಮೂಡಿಬರುತ್ತಿರುವ ‘ಫೇಸ್ 2 ಫೇಸ್’ ಎಂಬ ಕ್ಯಾಚಿ ಟೈಟಲ್ ಇರುವ ಚಿತ್ರ ಬಿಡುಗಡೆಗೆ ಸಿದ್ಧವಾಗಿದೆ. ಈ ಚಿತ್ರದ ಟ್ರೈಲರ್ ಇದೀಗ ಬಿಡುಗಡೆಗೊಂಡಿದ್ದು ಚಿತ್ರದ ಕುರಿತು ಸಾಕಷ್ಟು ಕುತೂಹಲ ಹುಟ್ಟುವಂತೆ ಮಾಡುವಲ್ಲಿ ಈ ಟ್ರೈಲರ್ ಯಶಸ್ವಿಯಾಗಿದೆ.
ಯುವನಟ ರೋಹಿತ್ ಭಾನುಪ್ರಕಾಶ್ ನಾಯಕ ನಟನಾಗಿ ನಟಿಸುತ್ತಿರುವ ಮೊದಲ ಚಿತ್ರ ಇದಾಗಿದೆ. ರೋಹಿತ್ ಗೆ ಜೋಡಿಯಾಗಿ ಪೂರ್ವಿ ಜೋಶಿ ಮತ್ತು ದಿವ್ಯಾ ಉರುಡಗ ನಟಿಸಿದ್ದಾರೆ. ಸುಚೆಂದ್ರ ಪ್ರಸಾದ್ ಅವರು ತನಿಖಾಧಿಕಾರಿ ಪಾತ್ರದಲ್ಲಿ ಗಮನಸೆಳೆಯುತ್ತಾರೆ. ಈ ಚಿತ್ರದ ಇನ್ನೊಂದು ವಿಶೇಷವೆಂದರೆ ಮುಂಬಯಿಯ ‘ಎಕ್ ಕ್ವಾಬ್ – ದಿ ಬ್ಯಾಂಡ್’ ತಂಡವು ಈ ಚಿತ್ರಕ್ಕೆ ಸಂಗೀತ ನೀಡಿರುವುದು. ‘ಶ್ರೀ ಬನಶಂಕರಿ ಕ್ರಿಯೇಷನ್ಸ್’ ಬ್ಯಾನರ್ ಅಡಿಯಲ್ಲಿ ಸುಮಿತ್ರಾ ಬಿ.ಕೆ. ಅವರು ಈ ಚಿತ್ರವನ್ನು ನಿರ್ಮಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Mogilaiah: ಪದ್ಮಶ್ರೀ ಪುರಸ್ಕೃತ, ಜಾನಪದ ಕಲಾವಿದ ಬಳಗಂ ಚಿತ್ರ ಖ್ಯಾತಿಯ ಮೊಗಿಲಯ್ಯ ನಿಧನ
Bantwala: ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಟೆಂಪೋ ಟ್ರಾವೆಲ್
Betting App; ಬಾಲಿವುಡ್ ನಟಿಯರು ಪ್ರಚಾರ ಮಾಡಿದ್ದ ಬೆಟ್ಟಿಂಗ್ ಆ್ಯಪ್ ಮಾಲಕ ಪಾಕಿಸ್ತಾನಿ!
Dharwad: ಜಿಲ್ಲಾಧಿಕಾರಿ ಕಚೇರಿಯಲ್ಲಿ ಬ್ಯಾಟರಿ ಕಳ್ಳತನ
K.V.Narayana: ವಿಮರ್ಶಕ ಪ್ರೊ.ಕೆ.ವಿ.ನಾರಾಯಣಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.