ಭರಾಟೆಗೆ ಭರ್ಜರಿ ಫೈಟ್
Team Udayavani, Nov 20, 2018, 11:20 AM IST
ನಟ ಶ್ರೀಮುರಳಿ ಅಭಿನಯದ ಬಹುನಿರೀಕ್ಷಿತ “ಭರಾಟೆ’ ಚಿತ್ರದ ಚಿತ್ರೀಕರಣದ “ಭರಾಟೆ’ಯೂ ಜಾರಾಗಿದೆ. ಮೊದಲ ಹಂತದಲ್ಲಿ ಮಾತಿನ ಭಾಗದ ಚಿತ್ರೀಕರಣವನ್ನು ಪೂರ್ಣಗೊಳಿಸಿದ್ದ ಚಿತ್ರತಂಡ, ಎರಡನೇ ಹಂತದ ಚಿತ್ರೀಕರಣದಲ್ಲಿ, ಚಿತ್ರದ ಸಾಹಸ ದೃಶ್ಯಗಳನ್ನು ಚಿತ್ರೀಕರಿಸುವ ಪ್ಲಾನ್ ಹಾಕಿಕೊಂಡಿತ್ತು.
ಅದರಂತೆ ಇತ್ತೀಚೆಗೆ ಭರ್ಜರಿಯಾಗಿ ಸಾಹಸ ದೃಶ್ಯಗಳನ್ನು ಸೆರೆಹಿಡಿಯುವ ಮೂಲಕ ತನ್ನ ಎರಡನೇ ಹಂತದ ಚಿತ್ರೀಕರಣವನ್ನು ಯಶಸ್ವಿಯಾಗಿ ಮುಗಿಸಿದೆ ಚಿತ್ರತಂಡ. ಮಂಡ್ಯದ ಮೈ ಶುಗರ್ ಫ್ಯಾಕ್ಟರಿಯಲ್ಲಿ, ಸುಮಾರು ಆರು ದಿನಗಳ ಕಾಲ ನಡೆದ ಸತತ ಚಿತ್ರೀಕರಣದಲ್ಲಿ ಚಿತ್ರದ ಬರುವ ಮೆಗಾ ಫೈಟ್ ದೃಶ್ಯವೊಂದನ್ನು ಚಿತ್ರೀಕರಿಸಲಾಯಿತು.
ರವಿವರ್ಮ ಸಾಹಸ ಸಂಯೋಜನೆಯಲ್ಲಿ ಮೂಡಿಬಂದ ಈ ಆ್ಯಕ್ಷನ್ ದೃಶ್ಯದ ಚಿತ್ರೀಕರಣದಲ್ಲಿ 70ಕ್ಕೂ ಹೆಚ್ಚು ಸಾಹಸ ಕಲಾವಿದರು ಭಾಗವಹಿಸಿದ್ದರು. ಇನ್ನು ಈ ಆ್ಯಕ್ಷನ್ ದೃಶ್ಯಕ್ಕಾಗಿ ಸುಮಾರು 60 ಲಕ್ಷ ರೂ ವೆಚ್ಚವಾಗಿದ್ದು, ನಿರ್ದೇಶಕ ಬಹದ್ದೂರ್ ಚೇತನ್ ಅವರ ನಿರ್ದೇಶನದಂತೆ ಸಾಹಸ ದೃಶ್ಯಗಳನ್ನು ಸೆರೆಹಿಡಿಯಲಾಯಿತು.
ಸದ್ಯ ಈ ಮೆಗಾ ಆ್ಯಕ್ಷನ್ ದೃಶ್ಯದ ಒಂದಷ್ಟು ಪೋಟೋಗಳು ಹೊರಬಿದ್ದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿವೆ. ಒಟ್ಟಾರೆ ತನ್ನ ಟೈಟಲ್‌ನಿಂದಲೇ ಗಾಂಧಿನಗರದಲ್ಲಿ ಸದ್ದು ಮಾಡುತ್ತಿರುವ “ಭರಾಟೆ’ ಹೇಗಿರಬಹುದು ಎಂದು ತಿಳಿಯಬೇಕಾದರೆ, ಮುಂದಿನ ಏಪ್ರಿಲ್ ತಿಂಗಳವರೆಗೆ ಕಾಯಲೇಬೇಕು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gurunandan: ಡಿ.27ಕ್ಕೆ ತೆರೆಗೆ ಬರುತ್ತಿಲ್ಲ ʼರಾಜು ಜೇಮ್ಸ್ ಬಾಂಡ್’ ಚಿತ್ರ
Nodidavaru Enanthare Movie: ನವೀನ್ ಶಂಕರ್ ಚಿತ್ರದ ಟೀಸರ್ ಬಂತು
BBK11: ಸತತ ಮೂರನೇ ವಾರವೂ ಕಳಪೆ ಪಟ್ಟಿ: ಖುಷಿಯಿಂದಲೇ ಜೈಲು ಸೇರಿದ ಚೈತ್ರಾ
Dhruva-Prem: ಡಿ.24ಕ್ಕೆ ʼಕೆಡಿʼ ಶಿವ ಶಿವ ಹಾಡು ರಿಲೀಸ್
Dhruva Sarja: ಪ್ರತಿ ಸಿನಿಮಾವೂ ನನಗೆ ಹೊಸ ಪಾಠ…: ಧ್ರುವ ಹೇಳಿದ್ದೇನು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.