Fighter; ಸಂದೇಶದ ಜೊತೆಗೆ ಮನರಂಜನೆ
Team Udayavani, Oct 6, 2023, 10:15 AM IST
ವಿನೋದ್ ಪ್ರಭಾಕರ್ ನಟನೆಯ “ಫೈಟರ್’ ಚಿತ್ರ ಇಂದು ತೆರೆಕಾಣುತ್ತಿದೆ. ಈಗಾಗಲೇ ಬಿಡುಗಡೆಯಾಗಿರುವ ಸಿನಿಮಾದ ಟ್ರೇಲರ್, ಹಾಡುಗಳಿಗೆ ಮೆಚ್ಚುಗೆ ವ್ಯಕ್ತವಾಗುವ ಮೂಲಕ ವಿನೋದ್ ಖುಷಿಯಾಗಿದ್ದಾರೆ. ಅದರಂತೆ ಸಿನಿಮಾವನ್ನು ಜನ ಇಷ್ಟಪಡುತ್ತಾರೆ ಎಂಬ ವಿಶ್ವಾಸ ಅವರದು.
ಈ ಚಿತ್ರದ ಬಗ್ಗೆ ಮಾತನಾಡುವ ವಿನೋದ್, “ಇದೊಂದು ಫ್ಯಾಮಿಲಿ ಡ್ರಾಮಾವಾಗಿದ್ದು, ಅನ್ಯಾಯದ ವಿರುದ್ಧ ನಾಯಕ ನಿಂತಾಗ ಏನೆಲ್ಲಾ ಆಗುತ್ತದೆ ಎಂಬ ಅಂಶದೊಂದಿಗೆ ಚಿತ್ರ ಸಾಗುತ್ತದೆ. ಫೈಟರ್‌ನಲ್ಲಿ ಬರೀ ಹೋರಾಟ ಹಾಗೂ ಹೊಡೆದಾಟವಿಲ್ಲ. ತಂದೆ- ತಾಯಿ ಹಾಗೂ ಮಗನ ಬಾಂಧವ್ಯದ ಸನ್ನಿವೇಶಗಳು ಎಲ್ಲರ ಮನ ಮುಟ್ಟಲಿದೆ. ಜೊತೆಗೆ ಥ್ರಿಲ್ಲರ್ ಅಂಶಗಳನ್ನ ಒಳಗೊಂಡ ಕೌಟುಂಬಿಕ ಮನರಂಜನೆಯ ಚಿತ್ರ ಇದಾಗಿದೆ. ಈ ಚಿತ್ರದಲ್ಲಿ ಸಮಾಜದ ವ್ಯವಸ್ಥೆಯ ವಿರುದ್ಧ ಹೋರಾಡುವ “ಫೈಟರ್’ ಎನ್ನುವುದು ವಿನೋದ್ ಪ್ರಭಾಕರ್ ಮಾತು.
ಚಿತ್ರದಲ್ಲಿ ರೈತರ ಸಂಕಷ್ಟಗಳನ್ನು ಗಂಭೀರವಾಗಿ ತೋರಿಸಲಾಗಿದೆಯಂತೆ. ಹಾಗಂತ ಕಮರ್ಷಿಯಲ್ ಸಿನಿಮಾವಾಗಿ ಯಾವ ಅಂಶವನ್ನು ಎಷ್ಟು ಹೇಳಬೇಕೋ ಅಷ್ಟೇ ಹೇಳಿ, ಮಿಕ್ಕಂತೆ ಮನರಂಜನೆಗೆ ಮೊದಲ ಆದ್ಯತೆ ನೀಡಲಾಗಿದೆ ಎನ್ನಲು ವಿನೋದ್ ಮರೆಯುವುದಿಲ್ಲ.
ಇನ್ನು, ಈ ಚಿತ್ರದಲ್ಲಿ ವಿನೋದ್ ಪ್ರಭಾಕರ್ ಅವರ ಹೇರ್‌ಸ್ಟೈಲ್, ಗೆಟಪ್ ಎಲ್ಲವೂ ಬದಲಾಗಿದೆಯಂತೆ. ಈ ಚಿತ್ರದಲ್ಲಿ ಇಬ್ಬರು ನಾಯಕಿಯರಿದ್ದು, ಅದನ್ನು ಪಾವನಾ ಹಾಗೂ ಲೇಖಾಚಂದ್ರ ನಿರ್ವಹಿಸಿದ್ದಾರೆ. ನಟಿ ನಿರೋಷಾ ಕೂಡಾ ಪ್ರಮುಖ ಪಾತ್ರ ಮಾಡಿದ್ದಾರೆ. ಆಕಾಶ್ ಎಂಟರ್‌ಪ್ರೈಸಸ್ ಬ್ಯಾನರ್‌ನಡಿ ಸೋಮ ಶೇಖರ್ ಕಟ್ಟಿಗೇನಹಳ್ಳಿ ಈ ಚಿತ್ರವನ್ನು ನಿರ್ಮಿಸಿದ್ದು, ನೂತನ್ ಉಮೇಶ್ ನಿರ್ದೇಶಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sandalwood: ಯಾರೋ ನಾ ಕಾಣೆ, ಚಂದಾಗೌಳೆ ಶಾಣೆ..: ಕಟ್ಲೆ ಹಾಡು ಬಂತು
Viral Photo: ಬಾಲಿವುಡ್ ನಟ ಆಮಿರ್ ಖಾನ್ ಭೇಟಿಯಾದ ಕಿಚ್ಚ ಸುದೀಪ್; ಫ್ಯಾನ್ಸ್ ಥ್ರಿಲ್
Renukaswamy Case: ದರ್ಶನ್ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ
ZEBRA Movie: ಜೀಬ್ರಾ ಮೇಲೆ ಡಾಲಿ ಕಣ್ಣು
Drone Prathap: ಸಿನಿಮಾರಂಗಕ್ಕೆ ಡ್ರೋನ್ ಪ್ರತಾಪ್ ಎಂಟ್ರಿ; ಮೊದಲ ಚಿತ್ರದಲ್ಲೇ ಹೀರೋ
MUST WATCH
ಹೊಸ ಸೇರ್ಪಡೆ
Siruguppa: ಜೋಡೆತ್ತಿನ ಬಂಡಿಗೆ ಡಿಕ್ಕಿ ಹೊಡೆದ ಬಸ್; ಎತ್ತು ಸಾವು
Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು
Yellapur: ಕಣ್ಣಿಗೆ ಖಾರಾಪುಡಿ ಎರಚಿ ಹಣ, ಸ್ಕೂಟಿ ದರೋಡೆ; ಆರೋಪಿಗಳ ಬಂಧನ
Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ
Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.