ಸಿನಿಮಾದ ಹೆಸರೇ ಮೈಸೂರು
Team Udayavani, Sep 28, 2021, 3:04 PM IST
ಕರ್ನಾಟಕದ ಸಾಂಸ್ಕೃತಿಕ ರಾಜಧಾನಿ ಮೈಸೂರು. ಈಗ ಇದೇ ಹೆಸರಿನ ಚಿತ್ರವೊಂದು ಸಿದ್ದವಾಗುತ್ತಿದ್ದು, ಚಿತ್ರೀಕರಣ ಪೂರ್ಣವಾಗಿದೆ. ಮೈಸೂರು ಇದು ಹೊರ ರಾಜ್ಯದಲ್ಲಿ ನೆಲೆಸಿರುವ ಅನಿವಾಸಿ ಕನ್ನಡಿಗನ ಪ್ರೇಮಕಥೆ. ಮ್ಯೂಸಿಕಲ್ ಲವ್ ಸ್ಟೋರಿ ಯೂ ಹೌದು. ಈ ಚಿತ್ರದ ಚಿತ್ರೀಕರಣ ಮುಕ್ತಾಯವಾಗಿದೆ.
ಬೆಂಗಳೂರು, ಮೈಸೂರು, ಚಿಕ್ಕಮಗಳೂರು, ಉಡುಪಿ, ಭುವನೇಶ್ವರ, ಪೂರಿ, ಕಟಕ್ ಮುಂತಾದ ಕಡೆ ನಲವತ್ತು ದಿನಗಳ ಕಾಲ ಚಿತ್ರೀಕರಣ ನಡೆದಿದೆ. ಕಿರುತೆರೆಯ ವಿವಿಧ ಭಾಗಗಳಲ್ಲಿ ಕಾರ್ಯ ನಿರ್ವಹಿಸಿರುವ ವಾಸುದೇವ ರೆಡ್ಡಿ ಈ ಚಿತ್ರಕ್ಕೆ ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡುತ್ತಿದ್ದಾರೆ. ಎಸ್ ಆರ್.ಕಂಬೈನ್ಸ್‌ನಲ್ಲಿ ವಾಸುದೇವ ರೆಡ್ಡಿ ನಿರ್ಮಾಣವನ್ನು ಮಾಡಿದ್ದಾರೆ. ಜಗದೀಶ್, ಕೆ.ಆರ್. ಅಪ್ಪಾಜಿ ಈ ಚಿತ್ರದ ಸಹ ನಿರ್ಮಾಪಕರು.
ಕನ್ನಡ ಚಿತ್ರರಂಗದಲ್ಲಿ ಸಾಕಷ್ಟು ವರ್ಷಗಳಿಂದ ಕಲಾವಿದನಾಗಿ ಗುರುತಿಸಿ ಕೊಂಡಿರುವ ಜ್ಯೂನಿಯರ್ ನರಸಿಂಹರಾಜು ಅವರ ಸಾರಥ್ಯದಲ್ಲಿ ಈ ಚಿತ್ರ ತಯಾರಾಗುತ್ತಿದೆ. ಸಂವಿತ್ ಈ ಚಿತ್ರದ ನಾಯಕ. ತೆಲುಗು, ಬಂಗಾಳಿ, ಭೋಜಪುರಿ ಭಾಷೆಯ ಚಿತ್ರಗಳಲ್ಲಿ ಅಭಿನಯಿಸಿರುವ ಇವರಿಗೆ ಕನ್ನಡದಲ್ಲಿ ಮೊದಲ ಚಿತ್ರ.
ಪೂಜಾ ಈ ಚಿತ್ರದ ನಾಯಕಿ. ಜ್ಯೂ.ನರಸಿಂಹರಾಜು, ಸತ್ಯಜಿತ್, ಕುರಿ ಪ್ರತಾಪ್, ಭಾಸ್ಕರ್ ಶೆಟ್ಟಿ, ಅಶೋಕ್ ಹೆಗ್ಡೆ, ಜೈಶ್ರೀ, ರವಿಕುಮಾರ್ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ. ಹಾಡುಗಳಿಗೆ ರಮಣಿ ಸುಂದರೇಶನ್ ನಟಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Theatre stampede case: ಪೊಲೀಸರ ಮುಂದೆ ಹಾಜರಾದ ಅಲ್ಲು ಅರ್ಜುನ್, ಆಸ್ಪತ್ರೆಗೆ ಭೇಟಿ ರದ್ದು
Gambhir; ಕೊಹ್ಲಿ, ರೋಹಿತ್ ಶರ್ಮ ಟೆಸ್ಟ್ ಭವಿಷ್ಯದ ಬಗ್ಗೆ ಗಂಭೀರ್ ಪ್ರತಿಕ್ರಿಯೆ
Kasaragod: ಬಟ್ಟಿಪದವು; ಪ್ಲೈವುಡ್ ಮಿಲ್ಲಿಗೆ ಬೆಂಕಿ
Bus Fare Hike: ಸಾರಿಗೆ ನಿಗಮಗಳಿಗೆ ಸರ್ಕಾರ ಎಷ್ಟೂ ಅಂತ ಸಹಾಯಧನ ಕೊಡಲು ಸಾಧ್ಯ?: ಸಚಿವ
Karkala: ಬಾವಿಗೆ ಬಿದ್ದ ದಂಪತಿಯ ರಕ್ಷಣೆ ಮಾಡಿದ ಅಗ್ನಿಶಾಮಕ ದಳ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.