Toxic Movie: ಯಶ್ ʼಟಾಕ್ಸಿಕ್ʼ ಸಿನಿಮಾಕ್ಕಾಗಿ ಮರ ಕಡಿದ ಆರೋಪ; ಎಫ್‌ಐಆರ್ ದಾಖಲು
Team Udayavani, Nov 12, 2024, 1:03 PM IST
ಬೆಂಗಳೂರು: ನಟ ಯಶ್ (Actor Yash) ಅವರ ʼಟಾಕ್ಸಿಕ್ʼ(Toxic Movie) ಸಿನಿಮಾ ತಂಡಕ್ಕೆ ಕಾನೂನು ಸಂಕಷ್ಟ ಎದುರಾಗಿದೆ.
ಇತ್ತೀಚೆಗೆ ಯಶ್ ನಟನೆಯ ‘ಟಾಕ್ಸಿಕ್’ ಸಿನಿಮಾ ತಂಡ ಬೆಂಗಳೂರಿನ ಹೊರವಲಯದಲ್ಲಿ ಚಿತ್ರೀಕರಣಕ್ಕೆ ಸೆಟ್ ಹಾಕಿತ್ತು. ಸೆಟ್ ಹಾಕಲು ಸಾಕಷ್ಟು ಮರಗಳನ್ನು ಕಡಿಯಲಾಗಿದೆ ಎಂಬ ಆರೋಪ ಕೇಳಿ ಬಂದಿತ್ತು.
ಈ ಸಂಬಂಧ ಅರಣ್ಯ ಸಚಿವ ಈಶ್ವರ್ ಖಂಡ್ರೆ, ಹೆಚ್.ಎಂ.ಟಿ. ವಶದಲ್ಲಿರುವ ಅರಣ್ಯ ಭೂಮಿಯಲ್ಲಿ ‘ಟಾಕ್ಸಿಕ್’ ಎಂಬ ಚಲನಚಿತ್ರದ ಚಿತ್ರೀಕರಣಕ್ಕಾಗಿ ನೂರಾರು ಮರಗಳನ್ನು ಅಕ್ರಮವಾಗಿ ಕಡಿದು ಹಾನಿಗೊಳಿಸಿರುವ ವಿಚಾರ ಗಂಭೀರ ಚಿಂತೆ ಮೂಡಿಸಿದೆ. ಸ್ಯಾಟೆಲೈಟ್ ಚಿತ್ರಗಳಿಂದ ಈ ಅಕ್ರಮ ಕೃತ್ಯವು ಸ್ಪಷ್ಟವಾಗಿ ಕಾಣುತ್ತಿದ್ದು, ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದೇನೆ. ಈ ಅಕ್ರಮ ಕೃತ್ಯಕ್ಕೆ ಹೊಣೆಗಾರರ ವಿರುದ್ಧ ತಕ್ಷಣವೇ ಕಠಿಣ ಕಾನೂನು ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದ್ದೇನೆ. ನಮ್ಮ ಅರಣ್ಯ ಮತ್ತು ಪರಿಸರದ ರಕ್ಷಣೆ ನಮ್ಮೆಲ್ಲರ ಪ್ರಮುಖ ಹೊಣೆಗಾರಿಕೆ. ಅರಣ್ಯ ಭೂಮಿಯಲ್ಲಿ ಅಕ್ರಮ ಕೃತ್ಯಗಳು ಕಂಡುಬಂದಲ್ಲಿ, ಅಂಥವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ನಾನು ಬದ್ಧನಾಗಿದ್ದೇನೆ ಎಂದು ಸಚಿವರು ಹೇಳಿದ್ದರು.
ಈ ಬಗ್ಗೆ ಹೆಚ್‍ಎಂಟಿ ಇದು ತಮ್ಮ ಜಾಗ ಅಲ್ಲ ಈ ಜಾಗವು ಕೆನರಾ ಬ್ಯಾಂಕ್ ಒಡೆತನದಲ್ಲಿದೆ ಎಂದು ಎಚ್ಎಂಟಿ ಎಂದು ಸ್ಪಷ್ಟನೆ ನೀಡಿತ್ತು.
ಇದೀಗ ʼಟಾಕ್ಸಿಕ್ʼ ಚಿತ್ರತಂಡದ ವಿರುದ್ಧ ಅರಣ್ಯ ಕಾಯ್ದೆಯಡಿಯಲ್ಲಿ ಎಫ್ ಐಆರ್(FIR) ದಾಖಲಾಗಿದೆ ಎಂದು ವರದಿಯಾಗಿದೆ.
ಈ ಸಂಬಂಧ ಕೆವಿನ್ ಸಂಸ್ಥೆ, ಕೆನರಾ ಬ್ಯಾಂಕ್ ಜನರಲ್ ಮ್ಯಾನೇಜರ್, ಹೆಚ್‍ಎಂಟಿ ಜನರಲ್ ಮ್ಯಾನೇಜರ್ ವಿರುದ್ಧ ಎಫ್‍ಐಆರ್ ದಾಖಲಾಗಿದೆ.
ನ್ಯಾಯಾಲಯದ ಆದೇಶ ಪಡೆದು ಅರಣ್ಯ ಇಲಾಖೆ ಎಫ್ ಐಆರ್ ದಾಖಲಿಸಿದೆ ಎಂದು ವರದಿಯಾಗಿದೆ.
ಸದ್ಯ ಗೀತು ಮೋಹನ್ ದಾಸ್ ಅವರ ʼಟಾಕ್ಸಿಕ್ʼ ಚಿತ್ರದ ಚಿತ್ರೀಕರಣ ಮುಂಬಯಿಯಲ್ಲಿ ನಡೆಯುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Assembly Election: “ಮಹಾ’ ಅಖಾಡದಲ್ಲಿ ಕರುನಾಡ ನಾಯಕರ ಹವಾ!
SSLC Exam-1: ನ. 20ರ ವರೆಗೆ ನೊಂದಣಿ ಅವಧಿ ವಿಸ್ತರಣೆ
High Court: ಪ್ರಚೋದನಕಾರಿ ಹೇಳಿಕೆ; ಬಸವರಾಜ ಬೊಮ್ಮಾಯಿ ಪ್ರಕರಣಕ್ಕೆ ಹೈಕೋರ್ಟ್ ತಡೆ
ತಾಯಿಹಾಲು ಮಾರಾಟ: ಪರವಾನಿಗೆ ರದ್ದತಿಗೆ ಸೂಚನೆ; ಹೈಕೋರ್ಟ್‌ಗೆ ಕೇಂದ್ರ ಸರಕಾರದ ಮಾಹಿತಿ
By-election: 3 ಕ್ಷೇತ್ರದಲ್ಲೂ ಮತದಾನಕ್ಕೆ ಮತದಾರರ ಹುಮ್ಮಸ್ಸು
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.