ಕಲಾ ನಿರ್ದೇಶಕ ಅರುಣ್ ಸಾಗರ್ ಗೋದಾಮಿಗೆ ಬೆಂಕಿ ;ಲಕ್ಷಾಂತರ ನಷ್ಟ
Team Udayavani, Feb 17, 2017, 10:17 AM IST
ಬೆಂಗಳೂರು : ನಗರದ ಉತ್ತರಹಳ್ಳಿಯಲ್ಲಿರುವ ಕಲಾ ನಿರ್ದೇಶಕ ,ನಟ ಅರುಣ್ ಸಾಗರ್ ಅವರ ಗೋದಾಮಿನಲ್ಲಿ ಫೆಬ್ರವರಿ 15 ರ ಸಂಜೆ ಭಾರಿ ಅಗ್ನಿ ಅವಘಡ ಸಂಭವಿಸಿದ್ದು ಚಿತ್ರಗಳಿಗೆ ಬಳಸಿದ್ದ, ಬಳಸಬೇಕಾಗಿದ್ದ ನೂರಾರು ಅಪೂರ್ವ ಕಲಾಕೃತಿಗಳು ಸುಟ್ಟು ಭಸ್ಮವಾಗಿದೆ.
3 ಗೋದಾಮು ಗಳಲ್ಲಿ ದ್ದ ಅನೇಕ ಕಲಾಕೃತಿಗಳು ಭಸ್ಮವಾಗಿದ್ದು, ಅಗ್ನಿ 1.5 ಎಕರೆಯಷ್ಟು ಪ್ರದೇಶಕ್ಕೆ ವ್ಯಾಪಿಸಿದೆ. ಸುಮಾರು 75 ಲಕ್ಷ ರೂಪಾಯಿ ನಷ್ಟ ಸಂಭವಿಸಿರುವುದಾಗಿ ಅಂದಾಜಿಸಲಾಗಿದೆ ಎಂದು ಮಾಧ್ಯಮಗಳಲ್ಲಿ ವರದಿಯಾಗಿದೆ.
ಬೆಂಕಿಯನ್ನು ನಂದಿಸಲು ಸ್ಥಳೀಯರು ಪ್ರಯತ್ನಿಸಿದರಾದರೂ ಸಾಧ್ಯವಾಗಲಿಲ್ಲ. ಅಗ್ನಿ ಶಾಮಕದಳದ ಸಿಬಂದಿಗಳು ಸ್ಥಳಕ್ಕಾಗಮಿಸುವಷ್ಟರಲ್ಲಿ ಬೆಂಕಿಯ ಕೆನ್ನಾಲೆಗೆ ಗೋದಾಮುಗಳನ್ನು ಆಹುತಿ ಪಡೆದಿತ್ತು.
ಆಕಸ್ಮಿಕವಾಗಿ ಬೆಂಕಿ ಹೊತ್ತಿಕೊಂಡಿರಬಹುದು, ನನಗೆ ಯಾರೂ ಬೆಂಕಿ ಕೊಟ್ಟಿರುವ ಬಗ್ಗೆ ಅನುಮಾನವಿಲ್ಲ ಎಂದು ಅರುಣ್ ಸಾಗರ್ ಅವರು ಮಾಧ್ಯಮವೊಂದಕ್ಕೆ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mangaluru: ಗುತ್ತಿಗೆದಾರ ಸಚಿನ್ ಪ್ರಕರಣ; ಪ್ರಿಯಾಂಕ್ ಖರ್ಗೆ ರಾಜೀನಾಮೆಗೆ ಬಿಜೆಪಿ ಆಗ್ರಹ
Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್‌ಗೆ ನೋಟಿಸ್
Madikeri: ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ
Madikeri ಅಪರಿಚಿತ ವಾಹನ ಡಿಕ್ಕಿ: ಚಿಕಿತ್ಸೆ ಫಲಿಸದೆ ವ್ಯಕ್ತಿ ಸಾವು
Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.