Sandalwood: ದೆವ್ವದ ಜೊತೆ ಪ್ರಥಮ ರಾತ್ರಿ!
Team Udayavani, Nov 22, 2023, 3:38 PM IST
ನಟ ಪ್ರಥಮ್ ನಾಯಕನಾಗಿ ಅಭಿನಯಿಸುತ್ತಿರುವ ಮತ್ತು ಪಿ.ವಿ.ಆರ್ ಸ್ವಾಮಿ ಗೂಗಾರದೊಡ್ಡಿ ನಿರ್ದೇಶನದ ಹೊಸ ಸಿನಿಮಾಕ್ಕೆ “ಫಸ್ಟ್‌ನೈಟ್ ವಿಥ್ ದೆವ್ವ’ ಎಂದು ಹೆಸರಿಡಲಾಗಿದ್ದು, ಇತ್ತೀಚೆಗೆ ಈ ಸಿನಿಮಾದ ಮುಹೂರ್ತ ನೆರವೇರಿತು.
ಹಿರಿಯನಟ ಶ್ರೀನಿವಾಸಮೂರ್ತಿ ಚಿತ್ರದ ಮೊದಲ ಸನ್ನಿವೇಶಕ್ಕೆ ಆರಂಭ ಫಲಕ ತೋರಿಸಿ ಚಿತ್ರೀಕರಣಕ್ಕೆ ಚಾಲನೆ ನೀಡಿದರು. ಮುಹೂರ್ತದ ಬಳಿಕ ಮಾತನಾಡಿದ ನಟ ಪ್ರಥಮ್, “ಇದೊಂದು ಹಾರರ್, ಕಾಮಿಡಿ ಶೈಲಿಯ ಸಿನಿಮಾ. ವಿಕ್ರಮಾದಿತ್ಯ ಮತ್ತು ಬೇತಾಳದ ಕಥೆಯನ್ನು ಸ್ಪೂರ್ತಿಯಾಗಿಟ್ಟುಕೊಂಡು ಈ ಸಿನಿಮಾಕ್ಕೆ ನಾನೇ ಕಥೆ ಬರೆದಿದ್ದೇನೆ. ಈಗಾಗಲೇ ಸಾಕಷ್ಟು ಹಾರಾರ್ ಸಿನಿಮಾಗಳು ಬಂದಿದ್ದರೂ, ಆ ಎಲ್ಲ ಸಿನಿಮಾಗಳಿಗಿಂತ ವಿಭಿನ್ನವಾಗಿ ಈ ಸಿನಿಮಾವನ್ನು ವಿಭಿನ್ನವಾಗಿ ತೋರಿಸುತ್ತಿದ್ದೇವೆ’ ಎಂದರು.
“ಲವ್, ಹಾರರ್, ಕಾಮಿಡಿ ಹೀಗೆ ಎಲ್ಲ ಥರದ ಮನರಂಜನಾತ್ಮಕ ಅಂಶಗಳೂ ಈ ಸಿನಿಮಾದಲ್ಲಿದೆ. ಬೆಂಗಳೂರಿನಲ್ಲಿ ಸಿನಿಮಾದ ಚಿತ್ರೀಕರಣ ಶುರುವಾಗಿದ್ದು, ಹೊರದೇಶದಲ್ಲಿ ಹಾಡಿನ ಚಿತ್ರೀಕರಣ ನಡೆಸುವ ಯೋಚನೆಯಿದೆ’ ಎನ್ನುವುದು ನಿರ್ದೇಶಕ ಪಿ. ವಿ. ಆರ್ ಸ್ವಾಮಿ ಮಾತು.
“ಫಸ್ಟ್‌ನೈಟ್ ವಿಥ್ ದೆವ್ವ’ ಸಿನಿಮಾದಲ್ಲಿ ಪ್ರಥಮ್ ಅವರಿಗೆ ನಿಖಿತಾ ಸ್ವಾಮಿ ನಾಯಕಿಯಾಗಿ ಕಾಣಿಸಿಕೊಳ್ಳುತ್ತಿದ್ದಾರೆ.
ಉಳಿದಂತೆ ಮಾನ್ಯಾ ಸಿಂಗ್, ಹಿರಿಯ ನಟರಾದ ಶ್ರೀನಿವಾಸಮೂರ್ತಿ, ಹರೀಶ್ ರಾಜ್, ಸಂಗೀತಾ, ಶಿವಮೊಗ್ಗ ಭಾಸ್ಕರ್, ತನುಜಾ, ದೀಪಿಕಾ ಮತ್ತಿತರರು ಸಿನಿಮಾದ ಇತರ ಪ್ರಮುಖ ಪಾತ್ರಗಳಲ್ಲಿ ಅಭಿನಯಿಸುತ್ತಿದ್ದಾರೆ. ಸಿನಿಮಾದ ಹಾಡುಗಳಿಗೆ ಅದ್ವಿಕ್ ವರ್ಮ ಸಂಗೀತ ಸಂಯೋಜಿಸುತ್ತಿದ್ದು, ನಾಗೇಶ್ ಸಂಕಲನ ಹಾಗೂ ಸಂಭಾಷಣೆಯಿದೆ. ನವೀನ್ ಬೀರಣ್ಣ ಈ ಸಿನಿಮಾವನ್ನು ನಿರ್ಮಿಸುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Havyaka ಭಾಷೆಗೆ ಅಕಾಡೆಮಿ ಅಥವಾ ಅಧ್ಯಯನ ಪೀಠ ಅಗತ್ಯ: ರವಿಶಂಕರ್ ಭಟ್
Ramnagar; 30ಕ್ಕೂ ಅಧಿಕ ಊರುಗಳಲ್ಲಿ ಆತಂಕ ಹುಟ್ಟಿಸಿದ್ದ ಕಾಡಾನೆ ಸೆರೆ
Yakshagana;ಅಧ್ಯಯನ, ಪಾತ್ರ ಜ್ಞಾನದಿಂದಷ್ಟೇ ಕಲಾವಿದ ರಂಗಸ್ಥಳದಲ್ಲಿ ಮೆರೆಯಲು ಸಾಧ್ಯ
Drugs; ಮಾರಾಟ, ಸೇವನೆ : ಮಂಗಳೂರು 1,090, ಉಡುಪಿ 116 ಪ್ರಕರಣ ದಾಖಲು
Udupi; ಕ್ಯಾನ್ಸರ್‌ನಿಂದ ಬಳಲುತ್ತಿದ್ದ ರೋಗಿಯ ರಕ್ಷಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.