ಸೆ.27ರಿಂದ “ಆಟಕ್ಕುಂಟು ಲೆಕ್ಕಕ್ಕಿಲ್ಲ’

ಸಂಚಾರಿಯ ಹೊಸ ಕನಸಿದು

Team Udayavani, Sep 19, 2019, 3:02 AM IST

Aatakuntu-Lekkakilla

ಸಂಚಾರಿ ವಿಜಯ್‌ “ಆಟಕ್ಕುಂಟು ಲೆಕ್ಕಕ್ಕಿಲ್ಲ’ ಎಂಬ ಸಿನಿಮಾದಲ್ಲಿ ನಟಿಸುತ್ತಿರುವ ವಿಚಾರ ನಿಮಗೆ ಗೊತ್ತಿರಬಹುದು. ಈಗ ಆ ಚಿತ್ರ ಬಿಡುಗಡೆಯ ಹಂತಕ್ಕೆ ಬಂದಿದೆ. ಚಿತ್ರ ಸೆ.27 ರಂದು ತೆರೆಕಾಣುತ್ತಿದೆ. ಈ ಮೂಲಕ ಸಂಚಾರಿ ವಿಜಯ್‌ ಕಣ್ಣಲ್ಲಿ ಮತ್ತೆ ಭರವಸೆ ಕಾಣುತ್ತಿದೆ. ಈಗಾಗಲೇ ಬಿಡುಗಡೆಯಾಗಿರುವ ಚಿತ್ರದ ಟ್ರೇಲರ್‌ಗೆ ಮೆಚ್ಚುಗೆ ವ್ಯಕ್ತವಾಗಿದ್ದು, ಪ್ರೇಕ್ಷಕರು ಕೂಡಾ ಸಿನಿಮಾವನ್ನು ಇಷ್ಟಪಡುತ್ತಾರೆಂಬ ವಿಶ್ವಾಸ ಕೂಡಾ ಚಿತ್ರತಂಡಕ್ಕಿದೆ.

ರಾಮ್‌ ಜೆ ಚಂದ್ರ ಈ ಚಿತ್ರದ ನಿರ್ದೇಶಕರು. ಇವರಿಗಿದು ಚೊಚ್ಚಲ ಸಿನಿಮಾ. ಚಿತ್ರೀಕರಣಕ್ಕೆ ಹೋಗುವ ಮೊದಲು ಸಾಕಷ್ಟು ಪೂರ್ವತಯಾರಿ ಮಾಡಿಕೊಂಡ ಪರಿಣಾಮ ಸಿನಿಮಾ ಕೂಡಾ ಚೆನ್ನಾಗಿ ಮೂಡಿಬಂದ ಖುಷಿ ಚಿತ್ರತಂಡದ್ದು. ಚಿತ್ರದ ಬಗ್ಗೆ ಮಾತನಾಡುವ ನಿರ್ದೇಶಕರು, “ಈಗಾಗಲೇ ಟ್ರೇಲರ್‌ ಹಿಟ್‌ ಆಗಿದ್ದು, ಸಿನಿಮಾ ಮೇಲೆ ಭರವಸೆ ಮೂಡಿಸಿದೆ. ಇದು ಮನೋಲೋಕದ ಸುತ್ತ ನಡೆಯುವ ಕಥೆ. ಈ ಕಥೆಯನ್ನು ಬರೆಯುವಾಗಲೇ ನನ್ನ ಮನಸಲ್ಲಿ ಈ ಪಾತ್ರಕ್ಕೆ ಸಂಚಾರಿ ವಿಜಯ್‌ ಫಿಕ್ಸ್‌ ಆಗಿದ್ದರು.

ಅದರಂತೆ ಅವರು ಕೂಡಾ ಕಥೆ ಇಷ್ಟಪಟ್ಟು ಒಪ್ಪಿಕೊಂಡರು. ಪ್ರತಿ ಕ್ರೈಂ ಹಿಂದೆಯೂ ಮನಸಿಗೆ ಸಂಬಂಧಿಸಿದ ಕಾರಣಗಳಿರುತ್ತವೆ. ಮಾನಸಿಕವಾಗಿ ಸರಿಯಾಗಿರುವವರು ಕೊಲೆಯಂಥ ಕೃತ್ಯಗಳಿಗೆ ಕೈ ಹಾಕಲು ಸಾಧ್ಯವೇ ಇಲ್ಲ. ಅಂಥದ್ದನ್ನು ಮಾಡುವವರ ಮನಸ್ಥಿತಿ ಬೇರೆ ತೆರನಾಗಿರುತ್ತದೆ. ಆ ತರಹದ ಮನಸ್ಥಿತಿಯ ಸುತ್ತ ಈ ಸಿನಿಮಾ ಸಾಗುತ್ತದೆ. ಈ ಚಿತ್ರ ಸೈಕಾಲಾಜಿಕಲ್‌ ಸಸ್ಪೆನ್ಸ್‌ ಥ್ರಿಲ್ಲರ್‌ ಜಾನರ್‌ನಲ್ಲಿ ಮೂಡಿಬಂದಿದೆ’ ಎನ್ನುವುದು ನಿರ್ದೇಶಕರ ಮಾತು.

ಮಾನಸಿಕ ವಿಷಯಗಳ ಕುರಿತಾದ ಹಲವು ಅಂಶಗಳನ್ನು ಈ ಚಿತ್ರದಲ್ಲಿ ಹೇಳಲಾಗಿದೆಯಂತೆ. ಮುಖ್ಯವಾಗಿ ಅದೆಷ್ಟೇ ಆರೋಗ್ಯವಂತರಾಗಿರೋ ಮನುಷ್ಯರಲ್ಲಿಯೂ ಒಂದಷ್ಟು ಮಾನಸಿಕ ಸಮಸ್ಯೆಗಳು ಇರುತ್ತವೆ. ಅದರ ಪ್ರಮಾಣ ಕೊಂಚ ಹೆಚ್ಚಿರುವವರು ಕೂಡ ನಮ್ಮೊಡನೆ ಸಾಮಾನ್ಯರಂತೆಯೇ ಬದುಕುತ್ತಿರುತ್ತಾರೆ. ಆದರೆ, ಅವರ ಮನಸ್ಥಿತಿ ತಿಳಿಯೋದು ಕ್ರೈಂ ನಡೆದಾಗ. ಅಂಥಹ ಅಂಶಗಳನ್ನು “ಆಟಕ್ಕುಂಟು ಲೆಕ್ಕಕ್ಕಿಲ್ಲ’ ಚಿತ್ರದಲ್ಲಿ ಹೇಳಲಾಗಿದೆಯಂತೆ. ಚಿತ್ರದಲ್ಲಿ ಸಂಚಾರಿ ವಿಜಯ್‌, ಮಯೂರಿ, ರಶ್ಮಿ ಸೇರಿದಂತೆ ಅನೇಕರು ನಟಿಸಿದ್ದಾರೆ.

ಟಾಪ್ ನ್ಯೂಸ್

1-dee

ಪ್ರಸಾರಕ ಸಂಸ್ಥೆಗಳ ಶುಲ್ಕ ಹೆಚ್ಚಳ: ಚಾನೆಲ್‌ಗ‌ಳ ದರವೂ ಹೆಚ್ಚಳ

1-dam

ಬ್ರಹ್ಮಪುತ್ರ ಅಣೆಕಟ್ಟಿಂದ ಭಾರತಕ್ಕೆ ಧಕ್ಕೆ ಆಗದು: ಚೀನ

1-ran

National Anthem Controversy:ಭಾಷಣ ಮಾಡದೆ ಹೋದ ತಮಿಳುನಾಡು ರಾಜ್ಯಪಾಲ

Udupi: ಗೀತಾರ್ಥ ಚಿಂತನೆ-148: ಹೇಳುವುದು ಸುಖವಾದರೂ ಆಗುವುದು ದುಃಖ

Udupi: ಗೀತಾರ್ಥ ಚಿಂತನೆ-148: ಹೇಳುವುದು ಸುಖವಾದರೂ ಆಗುವುದು ದುಃಖ

Mangaluru: ಬಾಲಕಿಯ ವೀಡಿಯೋ ಮಾಡಿದ್ದ ಯುವಕನಿಗೆ ಜೈಲು

Mangaluru: ಬಾಲಕಿಯ ವೀಡಿಯೋ ಮಾಡಿದ್ದ ಯುವಕನಿಗೆ ಜೈಲು

Belthangady ಶಾರ್ಟ್ ಸರ್ಕ್ಯೂಟ್: ಮನೆ ಬೆಂಕಿಗಾಹುತಿ

Belthangady ಶಾರ್ಟ್ ಸರ್ಕ್ಯೂಟ್: ಮನೆ ಬೆಂಕಿಗಾಹುತಿ

Uppinangady: ಬಸ್‌ ನಿಲ್ದಾಣದಲ್ಲಿ ಕಳವು

Uppinangady: ಬಸ್‌ ನಿಲ್ದಾಣದಲ್ಲಿ ಕಳವು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ರಿಲ್ಯಾಕ್ಸ್‌ ಮೂಡ್‌ನಲ್ಲಿದ್ದ ದಾಸನಿಗೆ ಖಾಕಿ ಶಾಕ್‌: ಜಾಮೀನು ರದ್ದು ಕೋರಿ ಸುಪ್ರೀಂಗೆ ಅರ್ಜಿ

ರಿಲ್ಯಾಕ್ಸ್‌ ಮೂಡ್‌ನಲ್ಲಿದ್ದ ದಾಸನಿಗೆ ಖಾಕಿ ಶಾಕ್‌: ಜಾಮೀನು ರದ್ದು ಕೋರಿ ಸುಪ್ರೀಂಗೆ ಅರ್ಜಿ

Vijay raghavendra’s rudrabhishekam movie

Vijay Raghavendra: ಮೊದಲ ಹಂತದ ಚಿತ್ರೀಕರಣ ಮುಗಿಸಿದ ‘ರುದ್ರಾಭಿಷೇಕಂ’

Hebah Patel: ‘ರಾಮರಸ’ ನೀಡಲು ಬಂದ ಹೆಬಾ ಪಟೇಲ್‌; ದಶಕದ ಬಳಿಕ ಕನ್ನಡಕ್ಕೆ

Hebah Patel: ‘ರಾಮರಸ’ ನೀಡಲು ಬಂದ ಹೆಬಾ ಪಟೇಲ್‌; ದಶಕದ ಬಳಿಕ ಕನ್ನಡಕ್ಕೆ

Sidlingu 2: ಬಿಡುಗಡೆ ದಿನಾಂಕ ಘೋಷಿಸಿದ ಯೋಗಿ- ವಿಜಯ್‌ ಪ್ರಸಾದ್‌ ಸಿನಿಮಾ

Sidlingu 2: ಬಿಡುಗಡೆ ದಿನಾಂಕ ಘೋಷಿಸಿದ ಯೋಗಿ- ವಿಜಯ್‌ ಪ್ರಸಾದ್‌ ಸಿನಿಮಾ

Actor Darshan: ಮೈಸೂರಿಗೆ ತೆರಳಲು ದರ್ಶನ್‌ಗೆ ನೀಡಿದ್ದ 2 ವಾರಗಳ ಗಡುವು ಅಂತ್ಯ

Actor Darshan: ಮೈಸೂರಿಗೆ ತೆರಳಲು ದರ್ಶನ್‌ಗೆ ನೀಡಿದ್ದ 2 ವಾರಗಳ ಗಡುವು ಅಂತ್ಯ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

1-shiv

ಪಟ್ನಾದಲ್ಲಿ ಸುಮಾರು 500 ವರ್ಷಗಳ ಹಿಂದಿನ ದೇಗುಲ ಪತ್ತೆ

1-dee

ಪ್ರಸಾರಕ ಸಂಸ್ಥೆಗಳ ಶುಲ್ಕ ಹೆಚ್ಚಳ: ಚಾನೆಲ್‌ಗ‌ಳ ದರವೂ ಹೆಚ್ಚಳ

1-devvvi

ಕಂದಹಾರ್‌ ಹೈಜಾಕ್‌ ವೇಳೆಯ ಪೈಲಟ್‌ ದೇವಿ ಶರಣ್‌ ನಿವೃತ್ತಿ

1-dam

ಬ್ರಹ್ಮಪುತ್ರ ಅಣೆಕಟ್ಟಿಂದ ಭಾರತಕ್ಕೆ ಧಕ್ಕೆ ಆಗದು: ಚೀನ

1-ran

National Anthem Controversy:ಭಾಷಣ ಮಾಡದೆ ಹೋದ ತಮಿಳುನಾಡು ರಾಜ್ಯಪಾಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.