Kannada Serial; ಇಂದಿನಿಂದ ಗಂಗೆ – ಗೌರಿ ದರ್ಶನ
Team Udayavani, Dec 11, 2023, 12:30 PM IST
ಅಕ್ಕ-ತಂಗಿಯರ ಅಪೂರ್ವ ಬಾಂಧವ್ಯದ ಕೌಟುಂಬಿಕ ಕಥಾಹಂದರದ “ಗಂಗೆ ಗೌರಿ’ ಧಾರಾವಾಹಿ ಇಂದಿನಿಂದ ಉದಯ ವಾಹಿನಿಯಲ್ಲಿ ಸಂಜೆ 6.30ಕ್ಕೆ ಪ್ರಸಾರವಾಗಲಿದೆ.
“ಗಂಗೆ ಗೌರಿ’ ಹಸಿರು ಮಲೆನಾಡ ಪುಟ್ಟ ಹಳ್ಳಿಯಲ್ಲಿರುವ ಅಕ್ಕ-ತಂಗಿಯರು. ಮೃದು ಮಾತಲ್ಲೇ ಎಲ್ಲರ ಮನ ಗೆಲ್ಲುವ ಶಾಂತ ಮೃದು ಸ್ವಭಾವದ ಅಕ್ಕ ಗೌರಿ ಒಂದೆಡೆಯಾದರೆ, ಯಾರಿಗೂ ಜಗ್ಗದ, ಮಾತಿಗಿಂತ ಏಟೇ ಸರಿ ಎನ್ನುವ ಹುಡುಗಿ ತಂಗಿ ಗಂಗೆ ಮತ್ತೂಂದು ಕಡೆ. ಇಬ್ಬರ ಸ್ವಭಾವ ಬೇರೆಯಾದರೂ ಒಬ್ಬರನ್ನೊಬ್ಬರು ಅಗಲಿ ಇರಲಾರದಷ್ಟು ಅನ್ಯೋನ್ಯತೆ ಈ ಸೋದರಿಯರದ್ದು. ಇವರ ನಡುವೆ ಹುಡುಗನೊಬ್ಬ ಬಂದರೆ ಏನಾಗಬಹುದು? ಅವರ ಜೀವನದಲ್ಲಿ ಯಾವ ಥರದ ಬದಲಾವಣೆಗಳು ಆಗುತ್ತವೆ? ಎನ್ನುವುದರ ಸುತ್ತ ಕುತೂಹಲ ಭರಿತ ತಿರುವುಗಳ ನಡುವೆ “ಗಂಗೆ ಗೌರಿ’ ಕಥಾಹಂದರ ಸಾಗುತ್ತದೆ.
ವಿನೋದ್ ದೋಂಡಾಳೆ ನಿರ್ದೇಶನದಲ್ಲಿ ಮೂಡಿಬರುತ್ತಿರುವ “ಗಂಗೆ ಗೌರಿ’ ಧಾರಾವಾಹಿಯಲ್ಲಿ ದರ್ಶ್ ಚಂದ್ರಪ್ಪ, ಶ್ರೀವಿದ್ಯಾ ಶಾಸ್ತ್ರಿ, ದರ್ಶಿನಿ ಗೌಡ, ರೇಣುಕಾ ಬಾಲಿ, ಹೇಮಾ ಬೆಳ್ಳೂರು, ಅಪೂರ್ವಾ ಭಾರಧ್ವಾಜ್, ರೋಹಿತ್ ಶ್ರೀನಾಥ್, ಅಭಿಜಿತ್, ಲಕ್ಷ್ಮೀ ಸಿದ್ದಯ್ಯ ಮತ್ತಿತರರು ಪ್ರಮುಖ ಪಾತ್ರಗಳಲ್ಲಿ ಅಭಿನಯಿಸುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gurunandan: ಡಿ.27ಕ್ಕೆ ತೆರೆಗೆ ಬರುತ್ತಿಲ್ಲ ʼರಾಜು ಜೇಮ್ಸ್ ಬಾಂಡ್’ ಚಿತ್ರ
Nodidavaru Enanthare Movie: ನವೀನ್ ಶಂಕರ್ ಚಿತ್ರದ ಟೀಸರ್ ಬಂತು
BBK11: ಸತತ ಮೂರನೇ ವಾರವೂ ಕಳಪೆ ಪಟ್ಟಿ: ಖುಷಿಯಿಂದಲೇ ಜೈಲು ಸೇರಿದ ಚೈತ್ರಾ
Dhruva-Prem: ಡಿ.24ಕ್ಕೆ ʼಕೆಡಿʼ ಶಿವ ಶಿವ ಹಾಡು ರಿಲೀಸ್
Dhruva Sarja: ಪ್ರತಿ ಸಿನಿಮಾವೂ ನನಗೆ ಹೊಸ ಪಾಠ…: ಧ್ರುವ ಹೇಳಿದ್ದೇನು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.