ತೆರೆಗೆ ಬರಲು ರೆಡಿಯಾದ “ಗಂಟುಮೂಟೆ’
Team Udayavani, Sep 14, 2019, 3:00 AM IST
ತಸ್ವೀರ ಸೌತ್ ಏಶಿಯನ್ ಫಿಲಂ ಫೆಸ್ಟಿವಲ್‌ಗೆ ಆಯ್ಕೆಯಾಗಿರುವ “ಗಂಟುಮೂಟೆ’ ಚಿತ್ರತಂಡವು ಅಕ್ಟೋಬರ್ ತಿಂಗಳಲ್ಲಿ ಚಿತ್ರವನ್ನು ಕರ್ನಾಟಕದಾದ್ಯಂತ ಬಿಡುಗಡೆಗೊಳಿಸುವ ತಯಾರಿಯಲ್ಲಿದೆ. 1990ರ ದಶಕದಲ್ಲಿನ ಹರೆಯದ ಹುಡುಗರ ಹೈಸ್ಕೂಲ್ ಜೀವನದಲ್ಲಿ ನಡೆಯುವ ಘಟನೆಗಳ ಸುತ್ತ ಸಾಗುವ ಗಂಟುಮೂಟೆ ಚಿತ್ರದಲ್ಲಿ, ಹುಡುಗಿಯೊಬ್ಬಳ ಭಾವನೆಗಳ ತೊಳಲಾಟದವನ್ನು ತೆರೆಮೇಲೆ ಹೇಳಲಾಗುತ್ತಿದೆ ಎನ್ನುತ್ತದೆ ಚಿತ್ರತಂಡ.
ನಮ್ಮ ಸುತ್ತಮುತ್ತ ನಡೆದಿರುವ ನೈಜ ಘಟನೆ ಎನ್ನುವ ರೀತಿಯಲ್ಲಿ ಚಿತ್ರವನ್ನು ಪ್ರೇಕ್ಷಕರ ಮುಂದೆ ತರುತ್ತಿದ್ದೇವೆ ಎನ್ನುತ್ತದೆ ಚಿತ್ರತಂಡ. ಈ ಚಿತ್ರವನ್ನು ರೂಪ ರಾವ್ ನಿರ್ದೇಶಿಸಿದ್ದು, ಅಮೇಯುಕ್ತಿ ಸ್ಟುಡಿಯೊಸ್ ಈ ಚಿತ್ರವನ್ನು ನಿರ್ಮಿಸಿದೆ. ಪ್ರಕಾಶ್ ಬೆಳವಾಡಿ ಪುತ್ರಿ ತೇಜು ಬೆಳವಾಡಿ ಮತ್ತು ನಿಶ್ಚಿತ್ ಕೊರೋಡಿ ಚಿತ್ರದ ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ. ಇನ್ನು “ಗಂಟುಮೂಟೆ’ ಚಿತ್ರವು ಈ ವರ್ಷದ ಮೇ ತಿಂಗಳಿನಲ್ಲಿ ನ್ಯೂಯಾರ್ಕ್‌ನಲ್ಲಿ ನಡೆದ ನ್ಯೂಯಾರ್ಕ್ ಇಂಡಿಯನ್ ಫಿಲಂ ಫೆಸ್ಟಿವಲ್‌ನಲ್ಲಿ ಪ್ರದರ್ಶನ ಕಂಡು ಅತ್ಯುತ್ತಮ ಸ್ಕ್ರೀನ್ ಪ್ಲೇ ಪ್ರಶಸ್ತಿ ಪಡೆದುಕೊಂಡಿದೆ.
ಕೆನಡಾದಲ್ಲಿನ ಒಟ್ಟಾವಾ ಚಿತ್ರೋತ್ಸವದಲ್ಲಿ ಅತ್ಯುತ್ತಮ ನಿರ್ದೇಶನ ಪ್ರಶಸ್ತಿಗೆ ಆಯ್ಕೆ ಸ್ಪರ್ಧೆಯಲ್ಲಿದ್ದ ಈ ಚಿತ್ರವು ಇಟಲಿ, ಆಸ್ಟ್ರೇಲಿಯಾಗಳಲ್ಲಿನ ಪ್ರತಿಷ್ಠಿತ ಚಲಚಿತ್ರೋತ್ಸವಗಳಲ್ಲಿ ಪ್ರದರ್ಶನ ಕಂಡಿದೆ. ಸದ್ಯ ಚಿತ್ರವನ್ನು ಚೀನಾ, ಕೊರಿಯಾ, ಜಪಾನ್ ಭಾಷೆಗಳಲ್ಲೂ ಭಾಷಾಂತರಿಸಿ ಬಿಡುಗಡೆ ಮಾಡಲು ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
N.Maharajan: ವಲ್ಲರಸು ನಿರ್ದೇಶಕರ ಚಿತ್ರದಲ್ಲಿ ಶಿವಣ್ಣ ಸಿನಿಮಾ
FIR 6to6 movie: ಆ್ಯಕ್ಷನ್ ಚಿತ್ರದಲ್ಲಿ ವಿಜಯ ರಾಘವೇಂದ್ರ
Darshan; ಶೂಟಿಂಗ್ ಗೆ ಡೆವಿಲ್ ರೆಡಿ; ಸತತ ಚಿತ್ರೀಕರಣಕ್ಕೆ ತಂಡ ನಿರ್ಧಾರ?
Gurunandan: ಡಿ.27ಕ್ಕೆ ತೆರೆಗೆ ಬರುತ್ತಿಲ್ಲ ʼರಾಜು ಜೇಮ್ಸ್ ಬಾಂಡ್’ ಚಿತ್ರ
Nodidavaru Enanthare Movie: ನವೀನ್ ಶಂಕರ್ ಚಿತ್ರದ ಟೀಸರ್ ಬಂತು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Recipe: ಆರೋಗ್ಯಕ್ಕೆ ಅಮೃತ, ರುಚಿಗೆ ಅದ್ಭುತ ಈ ಚಟ್ನಿ!ಒಂದ್ಸಲ ಈ ವಿಧಾನದಲ್ಲಿ ಟ್ರೈ ಮಾಡಿ…
ಗೋಕರ್ಣದ ಪ್ರಪ್ರಥಮ ತ್ಯಾಜ್ಯ ಸಂಸ್ಕರಣ ಘಟಕಕ್ಕೆ ಗ್ರಹಣ!
Mahakumbh 2025: 45 ಕೋಟಿ ಯಾತ್ರಾರ್ಥಿಗಳ ನಿರೀಕ್ಷೆ
INDvAUS: ಬಿಸಿಸಿಐ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ರಾ ಟ್ರಾವಿಸ್ ಹೆಡ್? Video
Sheikh ಹಸೀನಾರನ್ನು ಬಾಂಗ್ಲಾದೇಶಕ್ಕೆ ವಾಪಸ್ ಕಳುಹಿಸಿ: ಭಾರತಕ್ಕೆ ಬಾಂಗ್ಲಾ ಮನವಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.