ಶಿವಣ್ಣ ಬರ್ತ್ಡೇಗೆ ‘ಘೋಸ್ಟ್’ ಬಿಗ್ ಡ್ಯಾಡಿ ವಿಡಿಯೋ
Team Udayavani, Jul 1, 2023, 1:17 PM IST
ನಟ ಶಿವರಾಜಕುಮಾರ್ ಅಭಿನಯದ “ಘೋಸ್ಟ್’ ಸಿನಿಮಾದ ಪೋಸ್ಟ್ ಪ್ರೊಡಕ್ಷನ್ ಕೆಲಸಗಳು ಭರದಿಂದ ನಡೆಯುತ್ತಿದೆ. ಸದ್ಯ ನಿಧಾನವಾಗಿ “ಘೋಸ್ಟ್’ ಸಿನಿಮಾದ ಪ್ರಚಾರ ಕಾರ್ಯಗಳಿಗೆ ಚಾಲನೆ ನೀಡಿರುವ ಚಿತ್ರತಂಡ, ಶಿವಣ್ಣ ಅವರ ಹುಟ್ಟುಹಬ್ಬಕ್ಕೆ ವಿಶೇಷ ಉಡುಗೊರೆಯೊಂದನ್ನು ಕೊಡುವ ತಯಾರಿಯಲ್ಲಿದೆ.
ಹೌದು, ಇದೇ ಜುಲೈ 12ರಂದು ನಟ ಶಿವರಾಜಕುಮಾರ್ ಅವರ ಹುಟ್ಟುಹಬ್ಬವಿದ್ದು, ಈ ಸಂದರ್ಭದಲ್ಲಿ “ಘೋಸ್ಟ್’ ಚಿತ್ರದ “ಬಿಗ್ ಡ್ಯಾಡಿ…’ ವಿಡಿಯೋ ಬಿಡುಗಡೆಯಾಗಲಿದೆ. ಈಗಾಗಲೇ ಈ ಕುರಿತು ಜುಲೈ 12 “ಬಿ. ಡಿ’ (ಬಿಗ್ ಡ್ಯಾಡಿ) ಎಂಬ ಪೋಸ್ಟರ್ ಸಹ ಸೋಶಿಯಲ್ ಮೀಡಿಯಾಗಳಲ್ಲಿ ಬಿಡುಗಡೆಯಾಗಿದೆ. ಈ “ಬಿಗ್ ಡ್ಯಾಡಿ…’ ವಿಡಿಯೋದಲ್ಲಿ ಏನಿರಬಹುದು ಎಂಬ ಕುತೂಹಲದಲ್ಲಿದ್ದಾರೆ ಶಿವಣ್ಣ ಫ್ಯಾನ್ಸ್.
ಅಂದಹಾಗೆ, “ಘೋಸ್ಟ್’ ಕನ್ನಡ ಸೇರಿದಂತೆ ಮೂರು ಭಾಷೆಗಳಲ್ಲಿ ತೆರೆಗೆ ಬರುತ್ತಿದೆ. “ಸಂದೇಶ್ ಪ್ರೊಡಕ್ಷನ್ಸ್’ ಬ್ಯಾನರ್ನಲ್ಲಿ ಸಂದೇಶ್ ಎನ್. ನಿರ್ಮಿಸುತ್ತಿರುವ “ಘೋಸ್ಟ್’ ಸಿನಿಮಾಕ್ಕೆ ಹಾಗೂ ಶ್ರೀನಿ ನಿರ್ದೇಶನವಿದೆ.
“ಘೋಸ್ಟ್’ ಸಿನಿಮಾದಲ್ಲಿ ಶಿವರಾಜಕುಮಾರ್ ಅವರೊಂದಿಗೆ ಅನುಪಮ್ ಖೇರ್, ಜಯರಾಂ, ಸತ್ಯಪ್ರಕಾಶ್, ಪ್ರಶಾಂತ್ ನಾರಾಯಣನ್, ದತ್ತಣ್ಣ, ಅಭಿಜಿತ್ ಮುಂತಾದವರು ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BBK11 ಬಿಗ್ ಬಾಸ್ ಮನೆಯಲ್ಲಿ ಸದ್ದು ಮಾಡಿದ 5 ಕೋಟಿ ಲಂಚ, ರೋಲ್ ಕಾಲ್ ಲಾಯರ್..
Komal Kumar: ತೆರೆಗೆ ಬರಲು ಸಿದ್ದವಾಯ್ತು ʼಯಲಾ ಕುನ್ನಿʼ
Seetha Payana: ಅರ್ಜುನ್ ಸರ್ಜಾ ನಿರ್ದೇಶನದಲ್ಲಿ ʼಸೀತಾ ಪಯಣʼ; ನಿರಂಜನ್ ಹೀರೋ
Chethan Kumar: ನಟ ಚೇತನ್ ವಿರುದ್ಧದ ವಾರಂಟ್ ಹಿಂಪಡೆದ ಕೋರ್ಟ್
Actor Darshan: ಅ.22ಕ್ಕೆ ದರ್ಶನ್ ಜಾಮೀನು ಅರ್ಜಿ ವಿಚಾರಣೆ ಸಾಧ್ಯತೆ
MUST WATCH
ಹೊಸ ಸೇರ್ಪಡೆ
Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ
Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ
Canada Vs India: ನಿಜ್ಜರ್ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ
Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್
Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.