ಸಾರಾ ವಜ್ರಕ್ಕೆ ಮೆಚ್ಚುಗೆ

Team Udayavani, May 25, 2022, 6:25 PM IST

Untitled-1

ಹಿರಿಯ ಸಾಹಿತಿ ಸಾರಾ ಅಬೂಬಕ್ಕರ್‌ ಅವರ “ವಜ್ರಗಳು’ ಕಾದಂಬರಿ ಆಧಾರಿತ ಚಿತ್ರ “ಸಾರಾ ವಜ್ರ’ ಬಿಡುಗಡೆಯಾಗಿ ತೆರೆಗೆ ಬಂದಿದ್ದು, ನಿಧಾನವಾಗಿ ಪ್ರೇಕ್ಷಕರ ಗಮನ ಸೆಳೆಯುತ್ತಿದೆ.

ಮುಸ್ಲಿಂ ಮಹಿಳೆಯ ಬದುಕು, ಧಾರ್ಮಿಕ ಕಟ್ಟುಪಾಡು ಗಳು, ಮಹಿಳಾ ಸ್ವಾತಂತ್ರ್ಯ, ತಲಾಖ್‌, ಕೌಟುಂಬಿಕ ಕ್ರೌರ್ಯ ಮೊದಲಾದ ಸಂಗತಿಗಳ ಸುತ್ತ “ಸಾರಾ ವಜ್ರ’ ಚಿತ್ರದ ಕಥಾಹಂದರವಿದ್ದು, ಚಿತ್ರದಲ್ಲಿ ನಟಿ ಅನು ಪ್ರಭಾಕರ್‌ ನಾಯಕಿಯಾಗಿ ನಫೀಸಾ ಎಂಬ ಮುಸ್ಲಿಂ ಮಹಿಳೆಯ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.

1980-90ರ ದಶಕದ ಸಾಮಾಜಿಕ ಸ್ಥಿತಿ-ಗತಿಗಳನ್ನು ಹಿನ್ನೆಲೆಯಾಗಿಟ್ಟುಕೊಂಡು ಸಾಗುವ “ಸಾರಾ ವಜ್ರ’ ಸಿನಿಮಾದಲ್ಲಿ ಅನು ಪ್ರಭಾಕರ್‌ ಅವರೊಂದಿಗೆ ಹಿರಿಯ ನಟ ರಮೇಶ್‌ ಭಟ್‌, ಸುಧಾ ಬೆಳವಾಡಿ, ರೆಹಮಾನ್‌  ಹಾಸನ್‌, ಪ್ರದೀಪ್‌ ಪೂಜಾರಿ, ಶಂಕನಾದ ಅರವಿಂದ್‌ ಮೊದಲಾದವರು ಇತರ ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ.

ದಕ್ಷಿಣ ಕನ್ನಡ, ಕಾಸರಗೋಡು ಸುತ್ತಮುತ್ತಲಿನ ಕರಾವಳಿಯ ಸುಂದರ ತಾಣಗಳಲ್ಲಿ “ಸಾರಾ ವಜ್ರ’ದ ಚಿತ್ರೀಕರಣ ನಡೆಸಲಾಗಿದೆ. ಎಂ. ದೇವೇಂದ್ರ ರೆಡ್ಡಿನಿರ್ಮಾಣದಲ್ಲಿ ಮೂಡಿ ಬಂದಿರುವ “ಸಾರಾ ವಜ್ರ’ ಚಿತ್ರಕ್ಕೆಅರ್ನಾ ಸಾಧ್ಯ (ಶ್ವೇತಾ ಶೆಟ್ಟಿ) ನಿರ್ದೇಶನ ಮಾಡಿದ್ದಾರೆ.

ಈಗಾಗಲೇ ಹಲವು ಚಿತ್ರೋತ್ಸವಗಳಲ್ಲಿ ಕೂಡ ಪ್ರದರ್ಶನ ಕಂಡಿರುವ “ಸಾರಾ ವಜ್ರ’ ಚಿತ್ರಕ್ಕೆ ವಿಮರ್ಶಕರಿಂದ ಮೆಚ್ಚುಗೆ ವ್ಯಕ್ತವಾಗಿದೆ.  ಇದೀಗ ಥಿಯೇಟರ್‌ಗಳಲ್ಲಿ ತೆರೆ ಕಂಡಿರುವ “ಸಾರಾ ವಜ್ರ’ ಮಹಿಳಾಪ್ರಧಾನ ಚಿತ್ರವಾಗಿ ಸದಭಿರುಚಿ ಪ್ರೇಕ್ಷರನ್ನು ಸೆಳೆಯುತ್ತಿದ್ದು, ಚಿತ್ರದ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲೂ ನೋಡುಗರಿಂದ ಉತ್ತಮ ಪ್ರತಿಕ್ರಿಯೆ ಮತ್ತು ಪ್ರಶಂಸೆಯ ಮಾತುಗಳು ಕೇಳಿ ಬರುತ್ತಿದೆ.

ಇತ್ತೀಚಿನ ವರ್ಷಗಳಲ್ಲಿ ಕನ್ನಡದಲ್ಲಿ ಕಾದಂಬರಿ ಆಧಾರಿತ ಸಿನಿಮಾಗಳ ಸಂಖ್ಯೆ ಕಡಿಮೆಯಾಗುತ್ತಿದೆ ಎಂಬ ಮಾತುಗಳ ನಡುವೆಯೇ ತೆರೆಕಂಡಿರುವ “ಸಾರಾ ವಜ್ರ’ಕ್ಕೆ ಇಂಥದ್ದೊಂದು ಪ್ರತಿಕ್ರಿಯೆ ಸಿಗುತ್ತಿರುವುದು ಚಿತ್ರತಂಡಕ್ಕೆ ಕೊಂಚ ಮಟ್ಟಿಗೆ ನಿಟ್ಟುಸಿರು ಬಿಡುವಂತೆ ಮಾಡಿದೆ.

ಟಾಪ್ ನ್ಯೂಸ್

GST: ಜೊಮ್ಯಾಟೊ, ಸ್ವಿಗ್ಗಿ ತಾಣಗಳ ಮೇಲೆ ಶೇ.5 ಜಿಎಸ್‌ಟಿ ಕಡಿತ?

GST: ಜೊಮ್ಯಾಟೊ, ಸ್ವಿಗ್ಗಿ ತಾಣಗಳ ಮೇಲೆ ಶೇ.5 ಜಿಎಸ್‌ಟಿ ಕಡಿತ?

R.Ashwin retirement: ಅಶ್ವಿ‌ನ್‌ ವಿದಾಯದ ಸುತ್ತಮುತ್ತ…

R.Ashwin retirement: ಅಶ್ವಿ‌ನ್‌ ವಿದಾಯದ ಸುತ್ತಮುತ್ತ…

Surthkal-Spota

Surathkal: ತಡಂಬೈಲ್‌ನಲ್ಲಿ ಅಡುಗೆ ಅನಿಲ ದುರಂತ; ಇಬ್ಬರು ಮಹಿಳೆಯರಿಗೆ ಗಂಭೀರ ಗಾಯ

Traffic-UPI

Mangaluru: ಇನ್ನು ಯುಪಿಐ ಮೂಲಕವೂ ಟ್ರಾಫಿಕ್‌ ದಂಡ ಪಾವತಿ

Sri Krishnadevaraya ವಿ.ವಿ.ಗೆ ಮಂಗಳಮುಖಿ ಅತಿಥಿ ಉಪನ್ಯಾಸಕಿ; ರಾಜ್ಯದಲ್ಲೇ ಮೊದಲು

Sri Krishnadevaraya ವಿ.ವಿ.ಗೆ ಮಂಗಳಮುಖಿ ಅತಿಥಿ ಉಪನ್ಯಾಸಕಿ; ರಾಜ್ಯದಲ್ಲೇ ಮೊದಲು

Gold-saffron

Mangaluru: ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ: 1.15 ಕೋ.ರೂ. ಚಿನ್ನ, ಕೇಸರಿ ಪತ್ತೆ

Winter Session: ಬಾಣಂತಿ ಸಾವು: ನ್ಯಾಯಾಂಗ ತನಿಖೆಗೆ ಬಿಜೆಪಿ ಪಟ್ಟು

Winter Session: ಬಾಣಂತಿ ಸಾವು: ನ್ಯಾಯಾಂಗ ತನಿಖೆಗೆ ಬಿಜೆಪಿ ಪಟ್ಟು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BBK11: ಟಾಸ್ಕ್ ವಿಚಾರದಲ್ಲಿ ಫೈಯರ್ ಚೈತ್ರಾ ಠುಸ್.. ಮನೆಮಂದಿ ಸುಸ್ತು

BBK11: ಟಾಸ್ಕ್ ವಿಚಾರದಲ್ಲಿ ಫೈಯರ್ ಚೈತ್ರಾ ಠುಸ್.. ಮನೆಮಂದಿ ಸುಸ್ತು

BBK11: ಮತ್ತೆ ಬಿಗ್ ಬಾಸ್ ಮನೆಗೆ ಗೋಲ್ಡ್ ಸುರೇಶ್.. ವಿಡಿಯೋದಲ್ಲಿ ಸುಳಿವು

BBK11: ಮತ್ತೆ ಬಿಗ್ ಬಾಸ್ ಮನೆಗೆ ಗೋಲ್ಡ್ ಸುರೇಶ್..? ವಿಡಿಯೋದಲ್ಲಿ ಸುಳಿವು

Sandalwood: ಕಣ್ಣಾ ಮುಚ್ಚೆ ಕಾಡೇ ಗೂಡೇ ತೆರೆಗೆ ಸಿದ್ಧ

Sandalwood: ಕಣ್ಣಾ ಮುಚ್ಚೆ ಕಾಡೇ ಗೂಡೇ ತೆರೆಗೆ ಸಿದ್ಧ

Adhipatra Movie: ರೂಪೇಶ್‌ ಅಧಿಪತ್ರ ಫೆ.7ಕ್ಕೆ ಬಿಡುಗಡೆ

Adhipatra Movie: ರೂಪೇಶ್‌ ಅಧಿಪತ್ರ ಫೆ.7ಕ್ಕೆ ಬಿಡುಗಡೆ

ShivaRajkumar: ಅಮೆರಿಕಾಕ್ಕೆ ತೆರಳುವ ಮುನ್ನ ಶಿವಣ್ಣನ ಮನೆಯಲ್ಲಿ ವಿಶೇಷ ಪೂಜೆ; ಕಿಚ್ಚ ಭಾಗಿ

ShivaRajkumar: ಅಮೆರಿಕಾಕ್ಕೆ ತೆರಳುವ ಮುನ್ನ ಶಿವಣ್ಣನ ಮನೆಯಲ್ಲಿ ವಿಶೇಷ ಪೂಜೆ; ಕಿಚ್ಚ ಭಾಗಿ

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

GST: ಜೊಮ್ಯಾಟೊ, ಸ್ವಿಗ್ಗಿ ತಾಣಗಳ ಮೇಲೆ ಶೇ.5 ಜಿಎಸ್‌ಟಿ ಕಡಿತ?

GST: ಜೊಮ್ಯಾಟೊ, ಸ್ವಿಗ್ಗಿ ತಾಣಗಳ ಮೇಲೆ ಶೇ.5 ಜಿಎಸ್‌ಟಿ ಕಡಿತ?

R.Ashwin retirement: ಅಶ್ವಿ‌ನ್‌ ವಿದಾಯದ ಸುತ್ತಮುತ್ತ…

R.Ashwin retirement: ಅಶ್ವಿ‌ನ್‌ ವಿದಾಯದ ಸುತ್ತಮುತ್ತ…

Surthkal-Spota

Surathkal: ತಡಂಬೈಲ್‌ನಲ್ಲಿ ಅಡುಗೆ ಅನಿಲ ದುರಂತ; ಇಬ್ಬರು ಮಹಿಳೆಯರಿಗೆ ಗಂಭೀರ ಗಾಯ

Traffic-UPI

Mangaluru: ಇನ್ನು ಯುಪಿಐ ಮೂಲಕವೂ ಟ್ರಾಫಿಕ್‌ ದಂಡ ಪಾವತಿ

Sri Krishnadevaraya ವಿ.ವಿ.ಗೆ ಮಂಗಳಮುಖಿ ಅತಿಥಿ ಉಪನ್ಯಾಸಕಿ; ರಾಜ್ಯದಲ್ಲೇ ಮೊದಲು

Sri Krishnadevaraya ವಿ.ವಿ.ಗೆ ಮಂಗಳಮುಖಿ ಅತಿಥಿ ಉಪನ್ಯಾಸಕಿ; ರಾಜ್ಯದಲ್ಲೇ ಮೊದಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.