ಶೂಟಿಂಗ್‌ ಬಿಟ್ಟು,ಇತರೆ ಕೆಲಸಗಳಿಗೆ ಸರ್ಕಾರದ ಅನುಮತಿ

Team Udayavani, May 11, 2020, 11:59 AM IST

ಶೂಟಿಂಗ್‌ ಬಿಟ್ಟು,ಇತರೆ ಕೆಲಸಗಳಿಗೆ ಸರ್ಕಾರದ ಅನುಮತಿ

ಇತ್ತೀಚೆಗಷ್ಟೇ ಚಿತ್ರರಂಗದ ಹಲವು ಚಟುವಟಿಕೆ ನಡೆಸಲು ಅನುಮತಿಗಾಗಿ ವಾಣಿಜ್ಯ ಮಂಡಳಿ ಮಾಡಿದ್ದ ಮನವಿಗೆ ಸ್ಪಂದಿಸಿದ್ದ ರಾಜ್ಯ ಸರ್ಕಾರ ಇದೀಗ ಸಿನಿಮಾಗಳ ಪೋಸ್ಟ್ ಪ್ರೊಡಕ್ಷನ್‌ ಕೆಲಸಗಳಿಗೆ ಅನುಮತಿ ನೀಡಿದೆ.

ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷರಾದ ಜೈರಾಜ್‌ ಮತ್ತಿತರರು ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಭೇಟಿ ಮಾಡಿ, ಮನವಿ ಸಲ್ಲಿಸಿದ್ದು, ಆ ಮನವಿಗೆ ಸಿಎಂ ಸ್ಪಂದಿಸಿದ್ದರು. ಈಗ ನಿರ್ಮಾಪಕರ ಸಂಘ ಕೂಡ ಭಾನುವಾರ ಕಂದಾಯ ಸಚಿವ ಆರ್‌.ಅಶೋಕ್‌ ಅವರ ಮೂಲಕ ಸಿಎಂ ಅವರನ್ನು ಮನವಿ ಮಾಡಿದ ಹಿನ್ನೆಲೆಯಲ್ಲಿ ಸೋಮವಾರದಿಂದ (ಇಂದಿನಿಂದ) ಸಿನಿಮಾ ಚಟುವಟಕೆಗಳನ್ನು ನಡೆಸಲು ಅನುಮತಿ ನೀಡಿದ್ದಾರೆ.

ಈ ಹಿನ್ನೆಲೆಯಲ್ಲಿ ಚಿತ್ರಗಳ ಡಬ್ಬಿಂಗ್‌, ಎಡಿಟಿಂಗ್‌, ಹಿನ್ನೆಲೆ ಸಂಗೀತ, ಸಿಜಿ ವರ್ಕ್‌ ಮತ್ತು ಗ್ರಾಫ್ರಿಕ್ಸ್‌ ಇತ್ಯಾದಿ ಕೆಲಸಗಳನ್ನು ಮಾಡಿಕೊಳ್ಳಲು ಸರ್ಕಾರದಿಂದ ಗ್ರೀನ್‌ಸಿಗ್ನಲ್‌ ಸಿಕ್ಕಿದೆ. ಸ್ಟುಡಿಯೋಗಳಲ್ಲಿ ಕೇವಲ ಏಳೆಂಟು ಜನರು ಮಾತ್ರ ಕೆಲಸ ಮಾಡಬೇಕು. ಸಾಮಾಜಿಕ ಅಂತರ ಕಾಪಾಡಿಕೊಳ್ಳಬೇಕು ಜೊತೆಗೆ ಸ್ಟುಡಿಯೋದಲ್ಲಿ ಸ್ಯಾನಿಟೈಸರ್‌ ಇಟ್ಟುಕೊಂಡು ಎಚ್ಚರಿಕೆಯಿಂದ ಕೆಲಸ ಮಾಡಬೇಕು ಎಂದು ನಿರ್ಮಾಪಕರ ಸಂಘ ಹೇಳಿದೆ. ಕನ್ನಡ ಚಿತ್ರರಂಗದಲ್ಲಿ ಸುಮಾರು 750 ಕೋಟಿ ರುಪಾಯಿಗು ಹೆಚ್ಚು ಹೂಡಿಕೆ ಮಾಡಲಾಗಿದ್ದು, ಲಾಕ್‌ ಡೌನ್‌ ಹಿನ್ನೆಲೆಯಲ್ಲಿ ಕಾರ್ಮಿಕರು, ತಂತ್ರಜ್ಞರು, ಕಲಾವಿದರು ಸಂಕಷ್ಟದಲ್ಲಿದ್ದರು. ಇಂದು ನೂರಾರು ಸಿನಿಮಾಗಳು ಪೋಸ್ಟ್‌ ಪ್ರೊಡಕ್ಷನ್‌ ಕೆಲಸಗಳಿಂದ ನಿಂತಿರುವುದರಿಂದ ಸಮಸ್ಯೆ ತಲೆದೋರಿದೆ.  ಹೀಗಾಗಿ,ಪೋಸ್ಟ್‌ ಪ್ರೊಡಕ್ಷನ್ಸ್‌ಗೆ ಅನುಮತಿ ಕೊಡಬೇಕು ಎಂಬ ಮನವಿ ಮಾಡಿದ್ದರಿಂದ ಸರ್ಕಾರ ಸ್ಪಂದಿಸಿ, ಅನುಮತಿ ಕೊಟ್ಟಿದೆ.

ಕಂದಾಯ ಸಚಿವ ಆರ್‌.ಅಶೋಕ್‌ ಅವರ ಭೇಟಿ ಸಂದರ್ಭದಲ್ಲಿ ನಿರ್ಮಾಪಕರ ಸಂಘದ ಅಧ್ಯಕ್ಷ ಪ್ರವೀಣ್‌ ಕುಮಾರ್‌, ಉಪಾಧ್ಯಕ್ಷ ಎಂ.ಜಿ.ರಾಮಮೂರ್ತಿ, ಕಾರ್ಯದರ್ಶಿ ಕೆ.ಮಂಜು, ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಕಾರ್ಯದರ್ಶಿ ಎ.ಗಣೇಶ್‌, ಕಾರ್ಮಿಕರ ಒಕ್ಕೂಟದ ಉಪಾಧ್ಯಕ್ಷ ರವಿಶಂಕರ್‌ ಹಾಜರಿದ್ದರು. ಈ ವೇಳೆ ಆರ್‌.ಅಶೋಕ್‌ ಅವರು, ಚಿತ್ರೀಕರಣಕ್ಕೆ ಅನುಮತಿ ಕೊಡಲು ಸಾಧ್ಯವಿಲ್ಲ. ಆದರೆ, ಡಬ್ಬಿಂಗ್‌, ಎಡಿಟಿಂಗ್‌, ಗ್ರಾಫ್ರಿಕ್ಸ್‌, ರೀ ರೆಕಾರ್ಡಿಂಗ್‌ ಇತರೆ ಚಟುವಟಕೆ ನಡೆಸಲು ಸರ್ಕಾರ ಅನುಮತಿ ಕೊಡಲಿದೆ. ಈ ವೇಳೆ ಸರ್ಕಾರದ ನಿಯಮ ಉಲ್ಲಂಘನೆ ಮಾಡದಂತೆ ಎಚ್ಚರಿಕೆಯಿಂದ ಕೆಲಸ ಮಾಡಬೇಕು ಎಂದಿದ್ದಾರೆ. ಚಿತ್ರೀಕರಣ ಹೊರತುಪಡಿಸಿ, ಇತರೆ ಚಟುವಟಿಕೆ ನಡೆಸಲು ಅನುಮತಿ ನೀಡಿದ ಸಿ.ಎಂ.ಯಡಿಯೂರಪ್ಪ, ಆರ್‌. ಅಶೋಕ್‌ ಅವರಿಗೆ ನಿರ್ಮಾಪಕರ ಸಂಘ ಧನ್ಯವಾದ ಅರ್ಪಿಸಿದೆ.

ಟಾಪ್ ನ್ಯೂಸ್

ಮುಂಜಾನೆ ಮನೆಗೆ ನುಗ್ಗಿ ಪುಣೆ ಉದ್ಯಮಿಯ ಹತ್ಯೆ ; ಪತ್ನಿಗೂ ಗಂಭೀರ ಗಾಯ

Karwar: ಮುಂಜಾನೆ ಮನೆಗೆ ನುಗ್ಗಿ ಉದ್ಯಮಿಯ ಹತ್ಯೆ ; ಪತ್ನಿಗೂ ಗಂಭೀರ ಗಾಯ

Duleep trophy

Duleep trophy: ಇಂಡಿಯಾ ಸಿ, ಬಿ ಮಧ್ಯೆ ಪ್ರಶಸ್ತಿಗೆ ಪೈಪೋಟಿ; ಯಾರಿಗೆ ಸಿಗಲಿದೆ ಟ್ರೋಫಿ? 

We are not against anyone…: PM Modi at Quad Summit

Quad Summit; ನಾವು ಯಾರ ವಿರುದ್ದವೂ ಅಲ್ಲ…: ಕ್ವಾಡ್ ಸಭೆಯಲ್ಲಿ ಪ್ರಧಾನಿ ಮೋದಿ

ಸಿದ್ದರಾಮಯ್ಯ

Koppala; ತುಂಗಭದ್ರಾ ಜಲಾಶಯಕ್ಕಿಂದು ಬಾಗಿನ ಅರ್ಪಿಸಲಿದ್ದಾರೆ ಸಿಎಂ ಸಿದ್ದರಾಮಯ್ಯ

US Tour; Indian community making a positive impact: PM Modi in US

US Tour; ಭಾರತೀಯ ಸಮುದಾಯವು ಸಕಾರಾತ್ಮಕ ಪರಿಣಾಮ ಬೀರುತ್ತಿದೆ: ಅಮೇರಿಕಾದಲ್ಲಿ ಪ್ರಧಾನಿ ಮೋದಿ

mlr-mangalore

Nervous Disease: ಕರಾವಳಿಯಲ್ಲೂ ಬ್ರೈನ್‌ ಹೆಲ್ತ್‌ ಕ್ಲಿನಿಕ್‌ ಕಾರ್ಯಾರಂಭ

Gadag-Betageri: ಅವಳಿ ನಗರದಲ್ಲಿ ಭಾರಿ ಮಳೆ; ಮನೆಗಳಿಗೆ ನುಗ್ಗಿದ ನೀರು

Gadag-Betageri: ಅವಳಿ ನಗರದಲ್ಲಿ ಭಾರಿ ಮಳೆ; ಮನೆಗಳಿಗೆ ನುಗ್ಗಿದ ನೀರು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Upendra: ‘ಭಗವಂತನೇ ಈ ಸಿನಿಮಾ ಮಾಡ್ಸಿದಾನೆ..’: ‘ಉಪೇಂದ್ರ’ ನೋಡಿ ಉಪೇಂದ್ರ ಭಾವುಕ

Upendra: ‘ಭಗವಂತನೇ ಈ ಸಿನಿಮಾ ಮಾಡ್ಸಿದಾನೆ..’: ‘ಉಪೇಂದ್ರ’ ನೋಡಿ ಉಪೇಂದ್ರ ಭಾವುಕ

Priya Shatamarshan spoke about her fame after Bheema movie

Priya Shatamarshan: ಇನ್ಸ್ ಪೆಕ್ಟರ್‌ ಗಿರಿಜಾ ರಿಪೋರ್ಟಿಂಗ್‌ ಸಾರ್‌..

Vijaya Bhaskar: ಹೊಸತನಕ್ಕೆ ಹಂಬಲಿಸಿದ ಸ್ವರ ಸಾಮ್ರಾಟ

Vijaya Bhaskar: ಹೊಸತನಕ್ಕೆ ಹಂಬಲಿಸಿದ ಸ್ವರ ಸಾಮ್ರಾಟ

Karki kananda movie

Karki Movie: ಹಳ್ಳಿ ಹುಡುಗನ ಹೋರಾಟದ ಹಾದಿ

Family drama ‘Langoti Man’ hits screens today

Langoti Man: ಫ್ಯಾಮಿಲಿ ಡ್ರಾಮಾ ʼಲಂಗೋಟಿ ಮ್ಯಾನ್‌ʼ ಇಂದು ತೆರೆಗೆ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

ಮುಂಜಾನೆ ಮನೆಗೆ ನುಗ್ಗಿ ಪುಣೆ ಉದ್ಯಮಿಯ ಹತ್ಯೆ ; ಪತ್ನಿಗೂ ಗಂಭೀರ ಗಾಯ

Karwar: ಮುಂಜಾನೆ ಮನೆಗೆ ನುಗ್ಗಿ ಉದ್ಯಮಿಯ ಹತ್ಯೆ ; ಪತ್ನಿಗೂ ಗಂಭೀರ ಗಾಯ

Duleep trophy

Duleep trophy: ಇಂಡಿಯಾ ಸಿ, ಬಿ ಮಧ್ಯೆ ಪ್ರಶಸ್ತಿಗೆ ಪೈಪೋಟಿ; ಯಾರಿಗೆ ಸಿಗಲಿದೆ ಟ್ರೋಫಿ? 

We are not against anyone…: PM Modi at Quad Summit

Quad Summit; ನಾವು ಯಾರ ವಿರುದ್ದವೂ ಅಲ್ಲ…: ಕ್ವಾಡ್ ಸಭೆಯಲ್ಲಿ ಪ್ರಧಾನಿ ಮೋದಿ

ಸಿದ್ದರಾಮಯ್ಯ

Koppala; ತುಂಗಭದ್ರಾ ಜಲಾಶಯಕ್ಕಿಂದು ಬಾಗಿನ ಅರ್ಪಿಸಲಿದ್ದಾರೆ ಸಿಎಂ ಸಿದ್ದರಾಮಯ್ಯ

US Tour; Indian community making a positive impact: PM Modi in US

US Tour; ಭಾರತೀಯ ಸಮುದಾಯವು ಸಕಾರಾತ್ಮಕ ಪರಿಣಾಮ ಬೀರುತ್ತಿದೆ: ಅಮೇರಿಕಾದಲ್ಲಿ ಪ್ರಧಾನಿ ಮೋದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.