ಆಗಸ್ಟ್ 9ಕ್ಕೆ “ಗುಬ್ಬಿ ಮೇಲೆ ಬ್ರಹ್ಮಾಸ್ತ್ರ’
ವರಮಹಾಲಕ್ಷ್ಮೀ ಹಬ್ಬದಂದು ನಗುವೋ ನಗು ...
Team Udayavani, Jul 22, 2019, 3:02 AM IST
ವರಮಹಾಲಕ್ಷ್ಮೀ ಹಬ್ಬಕ್ಕೆ ಕನ್ನಡದಲ್ಲಿ ಯಾವ್ಯಾವ ಸಿನಿಮಾಗಳು ಬಿಡುಗಡೆಯಾಗುತ್ತಿವೆ ಎಂಬ ಕುತೂಹಲ ಅನೇಕರಲ್ಲಿತ್ತು. ಈಗ ಒಂದೊಂದೇ ಸಿನಿಮಾಗಳು ತಮ್ಮ ಬಿಡುಗಡೆಯನ್ನು ಘೋಷಿಸುತ್ತಿವೆ. ಈಗಾಗಲೇ ಕೋಮಲ್ ನಾಯಕರಾಗಿರುವ “ಕೆಂಪೇಗೌಡ-2′ ಬಿಡುಗಡೆಯಾಗುತ್ತಿದೆ. ಈಗ ಮತ್ತೂಂದು ಚಿತ್ರ ವರಮಹಾಲಕ್ಷ್ಮೀ ಹಬ್ಬದಂದು ತೆರೆಕಾಣುತ್ತಿದೆ. ಅದು “ಗುಬ್ಬಿ ಮೇಲೆ ಬ್ರಹ್ಮಾಸ್ತ್ರ’.
“ಗುಬ್ಬಿ ಮೇಲೆ ಬ್ರಹ್ಮಾಸ್ತ್ರ’ ಎಂಬ ಸಿನಿಮಾವೊಂದು ಬರುತ್ತಿರುವ ವಿಚಾರ ನಿಮಗೆ ಗೊತ್ತಿರಬಹುದು. ಸದ್ದಿಲ್ಲದೇ ಚಿತ್ರೀಕರಣ ಮುಗಿಸಿರುವ ಚಿತ್ರ ಈಗ ಬಿಡುಗಡೆಯ ಹಂತಕ್ಕೆ ಬಂದಿದ್ದು, ಆಗಸ್ಟ್ 09 ರಂದು ತೆರೆಕಾಣುತ್ತಿದೆ. ಕರ್ನಾಟಕ ಹಾಗೂ ಹೊರರಾಜ್ಯಗಳಲ್ಲಿ ಬಿಡುಗಡೆಯಾದ ಬೆನ್ನಲ್ಲೇ ವಿದೇಶಗಳಲ್ಲೂ ತೆರೆಕಾಣಲಿದೆ. ಸುಜಯ್ ಶಾಸ್ತ್ರಿ ಈ ಚಿತ್ರದ ನಿರ್ದೇಶಕರು. ಈಗಾಗಲೇ ಹಲವು ಸಿನಿಮಾಗಳಲ್ಲಿ ಹಾಸ್ಯಪಾತ್ರ ಮಾಡಿರುವ ಸುಜಯ್ “ಗುಬ್ಬಿ’ ಮೂಲಕ ನಿರ್ದೇಶಕರಾಗುತ್ತಿದ್ದಾರೆ.
ಮೊದಲ ನಿರ್ದೇಶನದಲ್ಲಿ ಒಂದು ಕಾಮಿಡಿ ಸಿನಿಮಾ ಮಾಡಿದ್ದಾರೆ. ತಮ್ಮ ಚಿತ್ರದ ಬಗ್ಗೆ ಮಾತನಾಡುವ ಸುಜಯ್, “ಗುಬ್ಬಿ ಮೇಲೆ ಬ್ರಹ್ಮಾಸ್ತ್ರ ಔಟ್ ಅಂಡ್ ಔಟ್ ಕಾಮಿಡಿ ಸಿನಿಮಾ. ಸಣ್ಣ ಸಣ್ಣ ಲಾಜಿಕ್ ಇಟ್ಟುಕೊಂಡು ಇಲ್ಲಿ ಕಾಮಿಡಿ ದೃಶ್ಯಗಳನ್ನು ಹೆಣೆಯಲಾಗಿದೆ. ನಾಯಕ ತಾನು ಪ್ರೀತಿಸಿದ ಹುಡುಗಿಗೋಸ್ಕರ ಏನೆಲ್ಲಾ ಕಷ್ಟಪಡುತ್ತಾನೆ ಎಂಬ ಅಂಶವನ್ನು ತುಂಬಾ ಹಾಸ್ಯಮಯವಾಗಿ ತೋರಿಸಲಾಗಿದೆ’ ಎನ್ನುವುದು ಸುಜಯ್ ಮಾತು.
ಈಗಾಗಲೇ ಚಿತ್ರದ ಎರಡು ಹಾಡು ಬಿಡುಗಡೆಯಾಗಿದ್ದು, ಹಾಡುಗಳಿಗೆ ಮೆಚ್ಚುಗೆ ಸಿಗುತ್ತಿರುವ ಖುಷಿ ಅವರದು. ಚಿತ್ರದಲ್ಲಿ ರಾಜ್ ಬಿ ಶೆಟ್ಟಿ ಹಾಗೂ ಕವಿತಾ ನಾಯಕ-ನಾಯಕಿಯರಾಗಿ ನಟಿಸಿದ್ದಾರೆ. ಚಿತ್ರವನ್ನು ಕ್ರಿಸ್ಟಲ್ ಪಾರ್ಕ್ ಬ್ಯಾನರ್‌ನಡಿ ಟಿ.ಆರ್.ಚಂದ್ರಶೇಖರ್ ನಿರ್ಮಿಸಿದ್ದಾರೆ. ಈಗಾಗಲೇ “ಚಮಕ್’, “ಅಯೋಗ್ಯ’, “ಬೀರಬಲ್’ ಚಿತ್ರಗಳನ್ನು ನಿರ್ಮಿಸಿರುವ ಚಂದ್ರಶೇಖರ್ ಈಗ “ಗುಬ್ಬಿ’ ಮೇಲೆ ನಂಬಿಕೆ ಇಟ್ಟಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.