ಗುಳೆ ಹೊರಟವರ ಬದುಕಿಗೆ ದೃಶ್ಯ ರೂಪ

Team Udayavani, Feb 11, 2020, 7:00 AM IST

Gule-Short-movie

ಜನರು ಉದ್ಯೋಗವನ್ನು ಅರಸಿಕೊಂಡು, ಬದುಕನ್ನ ಅರಸಿಕೊಂಡು ಒಂದು ಕಡೆಯಿಂದ ಮತ್ತೂಂದು ಕಡೆ “ಗುಳೆ’ ಹೋಗುವುದನ್ನು ನೀವು ನೋಡಿರಬಹುದು. ಅನಾದಿ ಕಾಲದಿಂದಲೂ ಹತ್ತಾರು ಕಾರಣಗಳನ್ನು ಇಟ್ಟುಕೊಂಡು ಜನರು “ಗುಳೆ’ ಹೋಗುವುದು ನಡೆದುಕೊಂಡೇ ಬರುತ್ತಿದೆ. ಈಗ ಇದೇ “ಗುಳೆ’ ಎನ್ನುವ ಹೆಸರಿನಲ್ಲೇ ಕಿರುಚಿತ್ರವೊಂದು ನಿರ್ಮಾಣವಾಗಿದೆ. ಸುಮಾರು 20 ನಿಮಿಷದ ಅವಧಿಯ ಈ ಕಿರುಚಿತ್ರದಲ್ಲಿ ಉತ್ತರ ಕರ್ನಾಟಕದ ಬಡ ಜನರ ಜೀವನವನ್ನು ತೆರೆಮೇಲೆ ತರುವ ಪ್ರಯತ್ನ ಮಾಡಲಾಗಿದೆ.

ಉತ್ತರ ಕರ್ನಾಟಕದ ಭಾಗದವರೇ ಆಗಿರುವ ಶ್ರೀನಾಥ್‌ ಎಸ್‌. ಹಡಗಲಿ ತನ್ನ ಜೀವನದಲ್ಲಿ ನಡೆದ ಮತ್ತು ತಾನು ಕಣ್ಣಾರೆ ಕಂಡ ಕೆಲ ಘಟನೆಗಳಿಗೆ ಚಿತ್ರರೂಪ ನೀಡಿ ಈ ಕಿರುಚಿತ್ರವನ್ನು ತೆರೆಗೆ ತರುತ್ತಿದ್ದಾರೆ. ತಮ್ಮ ಕಿರುಚಿತ್ರದ ಕಥಾಹಂದರದ ಬಗ್ಗೆ ಮಾತನಾಡುವ ಶ್ರೀನಾಥ್‌ ಎಸ್‌. ಹಡಗಲಿ,”ಕುಡುಕ ಗಂಡ, ಕಟ್ಟಡದಲ್ಲಿ ಕೆಲಸ ಮಾಡುವ ಹೆಂಡತಿ. ಇವರಿಬ್ಬರಿಗೊಬ್ಬ ಮಗ. ಅವನಿಗೆ ಶಾಲೆಗೆ ಹೋಗುವ ಬಯಕೆ. ಇದಕ್ಕೆ ಅಪ್ಪನಿಂದ ವಿರೋಧ.

ಸರ್ಕಾರದ ಆದೇಶದಂತೆ ಶಿಕ್ಷಕಿ ಮಗುವನ್ನು ಶಾಲೆಗೆ ಕಳುಹಿಸಲು ಕೋರಿದಾಗ ಅವನಿಂದ ಸ್ಪಂದನೆ ಸಿಗುವುದಿಲ್ಲ. ಅವಳಿಗೆ ಮಗು ವಿದ್ಯೆ ಕಲಿಯಬೇಕು ಎನ್ನುವ ಆಸೆ. ಕೊನೆಗೆ ಆ ಹುಡುಗನಿಗೆ ಶಿಕ್ಷಣ ಸಿಗುತ್ತದೆಯಾ, ಎನ್ನುವುದೇ ಈ ಕಿರುಚಿತ್ರ’ ಎಂದು ಕಥೆಯ ಎಳೆಯನ್ನು ತೆರೆದಿಟ್ಟರು. ಇತ್ತೀಚೆಗೆ ನಡೆದ ಕಾರ್ಯಕ್ರಮದಲ್ಲಿ ರಾಷ್ಟ್ರಪ್ರಶಸ್ತಿ ವಿಜೇತ ನಿರ್ದೇಶಕ ಪಿ. ಶೇಷಾದ್ರಿ, ಯೋಗರಾಜ್‌ ಭಟ್‌, ನಟ ಸಂಚಾರಿ ವಿಜಯ್‌ ಮೊದಲಾದವರು ಹಾಜರಿದ್ದು “ಗುಳೆ’ ಕಿರುಚಿತ್ರವನ್ನು ಅನಾವರಣಗೊಳಿಸಿದರು.

ಇದೇ ವೇಳೆ ಮಾತನಾಡಿದ ನಿರ್ದೇಶಕ ಪಿ. ಶೇಷಾದ್ರಿ, “ನಮ್ಮ ಬದುಕಿನಲ್ಲಿ ಗುಳೆ ಯಾವಾಗಲೂ ನಡೆಯುತ್ತದೆ ಎನ್ನಬಹುದು. ಚಿತ್ರದ ಯಶಸ್ಸಿಗೆ ಇಲ್ಲಿಯವರೆವಿಗೂ ಯಾರೂ ಸೂತ್ರ ಕಂಡುಹಿಡಿದಿಲ್ಲ. ಭಾಷೆ, ಪ್ರಾದೇಶಿಕ, ನೈಜ ಸ್ಥಳ ಜೊತೆಗೆ ಶಿಕ್ಷಣದ ಬಗ್ಗೆ ಸಂದೇಶ ಮೂಡಿಸಿರುವುದು ಶ್ಲಾಘನೀಯವಾಗಿದೆ’ ಎಂದರು. ಕಾರ್ಯಕ್ರಮದಲ್ಲಿ ಹಾಜರಿದ್ದ ನಿರ್ದೇಶಕ ಯೋಗರಾಜ್‌ ಭಟ್‌, ನಟ ಸಂಚಾರಿ ವಿಜಯ್‌ “ಗುಳೆ’ ಕಿರುಚಿತ್ರದ ಬಗ್ಗೆ ಮೆಚ್ಚುಗೆಯ ಮಾತುಗಳನ್ನಾಡಿದರು.

ಇನ್ನು “ಗುಳೆ’ ಕಿರುಚಿತ್ರದಲ್ಲಿ ಮಾಸ್ಟರ್‌ ಮುತ್ತು ಶಾಲಾ ಬಾಲಕನಾಗಿ ಕಾಣಿಸಿಕೊಂಡರೆ, ಪುಟ್ಟಣ್ಣ ವಿಜಯಪುರ್‌ ಮತ್ತು ಶೃತಿ ಶಿವಶಂಕರ್‌ ಬಾಲಕನ ಪೋಷಕರಾಗಿ ಕಾಣಿಸಿಕೊಂಡಿದ್ದಾರೆ. ರಾಧಿಕಾ ಶಾಲಾ ಶಿಕ್ಷಕಿಯಾಗಿ ಅಭಿನಯಿಸಿದ್ದಾರೆ. ಸಂಗೀತ ರಾಜೀವ್‌ “ಗುಳೆ’ ಕಿರುಚಿತ್ರದ ಹಾಡಿಗೆ ಧ್ವನಿಯಾಗಿ, ರಾಗ ಸಂಯೋಜಸಿದ್ದಾರೆ. ಪ್ರಶಾಂತ್‌ ಗೌಡ ಛಾಯಾಗ್ರಹಣ, ಗೌತಮ್‌ ಎ. ಸಂಕಲನ ಕಾರ್ಯ ನಿರ್ವಹಿಸಿದ್ದಾರೆ. “ಅಯ್ಯರ್‌ ಟಾಕೀಸ್‌’ ಬ್ಯಾನರ್‌ನಲ್ಲಿ ಮನೋಹರ್‌ ಅಯ್ಯರ್‌ “ಗುಳೆ’ ಕಿರುಚಿತ್ರಕ್ಕೆ ಬಂಡವಾಳ ಹೂಡಿ ನಿರ್ಮಿಸಿದ್ದಾರೆ.

ಟಾಪ್ ನ್ಯೂಸ್

Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್

Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್

Sandalwood: ಮಾಸ್‌ ಸಿನಿಮಾಗಳಿಗ ಜೈ ಎಂದ ಪ್ರೇಕ್ಷಕ

Sandalwood: ಮಾಸ್‌ ಸಿನಿಮಾಗಳಿಗೆ ಜೈ ಎಂದ ಪ್ರೇಕ್ಷಕ

Canada-India Row: ಕೆನಡಾದ ಆಂತರಿಕ ವಿಚಾರದಲ್ಲಿ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ

Canada-India Row: ನಿಜ್ಜರ್ ಹತ್ಯೆ ಹಿಂದೆ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ

IPL 2025-27: BCCI announces dates for next three IPL seasons

IPL 2025-27: ಮುಂದಿನ ಮೂರು ಐಪಿಎಲ್ ಸೀಸನ್‌ ನ ದಿನಾಂಕ ಪ್ರಕಟಿಸಿದ ಬಿಸಿಸಿಐ

AI world: ಕ್ರಿಮಿನಲ್‌ಗ‌ಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್‌!

AI world: ಕ್ರಿಮಿನಲ್‌ಗ‌ಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್‌!

5-video

ಹೊಸ ಟ್ರೆಂಡ್ ನ ಪ್ಯಾಂಟ್ ಧರಿಸಿದ ಯುವಕ;ಸ್ನೇಹಿತರಿಂದ ಅವಮಾನ, ನೊಂದ ಯುವಕ ಆತ್ಮಹತ್ಯೆಗೆ ಯತ್ನ

Perth Test: ಟೀಂ ಇಂಡಿಯಾಗಿಲ್ಲ ಶುಭಾರಂಭ: ಮೊದಲ ಸೆಶನ್‌ ನಲ್ಲೇ ಪರದಾಡಿದ ಬ್ಯಾಟರ್‌ ಗಳು

Perth Test: ಟೀಂ ಇಂಡಿಯಾಗಿಲ್ಲ ಶುಭಾರಂಭ: ಮೊದಲ ಸೆಶನ್‌ ನಲ್ಲೇ ಪರದಾಡಿದ ಬ್ಯಾಟರ್‌ ಗಳು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood: ಮಾಸ್‌ ಸಿನಿಮಾಗಳಿಗ ಜೈ ಎಂದ ಪ್ರೇಕ್ಷಕ

Sandalwood: ಮಾಸ್‌ ಸಿನಿಮಾಗಳಿಗೆ ಜೈ ಎಂದ ಪ್ರೇಕ್ಷಕ

Sandalwood: ಯಾರೋ ನಾ ಕಾಣೆ, ಚಂದಾಗೌಳೆ ಶಾಣೆ..: ಕಟ್ಲೆ ಹಾಡು ಬಂತು

Sandalwood: ಯಾರೋ ನಾ ಕಾಣೆ, ಚಂದಾಗೌಳೆ ಶಾಣೆ..: ಕಟ್ಲೆ ಹಾಡು ಬಂತು

Viral Photo: ಬಾಲಿವುಡ್‌ ನಟ ಆಮಿರ್‌ ಖಾನ್‌ ಭೇಟಿಯಾದ ಕಿಚ್ಚ ಸುದೀಪ್;‌ ಫ್ಯಾನ್ಸ್‌ ಥ್ರಿಲ್

Viral Photo: ಬಾಲಿವುಡ್‌ ನಟ ಆಮಿರ್‌ ಖಾನ್‌ ಭೇಟಿಯಾದ ಕಿಚ್ಚ ಸುದೀಪ್;‌ ಫ್ಯಾನ್ಸ್‌ ಥ್ರಿಲ್

Renukaswamy Case: ದರ್ಶನ್‌ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ

Renukaswamy Case: ದರ್ಶನ್‌ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ

ZEBRA Movie: ಜೀಬ್ರಾ ಮೇಲೆ ಡಾಲಿ ಕಣ್ಣು

ZEBRA Movie: ಜೀಬ್ರಾ ಮೇಲೆ ಡಾಲಿ ಕಣ್ಣು

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್

Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್

6-siruguppa

Siruguppa: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ

Sandalwood: ಮಾಸ್‌ ಸಿನಿಮಾಗಳಿಗ ಜೈ ಎಂದ ಪ್ರೇಕ್ಷಕ

Sandalwood: ಮಾಸ್‌ ಸಿನಿಮಾಗಳಿಗೆ ಜೈ ಎಂದ ಪ್ರೇಕ್ಷಕ

Canada-India Row: ಕೆನಡಾದ ಆಂತರಿಕ ವಿಚಾರದಲ್ಲಿ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ

Canada-India Row: ನಿಜ್ಜರ್ ಹತ್ಯೆ ಹಿಂದೆ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ

IPL 2025-27: BCCI announces dates for next three IPL seasons

IPL 2025-27: ಮುಂದಿನ ಮೂರು ಐಪಿಎಲ್ ಸೀಸನ್‌ ನ ದಿನಾಂಕ ಪ್ರಕಟಿಸಿದ ಬಿಸಿಸಿಐ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.