Sandalwood; ಹೊಸ ಚಿತ್ರದತ್ತ ಗುರು ದೇಶಪಾಂಡೆ; ಹಾಡುಗಳ ಧ್ವನಿಮುದ್ರಣ ಶುರು
Team Udayavani, Feb 22, 2024, 4:31 PM IST
ನಿರ್ದೇಶಕ ಹಾಗೂ ನಿರ್ಮಾಪಕ ಗುರು ದೇಶಪಾಂಡೆ ತಮ್ಮ ಜಿ ಸಿನಿಮಾಸ್ ಲಾಂಛನದಲ್ಲಿ ನಿರ್ಮಾಣ ಮಾಡುತ್ತಿರುವ ಪ್ರೊಡಕ್ಷನ್ ನಂ.4 ಚಿತ್ರದ ಹಾಡುಗಳ ಧ್ವನಿಮುದ್ರಣ ಪೂಜೆ ನಾಗರಭಾವಿಯ ಲೂಪ್ ಸ್ಟುಡಿಯೋಸ್ನಲ್ಲಿ ಇತ್ತೀಚೆಗೆ ನೆರವೇರಿತು. ಜಟ್ಟ, ಮೈತ್ರಿ ಚಿತ್ರಗಳ ಬಿ.ಎಂ ಗಿರಿರಾಜ್ ಈ ಚಿತ್ರವನ್ನು ನಿರ್ದೇಶಿಸುತ್ತಿದ್ದಾರೆ. ಚಿತ್ರಕ್ಕೆ ಬಿ.ಜೆ.ಭರತ್ ಸಂಗೀತ ಈ ಚಿತ್ರಕ್ಕೆ ಸಂಗೀತ ನೀಡುತ್ತಿದ್ದಾರೆ.
“ಹಿಂದೆ ಸಾಂಗ್ ರೆಕಾರ್ಡಿಂಗ್ ಪೂಜೆ ಎಂದರೆ ಒಂದು ಸಡಗರ. ಈಗ ಕೆಲವು ವರ್ಷಗಳಿಂದ ಆ ಸಂಸ್ಕೃತಿ ಮರೆತು ಹೋಗಿದೆ. ಗುರು ದೇಶಪಾಂಡೆ ಮತ್ತೆ ಸಾಂಗ್ ರೆಕಾರ್ಡಿಂಗ್ ಪೂಜೆ ಮೂಲಕ ತಮ್ಮ ನೂತನ ಚಿತ್ರಕ್ಕೆ ಚಾಲನೆ ನೀಡಿದ್ದಾರೆ.
ಈ ಸಿನಿಮಾ ಈ ಕಾಲಘಟ್ಟದಲ್ಲಿ ನಡೆಯುವ ಕಥೆಯಾಗಿರು ತ್ತದೆ. ಮರೆಯಾಗು ತ್ತಿರುವ ಸಂಸ್ಕೃತಿ ಯ ಮತ್ತೆ ತರುವ ಪ್ರಯತ್ನವನ್ನು ಈ ಚಿತ್ರದಲ್ಲಿ ಮಾಡುತ್ತಿದ್ದೇವೆ. ಭರತ್ ಅವರ ಸಂಗೀತ ನಿರ್ದೇಶನದಲ್ಲಿ ಇಂದಿನಿಂದ ಸಾಂಗ್ ರೆಕಾರ್ಡಿಂಗ್ ಆರಂಭವಾಗಿದೆ. ಮುಂದಿನ ದಿನಗಳಲ್ಲಿ ಹೆಚ್ಚಿನ ಮಾಹಿತಿ ನೀಡುತ್ತೇವೆ’ ಎಂದರು ನಿರ್ದೇಶಕ ಗಿರಿರಾಜ್.
ನಿರ್ಮಾಪಕ ಗುರುದೇಶಪಾಂಡೆ ಮಾತನಾಡಿ, “ಇದು ಜಿ ಸಿನಿಮಾಸ್ ಮೂಲಕ ನಿರ್ಮಾಣವಾಗುತ್ತಿರುವ ನಾಲ್ಕನೇಯ ಚಿತ್ರ. ನಮ್ಮ ಜಿ ಅಕಾಡೆಮಿ ಮೂಲಕ ಸಾಕಷ್ಟು ಮಕ್ಕಳಿಗೆ ನಟನಾ ತರಬೇತಿ ನೀಡಲಾಗುತ್ತಿದೆ. ಈಗಾಗಲೇ ಹತ್ತು ಬ್ಯಾಚ್ಗಳು ಯಶಸ್ವಿಯಾಗಿ ಪೂರ್ಣವಾಗಿದೆ. ಮಕ್ಕಳಿಗೆ ಬರೀ ನಟನೆ ಕಲಿಸಿಕೊಟ್ಟು ಕಳುಹಿಸಿದರೆ ಸಾಲದು. ಅವರಿಗೆ ಸೂಕ್ತ ವೇದಿಕೆ ಕೂಡ ಕಲ್ಪಿಸಿಕೊಡಬೇಕು. ಅದರಲ್ಲೂ ವಿಶೇಷವಾಗಿ ಮಧ್ಯಮವರ್ಗದ ಮಕ್ಕಳಿಗೆ. ಆ ಸಲುವಾಗಿ ನಮ್ಮ ಈ ಚಿತ್ರದಲ್ಲಿ ನಮ್ಮ ಜಿ ಅಕಾಡೆಮಿಯ 15ಕ್ಕೂ ಅಧಿಕ ಮಕ್ಕಳು ನಟಿಸಲಿದ್ದಾರೆ. ಕನ್ನಡದ ಹೆಸರಾಂತ ನಟರು ಈ ಚಿತ್ರದ ನಾಯಕರಾಗಿ ಅಭಿನಯಿಸಲಿದ್ದಾರೆ. ಈ ಕುರಿತು ಹೆಚ್ಚಿನ ವಿಷಯಗಳನ್ನು ಮುಂದಿನ ದಿನಗಳಲ್ಲಿ ಹಂಚಿಕೊಳ್ಳುತ್ತೇವೆ’ ಎನ್ನುವುದು ಗುರುದೇಶಪಾಂಡೆ ಮಾತು.
ಸಂಗೀತ ನಿರ್ದೇಶಕ ಬಿ.ಜೆ.ಭರತ್, ಗೀತರಚನೆಕಾರ ಪುನೀತ್ ಆರ್ಯ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Chhattisgarh: ಐಇಡಿ ಸ್ಫೋ*ಟ: ಪೊಲೀಸ್ ಸಿಬ್ಬಂದಿಗೆ ಗಾಯ
Ullala: ಕೊಣಾಜೆ ಬಳಿ ರಿಕ್ಷಾ ಅಪಘಾತ: ವ್ಯಕ್ತಿ ಮೃತ್ಯು
Maharashtra Elections: 21 ಮಹಿಳೆಯರು ಆಯ್ಕೆ, ವಿಪಕ್ಷದಿಂದ ಒಬ್ಬರೇ!
Mahayuti; ಮಹಾರಾಷ್ಟ್ರ ಮುಖ್ಯಮಂತ್ರಿ ನಿರ್ಧರಿಸಲು ಮಹತ್ವದ ಚರ್ಚೆ: ಯಾರಿಗೆ ಪಟ್ಟ?
Railway: ಗಂಗಾವತಿ ರೈಲ್ವೆ ನಿಲ್ದಾಣಕ್ಕೆ ಅಂಜನಾದ್ರಿ ಹೆಸರು ಶಿಫಾರಸು: ಸಚಿವ ಎಂ.ಬಿ.ಪಾಟೀಲ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.