‘ಪುರುಷೋತ್ತಮ’ನಾದ ಜಿಮ್‌ ರವಿ: ಸಹ ನಟನಿಂದ ನಾಯಕ ನಟನಾಗಿ ಪ್ರಮೋಶನ್‌


Team Udayavani, Feb 16, 2021, 10:29 AM IST

‘ಪುರುಷೋತ್ತಮ’ನಾದ ಜಿಮ್‌ ರವಿ: ಸಹ ನಟನಿಂದ ನಾಯಕ ನಟನಾಗಿ ಪ್ರಮೋಶನ್‌

ನಟನಾಗಿ, ದೇಹದಾರ್ಢ್ಯ ಪಟುವಾಗಿ ರಾಜ್ಯ ಮತ್ತು ರಾಷ್ಟ್ರ ಮಟ್ಟದಲ್ಲಿ ಗುರುತಿಸಿಕೊಂಡಿರುವ ಎ.ವಿ ರವಿ ಉರೂಫ್ ಜಿಮ್‌ ರವಿ ಬಗ್ಗೆ ಅನೇಕರಿಗೆ ಗೊತ್ತಿರಬಹುದು. ಕನ್ನಡ ಸೇರಿದಂತೆ ದಕ್ಷಿಣ ಭಾರತದ ವಿವಿಧ ಭಾಷೆಗಳಲ್ಲಿ ಸುಮಾರು 140ಕ್ಕೂ ಹೆಚ್ಚು ಚಿತ್ರಗಳಲ್ಲಿ ಪೋಷಕ ಪಾತ್ರದಲ್ಲಿ ಅಭಿನಯಿಸಿ ಸೈ ಎನಿಸಿಕೊಂಡಿರುವ ಜಿಮ್‌ ರವಿ, ಈಗ ಪೂರ್ಣ ಪ್ರಮಾಣದಲ್ಲಿ ನಾಯಕ ನಟನಾಗಿ ಸ್ಯಾಂಡಲ್‌ ವುಡ್‌ಗೆ ಪರಿಚಯವಾಗುತ್ತಿದ್ದಾರೆ.

“ರವಿ ಜಿಮ್’ ಎಂಬ ಹೆಸರಿನ ಜಿಮ್‌ ತರಬೇತಿ ಕೇಂದ್ರವನ್ನು ನಡೆಸಿಕೊಂಡು ಬರುತ್ತಿರುವ, ಕಳೆದ 30 ವರ್ಷಗಳಿಂದ ಸುಮಾರು 70 ಸಾವಿರಕ್ಕೂ ಅಧಿಕ ವಿದ್ಯಾರ್ಥಿಗಳಿಗೆ ಜಿಮ್‌ ತರಬೇತಿ ನೀಡಿದ್ದಾರೆ. ಇದೀಗ “ರವೀಸ್‌ ಜಿಮ್‌ ಪ್ರೊಡಕ್ಷನ್ಸ್‌’ ಹೆಸರಿನಲ್ಲಿ ತಮ್ಮದೇ ನಿರ್ಮಾಣ ಸಂಸ್ಥೆಯನ್ನು ಆರಂಭಿಸಿರುವ ಜಿಮ್‌ ರವಿ, ತಮ್ಮ ಬ್ಯಾನರ್‌ ಮೂಲಕ “ಪುರುಷೋತ್ತಮ’ ಚಿತ್ರವನ್ನು ನಿರ್ಮಿಸುತ್ತಿದ್ದು, ಈ ಚಿತ್ರದ ಮೂಲಕ ಮೊದಲ ಬಾರಿಗೆ ಹೀರೋ ಆಗಿ ಪ್ರೇಕ್ಷಕರ ಮುಂದೆ ಬರುತ್ತಿದ್ದಾರೆ.

ಇದೇ ಫೆ. 14 ರ “ಪ್ರೇಮಿಗಳ ದಿನ’ದಂದು “ಪುರುಷೋತ್ತಮ’ ಚಿತ್ರದ ಮಹೂರ್ತ ಸಮಾರಂಭ ಅದ್ಧೂರಿಯಾಗಿ ನಡೆಯಿತು. ಹಿರಿಯ ನಟ, ನಿರ್ದೇಶಕ ಎಸ್‌. ನಾರಾಯಣ್‌ “ಪುರುಷೋತ್ತಮ’ ಚಿತ್ರದ ಪ್ರಥಮ ದೃಶ್ಯಕ್ಕೆ ಕ್ಲಾಪ್‌ ಮಾಡಿದರು. ಹಿರಿಯ ನಟ ಜೈ ಜಗದೀಶ್‌, ವಿಜಯಲಕ್ಷ್ಮೀ ಸಿಂಗ್‌, ತುರುವೆಕೆರೆ ಶಾಸಕ ಮಸಾಲೆ ಜಯರಾಮ್‌ ಮೊದಲಾದವರು ಮುಹೂರ್ತ ಸಮಾರಂಭದಲ್ಲಿ ಹಾಜರಿದ್ದು ಚಿತ್ರತಂಡಕ್ಕೆ ಶುಭ ಕೋರಿದರು.

ಎಸ್‌. ವಿ ಅಮರನಾಥ್‌ “ಪುರುಷೋತ್ತಮ’ ಚಿತ್ರಕ್ಕೆ ಕಥೆ, ಚಿತ್ರಕಥೆ, ಸಂಭಾಷಣೆ ಬರೆದು ನಿರ್ದೇಶನ ಮಾಡುತ್ತಿದ್ದಾರೆ. ಮುಹೂರ್ತದ ವೇಳೆ ಚಿತ್ರದ ಬಗ್ಗೆ ಮಾತನಾಡಿದ ನಿರ್ದೇಶಕ ಎಸ್‌. ವಿ ಅಮರನಾಥ್‌, “ರವಿ ಅವರನ್ನು ಇಲ್ಲಿಯವರೆಗೂ ಕ್ರೀಡಾಪಟು, ಕಲಾವಿದನಾಗಿ ನೋಡಿದ್ದೀರಾ. ಈಗ ಅವರಲ್ಲಿರುವ ಕಲಾವಿದನನ್ನು ಬೇರೆ ತರಹ ಪರದೆ ಮೇಲೆ ತೋರಿಸವ ಪ್ರಯತ್ನ ಮಾಡಲಾಗುವುದು. ಅಂದರೆ ಕ್ರೀಡೆ, ಆಕ್ಷನ್‌ ಖಂಡಿತ ಇರೋದಿಲ್ಲ. ಪೂರ್ಣ ಪ್ರಮಾಣದ ಹಾಸ್ಯದ ಏಳೆಯಲ್ಲಿ ಕಥೆ ಸಾಗುತ್ತದೆ. ಮಧ್ಯಮ ವರ್ಗದ ಕುಟುಂಬದವರು ಪ್ರತಿ ನಿತ್ಯ ಏನಾದರೂ ಸಮಸ್ಯೆಯನ್ನು ಎದುರಿಸುತ್ತಿರುತ್ತಾರೆ. ಆ ತರಹದ ದೊಡ್ಡದಾದ ಚಾಲೆಂಜ್‌ ಇವರ ಜೀವನದಲ್ಲಿ ಬಂದಾಗ, ಅದನ್ನು ಹೇಗೆ ನಿಭಾಯಿಸುತ್ತಾರೆ. ಇಲ್ಲಿ ನಾಯಕ ದೇಹಶಕ್ತಿಯನ್ನು ಪ್ರದರ್ಶಿಸದೆ, ಕೇವಲ ಬುದ್ದಿಶಕ್ತಿಯಿಂದ ಹೇಗೆಲ್ಲಾ ಅವಘಡಗಳನ್ನು ಸರಿಪಡಿಸಿಕೊಳ್ಳುತ್ತಾನೆ ಎಂಬುದು ಚಿತ್ರದ ಸಾರಾಂಶವಾಗಿದೆ’ ಎಂದು ಚಿತ್ರದ ಕಥಾಹಂದರ ಬಗ್ಗೆ ಮಾಹಿತಿ ನೀಡಿದರು.

ಚಿತ್ರದ ಬಗ್ಗೆ ಮಾತನಾಡಿದ ನಾಯಕ ನಟ ಜಿಮ್‌ ರವಿ, “ನಾಯಕನಿಂದ ಒದೆ ತಿನ್ನಿಸಿಕೊಳ್ಳುತ್ತಿರುವ ದೃಶ್ಯಗಳನ್ನು ನೋಡಿತ್ತಿದ್ದ ಹಿತೈಷಿಗಳು, ನೀವು ಯಾವಾಗ ಹೀರೋ ಆಗೋದು ಅಂತ ಹತ್ತು ವರ್ಷದಿಂದ ಕೇಳುತ್ತಿದ್ದರು. ಅದಕ್ಕೆ ಈ ದಿನ ಕಾಲ ಕೂಡಿಬಂತು. ಒಂದಷ್ಟು ಕಡೆ ನೋವಿನ ಸಂಗತಿ ನಡೆಯಿತು. ಅದೆಲ್ಲವನ್ನು ಸ್ಪೂರ್ತಿಯಾಗಿ ಪಡೆದುಕೊಂಡಿದ್ದೆ. ನಿರ್ದೇಶಕರು ಯಾವುದೇ ರೋಲ್‌ ಕೊಟ್ಟರೂ ಶ್ರಮವಹಿಸಿ ನಟಿಸುತ್ತಿದ್ದೆ. ಹಣದ ಹಿಂದೆ ಯಾವತ್ತು ಹೋಗಿರಲಿಲ್ಲ. ಪಾತ್ರದ ಸಲುವಾಗಿ ಹದಿನೆಂಟು ಕೆ.ಜಿ ತೂಕ ಕಡಿಮೆ ಮಾಡಿಕೊಂಡಿದ್ದೇನೆ. ಶೀಘ್ರದಲ್ಲಿಯೇ ಚಿತ್ರದ ಚಿತ್ರೀಕರಣ ಶುರುವಾಗಲಿದೆ’ ಎಂದರು.

“ಪುರುಷೋತ್ತಮ’ ಚಿತ್ರದ ನಾಲ್ಕು ಹಾಡುಗಳಿಗೆ ಶ್ರೀಧರ್‌ ವಿ. ಸಂಭ್ರಮ್‌ ಸಂಗೀತ ಸಂಯೋಜಿಸುತ್ತಿದ್ದಾರೆ. ಉಳಿದಂತೆ ಚಿತ್ರದ ಇತರ ಕಲಾವಿದರು ಮತ್ತು ತಂತ್ರಜ್ಞರ ಬಗ್ಗೆ ಹೆಚ್ಚಿನ ಮಾಹಿತಿ ಇನ್ನಷ್ಟೇ ಹೊರಬರಬೇಕಿದೆ. ಸದ್ಯ ಮುಹೂರ್ತವನ್ನು ಆಚರಿಸಿಕೊಂಡು ಸೆಟ್ಟೇರಿರುವ “ಪುರುಷೋತ್ತಮ’ ಚಿತ್ರವನ್ನು ಬೆಂಗಳೂರು, ಮೈಸೂರು ಸುತ್ತಮುತ್ತಲಿನ ಸುಂದರ ತಾಣಗಳಲ್ಲಿ ಚಿತ್ರೀಕರಣ ನಡೆಸಲು ಚಿತ್ರತಂಡ ಯೋಜಿಸಿದೆ.

ಒಟ್ಟಾರೆ “ಪುರುಷೋತ್ತಮ’ನಾಗಿ ಪ್ರೇಕ್ಷಕರ ಮುಂದೆ ಬರಲು ತಯಾರಾಗಿರುವ ಜಿಮ್‌ ರವಿ ಪ್ರೇಕ್ಷಕ ಪ್ರಭುಗಳಿಗೆ ಎಷ್ಟರ ಮಟ್ಟಿಗೆ ಇಷ್ಟವಾಗಲಿದ್ದಾರೆ ಅನ್ನೋದು ಇದೇ ವರ್ಷಾಂತ್ಯದೊಳಗೆ ಗೊತ್ತಾಗುವ ಸಾಧ್ಯತೆ ಇದೆ.

ಟಾಪ್ ನ್ಯೂಸ್

BBK11: ಬಿಗ್‌ ಬಾಸ್‌ ಮನೆಗೆ ವೈಲ್ಡ್‌ ಕಾರ್ಡ್ ಸ್ಪರ್ಧಿ; ಅಬ್ಬರಿಸುತ್ತಲೇ ದೊಡ್ಮನೆಗೆ ಎಂಟ್ರಿ

BBK11: ಬಿಗ್‌ ಬಾಸ್‌ ಮನೆಗೆ ವೈಲ್ಡ್‌ ಕಾರ್ಡ್ ಸ್ಪರ್ಧಿ; ಅಬ್ಬರಿಸುತ್ತಲೇ ದೊಡ್ಮನೆಗೆ ಎಂಟ್ರಿ

Bharamasagara: ಅರಣ್ಯ ಇಲಾಖೆ ಕಾರ್ಯಾಚರಣೆ; ಗ್ರಾಮಸ್ಥರ ನಿದ್ದೆಗೆಡಿಸಿದ್ದ ಚಿರತೆ ಸೆರೆ

Bharamasagara: ಅರಣ್ಯ ಇಲಾಖೆ ಕಾರ್ಯಾಚರಣೆ; ಗ್ರಾಮಸ್ಥರ ನಿದ್ದೆಗೆಡಿಸಿದ್ದ ಚಿರತೆ ಸೆರೆ

Kailash Gahlot: ಚುನಾವಣೆಗೂ ಮೊದಲೇ ಆಪ್ ತೊರೆದ ಸಚಿವ ಕೈಲಾಶ್ ಗೆಹ್ಲೋಟ್…

Kailash Gahlot: ಚುನಾವಣೆಗೂ ಮೊದಲೇ ಆಪ್ ತೊರೆದ ಸಚಿವ ಕೈಲಾಶ್ ಗೆಹ್ಲೋಟ್…

101

Daali Dhananjay: ಸರಳವಾಗಿ ನೆರವೇರಿತು ಡಾಲಿ – ಧನ್ಯತಾ ನಿಶ್ಚಿತಾರ್ಥ

No support for liquor bandh: Tourism Hotel Owners Association

Liquor: ಮದ್ಯ ಬಂದ್‌ ಗೆ ಬೆಂಬಲವಿಲ್ಲ: ಪ್ರವಾಸೋದ್ಯಮ ಹೋಟೆಲ್ ಮಾಲೀಕರ ಸಂಘ

: ಸಿಎಂ ಸಿದ್ದರಾಮಯ್ಯ

Bagalakote: ಅನರ್ಹರ ಬಿಪಿಎಲ್ ಕಾರ್ಡ್ ಗಳು ಮಾತ್ರ ರದ್ದು: ಸಿಎಂ ಸಿದ್ದರಾಮಯ್ಯ

Kunigal: ಹಳ್ಳಕ್ಕೆ ಉರುಳಿ ಬಿದ್ದ ಟ್ರ್ಯಾಕ್ಟರ್… ತಂದೆ ಮಗ ಸಾವು

Kunigal: ಹಳ್ಳಕ್ಕೆ ಉರುಳಿ ಬಿದ್ದ ಟ್ರ್ಯಾಕ್ಟರ್… ತಂದೆ ಮಗ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

101

Daali Dhananjay: ಸರಳವಾಗಿ ನೆರವೇರಿತು ಡಾಲಿ – ಧನ್ಯತಾ ನಿಶ್ಚಿತಾರ್ಥ

ರಿಲೀಸ್‌ ಅಖಾಡಕ್ಕೆ ಚಿಕ್ಕಣ್ಣನ ʼಫಾರೆಸ್ಟ್ʼ

Forest: ರಿಲೀಸ್‌ ಅಖಾಡಕ್ಕೆ ಚಿಕ್ಕಣ್ಣನ ʼಫಾರೆಸ್ಟ್ʼ

Master Rohit: ರಸ್ತೆ ಅಪಘಾತ ʼಕಾಟೇರʼ ಬಾಲನಟ ರೋಹಿತ್‌ಗೆ ಗಂಭೀರ ಗಾಯ

Master Rohit: ರಸ್ತೆ ಅಪಘಾತ ʼಕಾಟೇರʼ ಬಾಲನಟ ರೋಹಿತ್‌ಗೆ ಗಂಭೀರ ಗಾಯ

Darshan’s Krantiveera Sangolli Rayanna movie to re release

Re Release: ದರ್ಶನ್‌ ಮತ್ತೊಂದು ಚಿತ್ರ ಮರು ಬಿಡುಗಡೆ: ರೀರಿಲೀಸ್‌ನತ್ತ ಸಂಗೊಳ್ಳಿ ರಾಯಣ್ಣ

Kiran Raj will be a superhero in next film

Kiran Raj: ಸೂಪರ್‌ ಹೀರೋ ಆಗಲಿದ್ದಾರೆ ಕಿರಣ್‌ ರಾಜ್‌

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

3

Mangaluru: ಅನಧಿಕೃತ ಫ್ಲೆಕ್ಸ್‌ , ಬ್ಯಾನರ್‌ ತೆರವು ಆರಂಭ

BBK11: ಬಿಗ್‌ ಬಾಸ್‌ ಮನೆಗೆ ವೈಲ್ಡ್‌ ಕಾರ್ಡ್ ಸ್ಪರ್ಧಿ; ಅಬ್ಬರಿಸುತ್ತಲೇ ದೊಡ್ಮನೆಗೆ ಎಂಟ್ರಿ

BBK11: ಬಿಗ್‌ ಬಾಸ್‌ ಮನೆಗೆ ವೈಲ್ಡ್‌ ಕಾರ್ಡ್ ಸ್ಪರ್ಧಿ; ಅಬ್ಬರಿಸುತ್ತಲೇ ದೊಡ್ಮನೆಗೆ ಎಂಟ್ರಿ

2

Thekkatte: ಕುಂಭಾಶಿಯಲ್ಲಿ ಸಿದ್ಧವಾಗಿದೆ ನಂದಿ ದೇಗುಲದ ಬ್ರಹ್ಮರಥ

4(1)

Lupus Nephritis: ಲೂಪಸ್‌ ನೆಫ್ರೈಟಿಸ್‌ ರೋಗಿಗಳಿಗೆ ಒಂದು ಮಾರ್ಗದರ್ಶಿ

Sagara: ಸಹಕಾರಿ ಚಳುವಳಿಯ ಭದ್ರ ಬೇರು ಕರ್ನಾಟಕದಲ್ಲಿದೆ: ಬಿ.ಎಸ್.ಯಡಿಯೂರಪ್ಪ

Sagara: ಸಹಕಾರಿ ಚಳುವಳಿಯ ಭದ್ರ ಬೇರು ಕರ್ನಾಟಕದಲ್ಲಿದೆ: ಬಿ.ಎಸ್.ಯಡಿಯೂರಪ್ಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.