ಹಫ್ತಾ ಹವಾ ಶುರು

Team Udayavani, Dec 16, 2018, 11:22 AM IST

hafta182.jpg

ಬೇರೆಯವರಿಂದ ಅನ್ಯಾಯವಾಗಿ, ಒತ್ತಾಯ ಮಾಡಿ ಸುಲಿಗೆ, ವಸೂಲಿ ಮಾಡುವ ದಂಧೆಗೆ “ಹಫ್ತಾ’ ಎನ್ನುತ್ತಾರೆಂಬುದು ಎಲ್ಲರಿಗೂ ಗೊತ್ತು. ಈಗ ಇದೇ ಪದ ಬಳಕೆ ಮಾಡಿ ಇಲ್ಲೊಂದು ಹೊಸಬರ ತಂಡ ತಮ್ಮ ಚಿತ್ರಕ್ಕೆ “ಹಫ್ತಾ’ ಎಂಬ ಹೆಸರಿಟ್ಟುಕೊಂಡು ಚಿತ್ರ ಮಾಡಿದೆ. ಈ ಚಿತ್ರದಲ್ಲಿ ಕೆಲಸ ಮಾಡಿರುವ ಎಲ್ಲರೂ ಹೊಸಬರೇ. ಇನ್ನು, ಬಹುತೇಕ ಹೊಸಬರೇ ಸೇರಿ ನಿರ್ಮಿಸಿರುವ “ಹಫ್ತಾ’ ಚಿತ್ರದ ಶೀರ್ಷಿಕೆಗೆ “ಸೆಂಟಿಮೆಂಟ್‌ ನಾಟ್‌ ಅಲೋಡ್‌’ ಎಂಬ ಅಡಿಬರಹವಿದೆ.

ಇಂಥದ್ದೊಂದು ಚಿತ್ರಕ್ಕೆ ಶ್ರೀಮುರಳಿ ಸಾಥ್‌ ಕೊಟ್ಟಿದ್ದಾರೆ. ಶ್ರೀಮುರಳಿ ಚಿತ್ರದ ಟೀಸರ್‌ ಬಿಡುಗಡೆಗೊಳಿಸಿದರೆ, ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಎಸ್‌.ಎ ಚಿನ್ನೇಗೌಡ ಚಿತ್ರದ ಪೋಸ್ಟರ್‌ ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಶುಭ ಹಾರೈಸಿದರು. ಚಿತ್ರಕ್ಕೆ “ಹಫ್ತಾ’ ಎಂಬ ಹೆಸರಿದೆ. ಅಲ್ಲಿಗೆ ಚಿತ್ರದ ತುಂಬೆಲ್ಲಾ ಸುಲಿಗೆ, ವಸೂಲಿ, ದಗಲ್‌ಬಾಜಿ ಇನ್ನೂ ಅನೇಕ ಅಂಶಗಳೇ ತುಂಬಿರುತ್ತವೆ ಎಂದು ಭಾವಿಸಿದರೆ, ಆ ಊಹೆ ತಪ್ಪು.

“ಹಫ್ತಾ’ ಅಂತಿದ್ದರೂ, ಇದರಲ್ಲಿ ಯಾವುದೇ ಸುಲಿಗೆ, ವಸೂಲಿ ಕಥೆ ಇಲ್ಲ ಎಂಬ ಸ್ಪಷ್ಟನೆ ಕೊಡುತ್ತದೆ ಚಿತ್ರತಂಡ. ಕಡಲ ತೀರದ ಭೂಗತಲೋಕದ ಚಟುವಟಿಕೆಗಳು ಮತ್ತು ಸುಪಾರಿ ಕಿಲ್ಲಿಂಗ್‌ ಅಂಶಗಳೇ ಈ ಚಿತ್ರದ ಕಥಾ ವಸ್ತುವಾಗಿದ್ದು, ಸೆಸ್ಪನ್ಸ್‌- ಥ್ರಿಲ್ಲರ್‌ ಶೈಲಿಯಲ್ಲಿ ಚಿತ್ರ ತೆರೆಮೇಲೆ ಬರುತ್ತಿದೆ. “ಕೆಟ್ಟವರನ್ನು ಸಂಹಾರ ಮಾಡಲು ಕೆಟ್ಟವನೇ ಬರಬೇಕು’ ಎಂಬುದು ಚಿತ್ರದ ಕಥೆಯ ಒಂದು ಎಳೆ ಎನ್ನುತ್ತದೆ ಚಿತ್ರತಂಡ. 

ಸುಮಾರು 20ಕ್ಕೂ ಹೆಚ್ಚು ಚಿತ್ರಗಳಲ್ಲಿ ಪೋಷಕ ನಟನಾಗಿ, ಖಳನಟನಾಗಿ ಅಭಿನಯಿಸಿರುವ ವರ್ಧನ್‌ ತೀರ್ಥಹಳ್ಳಿ ಮೊದಲ ಬಾರಿಗೆ ಈ ಚಿತ್ರದಲ್ಲಿ ನಾಯಕ ನಟನಾಗಿ ಎರಡು ಶೇಡ್‌ ಪಾತ್ರಗಳಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ರಾಘವ ನಾಗ್‌, ಬಿಂಬಶ್ರೀ ನೀನಾಸಂ, ಸೌಮ್ಯ, ಬಾಲ ರಾಜವಾಡಿ, ದಶಾವರ ಚಂದ್ರು, ಉಗ್ರಂ ರವಿ ಮುಂತಾದವರು ಚಿತ್ರದ ಇತರ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ. ಮಂಗಳೂರು, ಮುರುಡೇಶ್ವರ, ಗೋಕರ್ಣ ಮತ್ತು ಬೆಂಗಳೂರು ಪ್ರದೇಶಗಳಲ್ಲಿ ಚಿತ್ರೀಕರಿಸಲಾಗಿದೆ.

ಚಿತ್ರದಲ್ಲಿ ಮೂರು ಹಾಡುಗಳಿದ್ದು, ಜಯ್‌ ಸಂಗೀತ, ಗೌತಂ ಶ್ರೀವತ್ಸ  ಹಿನ್ನಲೆ ಸಂಗೀತ ನೀಡಿದ್ದಾರೆ. ಚಿತ್ರಕ್ಕೆ ಸಿನಿಟೆಕ್‌ ಸೂರಿ ಛಾಯಾಗ್ರಹಣ, ರಘುನಾಥ್‌.ಎಲ್‌ ಸಂಕಲನ ಕಾರ್ಯವಿದೆ. ಪ್ರಕಾಶ್‌ ಹೆಬ್ಟಾಳ ಚಿತ್ರಕ್ಕೆ ಕಥೆ, ಚಿತ್ರಕಥೆ, ಸಂಭಾಷಣೆ ಬರೆದು ಮೊದಲ ಬಾರಿಗೆ ನಿರ್ದೇಶನ ಮಾಡುತ್ತಿದ್ದಾರೆ. ಮೈತ್ರಿ ಮಂಜುನಾಥ್‌ ನಿರ್ಮಾಣ ಮಾಡಿದ್ದು, ಇಷ್ಟರಲ್ಲೇ ಚಿತ್ರದ ಆಡಿಯೋ ಬಿಡುಗಡೆ ಮಾಡುವ ಯೋಚನೆ ಚಿತ್ರತಂಡಕ್ಕಿದೆ.

ಟಾಪ್ ನ್ಯೂಸ್

ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು: ತಿಮ್ಮಾಪುರ

R. B. Timmapur: ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು

8 ಮಸೂದೆ ಮಂಡನೆಗೆ ಸಂಪುಟ ಒಪ್ಪಿಗೆ; ವಿಧಾನಮಂಡಲದ ಅಧಿವೇಶನದಲ್ಲಿ ಮಂಡನೆ

8 ಮಸೂದೆ ಮಂಡನೆಗೆ ಸಂಪುಟ ಒಪ್ಪಿಗೆ; ವಿಧಾನಮಂಡಲದ ಅಧಿವೇಶನದಲ್ಲಿ ಮಂಡನೆ

Elephant: ಬಂಡೀಪುರದಲ್ಲಿ ಆನೆ ಮೃತದೇಹ ಪತ್ತೆ: ಆಂಥ್ರಾಕ್ಸ್ ಸೋಂಕು ಶಂಕೆ

Elephant: ಬಂಡೀಪುರದಲ್ಲಿ ಆನೆ ಮೃತದೇಹ ಪತ್ತೆ: ಆಂಥ್ರಾಕ್ಸ್ ಸೋಂಕು ಶಂಕೆ

“ಬಳ್ಳಾರಿ ಜಿಲ್ಲಾಸ್ಪತ್ರೆ: ಬಾಣಂತಿಯರ ಸಾವಿಗೆ ವೈದ್ಯರಲ್ಲ, ದ್ರಾವಣ ಕಾರಣ’

Ballari District Hospital: ಬಾಣಂತಿಯರ ಸಾವಿಗೆ ವೈದ್ಯರಲ್ಲ, ದ್ರಾವಣ ಕಾರಣ’

ನಕ್ಸಲರ ಪತ್ತೆಗೆ ಶಿವಮೊಗ್ಗ ಪೊಲೀಸರು ಸಜ್ಜು : ಎಎನ್‌ಎಫ್‌ ಮಾದರಿಯಲ್ಲಿ ವಿಶೇಷ ಪೊಲೀಸ್‌ ಪಡೆ

ನಕ್ಸಲರ ಪತ್ತೆಗೆ ಶಿವಮೊಗ್ಗ ಪೊಲೀಸರು ಸಜ್ಜು : ಎಎನ್‌ಎಫ್‌ ಮಾದರಿಯಲ್ಲಿ ವಿಶೇಷ ಪೊಲೀಸ್‌ ಪಡೆ

Hassan: ಅಂಗಾಂಗ ದಾನ ಮಾಡಿ ಸಾವಿನಲ್ಲೂ ಸಾರ್ಥಕ್ಯ ಮೆರೆದ ಕಾರ್ಮಿಕನ ಕುಟುಂಬ

Hassan: ಅಂಗಾಂಗ ದಾನ ಮಾಡಿ ಸಾವಿನಲ್ಲೂ ಸಾರ್ಥಕ್ಯ ಮೆರೆದ ಕಾರ್ಮಿಕನ ಕುಟುಂಬ

HIGH COURT: ಬಿಎಸ್‌ವೈ ವಿರುದ್ಧದ ಪೋಕ್ಸೋ ಪ್ರಕರಣ: ವಿಚಾರಣೆ ಮುಂದಕ್ಕೆ

HIGH COURT: ಬಿಎಸ್‌ವೈ ವಿರುದ್ಧದ ಪೋಕ್ಸೋ ಪ್ರಕರಣ: ವಿಚಾರಣೆ ಮುಂದಕ್ಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BBK11: ಆರಂಭದಿಂದಲೂ ಮಂಜು ಮೋಸದಿಂದಲೇ ಆಡುತ್ತಾ ಬರುತ್ತಿದ್ದಾರೆ.. ಮೋಕ್ಷಿತಾ ಕಣ್ಣೀರು

BBK11: ಆರಂಭದಿಂದಲೂ ಮಂಜು ಮೋಸದಿಂದಲೇ ಆಡುತ್ತಾ ಬರುತ್ತಿದ್ದಾರೆ.. ಮೋಕ್ಷಿತಾ ಕಣ್ಣೀರು

Renukaswamy Case: ಬೆನ್ನುನೋವು ಬಳಿಕ ದರ್ಶನ್‌ಗೆ ಮತ್ತೊಂದು ಸಮಸ್ಯೆ; ವಕೀಲರು ಹೇಳಿದ್ದೇನು?

Renukaswamy Case:ಬೆನ್ನು ನೋವು ಬಳಿಕ ದರ್ಶನ್‌ಗೆ ಮತ್ತೊಂದು ಸಮಸ್ಯೆ; ವಕೀಲರು ಹೇಳಿದ್ದೇನು?

kuladalli keelyavudo kannada movie

Kannada Cinema: ಕ್ಲೈಮ್ಯಾಕ್ಸ್‌ ನತ್ತ ʼಕುಲದಲ್ಲಿ ಕೀಳ್ಯಾವುದೋʼ

Deepika Das: ನಟಿ ದೀಪಿಕಾ ದಾಸ್‌ ಕುಟುಂಬಕ್ಕೆ ಬೆದರಿಕೆ ಕರೆ; ಯುವಕನ ವಿರುದ್ಧ ದೂರು

Deepika Das: ನಟಿ ದೀಪಿಕಾ ದಾಸ್‌ ಕುಟುಂಬಕ್ಕೆ ಬೆದರಿಕೆ ಕರೆ; ಯುವಕನ ವಿರುದ್ಧ ದೂರು

Kiccha Sudeep’s max movie releasing on Dec 25th

Kiccha Sudeepa: ಕ್ರಿಸ್ಮಸ್‌ ಗೆ ಬರುತ್ತಿದೆ ʼಮ್ಯಾಕ್ಸ್‌ʼ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು: ತಿಮ್ಮಾಪುರ

R. B. Timmapur: ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು

8 ಮಸೂದೆ ಮಂಡನೆಗೆ ಸಂಪುಟ ಒಪ್ಪಿಗೆ; ವಿಧಾನಮಂಡಲದ ಅಧಿವೇಶನದಲ್ಲಿ ಮಂಡನೆ

8 ಮಸೂದೆ ಮಂಡನೆಗೆ ಸಂಪುಟ ಒಪ್ಪಿಗೆ; ವಿಧಾನಮಂಡಲದ ಅಧಿವೇಶನದಲ್ಲಿ ಮಂಡನೆ

Elephant: ಬಂಡೀಪುರದಲ್ಲಿ ಆನೆ ಮೃತದೇಹ ಪತ್ತೆ: ಆಂಥ್ರಾಕ್ಸ್ ಸೋಂಕು ಶಂಕೆ

Elephant: ಬಂಡೀಪುರದಲ್ಲಿ ಆನೆ ಮೃತದೇಹ ಪತ್ತೆ: ಆಂಥ್ರಾಕ್ಸ್ ಸೋಂಕು ಶಂಕೆ

“ಬಳ್ಳಾರಿ ಜಿಲ್ಲಾಸ್ಪತ್ರೆ: ಬಾಣಂತಿಯರ ಸಾವಿಗೆ ವೈದ್ಯರಲ್ಲ, ದ್ರಾವಣ ಕಾರಣ’

Ballari District Hospital: ಬಾಣಂತಿಯರ ಸಾವಿಗೆ ವೈದ್ಯರಲ್ಲ, ದ್ರಾವಣ ಕಾರಣ’

ನಕ್ಸಲರ ಪತ್ತೆಗೆ ಶಿವಮೊಗ್ಗ ಪೊಲೀಸರು ಸಜ್ಜು : ಎಎನ್‌ಎಫ್‌ ಮಾದರಿಯಲ್ಲಿ ವಿಶೇಷ ಪೊಲೀಸ್‌ ಪಡೆ

ನಕ್ಸಲರ ಪತ್ತೆಗೆ ಶಿವಮೊಗ್ಗ ಪೊಲೀಸರು ಸಜ್ಜು : ಎಎನ್‌ಎಫ್‌ ಮಾದರಿಯಲ್ಲಿ ವಿಶೇಷ ಪೊಲೀಸ್‌ ಪಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.