ಅಮ್ಮನ ಹೆಸರಿನ ಚಿತ್ರಕ್ಕೆ ಮಗನ ಮೆಚ್ಚುಗೆ
Team Udayavani, Oct 4, 2018, 5:19 PM IST
ಹರಿಪ್ರಿಯಾ ಹಾಗೂ ಸುಮಲತಾ ಅಭಿನಯದ “ಡಾಟರ್ ಆಫ್ ಪಾರ್ವತಮ್ಮ’ ಚಿತ್ರದ ಟೀಸರ್‌ಗೆ ಪುನೀತ್‌ರಾಜ್‌ಕುಮಾರ್ ಮೆಚ್ಚುಗೆ ವ್ಯಕ್ತಪಡಿಸಿರುವುದಲ್ಲದೆ, ಚಿತ್ರದಲ್ಲಿರುವ ಎರಡು ಹಾಡುಗಳನ್ನು ಕೇಳಿ, ತಮ್ಮ ಪಿಆರ್‌ಕೆ ಆಡಿಯೋ ಸಂಸ್ಥೆ ಮೂಲಕ ಬಿಡುಗಡೆ ಮಾಡುವುದಾಗಿ ಹೇಳಿದ್ದಾರೆ. ಈ ಖುಷಿಯಲ್ಲೇ ಚಿತ್ರತಂಡ ಅ.6 ರಂದು ಟೀಸರ್ ಬಿಡುಗಡೆ ಮಾಡುವ ಮೂಲಕ ಪ್ರಚಾರ ಕಾರ್ಯಕ್ಕೆ ಮುಂದಾಗುತ್ತಿದೆ. ಅಮ್ಮನ ಹೆಸರಿನಲ್ಲಿ ಮೂಡಿಬಂದಿರುವ “ಡಾಟರ್ ಆಫ್ ಪಾರ್ವತಮ್ಮ’ ಚಿತ್ರದ 1.40 ನಿಮಿಷ ಅವಧಿಯ ಟೀಸರ್ ವೀಕ್ಷಿಸಿದ ಪುನೀತ್, ಚಿತ್ರದ ಗುಣಮಟ್ಟ ಹಾಗೂ ತಾಂತ್ರಕತೆ ಕುರಿತು ಮೆಚ್ಚಿಕೊಂಡಿದ್ದಾರೆ.
“ಟೀಸರ್‌ನಲ್ಲೊಂದು ವಿಶೇಷತೆ ಇದ್ದು, ಸಿನಿಮಾ ಕುತೂಹಲ ಮೂಡಿಸಲಿದೆ’ ಎನ್ನುವ ಮೂಲಕ ಹೊಸಬರ ತಂಡಕ್ಕೆ ಪ್ರೋತ್ಸಾಹಿಸುವ ಸಲುವಾಗಿ ಆಡಿಯೋವನ್ನು ತಮ್ಮ ಪಿಆರ್‌ಕೆ ಮೂಲಕ ಹೊರತರುವುದಾಗಿ ಹೇಳಿರುವುದು ಚಿತ್ರತಂಡಕ್ಕೆ ಇನ್ನಷ್ಟು ಸಂತಸವಾಗಿದೆ.
ಜೆ. ಶಂಕರ್ ನಿರ್ದೇಶನದ ಈ ಚಿತ್ರದ ಕಥೆ ಒಂದು ಕ್ರೈಮ್ ಸುತ್ತ ಸಾಗಲಿದೆ. ಇದೇ ಮೊದಲ ಸಲ ಹರಿಪ್ರಿಯಾ ತನಿಖಾಧಿಕಾರಿ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.
ಸುಮಲತಾ ಅವರಿಲ್ಲಿ “ಪಾರ್ವತಮ್ಮ’ ಪಾತ್ರ ನಿರ್ವಹಿಸಿದ್ದು, ಮಗಳ ಸಾಧನೆಯ ಹಿಂದೆ ಬೆನ್ನೆಲುಬಾಗಿ ನಿಲ್ಲುವ ಪಾತ್ರ ಮಾಡಿದ್ದಾರೆ. ಚಿತ್ರದಲ್ಲಿ ಸೂರಜ್‌ಗೌಡ ವಿಶೇಷ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಇನ್ನು ಈ ಚಿತ್ರ ದಿಶ ಎಂಟರ್‌ಟೈನ್‌ಮೆಂಟ್ ಬ್ಯಾನರ್‌ನಲ್ಲಿ ತಯಾರಾಗಿದ್ದು, ಕೆ.ಎಂ.ಶಶಿಧರ್, ಎಂ.ವಿಜಯಲಕ್ಷ್ಮೀ ಕೃಷ್ಣೇಗೌಡ, ಶ್ವೇತಾ ಮಧುಸೂದನ್, ಸಂದೀಪ್ ಈ ಚಿತ್ರವನ್ನು ನಿರ್ಮಿಸಿದ್ದಾರೆ. ಚಿತ್ರಕ್ಕೆ ಅರುಳ್ ಕೆ. ಸೋಮಸುಂದರನ್ ಛಾಯಾಗ್ರಹಣವಿದೆ. ಮಿಥುನ್ ಮುಕುಂದನ್ ಸಂಗೀತವಿದೆ. ಸುರೇಶ್ ಆರ್ಮುಗಂ ಸಂಕಲನ ಮಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Surathkal-ಗಣೇಶಪುರ ರಸ್ತೆಯಲ್ಲಿ ಟ್ಯಾಂಕರ್ ರಾಜ್ಯಭಾರ!
Mangaluru: ಕರಾವಳಿ ಉತ್ಸವ; ಮತ್ಸ್ಯ ಲೋಕದೊಳಗೆ ನಾವು!
Kundapura: ಮೆಟ್ಟಿಲು ಹತ್ತುವಾಗಲೇ ಶುಚಿಯಾಗುವ ಶೌಚಾಲಯ!
ಮಾನಸಿಕ ಅಸ್ವಸ್ಥ ಬಾಲಕಿ ಮೇಲೆ ಲೈಂಗಿಕದೌರ್ಜನ್ಯ: ಆರೋಪಿ ವಿಚಾರಣೆ ರದ್ದತಿಗೆ ಹೈಕೋರ್ಟ್ ನಕಾರ
ICC ಏಕದಿನ, ಟಿ20 ಕ್ರಿಕೆಟಿಗ ಪ್ರಶಸ್ತಿ ನಾಮಿನೇಶನ್ ಪಟ್ಟಿ ಬಿಡುಗಡೆ; ಬುಮ್ರಾ ಹೆಸರಿಲ್ಲ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.