ಮತ್ತೆರಡು ಸಿನಿಮಾ ಒಪ್ಪಿಕೊಂಡ ಹರಿಪ್ರಿಯಾ


Team Udayavani, Mar 11, 2020, 7:05 AM IST

uppi-hari

2019ರಲ್ಲಿ ಹರಿಪ್ರಿಯಾ ನಟಿಸಿದ ಏಳು ಚಿತ್ರಗಳು ಬಿಡುಗಡೆಯಾಗಿದ್ದವು. ಸಿನಿಮಾಗಳ ಮೇಲೆ ಸಿನಿಮಾಗಳಲ್ಲಿ ಬಿಝಿಯಾಗಿದ್ದ ಹರಿಪ್ರಿಯಾ, ವರ್ಷಾರಂಭದಲ್ಲಿ ಬ್ರೇಕ್‌ ತಗೊಂಡು ಬೇರೆ ಬೇರೆ ಊರು ಸುತ್ತಾಡಿಕೊಂಡು ಬಂದು ರಿಲ್ಯಾಕ್ಸ್‌ ಆಗಿದ್ದರು. ಈಗ ಮತ್ತೆ ಹರಿಪ್ರಿಯಾ ಸಿನಿಮಾದತ್ತ ಬಂದಿದ್ದಾರೆ. ನೀವದನ್ನು ವರ್ಕ್‌ಮೂಡ್‌ ಎಂದು ಕರೆಯಬಹುದು. ಹರಿಪ್ರಿಯಾ ಈಗ ಎರಡು ಸಿನಿಮಾಗಳನ್ನು ಒಪ್ಪಿಕೊಂಡಿದ್ದಾರೆ. ಈ ಮೂಲಕ ಈ ವರ್ಷವೂ ಬಿಝಿಯಾಗುವ ಸೂಚನೆ ನೀಡಿದ್ದಾರೆ.

ಈ ಬಾರಿ ಹರಿಪ್ರಿಯಾ, ಉಪೇಂದ್ರ ಅವರ ಜೋಡಿಯಾಗಿ ನಟಿಸುತ್ತಿದ್ದಾರೆ. ಕೆ.ಮಾದೇಶ ಈ ಚಿತ್ರವನ್ನು ನಿರ್ದೇಶಿಸುತ್ತಿದ್ದಾರೆ. ಈ ಚಿತ್ರದಲ್ಲಿ ಹರಿಪ್ರಿಯಾ ನಾಯಕಿಯಾಗಿದ್ದು, ಪಾತ್ರದ ಬಗ್ಗೆ ಎಕ್ಸೆ„ಟ್‌ ಆಗಿದ್ದಾರೆ. “ಕಥೆ ಹಾಗೂ ಪಾತ್ರ ತುಂಬಾ ಚೆನ್ನಾಗಿದೆ. ಬ್ರೇಕ್‌ನ ನಂತರ ಸಾಕಷ್ಟು ಕಥೆಗಳು ಹುಡುಕಿ ಬಂದವು. ಅದರಲ್ಲಿ ಉಪೇಂದ್ರ ಅವರು ನಾಯಕರಾಗಿರುವ ಸಿನಿಮಾದ ಕತೆ ಇಷ್ಟವಾಯಿತು. ಹೊಸ ಬಗೆಯ ಪಾತ್ರ’ ಎನ್ನುವುದು ಹರಿಪ್ರಿಯಾ ಮಾತು.

ಇದು ಒಂದು ಸಿನಿಮಾದ ಕಥೆಯಾದರೆ, ಇನ್ನೊಂದು ಸಿನಿಮಾ ಯಾವುದೆಂದು ನೀವು ಕೇಳಬಹುದು. ಅದಕ್ಕೆ ಉತ್ತರ ಈಗಲೇ ಸಿಗಲ್ಲ. ಕಾರಣ, ಹರಿಪ್ರಿಯಾ ಆ ಸಿನಿಮಾದ ಗೌಪ್ಯತೆ ಕಾಪಾಡಿದ್ದಾರೆ. “ಇನ್ನೊಂದು ಹೊಸ ಸಿನಿಮಾ ಒಪ್ಪಿಕೊಂಡಿದ್ದೇನೆ. ಆದರೆ, ಅದರ ಬಗ್ಗೆ ಈಗಲೇ ಹೇಳುವುದು ಸೂಕ್ತವಲ್ಲ. ಮೊದಲು ಈ ಸಿನಿಮಾ ಮುಗಿಸಿಕೊಂಡು ಆ ನಂತರ ಉಪೇಂದ್ರ ಅವರ ಸಿನಿಮಾ ಮಾಡುತ್ತೇನೆ’ ಎನ್ನುವುದು ಹರಿಪ್ರಿಯಾ ಮಾತು. ಅಂದಹಾಗೆ, ಉಪೇಂದ್ರ ನಿರ್ದೇಶನದ ಹೊಸ ಚಿತ್ರಕ್ಕೆ ಸಾಧು ಕೋಕಿಲ ಸಂಗೀತ ನೀಡುತ್ತಿದ್ದಾರೆ.

ಇದು ಉಪ್ಪಿ-ರುಪಿ ಅಲ್ಲ: ಉಪೇಂದ್ರ ಹಾಗೂ ಮಾದೇಶ ಕಾಂಬಿನೇಶನ್‌ನಲ್ಲಿ ಎರಡು ವರ್ಷಗಳ ಹಿಂದೆ “ಉಪ್ಪಿ-ರುಪಿ’ ಎಂಬ ಸಿನಿಮಾ ಮುಹೂರ್ತ ಕಂಡಿತ್ತು. ರಚಿತಾ ರಾಮ್‌ ಈ ಚಿತ್ರಕ್ಕೆ ನಾಯಕಿಯಾಗಿದ್ದು, ಸಾಧುಕೋಕಿಲ ಅವರ ಸಂಗೀತವಿತ್ತು. ಆದರೆ, ಕಾರಣಾಂತರಗಳಿಂದ ಆ ಸಿನಿಮಾ ಮುಂದುವರೆಯಲಿಲ್ಲ.

ಹಾಗಾದರೆ ಈ ಉಪ್ಪಿ-ಮಾದೇಶ-ಸಾಧುಕೋಕಿಲ ಮೂವರು ಜೊತೆಯಾಗಿರುವ ಪ್ರಾಜೆಕ್ಟ್ ಯಾವುದು? ನಿಂತು ಹೋಗಿದ್ದ “ಉಪ್ಪಿ-ರುಪಿ’ಯೇ ಈಗ ಆರಂಭವಾಗುತ್ತಿದೆಯಾ ಎಂಬ ಪ್ರಶ್ನೆ ಸಹಜವಾಗಿಯೇ ಬರುತ್ತದೆ. ಆದರೆ, ಹರಿಪ್ರಿಯಾ ಹೇಳುವಂತೆ, ಆ ಚಿತ್ರಕ್ಕೂ ಈ ಹೊಸ ಚಿತ್ರಕ್ಕೂ ಯಾವುದೇ ಸಂಬಂಧವಿಲ್ಲ. ಹೊಸ ಕಥೆಯನ್ನಿಟ್ಟುಕೊಂಡು ಸಿನಿಮಾ ಮಾಡುತ್ತಿದೆಯಂತೆ ಚಿತ್ರತಂಡ. ಚಿತ್ರ ಮೇಯಲ್ಲಿ ಆರಂಭವಾಗುವ ಸಾಧ್ಯತೆ ಇದೆ.

ಟಾಪ್ ನ್ಯೂಸ್

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

Council Session: ಪವರ್‌ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ

Council Session: ಪವರ್‌ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ

ಮೂಲಗೇಣಿದಾರರ ಅರ್ಜಿ ತತ್‌ಕ್ಷಣ ಇತ್ಯರ್ಥಗೊಳಿಸಲು ಐವನ್‌ ಮನವಿ

ಮೂಲಗೇಣಿದಾರರ ಅರ್ಜಿ ತತ್‌ಕ್ಷಣ ಇತ್ಯರ್ಥಗೊಳಿಸಲು ಐವನ್‌ ಮನವಿ

Fake Gold: ಎಚ್ಚರ ವಹಿಸಲು ಡಿಸಿಸಿ ಬ್ಯಾಂಕ್‌ಗಳಿಗೆ ಸೂಚನೆ: ಸಚಿವ ಕೆ.ಎನ್‌. ರಾಜಣ್ಣ

Fake Gold: ಎಚ್ಚರ ವಹಿಸಲು ಡಿಸಿಸಿ ಬ್ಯಾಂಕ್‌ಗಳಿಗೆ ಸೂಚನೆ: ಸಚಿವ ಕೆ.ಎನ್‌. ರಾಜಣ್ಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BBK11: ಟಾಸ್ಕ್ ವಿಚಾರದಲ್ಲಿ ಫೈಯರ್ ಚೈತ್ರಾ ಠುಸ್.. ಮನೆಮಂದಿ ಸುಸ್ತು

BBK11: ಟಾಸ್ಕ್ ವಿಚಾರದಲ್ಲಿ ಫೈಯರ್ ಚೈತ್ರಾ ಠುಸ್.. ಮನೆಮಂದಿ ಸುಸ್ತು

BBK11: ಮತ್ತೆ ಬಿಗ್ ಬಾಸ್ ಮನೆಗೆ ಗೋಲ್ಡ್ ಸುರೇಶ್.. ವಿಡಿಯೋದಲ್ಲಿ ಸುಳಿವು

BBK11: ಮತ್ತೆ ಬಿಗ್ ಬಾಸ್ ಮನೆಗೆ ಗೋಲ್ಡ್ ಸುರೇಶ್..? ವಿಡಿಯೋದಲ್ಲಿ ಸುಳಿವು

Sandalwood: ಕಣ್ಣಾ ಮುಚ್ಚೆ ಕಾಡೇ ಗೂಡೇ ತೆರೆಗೆ ಸಿದ್ಧ

Sandalwood: ಕಣ್ಣಾ ಮುಚ್ಚೆ ಕಾಡೇ ಗೂಡೇ ತೆರೆಗೆ ಸಿದ್ಧ

Adhipatra Movie: ರೂಪೇಶ್‌ ಅಧಿಪತ್ರ ಫೆ.7ಕ್ಕೆ ಬಿಡುಗಡೆ

Adhipatra Movie: ರೂಪೇಶ್‌ ಅಧಿಪತ್ರ ಫೆ.7ಕ್ಕೆ ಬಿಡುಗಡೆ

ShivaRajkumar: ಅಮೆರಿಕಾಕ್ಕೆ ತೆರಳುವ ಮುನ್ನ ಶಿವಣ್ಣನ ಮನೆಯಲ್ಲಿ ವಿಶೇಷ ಪೂಜೆ; ಕಿಚ್ಚ ಭಾಗಿ

ShivaRajkumar: ಅಮೆರಿಕಾಕ್ಕೆ ತೆರಳುವ ಮುನ್ನ ಶಿವಣ್ಣನ ಮನೆಯಲ್ಲಿ ವಿಶೇಷ ಪೂಜೆ; ಕಿಚ್ಚ ಭಾಗಿ

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

Council Session: ಪವರ್‌ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ

Council Session: ಪವರ್‌ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.