ಮೈಸೂರಿನಲ್ಲಿ ಹಸೆಮಣೆ ಏರಲಿದ್ದಾರೆ ಹರಿಪ್ರಿಯಾ- ವಸಿಷ್ಠ ಸಿಂಹ: ಡೇಟ್ ಫಿಕ್ಸ್
Team Udayavani, Jan 5, 2023, 1:29 PM IST
ಸ್ಯಾಂಡಲ್ ವುಡ್ ನ ತಾರಾ ಜೋಡಿ ವಸಿಷ್ಠ ಸಿಂಹ ಮತ್ತು ಹರಿಪ್ರಿಯಾ ನಿಶ್ಚಿತಾರ್ಥ ಮಾಡಿಕೊಂಡಿರುವುದು ಗೊತ್ತೇ ಇದೆ. ಈ ಜೋಡಿಯ ಮದುವೆ ಯಾವಾಗ ಎಂದು ಕೇಳುತ್ತಿದ್ದವರಿಗೆ ಇದೀಗ ಉತ್ತರ ಸಿಕ್ಕಿದೆ. ಅದು ಜನವರಿ 26.
ಮೈಸೂರು ಸಂಸದ ಪ್ರತಾಪ್ ಸಿಂಹ ಅವರು ಈ ಬಗ್ಗೆ ಮಾಹಿತಿ ನೀಡಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ವಸಿಷ್ಠ ಸಿಂಹ ಮತ್ತು ಹರಿಪ್ರಿಯಾ ವಿವಾದ ಬಗ್ಗೆ ಬರೆದುಕೊಂಡಿದ್ದಾರೆ.
ಇದನ್ನೂ ಓದಿ:ಲಜ್ಜೆಗೆಟ್ಟ ಸರ್ಕಾರಕ್ಕೆ ಯಾವ ಸಲಹೆ ನೀಡುತ್ತೀರಿ?: ಸಚಿವ ಗಡ್ಕರಿಗೆ ಜೆಡಿಎಸ್ ಪ್ರಶ್ನೆ
ಮೈಸೂರಿನ ಗಣಪತಿ ಸಚ್ಚಿದಾನಂದ ಆಶ್ರಮದಲ್ಲಿ ಹರಿಪ್ರಿಯಾ ಹಾಗೂ ವಸಿಷ್ಠ ವಿವಾಹ ಕಾರ್ಯಕ್ರಮ ನಡೆಯಲಿದೆ. ಮೈಸೂರು- ಊಟಿ ಹೆದ್ದಾರಿಯಲ್ಲಿರುವ ಗಣಪತಿ ಸಚ್ಚಿದಾನಂದ ಆಶ್ರಮಕ್ಕೆ ಹರಿಪ್ರಿಯಾ ಹಾಗೂ ವಸಿಷ್ಠ ಸಿಂಹ ಭೇಟಿ ನೀಡಿ ಸ್ವಾಮೀಜಿ ಆಶೀರ್ವಾದ ಪಡೆದರು. ಈ ವೇಳೆ ಸಂಸದ ಪ್ರತಾಪ್ ಸಿಂಹ ಹಾಜರಿದ್ದರು.
ಖ್ಯಾತ ಚಲನಚಿತ್ರ ನಟರಾದ ವಸಿಷ್ಠ ಸಿಂಹ ಮತ್ತು ಹರಿಪ್ರಿಯಾ ಅವರ ವಿವಾಹ ಮೈಸೂರಿನ ಗಣಪತಿ ಸಚ್ಚಿದಾನಂದ ಆಶ್ರಮದಲ್ಲಿ ಇದೇ ತಿಂಗಳ 26 ರಂದು ನಡೆಯಲಿದೆ. pic.twitter.com/XxBAfeQWLO
— Pratap Simha (@mepratap) January 4, 2023
ಕಳೆದ ಡಿ.3 ಕ್ಕೆ ಈ ತಾರಾ ಜೋಡಿ ನಿಶ್ಚಿತಾರ್ಥ ಮಾಡಿಕೊಂಡಿದ್ದರು. ಅದಕ್ಕೂ ಕೆಲವು ದಿನ ಮೊದಲು ಇವರಿಬ್ಬರು ಜೊತೆಗೆ ಓಡಾಡುತ್ತಿದ್ದ ಫೋಟೊಗಳು ವೈರಲ್ ಆಗಿದ್ದವು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Ambedkar row: ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜಕೀಯ ಬಿಟ್ಟು ಹೋಗಲಿ ಎಂದ ಲಾಲು ಪ್ರಸಾದ್
ಹೊಸ ವರ್ಷಕ್ಕೆ ಮಾರ್ಗಸೂಚಿ ಬಿಡುಗಡೆ ಮಾಡಿದ ಪೊಲೀಸರು, ಎಲ್ಲಿ, ಏನು ಮಾರ್ಗಸೂಚಿ ಇಳಿದೆ ಮಾಹಿತಿ
Lok Adalat: ಲೋಕ್ ಅದಾಲತ್‌ನಲ್ಲಿ 38.8 ಲಕ್ಷ ವ್ಯಾಜ್ಯ ಇತ್ಯರ್ಥ
Bengaluru: ಒಬಾಮಾ ಭೇಟಿ ವೇಳೆ ಸ್ಫೋಟ ಸಂಚು: ಡಿ.23ಕ್ಕೆ ಶಿಕ್ಷೆ ಪ್ರಕಟ
Fraud: ಸಿಬಿಐ ಸೋಗಿನಲ್ಲಿ ವೃದ್ಧೆಗೆ 1.24 ಕೋಟಿ ರೂ. ವಂಚನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.