ಕುತೂಹಲ ಹೆಚ್ಚಿಸುವ ‘ಯದಾ ಯದಾ ಹೀ’: ಜೂನ್ 2ರಂದು ರಿಲೀಸ್

Team Udayavani, May 23, 2023, 12:04 PM IST

ಕುತೂಹಲ ಹೆಚ್ಚಿಸುವ ‘ಯದಾ ಯದಾ ಹೀ’: ಜೂನ್ 2ರಂದು ರಿಲೀಸ್

ಮದುವೆಯಾದ ನಂತರ ಇದೇ ಮೊದಲ ಬಾರಿಗೆ ವಸಿಷ್ಠ ಸಿಂಹ ಹಾಗೂ ಹರಿಪ್ರಿಯಾ ತೆರೆಮೇಲೆ ಒಟ್ಟಾಗಿ ಕಾಣಿಸಿಕೊಳ್ಳುತ್ತಿರುವ “ಯದಾ ಯದಾ ಹೀ’ ಚಿತ್ರವೂ ಜೂನ್‌ 2ರಂದು ಈ ಚಿತ್ರ ರಾಜ್ಯಾದ್ಯಂತ ತೆರೆಕಾಣುತ್ತಿದ್ದು, ಜಾಕ್‌ ಮಂಜು ಅವರು ಚಿತ್ರವನ್ನು ರಿಲೀಸ್‌ ಮಾಡುತ್ತಿದ್ದಾರೆ. ಈ ಚಿತ್ರದ ಟ್ರೇಲರ್‌ ಬಿಡುಗಡೆಯಾಗಿದ್ದು, ಮೆಚ್ಚುಗೆ ವ್ಯಕ್ತವಾಗುತ್ತಿದೆ.

ಇತ್ತೀಚೆಗಷ್ಟೇ ಈ ಚಿತ್ರದ ಟೈಟಲ್‌ ಸಾಂಗನ್ನು ಕಿಚ್ಚ ಸುದೀಪ್‌ ಅವರು ಬಿಡುಗಡೆ ಮಾಡಿದ್ದರು. ಈ ಗೀತೆಗೆ ವಸಿಷ್ಠಸಿಂಹ ಹಾಗೂ ಹರಿಪ್ರಿಯ ದನಿಯಾಗಿದ್ದಾರೆ. ತೆಲುಗು ವರ್ಷನ್ನಲ್ಲಿ ನಟಿ ರೆಜಿನಾ ಅವರು ನಿರ್ವಹಿಸಿದ್ದ ಪಾತ್ರವನ್ನು, ಇಲ್ಲಿ ಹರಿಪ್ರಿಯಾ ಅವರು ಮಾಡಿದ್ದಾರೆ. ಹಿರಿಯ ನಟ ಅವಿನಾಶ್‌ ಕೂಡ ಈ ಚಿತ್ರದಲ್ಲಿ ಅಭಿನಯಿಸಿದ್ದಾರೆ. ಚಿತ್ರದಲ್ಲಿ ದಿಗಂತ್‌ ಕೂಡಾ ಪ್ರಮುಖ ಪಾತ್ರ ಮಾಡಿದ್ದಾರೆ.

ತೆಲುಗು ಮೂಲದ ಅಶೋಕ ತೇಜ ಅವರು ಈ ಚಿತ್ರವನ್ನು ನಿರ್ದೇಶಿಸಿದ್ದು, ಈಗಾಗಲೇ ತೆಲುಗಲ್ಲಿ ನಿರ್ದೇಶಕರಾಗಿ ಗುರುತಿಸಿಕೊಂಡಿದ್ದರೂ, ಕನ್ನಡದಲ್ಲಿ ಇದು ಮೊದಲ ಸಿನಿಮಾ.

ಇನ್ನು ಈ ಚಿತ್ರಕ್ಕೆ ಗೈಸ್‌ ಅಂಡ್‌ ಡಾಲ್ಸ್ ಕ್ರಿಯೇಶನ್ಸ್‌ ಮೂಲಕ ಹೈದರಾಬಾದ್‌ ಮೂಲದ ರಾಜೇಶ್‌ ಅಗರವಾಲ್‌ ಅವರು ಬಂಡವಾಳ ಹೂಡಿ ನಿರ್ಮಿಸಿದ್ದಾರೆ. ಈ ಚಿತ್ರಕ್ಕೆ ಕೇರಳದ ಮುನ್ನಾರ್‌, ಚಿಕ್ಕಮಗಳೂರು, ಹೈದರಾಬಾದ್‌ ಹಾಗೂ ಬೆಂಗಳೂರು ಸುತ್ತಮುತ್ತ ಸುಮಾರು 55 ದಿನಗಳ ಕಾಲ ಚಿತ್ರೀಕರಿಸಲಾಗಿದೆ.

ಈ ವೇಳೆ ಮಾತನಾಡಿದ ದಿಗಂತ್‌, ನಾವೆಲ್ಲಾ ಸಿನಿಮಾ ನೋಡಿದ್ದೇವೆ. ಸಿನಿಮಾ ತುಂಬಾ ಚೆನ್ನಾಗಿ ಮೂಡಿಬಂದಿದೆ. ಈ ಚಿತ್ರದ ನಿರ್ಮಾಪಕ, ನಿರ್ದೇಶಕರು ತೆಲುಗಿನವರು. ಆದರೆ, ಕನ್ನಡದ ಮೇಲಿನ ಪ್ರೀತಿಯಿಂದ ಇಲ್ಲಿ ಬಂದು ಸಿನಿಮಾ ಮಾಡಿದ್ದಾರೆ. ಇದೊಂದು ಸದಭಿರುಚಿಯ ಸಿನಿಮಾವಾಗಿ ಇಷ್ಟವಾಗುತ್ತದೆ. ನಾನಿಲ್ಲಿ ಖಡಕ್‌ ಪೊಲೀಸ್‌ ಆಫೀಸರ್‌ ಆಗಿ ನಟಿಸಿದ್ದೇನೆ. ಮೊದಲ ಬಾರಿಗೆ ಈ ತರಹದ ಪಾತ್ರದಲ್ಲಿ ಕಾಣಿಸಿಕೊಂಡಿದ್ದೇ ನೆ’ ಎಂದರು.

ನಂತರ ವಸಿಷ್ಠ ಸಿಂಹ ಮಾತನಾಡಿ, “ನಿರ್ದೇಶಕ ಅಶೋಕ್‌ ತೇಜ ಅವರು ಬಂದು ನನಗೆ ಈ ಕಥೆಯನ್ನು ಹೇಳಿದಾಗ ತುಂಬಾ ಇಂಟರೆಸ್ಟಿಂಗ್‌ ಅನಿಸಿತು. ತೆಲುಗಿನ ಯವುಡು ಕಾದಂಬರಿ ಆಧಾರಿತ ಚಿತ್ರ. ಒಂದೊಳ್ಳೆಯ ಜರ್ನಿ ಕಥೆ ಇದರಲ್ಲಿದೆ. ಟೈಟಲ್‌ ಹಾಡಿಗೆ ನಾಗಾರ್ಜುನ ಶರ್ಮಾ ಸಾಹಿತ್ಯ ಬರೆದಿದ್ದಾರೆ. ಸಿನಿಮಾದಲ್ಲಿನ ಪಾತ್ರಗಳು, ಅವುಗಳ ತೊಳಲಾಟಗಳನ್ನು ಹೇಳುವ ಸಾಹಿತ್ಯವಿದು. ಈಗಾಗಲೇ ಚಿತ್ರವನ್ನು ನೋಡಿದ್ದು, ಖುಷಿಯಾಗಿದ್ದೇವೆ. ಇದರಲ್ಲಿ ಪ್ರೀತಿ, ಮೋಸ, ದ್ವೇಷ ಎಲ್ಲವೂ ಇದೆ’ ಎಂದು ಹೇಳಿದರು,

ನಾಯಕಿ ಹರಿಪ್ರಿಯಾ ಮಾತನಾಡಿ, “ಈ ಕಥೆ ಕೇಳಿದಾಗಲೇ ನನಗೆ ತುಂಬಾ ಇಷ್ಟವಾಗಿತ್ತು. ಸಿನಿಮಾ ನೋಡಿ ಮತ್ತಷ್ಟು ಖುಷಿ ಕೊಟ್ಟಿತು. ನಾನು ವಸಿಷ್ಠ, ದಿಗಂತ್‌ ಮೂರೂ ಜನ ಸ್ಪರ್ಧೆಗೆ ಬಿದ್ದವರಂತೆ ನಟಿಸಿದ್ದೇವೆ. ನನ್ನದು ಅಭಿನಯಕ್ಕೆ ಹೆಚ್ಚು ಅವಕಾಶ ಇರುವಂಥ ಪಾತ್ರ. ತುಂಬಾ ಚಾಲೆಂಜಿಂಗ್‌ ಕೂಡ ಆಗಿತ್ತು. ಸಿನಿಮಾನೂ ಕ್ಲಾಸ್‌ ಆಗಿ ಮೂಡಿಬಂದಿದ್ದು, ಪ್ರೇಕ್ಷಕರಿಗೆ ಕುತೂಹಲ ಕೆರಳಿಸುತ್ತಾ ಹೋಗುತ್ತದೆ’ ಎಂದರು.

ನಿರ್ಮಾಪಕ ರಾಜೇಶ್‌ ಅಗರ್‌ವಾಲ್‌ ಮಾತನಾಡುತ್ತಾ, “ನನ್ನ ನಿರ್ಮಾಣದ ಮೊದಲ ಕನ್ನಡ ಚಿತ್ರವಿದು. ಸಿನಿಮಾ ಮಾಡೋದು ನನ್ನ ಕನಸು. ಮೂಲ ಕಥೆಯಲ್ಲಿ ಸಾಕಷ್ಟು ಬದಲಾವಣೆ ಮಾಡಿಕೊಂಡು ಕನ್ನಡ ನೇಟಿವಿಟಿಗೆ ತಕ್ಕಂತೆ ಚಿತ್ರ ಮಾಡಿದ್ದೇವೆ. ದೊಡ್ಡ ಬಜೆಟ್‌ನಲ್ಲಿ ಒಳ್ಳೆಯ ಸಿನಿಮಾ ನಿರ್ಮಿಸಿದ್ದೇವೆ’ ಎಂದರು.

ಕೊಲೆಗಾರನನ್ನು ಪತ್ತೆ ಹಚ್ಚುವುದೇ ಚಿತ್ರದ ಕುತೂಹಲಕರ ಜರ್ನಿಯಾಗಿದೆ. ಚಿತ್ರದಲ್ಲಿ ಒಟ್ಟು 3 ಹಾಡುಗಳಿದ್ದು, ಶ್ರೀಚರಣ್‌ ಪಾಕಾಲ ಅವರ ಸಂಗೀತ ನಿರ್ದೇಶನವಿದೆ.

ಟಾಪ್ ನ್ಯೂಸ್

13

Kanguva: 10 ಸಾವಿರಕ್ಕೂ ಹೆಚ್ಚಿನ ಸ್ಕ್ರೀನ್‌ನಲ್ಲಿ ಅದ್ಧೂರಿಯಾಗಿ ರಿಲೀಸ್‌ ಆಗಲಿದೆ ʼಕಂಗುವʼ

Bypolls: ಯಡಿಯೂರಪ್ಪರನ್ನು ರಾಜಕೀಯವಾಗಿ ಮುಗಿಸಲು ಬೊಮ್ಮಾಯಿ ಪ್ಲ್ಯಾನ್:‌ ಸಿದ್ದರಾಮಯ್ಯ

Bypolls: ಯಡಿಯೂರಪ್ಪರನ್ನು ರಾಜಕೀಯವಾಗಿ ಮುಗಿಸಲು ಬೊಮ್ಮಾಯಿ ಪ್ಲ್ಯಾನ್:‌ ಸಿದ್ದರಾಮಯ್ಯ

Shirola: ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಿಬ್ಬಂದಿ ಕೊರತೆ… ರೋಗಿಗಳ ಪರದಾಟ

Shirola: ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಿಬ್ಬಂದಿ ಕೊರತೆ… ರೋಗಿಗಳ ಪರದಾಟ

Missing: 3 ದಿನದಿಂದ ಕೆಪಿಸಿ ಭದ್ರತಾ ಸಿಬ್ಬಂದಿ ನಾಪತ್ತೆ… ಮಾಣಿ ಡ್ಯಾಂ ಬಳಿ ಬೈಕ್ ಪತ್ತೆ

Missing: 3 ದಿನದಿಂದ ಕೆಪಿಸಿ ಭದ್ರತಾ ಸಿಬ್ಬಂದಿ ನಾಪತ್ತೆ… ಮಾಣಿ ಡ್ಯಾಂ ಬಳಿ ಬೈಕ್ ಪತ್ತೆ

ಅಬಕಾರಿ ಇಲಾಖೆಯಲ್ಲಿ ಭ್ರಷ್ಟಾಚಾರ ಆರೋಪ: ನ.20ರಂದು ರಾಜ್ಯದಲ್ಲಿ ಮದ್ಯ ಮಾರಾಟ ಬಂದ್‌

Excise: ಅಬಕಾರಿ ಇಲಾಖೆಯಲ್ಲಿ ಭ್ರಷ್ಟಾಚಾರ ಆರೋಪ: ನ.20ರಂದು ರಾಜ್ಯದಲ್ಲಿ ಮದ್ಯ ಮಾರಾಟ ಬಂದ್‌

DGP: ಮಹಾರಾಷ್ಟ್ರದ ನೂತನ ಡಿಜಿಪಿ ಆಗಿ ಐಪಿಎಸ್ ಅಧಿಕಾರಿ ಸಂಜಯ್ ವರ್ಮಾ ನೇಮಕ

DGP: ಮಹಾರಾಷ್ಟ್ರದ ನೂತನ ಡಿಜಿಪಿ ಆಗಿ ಐಪಿಎಸ್ ಅಧಿಕಾರಿ ಸಂಜಯ್ ವರ್ಮಾ ನೇಮಕ

12

Gadaga: ನರಿ-ನಾಯಿ, ತೋಳ-ನಾಯಿ ಮಿಶ್ರ ತಳಿ ಪತ್ತೆ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Anthamthana Kannada Movie: ಶೂಟಿಂಗ್‌ನತ್ತ ಅಣ್ತಮ್ತನ

Anthamthana Kannada Movie: ಶೂಟಿಂಗ್‌ನತ್ತ ಅಣ್ತಮ್ತನ

45 Movie: ಕರಾಟೆ ಗೊತ್ತುಂಟು, ಹತ್ತಿರ ಬಂದ್ರೆ ಜಾಗ್ರತೆ!

45 Movie: ಕರಾಟೆ ಗೊತ್ತುಂಟು, ಹತ್ತಿರ ಬಂದ್ರೆ ಜಾಗ್ರತೆ!

6

Director Guruprasad: ಗುರುಪ್ರಸಾದ್‌ಗೆ ಸಾಲ ಕೊಟ್ಟವರ ತನಿಖೆಗೆ ಸಿದ್ಧತೆ

Sandalwood: ಕರಾವಳಿ ಸಂಸ್ಕೃತಿ ಸುತ್ತ ದಿಂಸೋಲ್‌

Sandalwood: ಕರಾವಳಿ ಸಂಸ್ಕೃತಿ ಸುತ್ತ ದಿಂಸೋಲ್‌

Bhairathi Ranagal Trailer: ʼರೋಣಪುರʼದ ರಣ ಬೇಟೆಗಾರ ಈ ʼಭೈರತಿ ರಣಗಲ್ʼ; ಟ್ರೇಲರ್‌ ಔಟ್

Bhairathi Ranagal Trailer: ʼರೋಣಪುರʼದ ರಣ ಬೇಟೆಗಾರ ಈ ʼಭೈರತಿ ರಣಗಲ್ʼ; ಟ್ರೇಲರ್‌ ಔಟ್

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

13

Kanguva: 10 ಸಾವಿರಕ್ಕೂ ಹೆಚ್ಚಿನ ಸ್ಕ್ರೀನ್‌ನಲ್ಲಿ ಅದ್ಧೂರಿಯಾಗಿ ರಿಲೀಸ್‌ ಆಗಲಿದೆ ʼಕಂಗುವʼ

7

Urwa: ಬಾಯ್ದೆರೆದ ಕಾಂಕ್ರೀಟ್‌ ಚೇಂಬರ್‌ಗಳಿಗೆ ಬಿತ್ತು ಮುಚ್ಚಳ

Bypolls: ಯಡಿಯೂರಪ್ಪರನ್ನು ರಾಜಕೀಯವಾಗಿ ಮುಗಿಸಲು ಬೊಮ್ಮಾಯಿ ಪ್ಲ್ಯಾನ್:‌ ಸಿದ್ದರಾಮಯ್ಯ

Bypolls: ಯಡಿಯೂರಪ್ಪರನ್ನು ರಾಜಕೀಯವಾಗಿ ಮುಗಿಸಲು ಬೊಮ್ಮಾಯಿ ಪ್ಲ್ಯಾನ್:‌ ಸಿದ್ದರಾಮಯ್ಯ

Shirola: ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಿಬ್ಬಂದಿ ಕೊರತೆ… ರೋಗಿಗಳ ಪರದಾಟ

Shirola: ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಿಬ್ಬಂದಿ ಕೊರತೆ… ರೋಗಿಗಳ ಪರದಾಟ

6

Karkala: ದುರ್ಗಾ ಗ್ರಾಮ ಪಂಚಾಯತ್; ರಸ್ತೆ ಸಂಪೂರ್ಣ ದುರವಸ್ಥೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.