ಹರೀಶ್‌ ರಾಜ್‌ ಈಗ ಕಿಲಾಡಿ ಪೊಲೀಸ್‌

Team Udayavani, Jun 16, 2018, 5:10 PM IST

khiladi-police-1.jpg

“ಶ್ರೀ ಸತ್ಯನಾರಾಯಣ’ ಚಿತ್ರದ ನಂತರ ಹರೀಶ್‌ ರಾಜ್‌ ಇನ್ನೊಂದು ಚಿತ್ರದೊಂದಿಗೆ ಬಂದಿದ್ದಾರೆ. ಈ ಮಧ್ಯೆ ಅವರು ಎಲ್ಲಿ ಮಾಯವಾಗಿದ್ದರು ಎಂಬ ಪ್ರಶ್ನೆ ಬರಬಹುದು. ತಮಿಳು, ಮಲಯಾಳಂ, ಕೊಡವ ಚಿತ್ರಗಳಲ್ಲಿ ಬಿಝಿ ಇದ್ದರಂತೆ. ಮಣಿರತ್ನಂ ನಿರ್ದೇಶನದ “ಕಾಟ್ರಾ ವಿಳೆಯಾಡೈ’ ಚಿತ್ರದಲ್ಲಿ ಅಭಿನಯಿಸಿದ ಹರೀಶ್‌, ಆ ನಂತರ ಮಲಯಾಳಂನ “ಬಿ-ಟೆಕ್‌’ ಎಂಬ ಚಿತ್ರದಲ್ಲಿ ವಿಲನ್‌ ಆಗಿ ಕಾಣಿಸಿಕೊಂಡಿದ್ದರಂತೆ. ಜೊತೆಗೆ ಕೊಡವ ಭಾಷೆಯಲ್ಲಿ “ಮೂಗ’ ಎಂಬ ಚಿತ್ರವನ್ನೂ ಸದ್ದಿಲ್ಲದೆ ಮಾಡಿ ಮುಗಿಸಿದ್ದಾರೆ.

ಈಗ ಅವರು “ಕಿಲಾಡಿ ಪೊಲೀಸ್‌’ ಎಂಬ ಚಿತ್ರವನ್ನು ಕನ್ನಡದಲ್ಲಿ ಮಾಡಿದ್ದಾರೆ. ಈ ಚಿತ್ರದಲ್ಲಿ ಅವರು ಬರೀ ಹೀರೋ ಅಷ್ಟೇ ಅಲ್ಲ, ನಿರ್ದೇಶನವನ್ನೂ ಮಾಡಿದ್ದಾರೆ. ಇದು ಅವರ ನಿರ್ಮಾಣ ಮತ್ತು ನಿರ್ದೇಶನದ ಐದನೆಯ ಚಿತ್ರ. “ಕಲಾಕಾರ್‌’ನಿಂದ ನಿರ್ದೇಶಕರಾದ ಅವರು, ಆ ನಂತರ “ಗನ್‌’, “ಶ್ರೀ ಸತ್ಯನಾರಾಯಣ’, “ಮೂಗ’ ಚಿತ್ರವನ್ನು ನಿರ್ದೇಶಿಸಿದ್ದರು. ಈಗ “ಕಿಲಾಡಿ ಪೊಲೀಸ್‌’ ನಿರ್ಮಿಸಿ-ನಿರ್ದೇಶಿಸಿರುವುದಷ್ಟೇ ಅಲ್ಲ, ಆ ಚಿತ್ರದಲ್ಲಿ ಹೀರೋ ಆಗಿಯೂ ನಟಿಸಿದ್ದಾರೆ.

ಇದು ತಮಿಳಿನಲ್ಲಿ 2014ರಲ್ಲಿ ತೆರೆಗೆ ಬಂದ “ತಿರುಡನ್‌ ಪೊಲೀಸ್‌’ ಎಂಬ ಚಿತ್ರದ ರೀಮೇಕ್‌. ಈ ಚಿತ್ರದಲ್ಲಿ ಹರೀಶ್‌ ಪೊಲೀಸ್‌ ಪೇದೆಯಾಗಿ ಕಾಣಿಸಿಕೊಂಡಿದ್ದು, ತಂದೆ-ಮಗನ ಸಂಬಂಧದ ಸುತ್ತ ಚಿತ್ರ ಸುತ್ತುತ್ತದಂತೆ. “ತಂದೆ-ಮಗನ ಸೆಂಟಿಮೆಂಟ್‌ ಚಿತ್ರ ಇದು. ಇಲ್ಲಿ ನನ್ನ ತಂದೆಯಾಗಿ ಶ್ರೀನಿವಾಸಮೂರ್ತಿ ಅವರು ಕಾಣಿಸಿಕೊಳ್ಳುತ್ತಿದ್ದಾರೆ. ಚಿತ್ರದಲ್ಲಿ ಜವಾಬ್ದಾರಿ ಅರಿತುಕೊಳ್ಳುವ ಮಗನ ಪಾತ್ರ ನನ್ನದು. ಕಾರ್ತಿಕ್‌ ರಾಜು ಎನ್ನುವವರು ಕಥೆ ಬರೆದು, ಅದನ್ನು ಇಲ್ಲಿನ ನೇಟಿವಿಟಿಗೆ ತಕ್ಕ ಹಾಗೆ ಬದಲಾಯಿಸಿಕೊಳ್ಳಲಾಗಿದೆ.

ಮೂಲ ಚಿತ್ರದಲ್ಲಿ ದಿನೇಶ್‌ ಅವರು ಮಾಡಿದ ಪಾತ್ರವನ್ನು ನಾನು ಇಲ್ಲಿ ಮಾಡುತ್ತಿದ್ದೇನೆ. ಇಲ್ಲಿ ನನ್ನದು ಕಾನ್‌ಸ್ಟಬಲ್‌ ಪಾತ್ರ. ಚಿತ್ರದಲ್ಲಿ ನನ್ನ ತಂದೆಯೂ ಪೇದೆಯಾಗಿರುತ್ತಾರೆ. ಅವರಿಬ್ಬರ ನಡುವಿನ ಸಂಬಂಧ ಹಾಗೂ ಬಾಂಧವ್ಯದ ಸಿನಿಮಾ ಇದು’ ಎನ್ನುತ್ತಾರೆ ಹರೀಶ್‌ ರಾಜ್‌. ಈಗಾಗಲೇ ಚಿತ್ರದ ಬಹುತೇಕ ಚಿತ್ರೀಕರಣ ಮುಗಿದಿದ್ದು, ಹಾಡುಗಳು ಮಾತ್ರ ಬಾಕಿ ಇವೆಯಂತೆ. ಚಿತ್ರದಲ್ಲಿ ಹರೀಶ್‌ ರಾಜ್‌ಗೆ ನಾಯಕಿಯಾಗಿ ಸಾನ್ವಿ ಪೊನ್ನಮ್ಮ ನಟಿಸುತ್ತಿದ್ದು, ಮಿಕ್ಕಂತೆ ಶ್ರೀನಿವಾಸಮೂರ್ತಿ, ಪದ್ಮಾ ವಾಸಂತಿ, ಸುಚೇಂದ್ರ ಪ್ರಸಾದ್‌, ಮುನಿ, ಗಿರಿ, ಮೋಹನ್‌ ಜುನೇಜ, ಜೆನ್ನೀಫ‌ರ್‌ ಮುಂತಾದವರು ಈ ಚಿತ್ರದಲ್ಲಿ ನಟಿಸಿದ್ದಾರೆ.

ಇನ್ನು ದೀಪಕ್‌ ಕುಮಾರ್‌ ಅವರ ಛಾಯಾಗ್ರಹಣ, ಎಲ್ವಿನ್‌ ಜೋಶ್ವಾ ಅವರ ಸಂಗೀತ ಚಿತ್ರಕ್ಕಿದ್ದು, ಡಿಫ‌ರೆಂಟ್‌ ಡ್ಯಾನಿ ಈ ಚಿತ್ರಕ್ಕೆ ಸಾಹಸ ನಿರ್ದೇಶಕರಾಗಿ ಕೆಲಸ ಮಾಡಿದ್ದಾರೆ. ಈ ಚಿತ್ರವು ಹಬ್ಬದ ಸೀಸನ್‌ನಲ್ಲಿ ಬಿಡುಗಡೆಯಾಗುವ ಸಾಧ್ಯತೆ ಇದೆ. ಇದಲ್ಲದೆ ಗಣೇಶ್‌ ಅಭಿನಯದ “ಆರೆಂಜ್‌’ ಚಿತ್ರದಲ್ಲೂ ಒಂದು ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿರುವ ಹರೀಶ್‌ ರಾಜ್‌, ಮುಂದಿನ ದಿನಗಳಲ್ಲಿ ಇನ್ನಷ್ಟು ಒಳ್ಳೆಯ ಪಾತ್ರಗಳಿಗೆ ಕಾಯುತ್ತಿದ್ದಾರೆ.

ಟಾಪ್ ನ್ಯೂಸ್

Vijayapura: ಮಹಾನಗರ ಪಾಲಿಕೆ ಉಪ ಚುನಾವಣೆ… ವಾರ್ಡ್ ನಂ.29ರಲ್ಲಿ ಬಿಜೆಪಿ ಗೆಲುವು

Vijayapura: ಮಹಾನಗರ ಪಾಲಿಕೆ ಉಪ ಚುನಾವಣೆ… ವಾರ್ಡ್ ನಂ.29ರಲ್ಲಿ ಬಿಜೆಪಿ ಗೆಲುವು

By Election… ಕಮಲಕ್ಕೊಂದು ಕೈಗೊಂದು

By Election: ಕೊಪ್ಪಳ ನಗರಸಭೆ ಉಪಚುನಾವಣೆ… ಕಮಲಕ್ಕೊಂದು ಕೈಗೊಂದು ಗೆಲುವು

Arrested: ಕಾರು ಬಾಡಿಗೆ ಪಡೆದಿದ್ದ ವಿದ್ಯಾರ್ಥಿಗಳ ಅಪಹರಿಸಿ ಸುಲಿಗೆ; ಮೂವರ ಬಂಧನ

Arrested: ಕಾರು ಬಾಡಿಗೆ ಪಡೆದಿದ್ದ ವಿದ್ಯಾರ್ಥಿಗಳ ಅಪಹರಿಸಿ ಸುಲಿಗೆ; ಮೂವರ ಬಂಧನ

ಬೆಳ್ತಂಗಡಿ: ಗ್ರಾಪಂ 3ಸದಸ್ಯ ಸ್ಥಾನಕ್ಕೆ ಉಪ ಚುನಾವಣೆ, ಕಾಂಗ್ರೆಸ್ ಬೆಂಬಲಿತ 3ಅಭ್ಯರ್ಥಿಗಳ ಜಯ

ಬೆಳ್ತಂಗಡಿ: ಗ್ರಾಪಂ 3ಸದಸ್ಯ ಸ್ಥಾನಕ್ಕೆ ಉಪ ಚುನಾವಣೆ, ಕಾಂಗ್ರೆಸ್ ಬೆಂಬಲಿತ 3ಅಭ್ಯರ್ಥಿಗಳ ಜಯ

Video: ಸಿಕ್ಕ ಸಿಕ್ಕವರನ್ನು ಎತ್ತಿ ಬಿಸಾಕಿದ ಗೂಳಿ… 3 ಗಂಟೆಗಳ ಕಾರ್ಯಾಚರಣೆ ಬಳಿಕ ಸೆರೆ

Video: ಸಿಕ್ಕ ಸಿಕ್ಕವರನ್ನು ಎತ್ತಿ ಬಿಸಾಕಿದ ಗೂಳಿ… 3 ಗಂಟೆಗಳ ಕಾರ್ಯಾಚರಣೆ ಬಳಿಕ ಸೆರೆ

BBK11: ಮೋಕ್ಷಿತಾ ಎರಡು ತಲೆ ನಾಗರಹಾವು ಎಂದ ತ್ರಿವಿಕ್ರಮ್; ನಾಮಿನೇಟ್‌ ವಿಚಾರವಾಗಿ ವಾಗ್ವಾದ

BBK11: ಮೋಕ್ಷಿತಾ ಎರಡು ತಲೆ ನಾಗರಹಾವು ಎಂದ ತ್ರಿವಿಕ್ರಮ್; ನಾಮಿನೇಟ್‌ ವಿಚಾರವಾಗಿ ವಾಗ್ವಾದ

Udaipur Palace: ಉತ್ತರಾಧಿಕಾರ ವಿಚಾರದಲ್ಲಿ ಉದಯಪುರ ಅರಮನೆಯಲ್ಲಿ ಸಂಘರ್ಷ: ಮೂವರಿಗೆ ಗಾಯ

Udaipur Palace: ರಾಜಮನೆತನದ ಎರಡು ಗುಂಪುಗಳ ನಡುವೆ ಘರ್ಷಣೆ: ಮೂವರಿಗೆ ಗಾಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

kiran raj’s Megha movie

‌Megha Movie: ನಾನು ಎಂಟು ಸಾರಿ ಕೇಳಿದ ಕಥೆಯಿದು…: ಕಿರಣ್‌ ರಾಜ್

Sudeep: ‘Max’ release date fixed: Production company wakes up to Kichchan’s anger

Sudeep: ʼಮ್ಯಾಕ್ಸ್‌ʼ ರಿಲೀಸ್‌ ದಿನ ಫಿಕ್ಸ್: ಕಿಚ್ಚನ ಸಿಟ್ಟಿಗೆ ಎಚ್ಚೆತ್ತ ನಿರ್ಮಾಣ ಸಂಸ್ಥೆ

BBK11: ಕಣ್ಣೀರುಡುತ್ತಲೇ ಬಿಗ್ ಬಾಸ್ ಮನೆಯಿಂದ ಆಚೆ ಬಂದ ಧರ್ಮ ಕೀರ್ತಿರಾಜ್

BBK11: ಕಣ್ಣೀರುಡುತ್ತಲೇ ಬಿಗ್ ಬಾಸ್ ಮನೆಯಿಂದ ಆಚೆ ಬಂದ ಧರ್ಮ ಕೀರ್ತಿರಾಜ್

Vijay Raghavendra is in Rudrabhishekam Movie

Kannada Cinema: ‘ರುದ್ರಾಭಿಷೇಕಂ’ನಲ್ಲಿ ವಿಜಯ್‌ ರಾಘವೇಂದ್ರ

Shivaraj-Kumar

Health Issue: ಸರ್ಜರಿಗಾಗಿ ಮುಂದಿನ ತಿಂಗಳು ಅಮೆರಿಕಕ್ಕೆ ಹೋಗುವೆ: ನಟ ಶಿವರಾಜ್‌ಕುಮಾರ್‌

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Vijayapura: ಮಹಾನಗರ ಪಾಲಿಕೆ ಉಪ ಚುನಾವಣೆ… ವಾರ್ಡ್ ನಂ.29ರಲ್ಲಿ ಬಿಜೆಪಿ ಗೆಲುವು

Vijayapura: ಮಹಾನಗರ ಪಾಲಿಕೆ ಉಪ ಚುನಾವಣೆ… ವಾರ್ಡ್ ನಂ.29ರಲ್ಲಿ ಬಿಜೆಪಿ ಗೆಲುವು

By Election… ಕಮಲಕ್ಕೊಂದು ಕೈಗೊಂದು

By Election: ಕೊಪ್ಪಳ ನಗರಸಭೆ ಉಪಚುನಾವಣೆ… ಕಮಲಕ್ಕೊಂದು ಕೈಗೊಂದು ಗೆಲುವು

Arrested: ಕಾರು ಬಾಡಿಗೆ ಪಡೆದಿದ್ದ ವಿದ್ಯಾರ್ಥಿಗಳ ಅಪಹರಿಸಿ ಸುಲಿಗೆ; ಮೂವರ ಬಂಧನ

Arrested: ಕಾರು ಬಾಡಿಗೆ ಪಡೆದಿದ್ದ ವಿದ್ಯಾರ್ಥಿಗಳ ಅಪಹರಿಸಿ ಸುಲಿಗೆ; ಮೂವರ ಬಂಧನ

Crime: ಶೀಲ ಶಂಕಿಸಿ ಪತ್ನಿಯ ಹತ್ಯೆಗೈದಿದ್ದ ಪತಿಯನ್ನು ವಶಕ್ಕೆ ಪಡೆದ ಪೊಲೀಸರು 

Crime: ಶೀಲ ಶಂಕಿಸಿ ಪತ್ನಿಯ ಹತ್ಯೆಗೈದಿದ್ದ ಪತಿಯನ್ನು ವಶಕ್ಕೆ ಪಡೆದ ಪೊಲೀಸರು 

Leopard: ನೆಲಮಂಗಲ ಸಮೀಪ ಚಿರತೆ ಸೆರೆ: ನರಭಕ್ಷಕ ಇದೇನಾ? ವರದಿ ನಿರೀಕ್ಷೆ

Leopard: ನೆಲಮಂಗಲ ಸಮೀಪ ಚಿರತೆ ಸೆರೆ: ನರಭಕ್ಷಕ ಇದೇನಾ? ವರದಿ ನಿರೀಕ್ಷೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.