ಹರಿಪ್ರಿಯಾ ಅಭಿನಯದ “ಸೂಜಿದಾರ’ ಸೆಪ್ಟೆಂಬರ್ 3ರಿಂದ
Team Udayavani, Aug 23, 2017, 2:33 PM IST
ದಿನಕರ್ ತೂಗುದೀಪ ನಿರ್ದೇಶನದ ಹೊಸ ಚಿತ್ರವನ್ನು ಹರಿಪ್ರಿಯಾ ಇತ್ತೀಚೆಗಷ್ಟೇ ಒಪ್ಪಿಕೊಂಡಿದ್ದಾಗಿದೆ. ಈ ಮಧ್ಯೆ ಅವರು “ಸೂಜಿದಾರ’ ಎನ್ನುವ ಇನ್ನೊಂದು ಹೊಸ ಚಿತ್ರದಲ್ಲಿ ನಟಿಸುತ್ತಿದ್ದಾರೆ. ಈಗಾಗಲೇ ಚಿತ್ರದ ಫೋಟೋಶೂಟ್ ಆಗಿದ್ದು, ಸೆಪ್ಟೆಂಬರ್ 3ರಿಂದ ಚಿತ್ರೀಕರಣ ಪ್ರಾರಂಭವಾಗಲಿದೆ.
ಈ ಚಿತ್ರವನ್ನು ನಿರ್ದೇಶಿಸುತ್ತಿರುವವರು ಖ್ಯಾತ ರಂಗಕರ್ಮಿ ಮೌನೇಶ್ ಬಡಿಗೇರ್. ರಂಗಭೂಮಿಯಲ್ಲಿ ಹಲವು ವರ್ಷಗಳ ಕಾಲ ನಿರ್ದೇಶಕರಾಗಿ ಗುರುತಿಸಿಕೊಂಡ ಅವರು, ಕೆಲವು ಚಿತ್ರಗಳಿಗೆ ಹಿನ್ನೆಲೆಯಲ್ಲಿ ಕೆಲಸ ಮಾಡಿದ್ದರು. ಇದೀಗ ಮೊದಲ ಬಾರಿಗೆ ನಿರ್ದೇಶನಕ್ಕಿಳಿದಿದ್ದಾರೆ. ಕಥೆಗಾರ ಇಂದ್ರಕುಮಾರ್ ಅವರ ಸಣ್ಣಕಥೆಯು ಈ ಚಿತ್ರಕ್ಕೆ ಸ್ಫೂರ್ತಿ ಪಡೆದು, ಈ ಚಿತ್ರವನ್ನು ನಿರ್ದೇಶಿಸುವುದಕ್ಕೆ ಹೊರಟಿದ್ದಾರೆ.
ಚಿತ್ರವನ್ನು ನಿರ್ಮಿಸುತ್ತಿರುವವರು ಸಚೇಂದ್ರನಾಥ್ ನಾಯಕ್ ಮತ್ತು ಅಭಿಜಿತ್ ಕೋಟೆಗಾರ್. ಈ ಚಿತ್ರದಲ್ಲಿ ಹರಿಪ್ರಿಯಾ ಜೊತೆಗೆ ಯಶವಂತ್ ಶೆಟ್ಟಿ, ಅಚ್ಯುತ್ ಕುಮಾರ್, ಸುಚೇಂದ್ರ ಪ್ರಸಾದ್, ಚೈತ್ರ, ಹರೀಶ್ ಸಮಷ್ಠಿ, ನಾಗರಾಜ್ ಪತ್ತಾರ್ ಮುಂತಾದವರು ನಟಿಸುತ್ತಿದ್ದು, ಚಿತ್ರಕ್ಕೆ ಅಶೋಕ್ ವಿ. ರಾಮನ್ ಅವರ ಛಾಯಾಗ್ರಹಣ ಮತ್ತು ಭಿನ್ನಷಡ್ಜ ಅವರ ಸಂಗೀತವಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
GST: ಪರೀಕ್ಷಾ ಫಾರಂ ಮೇಲೆ ಜಿಎಸ್‌ಟಿ: ಸರಕಾರ ವಿರುದ್ಧ ಪ್ರಿಯಾಂಕಾ ವಾಗ್ಧಾಳಿ
JPC: ಒಂದು ರಾಷ್ಟ್ರ ಒಂದು ಚುನಾವಣೆ: ಜ.8ಕ್ಕೆ ಮೊದಲ ಜೆಪಿಸಿ ಸಭೆ
Udupi; ಗೀತಾರ್ಥ ಚಿಂತನೆ 134: ಮನುಷ್ಯ ದೇಹದೊಳಗೆ ಯಾವ ಜೀವವೂ ಇರಬಹುದು
Nitish Kumar ನೇತೃತ್ವದಲ್ಲೇ ಬಿಹಾರ ಚುನಾವಣೆಗೆ ಎನ್‌ಡಿಎ ಸ್ಪರ್ಧೆ: ಬಿಜೆಪಿ
Hindu Temple: ಸಂಭಲ್ ಬಳಿಕ ಬುಲಂದ್‌ಶಹರ್‌ನಲ್ಲಿ ಮತ್ತೊಂದು ಹಳೇ ದೇವಾಲಯ ಪತ್ತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.