ಹಾರರ್ ‘ತಾಯ್ತ’ ಚಿತ್ರದ ಟ್ರೇಲರ್ ಬಂತು
Team Udayavani, Aug 4, 2023, 1:35 PM IST
ಹರ್ಷಿಕಾ ಪೂಣಚ್ಛ ಮತ್ತು ರಿಯಾನ್ ಜೋಡಿಯಾಗಿ ಅಭಿನಯಿಸಿರುವ “ತಾಯ್ತ’ ಸಿನಿಮಾ ತೆರೆಗೆ ಬರಲು ಸಿದ್ಧವಾಗುತ್ತಿದೆ. “ಎಂ.ಎಸ್ ಪ್ರೊಡಕ್ಷನ್ಸ್’ ಬ್ಯಾನರ್‌ನಲ್ಲಿ ಶಾಹಿದ್ ಕಥೆ ಬರೆದು ನಿರ್ಮಿಸಿರುವ ಔಟ್ ಆ್ಯಂಡ್ ಹಾರರ್ ಥ್ರಿಲ್ಲರ್ ಕಥಾಹಂದರದ “ತಾಯ್ತ’ ಸಿನಿಮಾಕ್ಕೆ ಲಯ ಕೋಕಿಲ ಚಿತ್ರಕಥೆ, ಸಂಭಾಷಣೆ ಬರೆದು ನಿರ್ದೇಶನ ಮಾಡಿದ್ದಾರೆ.
ಈಗಾಗಲೇ ಸದ್ದಿಲ್ಲದೇ “ತಾಯ್ತ’ ಸಿನಿಮಾದ ಶೂಟಿಂಗ್ ಮತ್ತು ಪೋಸ್ಟ್ ಪ್ರೊಡಕ್ಷನ್ ಕೆಲಸಗಳನ್ನು ಪೂರ್ಣಗೊಳಿಸಿರುವ ಚಿತ್ರತಂಡ, ಇತ್ತೀಚೆಗೆ ಸಿನಿಮಾದ ಹಾಡುಗಳು ಮತ್ತು ಟ್ರೇಲರ್ ಬಿಡುಗಡೆ ಮಾಡಿತು. ನಟ ಸಾಧುಕೋಕಿಲ ಸೇರಿದಂತೆ ಸಿನಿಮಾ ಮತ್ತು ಇತರೆ ಕ್ಷೇತ್ರಗಳ ಹಲವು ಗಣ್ಯರು ಕಾರ್ಯಕ್ರಮದಲ್ಲಿ ಹಾಜರಿದ್ದು, ಚಿತ್ರತಂಡಕ್ಕೆ ಶುಭ ಕೋರಿದರು.
“ತಾಯ್ತ’ ಸಿನಿಮಾದ ಹಾಡುಗಳ ಬಿಡುಗಡೆಯ ಬಳಿಕ ಮಾತನಾಡಿದ ನಾಯಕಿ ಹರ್ಷಿಕಾ ಪೂಣಚ್ಛ, “ಇದೊಂದು ಸಂಪೂರ್ಣ ಹಾರರ್, ಥ್ರಿಲ್ಲರ್ ಸಿನಿಮಾ. ಮೊದಲ ಬಾರಿಗೆ ಹಾರರ್ ಸಿನಿಮಾದಲ್ಲಿ ಅಭಿನಯಿಸಿದ್ದು ನನಗೂ ಹೊಸ ಅನುಭವ. ನಮಗೆ ಗೊತ್ತಿಲ್ಲದ ಸ್ಥಳವೊಂದಕ್ಕೆ ಪ್ರವಾಸಕ್ಕೆ ಹೋದಾಗ, ಅಲ್ಲಿ ಏನೇನು ಘಟನೆಗಳು ನಡೆಯುತ್ತವೆ ಎಂಬುದನ್ನು ಈ ಸಿನಿಮಾದಲ್ಲಿ ಥ್ರಿಲ್ಲಿಂಗ್ ಆಗಿ ಹೇಳಲಾಗಿದೆ. ನಾನು ಈ ಸಿನಿಮಾದಲ್ಲಿ ಕಾಲೇಜು ಹುಡುಗಿಯ ಪಾತ್ರದಲ್ಲಿ ಕಾಣಿಸಿಕೊಂಡಿದ್ದೇನೆ. ಸಿನಿಮಾ ತುಂಬ ಚೆನ್ನಾಗಿ ಬಂದಿದೆ’ ಎಂದು ತಮ್ಮ ಪಾತ್ರ ಪರಿಚಯ ಮಾಡಿಕೊಟ್ಟರು.
ಸಿನಿಮಾದ ಬಗ್ಗೆ ಮಾತನಾಡಿದ ನಟ ಕಂ ನಿರ್ದೇಶಕ ಲಯ ಕೋಕಿಲ, “ಒಂದು ದಿನದಲ್ಲಿ ನಡೆಯುವ ಘಟನೆಗಳ ಸುತ್ತ ಇಡೀ ಸಿನಿಮಾದ ಕಥೆ ನಡೆಯುತ್ತದೆ. ಒಂದಷ್ಟು ಯೂಥ್ಸ್ ಮೋಜು-ಮಸ್ತಿಗಾಗಿ ತಮಗೆ ಗೊತ್ತಿಲ್ಲದ ಸ್ಥಳಕ್ಕೆ ಹೋದಾದ ಅಲ್ಲಿ ಏನೇನು ತೊಂದರೆಗೆ ಸಿಲುಕಿಕೊಳ್ಳುತ್ತಾರೆ. ಅಂತಿಮವಾಗಿ ಅದರಿಂದ ಹೊರಬರುತ್ತಾರಾ? ಇಲ್ಲಾವಾ? ಎಂಬುದೇ ಸಿನಿಮಾದ ಕಥಾಹಂದರ. ಚಿಕ್ಕಮಗಳೂರಿನ ಸುತ್ತಮುತ್ತಲಿನ ಸುಂದರ ತಾಣಗಳಲ್ಲಿ ಸಿನಿಮಾದ ಶೂಟಿಂಗ್ ಮಾಡಲಾಗಿದೆ’ ಎಂದು ವಿವರಣೆ ನೀಡಿದರು.
ಜಿ. ಎಸ್. ಕಾರ್ತಿಕ ಸುಧನ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
BGT ಸೋಲು; ಇಂಗ್ಲೆಂಡ್ ವಿರುದ್ದದ ಸರಣಿಗೆ ಕೊಹ್ಲಿ ಸ್ಥಾನ ಉಳಿಸಿಕೊಳ್ಳಲು ಸಾಧ್ಯವೇ?
Readers: ಓದುವ ಬಾರಾ ಓ ಜೊತೆಗಾರ… (ಅ)ಪರಿಚಿತ ಓದುಗರ ಕಥಾ ಕಾಲಕ್ಷೇಪ
ದುಷ್ಟ ಶಕ್ತಿಗಳಿಂದ ದೇಶದ ನೆಮ್ಮದಿ ಕೆಡಿಸಲು ಧರ್ಮ-ಜಾತಿಯ ದುರ್ಬಳಕೆ: ಸಿದ್ದರಾಮಯ್ಯ
Shivamogga: ಮಾಂಗಲ್ಯ ಸರ ಕಿತ್ತು ಪರಾರಿಯಾದ ಖರ್ತನಾಕ್ ಕಳ್ಳರು; ಸಿಸಿಟಿವಿಯಲ್ಲಿ ಸೆರೆ
Mollywood: ʼಮಾರ್ಕೊʼ ಬಳಿಕ ಮೋಹನ್ ಲಾಲ್ ನಿರ್ದೇಶನದ ʼಬರೋಜ್ʼ ಚಿತ್ರಕ್ಕೂ ಪೈರಸಿ ಕಾಟ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.