Harshika Poonachha ದಂಪತಿ ಮೇಲೆ ಹಲ್ಲೆ; ಇಬ್ಬರ ವಿರುದ್ಧ ಕೇಸ್ ದಾಖಲು
Team Udayavani, Apr 23, 2024, 11:44 AM IST
ಬೆಂಗಳೂರು: ಪಾರ್ಕಿಂಗ್ ವಿಚಾರಕ್ಕೆ ನಟಿ ಹರ್ಷಿಕಾ ಪೂಣಚ್ಚ ದಂಪತಿ ಮೇಲೆ ಹಲ್ಲೆ ನಡೆಸಿದ ಸಂಬಂಧ ಪುಲಕೇಶಿನಗರ ಠಾಣೆಯಲ್ಲಿ ಇಬ್ಬರು ಅಪರಿಚಿತರ ವಿರುದ್ಧ ಪ್ರಕರಣ ದಾಖಲಾಗಿದೆ.
ನಟಿ ಹರ್ಷಿಕಾ ಪತಿ ಭುವನ್ ಪೊನಣ್ಣ ನೀಡಿದ ದೂರು ಆಧರಿಸಿ ಎಫ್ಐಆರ್ ದಾಖಲಿಸಿರುವ ಪೊಲೀಸರು ಆರೋಪಿಗಳಿ ಗಾಗಿ ಶೋಧ ಕಾರ್ಯ ನಡೆಸುತ್ತಿದ್ದಾರೆ.
ಭುವನ್ ದಂಪತಿ ಏ.2ರಂದು ಪುಲಕೇಶಿನಗರದ ಮಾಸ್ಕ್ ರಸ್ತೆಯಲ್ಲಿರುವ ಹೋಟೆಲ್‌ಗೆ ಕುಟುಂಬ ಸಮೇತ ಊಟಕ್ಕೆ ಹೋಗಿದ್ದರು. ಊಟ ಮುಗಿಸಿ ದಂಪತಿ ಪಾರ್ಕಿಂಗ್‌ನಲ್ಲಿದ್ದ ಕಾರನ್ನು ಹಿಂತೆಗೆದುಕೊಳ್ಳುವಾಗ ಕಿಡಿಗೇಡಿಯೊಬ್ಬ ನಿಮ್ಮ ಕಾರು ದೊಡ್ಡದಾಗಿದೆ. ಏಕಾಏಕಿ ಕಾರು ಚಲಾಯಿಸಿದರೆ ನಮಗೆ ತಾಗಬಹುದು ಎಂದು ವಾದಿಸಿದ್ದಾರೆ. ಅದಕ್ಕೆ ಆಯ್ತು ದಾರಿ ಬಿಡಿ ನಾನು ಹೋಗಬೇಕು ಎಂದು ದೂರುದಾರ ಭುವನ್ ಪೊನ್ನಣ್ಣ ಹೇಳಿದರೂ, ಗಲಾಟೆ ಮುಂದುವರಿಸಿ ಕಾರಿನ ಕಿಟಕಿ ತೆಗೆದು ಹಲ್ಲೆಗೆ ಮುಂದಾಗಿ, ಚಿನ್ನದ ಸರ ಕಸಿದುಕೊಳ್ಳಲು ಯತ್ನಿಸಿದ್ದಾರೆ. ಬಳಿಕ ಹರ್ಷಿಕಾ ಮೊಬೈಲ್ ಕಸಿದುಕೊಳ್ಳಲು ಯತ್ನಿಸಿದ್ದಾರೆ. ಅದು ಸಾಧ್ಯವಾಗದಿದ್ದಾಗ ಹರ್ಷಿಕಾ ರನ್ನು ನೋಡಿ ಕನ್ನಡದವರು ಇಷ್ಟು ಬೆಳ್ಳಗೆ ಇರುವುದಿಲ್ಲ. ನಮ್ಮ ಏರಿಯಾ ಹುಡುಗಿಯನ್ನು ಕರೆದುಕೊಂಡು ಹೋಗುತ್ತಿದ್ದಾನೆ ಅಂತಾ ಕಾರನ್ನು ತಡೆದು ಡ್ಯಾಮೇಜ್ ಮಾಡಿದ್ದಾರೆ. ಅವರ ವರ್ತನೆಯನ್ನು ಪ್ರಶ್ನಿಸಿದಾಗ, ನಿಮ್ಮ ಕನ್ನಡ ಸ್ಟೈಲ್ ನೀವೇ ಇಟ್ಟುಕೊಳ್ಳಿ ಎಂದಿದ್ದಾರೆ. ತಮ್ಮ ಮೇಲೆ ದೌರ್ಜನ್ಯ ನಡೆಸಿದ ವ್ಯಕ್ತಿಗಳು ಹಿಂದಿ, ಉರ್ದು ಮತ್ತು ಕೆಲವರು ಅರ್ಧಂಬರ್ಧ ಕನ್ನಡದಲ್ಲಿ ಮಾತನಾಡುತ್ತಿದ್ದರು. ಆ ಅಪರಿಚಿತ ವ್ಯಕ್ತಿಗಳ ವಿರುದ್ಧ ಕಾನೂನು ಕ್ರಮಕೈಗೊಳ್ಳುವಂತೆ ಭುವನ್ ಎಂದು ದೂರಿನಲ್ಲಿ ಕೋರಿದ್ದಾರೆ.
ಪ್ರಕರಣ ದಾಖಲಿಸಿಕೊಂಡು ತನಿಖೆ ಚುರುಕುಗೊಳಿಸಿರುವ ಪೊಲೀಸರು ಮೊಬೈಲ್‌ನಲ್ಲಿ ಸೆರೆಹಿಡಿರುವ ಇಬ್ಬರು ವ್ಯಕ್ತಿಗಳ ಭಾವಚಿತ್ರ ಆಧರಿಸಿ ಕಿಡಿಗೇಡಿಗಳ ಹುಡುಕಾಟ ಆರಂಭಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
N.Maharajan: ವಲ್ಲರಸು ನಿರ್ದೇಶಕರ ಚಿತ್ರದಲ್ಲಿ ಶಿವಣ್ಣ ಸಿನಿಮಾ
FIR 6to6 movie: ಆ್ಯಕ್ಷನ್ ಚಿತ್ರದಲ್ಲಿ ವಿಜಯ ರಾಘವೇಂದ್ರ
Darshan; ಶೂಟಿಂಗ್ ಗೆ ಡೆವಿಲ್ ರೆಡಿ; ಸತತ ಚಿತ್ರೀಕರಣಕ್ಕೆ ತಂಡ ನಿರ್ಧಾರ?
Gurunandan: ಡಿ.27ಕ್ಕೆ ತೆರೆಗೆ ಬರುತ್ತಿಲ್ಲ ʼರಾಜು ಜೇಮ್ಸ್ ಬಾಂಡ್’ ಚಿತ್ರ
Nodidavaru Enanthare Movie: ನವೀನ್ ಶಂಕರ್ ಚಿತ್ರದ ಟೀಸರ್ ಬಂತು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Tragedy: ಆನೆ ತುಳಿದು ಮಾವುತನ ಸಹಾಯಕ ಮೃತ್ಯು… ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ
Drama ಬಿಟ್ಟು ಅಂಬೇಡ್ಕರ್ ಅವರಿಗೆ ನಿರಂತರ ಅವಮಾನ ಮಾಡಿದ್ದಕ್ಕೆ ಕಾಂಗ್ರೆಸ್ ಕ್ಷಮೆ ಕೇಳಲಿ
You Tuber: ನೀಲಿ ಚಿತ್ರತಾರೆ ಆಗಲು ಪಿಎಚ್ ಡಿ ಕಲಿಕೆಯನ್ನೇ ತೊರೆದ ಖ್ಯಾತ ಯೂಟ್ಯೂಬರ್
UPSC ವಂಚನೆ ಪ್ರಕರಣ: ಪೂಜಾ ಖೇಡ್ಕರ್ ನಿರೀಕ್ಷಣಾ ಜಾಮೀನಿಗೆ ಹೈಕೋರ್ಟ್ ನಕಾರ
Alnavar: ಟಿಟಿ- ಕ್ಯಾಂಟರ್ ನಡುವೆ ಭೀಕರ ಅಪಘಾತ; ಸ್ಥಳದಲ್ಲಿಯೇ ಮೂವರ ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.