Hejjaru: ಪ್ರೀತಿಯಲ್ಲಿ ಇವನ್ಯಾರೋ… ಹೆಜ್ಜಾರು ಹಾಡುಹಬ್ಬ

Team Udayavani, Jun 3, 2024, 1:22 PM IST

hejjaru kannada movie songs

ಕನ್ನಡದಲ್ಲಿ ಈಗ ಒಂದಷ್ಟು ಕಂಟೆಂಟ್‌ ಸಿನಿಮಾಗಳು ಬರುತ್ತಿವೆ. ರೆಗ್ಯುಲರ್‌ ಪ್ಯಾಟರ್ನ್ ಬಿಟ್ಟು ಹೊಸದೇನನ್ನೋ ಪ್ರಯತ್ನಿಸುವ ಮೂಲಕ ಪ್ರೇಕ್ಷಕರನ್ನು ಸೆಳೆಯುತ್ತಿವೆ. ಸದ್ಯ ಇಂತಹ ಪ್ರಯತ್ನದಲ್ಲಿರುವ ಸಿನಿಮಾ “ಹೆಜ್ಜಾರು’. ಕನ್ನಡದ ಮೊಟ್ಟ ಮೊದಲ ಪ್ಯಾರಲಲ್‌ ಲೈಫ್ ಸಿನಿಮಾವಾಗಿ ಹೆಜ್ಜಾರು ಬಿಡುಗಡೆಯ ಹಂತಕ್ಕೆ ಬಂದಿದೆ. ಹರ್ಷಪ್ರಿಯ ಈ ಸಿನಿಮಾದ ನಿರ್ದೇಶಕರು.

ಪುಟ್ಟಗೌರಿ ಮದುವೆ, ಕಿನ್ನರಿ, ಜೊತೆ ಜೊತೆಯಲಿ, ಪುಟ್ಟಕ್ಕನ ಮಕ್ಕಳು, ಮಹಾನಾಯಕ ಅಂಬೇಡ್ಕರ್‌ ಹಾಗೂ ಹೆಬ್ಬುಲಿಯ ‘ದೇವರೆ ನೀನು ಇರೊ, ವಿಳಾಸವು ಬೇಕಾಗಿದೆ’ ಹೀಗೆ ಸಾಹಿತಿಯಾಗಿ, ಕಥೆಗಾರನಾಗಿ, ಸಂಭಾಷಣೆಕಾರನಾಗಿ ಹಾಗೂ ಹಲವಾರು ಹಿಟ್‌ ಧಾರಾವಾಹಿಗಳಿಗೆ ಕೆಲಸ ಮಾಡಿ ಸೈ ಎನಿಸಿಕೊಂಡಿದ್ದ ಹರ್ಷಪ್ರಿಯ ಅವರು ಹೆಜ್ಜಾರು ಮೂಲಕ ಸಿನಿಮಾ ನಿರ್ದೇಶಕಕ್ಕೆ ಇಳಿದಿದ್ದಾರೆ.  ಕಿರುತೆರೆಯಲ್ಲಿ ಹಲವಾರು ಹಿಟ್‌ ಧಾರಾವಾಹಿಗಳನ್ನು ನೀಡಿರುವ ಕೆ.ಎಸ್‌.ರಾಮ್‌ಜಿ ತಮ್ಮ ಗಗನ ಎಂಟರ್‌ಪ್ರೈಸಸ್‌ ಅಡಿಯಲ್ಲಿ “ಹೆಜ್ಜಾರು’ ನಿರ್ಮಾಣ ಮಾಡಿದ್ದಾರೆ.

ಭಗತ್‌ ಆಳ್ವ ಈ ಚಿತ್ರದ ನಾಯಕರು. ಶ್ವೇತಾ ಲಿಯೋನಿಲ್ಲಾ ಚಿತ್ರದ ನಾಯಕಿ. ಗೋಪಾಲಕೃಷ್ಣ ದೇಶಪಾಂಡೆ ಚಿತ್ರದಲ್ಲಿ ಪ್ರಮುಖ ಪಾತ್ರ ಮಾಡಿದ್ದಾರೆ. ಮೊದಲ ಬಾರಿಗೆ ನವೀನ್‌ ಕೃಷ್ಣ ಅವರು ವಿಲನ್‌ ಶೇಡ್‌ ನಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಉಳಿದಂತೆ ಅರುಣಾ ಬಾಲರಾಜ್‌, ಮುನಿರಾಜ್‌, ವಿನೋದ್‌ ಭಾರತಿ ಒಳಗೊಂಡಂತೆ ಬಹುತೇಕ ರಂಗಭೂಮಿಯ ಹೊಸ ಪ್ರತಿಭೆಗಳು ಹೆಜ್ಜಾರಿನ ಮೂಲಕ ಚಿತ್ರರಂಗಕ್ಕೆ ಪರಿಚಿತರಾಗುತ್ತಿದ್ದಾರೆ.

ಲೂಸಿಯಾ ಖ್ಯಾತಿಯ ಪೂರ್ಣಚಂದ್ರ ತೇಜಸ್ವಿ ಅವರ ಸಂಗೀತದಲ್ಲಿ ವಿಜಯ್‌ ಪ್ರಕಾಶ್‌ ಕಂಠಸಿರಿಯಲ್ಲಿ ಮೂಡಿಬಂದಿದ್ದ “ಏನೇ ಸಿಕ್ತು ಮಳ್ಳಿ ನಿಂಗೆ..ಎಂಬ ಪ್ಯಾಥೋ ಸಾಂಗ್‌ ಎಲ್ಲರ ಪ್ರಶಂಸೆಗೆ ಪಾತ್ರವಾಗಿತ್ತು. ಈಗ ಚಿತ್ರದ “ಇವನ್ಯಾರೋ…’ ಎಂಬ ರೊಮ್ಯಾಂಟಿಕ್‌ ಹಾಡು ಬಿಡುಗಡೆಯಾಗಿದ್ದು, ಮೆಚ್ಚುಗೆ ವ್ಯಕ್ತವಾಗುತ್ತಿದೆ. “ಮೊದಲ ಪ್ರೀತಿಯಲ್ಲಿ ಬಿದ್ದ ಕಾಲೇಜು ಹುಡುಗಿಯ ಭಾವನೆಗಳ ಕುರಿತಾದ ಹಾಡು ಇದಾಗಿದೆ.

ಚಿತ್ರಕ್ಕೆ ಅಮರ್‌ ಗೌಡ ಛಾಯಾಗ್ರಹಣವಿದೆ. ಮಂಗಳೂರು, ಉಪ್ಪಿನಂಗಡಿ, ಗುರುವಾಯನಕೆರೆ ಮುಂತಾದ ಕರಾವಳಿ ಪ್ರದೇಶಗಳಲ್ಲಿ ಹಾಗೂ ಮಲೆನಾಡಿನಲ್ಲಿ ಚಿತ್ರೀಕರಣವನ್ನು ಮಾಡಲಾಗಿದೆ. ಬಹುತೇಕ ಪೋಸ್ಟ್‌ ಪ್ರೊಡಕ್ಷನ್‌ ಕೆಲಸಗಳನ್ನು ಮುಗಿಸಿಕೊಂಡಿರುವ ಚಿತ್ರ ಶೀಘ್ರದಲ್ಲೇ ಬಿಡುಗಡೆಯಾಗಲಿದೆ.

ಟಾಪ್ ನ್ಯೂಸ್

Udyavara: ಹೊಳೆಯಲ್ಲಿ ತೇಲಿ ಬಂದ ಅಪರಿಚಿತ ಶವ

Udyavara: ಹೊಳೆಯಲ್ಲಿ ತೇಲಿ ಬಂದ ಅಪರಿಚಿತ ಶವ

Mangaluru: ಆಟೋ ವರ್ಕಶಾಪ್‌ನಿಂದ 93,540 ರೂ. ಕಳವು

Mangaluru: ಆಟೋ ವರ್ಕಶಾಪ್‌ನಿಂದ 93,540 ರೂ. ಕಳವು

Kundapura: ಅಕ್ರಮ ಮರಳು ಸಾಗಾಟ: ಟಿಪ್ಪರ್ ಸಹಿತ ಮರಳು ವಶಕ್ಕೆ ;ಚಾಲಕ ಪರಾರಿ

Kundapura: ಅಕ್ರಮ ಮರಳು ಸಾಗಾಟ: ಟಿಪ್ಪರ್ ಸಹಿತ ಮರಳು ವಶಕ್ಕೆ ;ಚಾಲಕ ಪರಾರಿ

Puttur: ಸ್ಕೂಲ್‌ ಬಸ್‌ಗೆ ಢಿಕ್ಕಿಯಾಗುವುದನ್ನು ತಪ್ಪಿಸಿ ಮನೆಗೆ ನುಗ್ಗಿದ ಖಾಸಗಿ ಬಸ್‌

Puttur: ಸ್ಕೂಲ್‌ ಬಸ್‌ಗೆ ಢಿಕ್ಕಿಯಾಗುವುದನ್ನು ತಪ್ಪಿಸಿ ಮನೆಗೆ ನುಗ್ಗಿದ ಖಾಸಗಿ ಬಸ್‌

Puttur: ಕಾರು ಚಾಲಕನಿಗೆ ಮೂರ್ಛೆ ರೋಗ: ಅಪಾಯದಿಂದ ಪಾರು

Puttur: ಕಾರು ಚಾಲಕನಿಗೆ ಮೂರ್ಛೆ ರೋಗ: ಅಪಾಯದಿಂದ ಪಾರು

Kasaragod: ಫ್ಯಾಶನ್‌ ಗೋಲ್ಡ್‌ ವಂಚನೆ ಪ್ರಕರಣ: ಪೂಕೋಯ ತಂಙಳ್‌ ಮತ್ತೆ ಬಂಧನ

Kasaragod: ಫ್ಯಾಶನ್‌ ಗೋಲ್ಡ್‌ ವಂಚನೆ ಪ್ರಕರಣ: ಪೂಕೋಯ ತಂಙಳ್‌ ಮತ್ತೆ ಬಂಧನ

1-kasturi

Actress Kasthuri; ನನ್ನನ್ನು ಕೆರಳಿದ ಬಿರುಗಾಳಿಯಂತೆ ಮಾಡಿದವರಿಗೆ ಧನ್ಯವಾದ!!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood: ಯಾರೋ ನಾ ಕಾಣೆ, ಚಂದಾಗೌಳೆ ಶಾಣೆ..: ಕಟ್ಲೆ ಹಾಡು ಬಂತು

Sandalwood: ಯಾರೋ ನಾ ಕಾಣೆ, ಚಂದಾಗೌಳೆ ಶಾಣೆ..: ಕಟ್ಲೆ ಹಾಡು ಬಂತು

Viral Photo: ಬಾಲಿವುಡ್‌ ನಟ ಆಮಿರ್‌ ಖಾನ್‌ ಭೇಟಿಯಾದ ಕಿಚ್ಚ ಸುದೀಪ್;‌ ಫ್ಯಾನ್ಸ್‌ ಥ್ರಿಲ್

Viral Photo: ಬಾಲಿವುಡ್‌ ನಟ ಆಮಿರ್‌ ಖಾನ್‌ ಭೇಟಿಯಾದ ಕಿಚ್ಚ ಸುದೀಪ್;‌ ಫ್ಯಾನ್ಸ್‌ ಥ್ರಿಲ್

Renukaswamy Case: ದರ್ಶನ್‌ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ

Renukaswamy Case: ದರ್ಶನ್‌ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ

ZEBRA Movie: ಜೀಬ್ರಾ ಮೇಲೆ ಡಾಲಿ ಕಣ್ಣು

ZEBRA Movie: ಜೀಬ್ರಾ ಮೇಲೆ ಡಾಲಿ ಕಣ್ಣು

Drone Prathap: ಸಿನಿಮಾರಂಗಕ್ಕೆ ಡ್ರೋನ್‌ ಪ್ರತಾಪ್ ಎಂಟ್ರಿ; ಮೊದಲ ಚಿತ್ರದಲ್ಲೇ ಹೀರೋ

Drone Prathap: ಸಿನಿಮಾರಂಗಕ್ಕೆ ಡ್ರೋನ್‌ ಪ್ರತಾಪ್ ಎಂಟ್ರಿ; ಮೊದಲ ಚಿತ್ರದಲ್ಲೇ ಹೀರೋ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Kumbhashi: ರಾ.ಹೆ.66 ಭೀಕರ ರಸ್ತೆ ಅಪಘಾತ : ಪ್ರಾಣಾಪಾಯದಿಂದ ಪಾರಾದ ಗಾಯಾಳುಗಳು !

Kumbhashi: ರಾ.ಹೆ.66 ಭೀಕರ ರಸ್ತೆ ಅಪಘಾತ: ಪ್ರಾಣಾಪಾಯದಿಂದ ಪಾರಾದ ಗಾಯಾಳುಗಳು !

Udyavara: ಹೊಳೆಯಲ್ಲಿ ತೇಲಿ ಬಂದ ಅಪರಿಚಿತ ಶವ

Udyavara: ಹೊಳೆಯಲ್ಲಿ ತೇಲಿ ಬಂದ ಅಪರಿಚಿತ ಶವ

Mangaluru: ಆಟೋ ವರ್ಕಶಾಪ್‌ನಿಂದ 93,540 ರೂ. ಕಳವು

Mangaluru: ಆಟೋ ವರ್ಕಶಾಪ್‌ನಿಂದ 93,540 ರೂ. ಕಳವು

Kundapura: ಅಕ್ರಮ ಮರಳು ಸಾಗಾಟ: ಟಿಪ್ಪರ್ ಸಹಿತ ಮರಳು ವಶಕ್ಕೆ ;ಚಾಲಕ ಪರಾರಿ

Kundapura: ಅಕ್ರಮ ಮರಳು ಸಾಗಾಟ: ಟಿಪ್ಪರ್ ಸಹಿತ ಮರಳು ವಶಕ್ಕೆ ;ಚಾಲಕ ಪರಾರಿ

Puttur: ಸ್ಕೂಲ್‌ ಬಸ್‌ಗೆ ಢಿಕ್ಕಿಯಾಗುವುದನ್ನು ತಪ್ಪಿಸಿ ಮನೆಗೆ ನುಗ್ಗಿದ ಖಾಸಗಿ ಬಸ್‌

Puttur: ಸ್ಕೂಲ್‌ ಬಸ್‌ಗೆ ಢಿಕ್ಕಿಯಾಗುವುದನ್ನು ತಪ್ಪಿಸಿ ಮನೆಗೆ ನುಗ್ಗಿದ ಖಾಸಗಿ ಬಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.