ನಾಳೆ ಕುಂದಾಪುರ-ಮಣಿಪಾಲ್‍ಗೆ ‘ಹೀರೋ’ ಚಿತ್ರತಂಡ
Team Udayavani, Mar 14, 2021, 6:55 PM IST
ಬೆಂಗಳೂರು: ನಟ ರಿಷಬ್ ಶೆಟ್ಟಿ ನಟಿಸಿರುವ ‘ಹೀರೋ’ ಚಿತ್ರತಂಡ ಸೋಮವಾರ (ಮಾ. 15) ಕುಂದಾಪುರ ಹಾಗೂ ಮಣಿಪಾಲ್‍ನಲ್ಲಿರುವ ಚಿತ್ರಮಂದಿರಗಳಿಗೆ ಭೇಟಿ ನೀಡಲಿದೆ.
ನಾಳೆ ಮಧ್ಯಾಹ್ನ1 ಗಂಟೆಗೆ ಮಣಿಪಾಲ್ ನ ಐನಾಕ್ಸ್ ಮಲ್ಟಿಪ್ಲೆಕ್ಸ್ , ಸಂಜೆ 4 ಗಂಟೆಗೆ ಉಡುಪಿಯ ಅಲಂಕಾರ್ ಚಿತ್ರಮಂದಿರ, ಸಂಜೆ 5 ಗಂಟೆಗೆ ಮಣಿಪಾಲ್‍ನ ಭಾರತ್ ಸಿನಿಮಾಸ್ ಹಾಗೂ ಸಂಜೆ 7.30 ಕ್ಕೆ ಕುಂದಾಪುರದ ಭಾರತ್ ಸಿನಿಮಾಸ್‍ಗಳಿಗೆ ‘ಹೀರೋ’ ಚಿತ್ರತಂಡ ಭೇಟಿ ನೀಡಲಿದೆ ಎಂದು ಚಿತ್ರದ ನಾಯಕ ನಟ ರಿಷಬ್ ಶೆಟ್ಟಿ ಟ್ವಿಟರ್ ನಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.
ಪೈರಸಿ ಕಾಟದ ನಡುವೆಯೂ ಚಿತ್ರಮಂದಿರಗಳಲ್ಲಿ ಹೀರೋ ಅಮೋಘ ಪ್ರದರ್ಶನ ಕಾಣುತ್ತಿದೆ. ಚಿತ್ರ ವಿಮರ್ಶಕರಿಂದ, ಅಭಿಮಾನಿಗಳಿಂದ ಮೆಚ್ಚುಗೆ ಪಡೆದುಕೊಂಡಿದೆ. ಲಾಕ್ ಡೌನ್ ವೇಳೆ ಚಿತ್ರತಂಡದ ಶ್ರಮದ ಫಲವಾಗಿ ಹೀರೋ ಅದ್ಭುತವಾಗಿ ಮೂಡಿ ಬಂದಿದೆ. ಚಿತ್ರಕತೆ, ಸ್ಕ್ರೀನ್‍ಪ್ಲೇ, ಹಾಡುಗಳು ಸಿನಿಮಾ ರಸಿಕರನ್ನು ಚಿತ್ರಮಂದಿರಗಳತ್ತ ಬರಸೆಳೆಯುತ್ತಿದೆ.
ರಾಜ್ಯಾದ್ಯಂತ ಭರ್ಜರಿ ಪ್ರದರ್ಶನ ಕಾಣುತ್ತಿರುವ ‘ಹೀರೋ’ 25ನೇ ದಿನದತ್ತ ದಾಪುಗಾಲಿಡುತ್ತಿದೆ. ಈ ಸಂತಸದ ಕ್ಷಣಗಳನ್ನು ಅಭಿಮಾನಿಗಳ ಜತೆ ಸಂಭ್ರಮಿಸುವ ನಿಟ್ಟಿನಲ್ಲಿ ಹೀರೋ ಚಿತ್ರತಂಡ ನಾಳೆ ಮಣಿಪಾಲ್ ಹಾಗೂ ಉಡುಪಿಗೆ ವಿಜಯಯಾತ್ರೆ ಹಮ್ಮಿಕೊಂಡಿದೆ.
ಇನ್ನು ಹೀರೋ ಸಿನಿಮಾದಲ್ಲಿ ರಿಷಬ್ ಶೆಟ್ಟಿ ನಾಯಕ ನಟರಾಗಿ ಕಾಣಿಸಿಕೊಂಡಿದ್ದಾರೆ. ಇವರಿಗೆ ನಾಯಕಿಯಾಗಿ ಗಾನವಿ ಲಕ್ಷ್ಮಣ ನಟಿಸಿದ್ದಾರೆ. ಅಜನೀಶ್ ಲೋಕನಾಥ್ ಸಂಗೀತ ಸಂಯೋಜಿಸಿದ್ದಾರೆ. ಎಂ.ಭರತ್ ರಾಜ್ ನಿರ್ದೇಶನದ ಹೀರೋ ಚಿತ್ರವನ್ನು ರಿಷಬ್ ಶೆಟ್ಟಿ ಫಿಲಂಸ್ ನಿರ್ಮಾಣ ಮಾಡಿದೆ.
ಇಲ್ ಕೇಳಿ.. ನಾಳೆ ನಾವು ಕುಂದಾಪುರ ಹಾಗೂ ಮಂಗಳೂರಿಗೆ ಬರ್ತಿದೀವಿ. #HeroTheFilm #Hero Running successfully pic.twitter.com/Q0sIgQVVbn
— Rishab Shetty (@shetty_rishab) March 14, 2021
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
N.Maharajan: ವಲ್ಲರಸು ನಿರ್ದೇಶಕರ ಚಿತ್ರದಲ್ಲಿ ಶಿವಣ್ಣ ಸಿನಿಮಾ
FIR 6to6 movie: ಆ್ಯಕ್ಷನ್ ಚಿತ್ರದಲ್ಲಿ ವಿಜಯ ರಾಘವೇಂದ್ರ
Darshan; ಶೂಟಿಂಗ್ ಗೆ ಡೆವಿಲ್ ರೆಡಿ; ಸತತ ಚಿತ್ರೀಕರಣಕ್ಕೆ ತಂಡ ನಿರ್ಧಾರ?
Gurunandan: ಡಿ.27ಕ್ಕೆ ತೆರೆಗೆ ಬರುತ್ತಿಲ್ಲ ʼರಾಜು ಜೇಮ್ಸ್ ಬಾಂಡ್’ ಚಿತ್ರ
Nodidavaru Enanthare Movie: ನವೀನ್ ಶಂಕರ್ ಚಿತ್ರದ ಟೀಸರ್ ಬಂತು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
N.Maharajan: ವಲ್ಲರಸು ನಿರ್ದೇಶಕರ ಚಿತ್ರದಲ್ಲಿ ಶಿವಣ್ಣ ಸಿನಿಮಾ
Sirsi: ಅರಣ್ಯವಾಸಿಗಳ 50,000 ಕ್ಕೂ ಮಿಕ್ಕಿ ಜಿ.ಪಿ.ಎಸ್ ನಕಾಶೆ ಅತಂತ್ರ: ರವಿಂದ್ರ ನಾಯ್ಕ
Hubli: ಕಾಂಗ್ರೆಸ್‌ನಲ್ಲಿ ಈಗ ಇರುವವರೆಲ್ಲ ನಕಲಿ ಗಾಂಧಿಗಳು..: ಪ್ರಹ್ಲಾದ ಜೋಶಿ
FIR 6to6 movie: ಆ್ಯಕ್ಷನ್ ಚಿತ್ರದಲ್ಲಿ ವಿಜಯ ರಾಘವೇಂದ್ರ
Birthday Party: ಬರ್ತ್‌ಡೇ ಪಾರ್ಟಿ ಮುಗಿಸಿ ಬರುತ್ತಿದ್ದ ಮೂವರನ್ನು ಗುಂಡಿಕ್ಕಿ ಹ*ತ್ಯೆ…
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.