ಹೊಂದಿಸಿ ಬರೆಯಲು ಐಶಾನಿ ರೆಡಿ
Team Udayavani, Apr 6, 2022, 1:20 PM IST
“ಹೊಂದಿಸಿ ಬರೆಯಿರಿ’- ಹೀಗೊಂದು ಸಿನಿಮಾ ಬರುತ್ತಿರುವ ವಿಚಾರ ನಿಮಗೆ ಗೊತ್ತಿರಬಹುದು. ಈಗ ಆ ಚಿತ್ರದ ಫಸ್ಟ್‌ಲುಕ್ ಟೀಸರ್ ಬಿಡುಗಡೆಯಾಗಿದೆ. ಟೀಸರ್ ನೋಡಿದವರಿಂದ ಮೆಚ್ಚುಗೆ ವ್ಯಕ್ತವಾಗುವ ಮೂಲಕ ಚಿತ್ರತಂಡ ಖುಷಿಯಾಗಿದೆ.
ಇಂಜಿನಿಯರಿಂಗ್ ಕಾಲೇಜ್ ಫ್ರೊಫೆಸರ್ ಆಗಿದ್ದ ರಾಮೇನಹಳ್ಳಿ ಜಗನ್ನಾಥ್ “ಹೊಂದಿಸಿ ಬರೆಯಿರಿ’ ಸಿನಿಮಾ ಮೂಲಕ ನಿರ್ದೇಕರಾಗಿ ಅದೃಷ್ಟ ಪರೀಕ್ಷೆಗಿಳಿದಿದ್ದಾರೆ. ನೆನಪು, ಕನಸು ಹಾಗೂ ವಾಸ್ತವ ಈ ಮೂರು ಪರಿಕಲ್ಪನೆಗಳ ಮೇಲೆ ಅನಾವರಣವಾಗುವ ಸಿನಿಮಾವೇ ಹೊಂದಿಸಿ ಬರೆಯಿರಿ.
ಅದರಂತೆ ಟೀಸರ್‌ನಲ್ಲಿ ಕಾಲೇಜು ನೆನಪುಗಳನ್ನು ಕಟ್ಟಿಕೊಡಲಾಗಿದ್ದು, ವಿದ್ಯಾರ್ಥಿ ಜೀವನದ ಏರಿಳಿತಗಳನ್ನು ತೋರಿಸಲಾಗಿದೆ. ಟೀಸರ್‌ನಲ್ಲಿ ಚೂರಿಕಟ್ಟೆ ಖ್ಯಾತಿಯ ಪ್ರವೀಣ್, ಗುಳ್ಟು ಖ್ಯಾತಿಯ ನವೀನ್, ವಾಸ್ತುಪ್ರಕಾರದಿಂದ ಪರಿಚಿತರಾದ ಐಶಾನಿ ಶೆಟ್ಟಿ, ಕೆಜಿಎಫ್ ಸಿನಿಮಾದಲ್ಲಿ ರಾಕಿಭಾಯ್‌ಗೆ ಅಮ್ಮನಾಗಿ ನಟಿಸಿದ್ದ ಅರ್ಚನಾ ಜೋಯಿಸ್, ಸಂಯುಕ್ತ ಹೊರನಾಡು, ಇಷ್ಟದೇವತೆ ಧಾರಾವಾಹಿಯ ಖ್ಯಾತಿಯ ಶ್ರೀಮಹಾದೇವ್, ಗಾಳಿಪಟ ಚಿತ್ರಖ್ಯಾತಿಯ ಭಾವನಾರಾವ್ ಹೀಗೆ ಹಲವು ಪ್ರತಿಭೆಗಳು ಮಿಂಚಿದ್ದಾರೆ.
ಈಗಾಗಲೇ “ಹೊಂದಿಸಿ ಬರೆಯಿರಿ’ ಸಿನಿಮಾದ ಶೂಟಿಂಗ್ ಕಂಪ್ಲೀಟ್ ಆಗಿದ್ದು, ಪೋಸ್ಟ್ ಪ್ರೊಡಕ್ಷನ್ ಕೆಲಸಗಳು ನಡೆಯುತ್ತಿವೆ. ಟಗರು ಖ್ಯಾತಿಯ ಮಾಸ್ತಿ, ಪೊಗರು ಖ್ಯಾತಿಯ ಪ್ರಶಾಂತ್ ರಾಜಪ್ಪ ಹಾಗೂ ಜಗನ್ನಾಥ್ ಸೇರಿದಂತೆ ಮೂವರು ಈ ಚಿತ್ರಕ್ಕೆ ಸಂಭಾಷಣೆ ಬರೆದಿದ್ದಾರೆ. “ಗುಳ್ಟು’ ಚಿತ್ರಕ್ಕೆ ಸಿನಿಮಾಟೋಗ್ರಫಿ ಮಾಡಿದ್ದ ಶಾಂತಿ ಸಾಗರ್ ಈ ಚಿತ್ರಕ್ಕೆ ಕ್ಯಾಮೆರಾ ಹಿಡಿದಿದ್ದಾರೆ. ಜೋ ಕೋಸ್ಟ ಸಂಗೀತ, ಕೆ ಕಲ್ಯಾಣ್, ಹೃದಯಶಿವ ಹಾಗೂ ನಿರ್ದೇಶಕ ರಾಮೇನಹಳ್ಳಿ ಜಗನ್ನಾಥ್ ಹಾಡುಗಳಿಗೆ ಸಾಹಿತ್ಯ ಬರೆದಿದ್ದಾರೆ. ದೊಡ್ಡ ತಾರಾಬಳಗವೇ ನಟಿಸಿರುವ “ಹೊಂದಿಸಿ ಬರೆಯಿರಿ’ ಸಿನಿಮಾವನ್ನು “ಸಂಡೇ ಸಿನಿಮಾಸ್’ ಬ್ಯಾನರ್ ನಡಿ ರಾಮೇನಹಳ್ಳಿ ಜಗನ್ನಾಥ್ ಹಾಗೂ ಅವರ ಸ್ನೇಹಿತರು ನಿರ್ಮಾಣ ಮಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Upendra: ʼಯುಐʼಗೆ ಸ್ಯಾಂಡಲ್‌ವುಡ್ ಸಾಥ್; ಉಪೇಂದ್ರ ಚಿತ್ರ ನೋಡಲು ಕಾತುರ
Shiva Rajkumar: ಚಿಕಿತ್ಸೆಗಾಗಿ ಅಮೆರಿಕದತ್ತ ಶಿವಣ್ಣ; ಚಿತ್ರರಂಗದ ಶುಭ ಹಾರೈಕೆ
BBK11: ಟಾಸ್ಕ್ ವಿಚಾರದಲ್ಲಿ ಫೈಯರ್ ಚೈತ್ರಾ ಠುಸ್.. ಮನೆಮಂದಿ ಸುಸ್ತು
BBK11: ಮತ್ತೆ ಬಿಗ್ ಬಾಸ್ ಮನೆಗೆ ಗೋಲ್ಡ್ ಸುರೇಶ್..? ವಿಡಿಯೋದಲ್ಲಿ ಸುಳಿವು
Sandalwood: ಕಣ್ಣಾ ಮುಚ್ಚೆ ಕಾಡೇ ಗೂಡೇ ತೆರೆಗೆ ಸಿದ್ಧ
MUST WATCH
ಹೊಸ ಸೇರ್ಪಡೆ
Chikkaballapur: 5 ವರ್ಷದಲ್ಲಿ 514 ತಾಯಿ-ಮಗು ಸಾವಿನ ಪ್ರಕರಣ!
ಪರ್ಯಾಯ ಶ್ರೀ ಪುತ್ತಿಗೆ ಶ್ರೀಕೃಷ್ಣ ಮಠ: ಸ್ಮೃತಿ ಪ್ರತಿಭಾ,ಗೀತಾ ತ್ರಯೋದಶಾವಧಾನ’ ಸಂಪನ್ನ
Video: ನ್ಯಾಯ ಕೇಳಲು ಬಂದ ವ್ಯಕ್ತಿಗೆ ಖಾಕಿಯಿಂದ 41 ಸೆಕೆಂಡ್‌ಗಳಲ್ಲಿ 31 ಬಾರಿ ಕಪಾಳ ಮೋಕ್ಷ
Atlee Kumar; ಸಲ್ಮಾನ್ ಖಾನ್ ಜತೆಗೆ ಅಟ್ಲಿ ಸಿನಿಮಾ
ಪ್ರಧಾನ ಸಂಪಾದಕ ನ್ಯೂಯಾರ್ಕ್ ನ ಬೆಂಕಿ ಬಸಣ್ಣ ವಿರಚಿತ ‘ವಿಶ್ವಕನ್ನಡ ಕೂಟಗಳ ಕೈಪಿಡಿ’ ಬಿಡುಗಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.