ಮಾರ್ಚ್ 30ಕ್ಕೆ ಹುಚ್ಚ-2
Team Udayavani, Mar 5, 2018, 11:08 AM IST
ನಿರ್ದೇಶಕ ಓಂ ಪ್ರಕಾಶ್ ರಾವ್ ಅಂದುಕೊಂಡಂತೆ ಆಗಿದ್ದರೆ ಅವರ ನಿರ್ದೇಶನದ “ಹುಚ್ಚ-2′ ಚಿತ್ರ ಕಳೆದ ವರ್ಷ ಸೆಪ್ಟೆಂಬರ್‌ಗೆ ತೆರೆಗೆ ಬರಬೇಕಿತ್ತು. ಆದರೆ, ಚಿತ್ರ ಮಾತ್ರ ತೆರೆಕಾಣಲೇ ಇಲ್ಲ. “ಹುಚ್ಚ-2′ ಕಥೆ ಏನಾಯಿತು, ಚಿತ್ರ ಬಿಡುಗಡೆ ಯಾವಾಗ ಎಂದು ಸಿನಿ ಪ್ರೇಮಿಗಳು ಮಾತನಾಡಿಕೊಳ್ಳುತ್ತಿರುವಾಗಲೇ ಚಿತ್ರತಂಡ “ನಾವ್ ರೆಡಿ’ ಎನ್ನುತ್ತಿದೆ.
ಹೌದು, ಕೊನೆಗೂ ಓಂ ಪ್ರಕಾಶ್ ರಾವ್ ನಿರ್ದೇಶನದ, ಎ.ಎಂ.ಉಮೇಶ್ ರೆಡ್ಡಿ ನಿರ್ಮಾಣದ ಚಿತ್ರ ಈಗ ಬಿಡುಗಡೆಯ ಹಂತಕ್ಕೆ ಬಂದಿದೆ. ಚಿತ್ರ ಮಾರ್ಚ್ 30 ರಂದು ತೆರೆಕಾಣಲಿದೆ. ಈಗಾಗಲೇ ಚಿತ್ರದ ಟ್ರೇಲರ್ ಬಿಡುಗಡೆಯಾಗಿದ್ದು, ಶಿವರಾಜಕುಮಾರ್ ಟ್ರೇಲರ್ ಬಿಡುಗಡೆ ಮಾಡಿದೆ. ಚಿತ್ರದ ಯುಟ್ಯೂಬ್ ಟ್ರೆಂಡಿಂಗ್‌ನಲ್ಲಿರುವುದರಿಂದ ಚಿತ್ರತಂಡ ಖುಷಿಯಾಗಿದ್ದು, ಸಿನಿಮಾವನ್ನು ಕೂಡಾ ಜನ ಇಷ್ಟಪಡುತ್ತಾರೆಂಬ ವಿಶ್ವಾಸ ಚಿತ್ರತಂಡದ್ದು.
ಚಿತ್ರದಲ್ಲಿ “ಮದರಂಗಿ’ ಕೃಷ್ಣ ನಾಯಕರಾಗಿ ನಟಿಸಿದ್ದು, ಶ್ರಾವ್ಯಾ ನಾಯಕಿ. ಉಳಿದಂತೆ ಚಿತ್ರದಲ್ಲಿ ಮಾಳವಿಕಾ, ಸಾಯಿಕುಮಾರ್ ಪ್ರಮುಖ ಪಾತ್ರ ಮಾಡಿದ್ದಾರೆ. ಇದು ಕೂಡಾ ಆ್ಯಕ್ಷನ್ -ಸೆಂಟಿಮೆಂಟ್ ಸಿನಿಮಾವಾಗಿದ್ದು, “ಹುಚ್ಚ’ ಚಿತ್ರದಂತೆ ಯಶಸ್ಸು ಕಾಣುವ ವಿಶ್ವಾಸ ಚಿತ್ರತಂಡಕ್ಕಿದೆ.
17 ವರ್ಷಗಳ ಹಿಂದೆ ಸುದೀಪ್ ನಾಯಕರಾಗಿದ್ದ “ಹುಚ್ಚ’ ಚಿತ್ರವನ್ನು ಓಂ ಪ್ರಕಾಶ್ ರಾವ್ ನಿರ್ದೇಶಿಸಿದ್ದರು. ಆ ಚಿತ್ರ ದೊಡ್ಡ ಮಟ್ಟದಲ್ಲಿ ಯಶಸ್ಸು ಕಂಡಿತ್ತು. ಈಗ “ಹುಚ್ಚ-2′ ಕೂಡಾ ಅದೇ ರೀತಿ ಯಶಸ್ಸು ಕಾಣುತ್ತದೆ ಎಂಬ ನಂಬಿಕೆಯಲ್ಲಿದೆ ಚಿತ್ರತಂಡ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Liquor Sale; ರಾಜ್ಯದಲ್ಲಿ ಒಂದೇ ದಿನ 408 ಕೋಟಿ ರೂ ಮೌಲ್ಯದ ಮದ್ಯ ಮಾರಾಟ ದಾಖಲೆ
S.Korea: ರನ್ ವೇಯಲ್ಲಿ ಸ್ಕಿಡ್ ಆಗಿ ಗೋಡೆಗೆ ಅಪ್ಪಳಿಸಿದ ವಿಮಾನ: ಇಲ್ಲಿದೆ ನೋಡಿ ವಿಡಿಯೋ
ICC: ಉದಯೋನ್ಮುಖ ಆಟಗಾರ್ತಿ ಪ್ರಶಸ್ತಿಗೆ ಕರ್ನಾಟಕದ ಶ್ರೇಯಾಂಕಾ ಹೆಸರು
World Rapid Chess Championship: ವಿಶ್ವ ರ‍್ಯಾಪಿಡ್ ಚೆಸ್.. ಅರ್ಜುನ್ ಜಂಟಿ ಅಗ್ರಸ್ಥಾನ
Plane Crash: ದಕ್ಷಿಣ ಕೊರಿಯಾದಲ್ಲಿ ವಿಮಾನ ಪತನ; 28 ಮಂದಿ ಮೃತ್ಯು, ಇಬ್ಬರು ಗಂಭೀರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.