“ಐ ಲವ್ ಯೂ’ ಚಿತ್ರಕ್ಕಾಯ್ತು ಟೆಸ್ಟ್ ಶೂಟ್
Team Udayavani, May 9, 2018, 9:00 PM IST
ಆರ್.ಚಂದ್ರು ನಿರ್ದೇಶನದಲ್ಲಿ ಉಪೇಂದ್ರ ಅವರು “ಐ ಲವ್ ಯೂ’ ಎಂಬ ಸಿನಿಮಾದಲ್ಲಿ ನಟಿಸುತ್ತಿರುವ ವಿಷಯ ಹೊಸದೇನಲ್ಲ. ಬುಧವಾರ ಆ ಚಿತ್ರಕ್ಕೆ ಟೆಸ್ಟ್ ಶೂಟ್ ಆಗಿದ್ದು, ಉಪೇಂದ್ರ ಅವರು ಸಿನಿಮಾದಲ್ಲಿ ಹೇಗೆ ಕಾಣುತ್ತಾರೆ ಎಂಬ ಸ್ಯಾಂಪಲ್ ಒಂದು ಬಿಡುಗಡೆಯಾಗಿದೆ. “ಐ ಲವ್ ಯೂ’ ಎಂಬ ಹೆಸರೇ ಹೇಳುವಂತೆ ಇದೊಂದು ಔಟ್ ಅಂಡ್ ಔಟ್ ಲವ್‌ಸ್ಟೋರಿ.
ಹಾಗಾದರೆ ಉಪೇಂದ್ರ ಈ ಚಿತ್ರದಲ್ಲಿ, ಈ ವಯಸ್ಸಲ್ಲಿ ಲವರ್ ಬಾಯ್ ಆಗುತ್ತಿದ್ದಾರಾ ಎಂದು ನೀವು ಕೇಳಬಹುದು. ಮೂಲಗಳ ಪ್ರಕಾರ, ಇದು “ಎ’, “ಉಪೇಂದ್ರ’ ಹಾಗೂ “ಪ್ರೀತ್ಸೆ’ ಶೈಲಿಯ ಲವ್‌ಸ್ಟೋರಿಯಾಗಿದ್ದು, ಉಪೇಂದ್ರ ಅವರ ಪಾತ್ರ ಕೂಡಾ ವಿಭಿನ್ನವಾಗಿದೆ ಎನ್ನಲಾಗಿದೆ. ಈ ಮೂರು ಶೈಲಿಯ ಜೊತೆಗೆ ಚಂದ್ರು ಅವರ ಶೈಲಿ ಇರಲಿದೆ ಎಂದು ಪ್ರತ್ಯೇಕವಾಗಿ ಹೇಳುವ ಅಗತ್ಯವಿಲ್ಲ.
“ಐ ಲವ್ ಯೂ’ ಚಿತ್ರದ ಮುಹೂರ್ತ ಮೇ 18 ರಂದು ನಡೆಯಲಿದೆ. ಅಂದಹಾಗೆ, ಈ ಚಿತ್ರ ಕನ್ನಡ ಹಾಗೂ ತೆಲುಗು ಎರಡೂ ಭಾಷೆಯಲ್ಲೂ ತಯರಾಗುತ್ತಿದೆ. ಈಗಾಗಲೇ ಉಪೇಂದ್ರ ತೆಲುಗಿನಲ್ಲಿ ಹಲವು ಸಿನಿಮಾ ಮಾಡಿದ್ದಾರೆ. ಇನ್ನು, ಆರ್.ಚಂದ್ರು ಕೂಡಾ “ಚಾರ್‌ಮಿನಾರ್’ ರೀಮೇಕ್ ಅನ್ನು ತೆಲುಗಿನಲ್ಲಿ ನಿರ್ದೇಶಿಸಿದ್ದಾರೆ. ಹಾಗಾಗಿ, ಇಬ್ಬರಿಗೂ ತೆಲುಗು ಚಿತ್ರರಂಗ ಹೊಸದಲ್ಲ.
ಇನ್ನು, ಆರ್.ಚಂದ್ರು ಹಾಗೂ ಉಪೇಂದ್ರ ಈ ಚಿತ್ರದ ಮೂಲಕ ಎರಡನೇ ಬಾರಿಗೆ ಜೊತೆಯಾಗುತ್ತಿದ್ದಾರೆ. ಈಗಾಗಲೇ ಇವರಿಬ್ಬರ ಕಾಂಬಿನೇಶನ್‌ನಲ್ಲಿ “ಬ್ರಹ್ಮ’ ಎಂಬ ಚಿತ್ರ ಬಂದಿತ್ತು. ಈಗ “ಐ ಲವ್ ಯೂ’ ಮೂಲಕ ಮತ್ತೆ ಒಂದಾಗಿದ್ದಾರೆ. ಚಿತ್ರಕ್ಕೆ ನಾಯಕಿ ಸೇರಿದಂತೆ ತಾಂತ್ರಿಕ ವರ್ಗ ಇನ್ನಷ್ಟೇ ಅಂತಿಮವಾಗಬೇಕಿದೆ. ತೆಲುಗು ಚಿತ್ರರಂಗದ ರಾಜ್‌ಪ್ರಭಾಕರ್ ಈ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Vande Bharat Sleeper Train: ಪರೀಕ್ಷಾರ್ಥ ಓಡಾಟದಲ್ಲಿ ಗಂಟೆಗೆ 180 ಕಿ.ಮೀ ವೇಗ
Suraj Revanna ಎಲ್ಲೇ ಹೋದ್ರೂ ಕಿತಾಪತಿ ಮಾಡಿ ಬರ್ತಾರೆ: ಶ್ರೇಯಸ್ ಪಟೇಲ್
Karnataka Govt. : ನಾಲ್ವರು ಡಿವೈಎಸ್‌ಪಿಗಳು ವಿವಿಧೆಡೆ ವರ್ಗಾವಣೆ
Cancer ತೀವ್ರಗತಿಯಲ್ಲಿ ವ್ಯಾಪಿಸುತ್ತಿರುವದು ಕಳವಳಕಾರಿ: ರಾಷ್ಟ್ರಪತಿ ದ್ರೌಪದಿ ಮುರ್ಮು
ಎಸ್.ಎಂ.ಕೃಷ್ಣ ಸಂಸ್ಮರಣಾ ವೇದಿಕೆಯಿಂದ ಪಂಚನಮನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.