Kannada Cinema: ‘ಐ ಲವ್ ಯೂ ಕಣೇ.. ‘; ಭೀಮನ ಸೈಕ್ ಡ್ಯುಯೆಟ್ ಬಂತು
Team Udayavani, Dec 8, 2023, 3:08 PM IST
ಸಲಗ’ ಸಿನಿಮಾ ಮೂಲಕ ನಿರ್ದೇಶಕರಾಗಿಯೂ ಯಶಸ್ಸು ಕಂಡಿದ್ದ ವಿಜಯ್ “ಭೀಮ’ ಎಂಬ ಸಿನಿಮಾ ಮಾಡುತ್ತಿರುವ ವಿಚಾರ ನಿಮಗೆ ಗೊತ್ತೇ ಇದೆ. ಈಗ ಆ ಚಿತ್ರದ ಚಿತ್ರೀಕರಣ ಮುಗಿದು ಬಿಡುಗಡೆಯ ಹಂತಕ್ಕೆ ಬಂದಿದೆ. ದೀಪಾವಳಿ
ಸಮಯದಲ್ಲಿ ಚಿತ್ರದ “ಸೈಕ್’ ಹಾಡು ಬಿಡುಗಡೆಯಾಗಿ ಹಿಟ್‌ಲಿಸ್ಟ್ ಸೇರಿತ್ತು. ಈಗ ಚಿತ್ರದ ಡ್ಯುಯೆಟ್ ಸಾಂಗ್‌ವೊಂದು ಬಿಡುಗಡೆಯಾಗಿದೆ. “ಐ ಲವ್ ಯೂ ಕಣೇ..’ ಎಂಬ ಡ್ಯುಯೆಟ್ ಹಾಡು ಗುರುವಾರ ಬಿಡುಗಡೆಯಾಗಿದ್ದು, ಮೆಚ್ಚುಗೆ ವ್ಯಕ್ತವಾಗುತ್ತಿದೆ.
ರೆಗ್ಯುಲರ್ ಶೈಲಿ ಬಿಟ್ಟು ತಯಾರಾಗಿರುವ ಈ ಹಾಡಿನ ಚಿತ್ರೀಕರಣವನ್ನು ವಿಭಿನ್ನವಾಗಿ ಮಾಡಲಾಗಿದೆ. ಇನ್ನು, “ಭೀಮ’ ಚಿತ್ರದ ಮೇಲಿನ ನಿರೀಕ್ಷೆ ಹೆಚ್ಚಿದೆ ಈ ಹಿಂದೆ ಬಿಡುಗಡೆಯಾಗಿರುವ ಭೀಮ ಟೀಸರ್‌ನಲ್ಲಿರುವ ಮಾಸ್ ಡೈಲಾಗ್, ವಿಜಯ್ ಶೈಲಿ ಸಿನಿಮಾ ಮೇಲಿನ ಕುತೂಹಲ ಹೆಚ್ಚಿಸಿರುವುದು ಸುಳ್ಳಲ್ಲ.
ಅಂದಹಾಗೆ, “ಭೀಮ’ ಇದು ಕೂಡಾ ಒಂದು ಗಂಭೀರ ಹಾಗೂ ಪ್ರೇಕ್ಷಕರಿಗೆ ಇಷ್ಟವಾಗುವ ವಿಷಯವನ್ನಿಟ್ಟುಕೊಂಡು ಮಾಡುತ್ತಿದ್ದಾರೆ. ಈ ಕಥೆಗಾಗಿ ಸುಮಾರು ಎಂಟು ತಿಂಗಳಿಗೂ ಹೆಚ್ಚು ತಮ್ಮನ್ನು ವಿಜಯ್ ತೊಡಗಿಸಿಕೊಂಡು, ಎಲ್ಲವನ್ನು ಪಕ್ಕಾ ಮಾಡಿಕೊಂಡು ಮಾಡಿರುವ ಸಿನಿಮಾವಿದು. “ಸಲಗ’ದಲ್ಲಿ ಸಿಕ್ಕ ದೊಡ್ಡ ಯಶಸ್ಸು “ಭೀಮ’ನಲ್ಲಿ ಮುಂದುವರೆ ಯುವ ವಿಶ್ವಾಸ ವಿಜಯ್ ಅವರಿಗಿದೆ.
ಅಂದಹಾಗೆ, ಈ ಚಿತ್ರವನ್ನು ಕೃಷ್ಣ ಸಾರ್ಥಕ್ ಹಾಗೂ ವಿತರಕ ಜಗದೀಶ್ ಗೌಡ ನಿರ್ಮಾಣ ಮಾಡುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ನಾವು ಅಧಿಕಾರಕ್ಕೆ ಬಂದರೆ 60 ವರ್ಷ ಮೇಲ್ಪಟ್ಟ ಎಲ್ಲರಿಗೂ ಉಚಿತ ಚಿಕಿತ್ಸೆ: ಕೇಜ್ರಿವಾಲ್
Belagavi: ಮಹಿಳೆಯರ ಸಬಲರಾಗಿಸುವ ಗೃಹಲಕ್ಷ್ಮಿ ಯೋಜನೆ ನಿಲ್ಲಿಸುವ ಮಾತೇ ಇಲ್ಲ: ಸಿದ್ದರಾಮಯ್ಯ
Noida: ಟಾಯ್ಲೆಟಲ್ಲಿ ರಹಸ್ಯ ಕ್ಯಾಮರಾ ಇಟ್ಟಿದ್ದ ಶಾಲಾ ನಿರ್ದೇಶಕ… ಪತ್ತೆ ಹಚ್ಚಿದ ಶಿಕ್ಷಕಿ
ಮದುವೆಯಾಗಿದ್ದೇವೆ… ನಮಗೆ ರಕ್ಷಣೆ ನೀಡಿ ಎಂದು ಠಾಣೆ ಮೆಟ್ಟಿಲೇರಿದ ಪ್ರೇಮಿಗಳು
Mulabagilu: ಭೀಕರ ಅಪಘಾತ: ದ್ವಿಚಕ್ರ ವಾಹನಗಳಿಗೆ ಬೊಲೆರೋ ಢಿಕ್ಕಿ, ನಾಲ್ವರ ಮೃತ್ಯು!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.