ಇನ್ಮುಂದೆ ಕಾಲಿವುಡ್-ಬಾಲಿವುಡ್ ನಲ್ಲಿ ನೀನಾಸಂ ಸತೀಶ್: ಟ್ವೀಟ್
Team Udayavani, Sep 18, 2017, 5:01 PM IST
ಸತೀಶ್ ನೀನಾಸಂ ಅಭಿನಯದ “ಗೋಧ್ರಾ’ ಚಿತ್ರದ ಮೊದಲ ಹಂತದ ಚಿತ್ರೀಕರಣ ಕುಕ್ಕೆ ಸುಬ್ರಹ್ಮಣ್ಯ ಮುಂತಾದ ಕಡೆ ನಡೆದಿದೆ. ಸದ್ಯದಲ್ಲೇ ಅವರ ಇನ್ನೊಂದು ಚಿತ್ರ “ಅಯೋಗ್ಯ’ದ ಚಿತ್ರೀಕರಣ ಪ್ರಾರಂಭವಾಗಲಿದೆ. ಈ ಮಧ್ಯೆ ಸತೀಶ್ ಸದ್ಯದಲ್ಲೇ ತಮಿಳು ಮತ್ತು ಹಿಂದಿ ಚಿತ್ರಗಳಲ್ಲಿ ನಟಿಸುವುದಕ್ಕೆ ಸಜ್ಜಾಗಿದ್ದಾರೆ.
ಹೌದು, ಸತೀಶ್ ಸದ್ಯದಲ್ಲೇ ತಮಿಳು ಮತ್ತು ಹಿಂದಿ ಚಿತ್ರರಂಗಕ್ಕೆ ಕಾಲಿಡುತ್ತಿದ್ದಾರಂತೆ. ಹಾಗಂತ ಅವರೇ ಟ್ವೀಟ್ ಮಾಡಿಕೊಂಡಿದ್ದಾರೆ. ಅಷ್ಟೇ ಅಲ್ಲ, ಪ್ರೇಕ್ಷಕರ ಬೆಂಬಲವನ್ನೂ ಕೋರಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಅವರು, “ತಮಿಳು ಮತ್ತು ಹಿಂದಿ ಚಿತ್ರರಂಗಕ್ಕೆ ಕಾಲಿಡುತ್ತಿದ್ದೇನೆ. ನೀವು ಕೊಟ್ಟ ನಿರಂತರ ಬೆಂಬಲ ಹೀಗೆ ಇರಲಿ. ಶೀಘ್ರದಲ್ಲಿ ಮೊದಲ ವಿನ್ಯಾಸ ಬಿಡುಗಡೆಯಾಗಲಿವೆ’ ಎಂದು ಬರೆದುಕೊಂಡಿದ್ದಾರೆ.
ಅಂದಹಾಗೆ, ಸತೀಶ್ ಅಭಿನಯದ ತಮಿಳು ಮತ್ತು ಹಿಂದಿ ಚಿತ್ರ ಯಾವುದು, ಯಾರು ನಿರ್ದೇಶಿಸುತ್ತಿದ್ದಾರೆ, ಯಾರು ನಿರ್ಮಿಸುತ್ತಿದ್ದಾರೆ, ಕಥೆ ಏನು, ಪಾತ್ರ ಏನು … ಮುಂತಾದ ಯಾವೊಂದು ವಿಷಯಗಳ ಬಗ್ಗೆಯೂ ಅವರು ರಹಸ್ಯವನ್ನು ಬಿಟ್ಟುಕೊಟ್ಟಿಲ್ಲ. ಸದ್ಯಕ್ಕೆ ತಮಿಳು ಮತ್ತು ಹಿಂದಿ ಚಿತ್ರಗಳಲ್ಲಿ ನಟಿಸುತ್ತಿರುವುದಾಗಿ ಹೇಳಿಕೊಂಡಿರುವ ಅವರು, ಸದ್ಯದಲ್ಲೇ ಎಲ್ಲವನ್ನೂ ಬಹಿರಂಗಪಡಿಸುವುದಾಗಿ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sathish Ninasam: ಅಶೋಕನಿಗೆ ನೀನಾಸಂ ಸತೀಶ್ ಸಾಥ್
Sandalwood: ಉಪ್ಪಿ ʼಯುಐʼ ಓಟಿಟಿ ರಿಲೀಸ್ ಯಾವಾಗ?; ಚಿತ್ರತಂಡದಿಂದ ಸಿಕ್ತು ಸ್ಪಷ್ಟನೆ
Sandalwood: ಸ್ಪಾನ್ಸರ್ಸ್ ಇದಿದ್ರೆ ನಾನ್ಯಾಕೆ 12 ವರ್ಷ ಕಷ್ಟಪಡಬೇಕಿತ್ತು: ರಚಿತಾ ರಾಮ್
ಒಳ್ಳೆಯ ಸ್ಕ್ರಿಪ್ಟ್ ಗಾಗಿ ಎದುರು ನೋಡುತ್ತಿದ್ದೇನೆ – ಕಂಬ್ಯಾಕ್ ಬಗ್ಗೆ ರಮ್ಯಾ ಮಾತು
Toxic Movie: ಫ್ಯಾನ್ಸ್ ನಶೆಯೇರಿಸಿದ ಯಶ್; ಹಾಲಿವುಡ್ ರೇಂಜ್‌ನಲ್ಲಿ ಮಿಂಚಿದ ರಾಕಿಭಾಯ್.!
MUST WATCH
ಹೊಸ ಸೇರ್ಪಡೆ
BBK11: ನನ್ನನ್ನು ಸಾಬೀತು ಮಾಡಿಕೊಳ್ಳಲು ಅವಕಾಶ ಸಿಗಲಿಲ್ಲ: ದೊಡ್ಮನೆಯಲ್ಲಿ ಚೈತ್ರಾ ಅಳಲು..
Mangaluru: MCC ಬ್ಯಾಂಕ್ ಅಧ್ಯಕ್ಷರ ವಿರುದ್ಧ ದಾಖಲಾಗಿರುವ ಎಫ್‌ಐಆರ್‌ಗೆ ಹೈಕೋರ್ಟ್ ತಡೆ
Assam Coal Mine Tragedy: ಅಸ್ಸಾಂ ಗಣಿ ದುರಂತ… ಒಬ್ಬನ ಮೃತ ದೇಹ ಪತ್ತೆ
Kasaragod Crime News: ಬೀದಿ ನಾಯಿಗೆ ಹೆದರಿ ಓಡಿದ ಬಾಲಕ ಬಾವಿಗೆ ಬಿದ್ದು ಸಾವು
Alankaru: ಮನೆಯಲ್ಲಿ ಬೆಂಕಿ ದುರಂತ: ಎಲ್ಲ ವಸ್ತುಗಳು ಸುಟ್ಟು ಕರಕಲು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.