ನನಗೂ ದರ್ಶನ್ ಗೂ ಯಾವುದೇ ವೈಯಕ್ತಿಕ ದ್ವೇಷವಿಲ್ಲ, ಆದರೆ… ಇಂದ್ರಜಿತ್ ಲಂಕೇಶ್ ಹೇಳಿದ್ದೇನು?
Team Udayavani, Jun 13, 2024, 12:51 PM IST
ಹುಬ್ಬಳ್ಳಿ: ನಟ ದರ್ಶನ ವಿಚಾರದಲ್ಲಿ ನಾನ್ಯಾಕೆ ಟಾಂಗ್ ನೀಡಲಿ. ಪ್ರಕರಣದ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಪ್ರಕರಣ ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿದೆ ಈ ಹಂತದಲ್ಲಿ ಪ್ರತಿಕ್ರಿಯೆ ನೀಡುವುದು ಸರಿಯಲ್ಲ ಎಂದು ನಿರ್ದೇಶಕ ಹಾಗು ಪತ್ರಕರ್ತ ಇಂದ್ರಜಿತ್ ಲಂಕೇಶ ಪ್ರತಿಕ್ರಿಯಿಸಿದರು.
ಗೌರಿ ಚಿತ್ರದ ಕುರಿತಾದ ಸುದ್ದಿಗೋಷ್ಠಿಯಲ್ಲಿ ದರ್ಶನ ಪ್ರಕರಣದ ಕುರಿತು ಪ್ರತಿಕ್ರಿಯೆ ನೀಡಿದ ಅವರು, ದರ್ಶನ ಅವರೊಂದಿಗೆ ಎರಡು ಸಿನಿಮಾ ಮಾಡಿದ್ದೇನೆ. ಅವರಿಗೂ ನನಗೂ ಯಾವುದೇ ವೈಯಕ್ತಿಕ ದ್ವೇಷವಿಲ್ಲ. ಆದರೆ ಸಮಾಜದಲ್ಲಿ ಇಂತಹ ಘಟನೆಗಳಾದಾಗ ಓರ್ವ ಪತ್ರಕರ್ತನಾಗಿ ಧ್ವನಿಯೆತ್ತಬೇಕಾಗುತ್ತಿದೆ. ಈ ನಿಟ್ಟಿನಲ್ಲಿ ಮಾತನಾಡಿದ್ದೇನೆಯೇ ವಿನಃ ಯಾವುದೇ ಟಾಂಗ್ ನೀಡಿಲ್ಲ. ಪ್ರಕರದ ತನಿಖೆ ಪೂರ್ಣಗೊಂಡ ನಂತರ ಎಲ್ಲವೂ ಸ್ಪಷ್ಟವಾಗಲಿದೆ. ಆಗ ಈ ಕುರಿತು ಮಾತನಾಡುವೆ ಎಂದು ಸ್ಪಷ್ಟಪಡಿಸಿದರು.
ಸಾಮಾಜಿಕ ಜಾಲತಾಣಗಳು ಜನರ ಧ್ವನಿಯಾಗಿದೆ. ಅದನ್ನು ಸಕರಾತ್ಮಕವಾಗಿ ಬಳಸಿಕೊಳ್ಳಬೇಕು. ಹಿಂದೆ ಓರ್ವ ಯುವಕ ನನ್ನ ವಿರುದ್ಧ ಅವಹೇಳನಕಾರಿಯಾಗಿ ಪೋಸ್ಟ್ ಮಾಡಿದ್ದ. ಅವನನ್ನು ಬಂಧಿಸುವ ಕೆಲಸ ಆಗಿತ್ತು. ಆದರೆ ಅವನ ತಂದೆ ತಾಯಿ ಕಣ್ಣೀರು ಹಾಕಿ ಕ್ಷಮಿಸುವಂತೆ ಬೇಡಿಕೊಂಡರು. ಅವರ ಕಣ್ಣೀರು ನೋಡಿ ಯುವಕನಿಗೆ ಬುದ್ದಿವಾದ ಹೇಳಿ ಕಳಿಸಿಕೊಟ್ಟಿದ್ದೆ. ಕೊಲೆಯ ಘಟನೆಯಿಂದ ಓರ್ವ ಮಹಿಳೆ ಪತಿಯನ್ನು ಕಳೆದುಕೊಂಡು ಅನ್ಯಾಯಕ್ಕೊಳಗಾಗಿದ್ದಾರೆ. ಅವರಿಗೆ ನ್ಯಾಯ ಸಿಗುವ ಕೆಲಸ ಆಗಬೇಕು. ಶೀಘ್ರದಲ್ಲಿ ಅವರನ್ನು ಭೇಟಿಯಾಗಿ ಸಾಂತ್ವನ ಹೇಳುವುದಾಗಿ ತಿಳಿಸಿದರು.
ಸಾಮಾಜಿಕ ಜಾಲಾತಾಣಗಳ ಬಗ್ಗೆ ಸರಕಾರ ನಿಗಾ ವಹಿಸಬೇಕು. ಈ ಕುರಿತು ಆಂದೋಲನ ಮಾದರಿಯಲ್ಲಿ ಹೋರಾಟ ಆರಂಭಿಸುತ್ತೇವೆ. ಸರಕಾರ ಸೈಬರ್ ಕ್ರೈಂ ಅಂತ ಮಾಡಿದೆ. ಅದು ಎಲ್ಲಿ ಕೆಲಸ ಮಾಡುತ್ತಿದೆ ಎನ್ನುವುದು ಗೊತ್ತಾಗುತ್ತಿಲ್ಲ. ಇದರಿಂದ ಯಾರಿಗೆ ಅನುಕೂಲವಾಗುತ್ತಿದೆ ಎಂಬುವುದು ಕೂಡ ಗೊತ್ತಾಗುತ್ತಿಲ್ಲ ಎಂದು ಪ್ರತಿಕ್ರಿಯಿಸಿದರು.
ಇದನ್ನೂ ಓದಿ: Online ನಲ್ಲಿ ಆರ್ಡರ್ ಮಾಡಿದ್ದ ಐಸ್‌ಕ್ರೀಮ್ ಕಂಡು ಆಘಾತಕ್ಕೆ ಒಳಗಾದ ಮಹಿಳೆ…
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Max Movie: ಸಖತ್ ರೆಸ್ಪಾನ್ಸ್ ಪಡೆದ ಕಿಚ್ಚನ ʼಮ್ಯಾಕ್ಸ್ʼ ಮೊದಲ ದಿನ ಗಳಿಸಿದ್ದೆಷ್ಟು?
Actor Health: ಸ್ವಲ್ಪ ಜರುಗಿದ ದರ್ಶನ್ ಬೆನ್ನುಮೂಳೆ; ತುರ್ತಾಗಿ ಆಪರೇಷನ್ ಇಲ್ಲ: ವೈದ್ಯರು
Prashanth Neel: ಸಲಾರ್‌ಗೆ ನಾನು ಇನ್ನಷ್ಟು ಶ್ರಮ ಹಾಕಬೇಕಿತ್ತು; ಪ್ರಶಾಂತ್ ನೀಲ್
UI Movie: ಉಪ್ಪಿ ಯುಐ ಮೆಚ್ಚಿದ ಯಶ್
Shivaraj Kumar: ಶಿವರಾಜ್ ಕುಮಾರ್ ಅವರ ಆಪರೇಷನ್ ಯಶಸ್ವಿಯಾಗಿದೆ – ಪತ್ನಿ ಗೀತಾ ಮಾಹಿತಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.