Kantara: Chapter 1: ʼಕಾಂತಾರ-1ʼನಲ್ಲಿ ರಿಷಬ್ ತಂದೆ ಪಾತ್ರದಲ್ಲಿ ಮೋಹನ್ ಲಾಲ್?
Team Udayavani, Oct 1, 2024, 1:26 PM IST
ಬೆಂಗಳೂರು: ʼಕಾಂತಾರʼದ ಮೂಲಕ ಪ್ಯಾನ್ ಇಂಡಿಯಾದಲ್ಲಿ ಮೋಡಿ ಮಾಡಿದ ರಿಷಬ್ ಶೆಟ್ಟಿ ಸದ್ಯ ʼಕಾಂತಾರ ಚಾಪ್ಟರ್-1”(Kantara: Chapter 1) ಸಿನಿಮಾದಲ್ಲಿ ಬ್ಯುಸಿಯಾಗಿದ್ದಾರೆ.
ಮೊದಲು ಕನ್ನಡದಲ್ಲಿ ತೆರೆಕಂಡ ʼಕಾಂತಾರʼ ಆ ಬಳಿಕ ಇತರೆ ಭಾಷೆಗೆ ಡಬ್ ಆಗಿ ತೆರೆಕಂಡಿತ್ತು. ಸಿನಿಮಾ ಬಾಕ್ಸ್ ಆಫೀಸ್ ನಲ್ಲಿ 400 ಕೋಟಿ ಗಳಿಕೆ ಕಾಣುವುದರ ಜತೆ ‘ಅತ್ಯುತ್ತಮ ನಟನೆʼಗಾಗಿ ರಿಷಬ್ ಅವರಿಗೆ ರಾಷ್ಟ್ರ ಪ್ರಶಸ್ತಿ ಕೂಡ ತಂದುಕೊಟ್ಟಿದೆ.
ಇದನ್ನೂ ಓದಿ: GOAT OTT Release: ದಳಪತಿ ವಿಜಯ್ ʼಗೂಟ್ʼ ಓಟಿಟಿ ರಿಲೀಸ್‌ಗೆ ಡೇಟ್ ಫಿಕ್ಸ್
ʼಕಾಂತಾರ ಪ್ರೀಕ್ವೆಲ್ʼ ಸಿನಿಮಾಕ್ಕಾಗಿ ಪ್ರೇಕ್ಷಕರು ಕಾಯುತ್ತಿದ್ದಾರೆ. ಮುಹೂರ್ತದ ಬಳಿಕ ಸಿನಿಮಾ ತಂಡದಿಂದ ಯಾವ ಮಹತ್ವದ ಅಪ್ಡೇಟ್ ಕೂಡ ಹೊರಬಿದ್ದಿಲ್ಲ. ಆದರೂ ಆಗಾಗ ಸಿನಿಮಾದ ಪಾತ್ರವರ್ಗ ಬಗ್ಗೆ ಸುದ್ದಿ ಹರಿದಾಡುತ್ತಲೇ ಇರುತ್ತದೆ.
ರಿಷಬ್ ಶೆಟ್ಟಿ (Rishab Shetty) ಅವರ ʼಕಾಂತಾರ-1ʼ ನಲ್ಲಿ ಅವರು ನಟಿಸುತ್ತಾರೆ, ಇವರು ನಟಿಸಲಿದ್ದಾರೆ ಎನ್ನುವ ಸುದ್ದಿಗಳು ಹರಿದಾಡುತ್ತಲೇ ಇದೆ. ಜೂ.ಎನ್ ಟಿಆರ್ ಕೂಡ ಸಿನಿಮಾದ ಭಾಗವಾಗಲಿದ್ದಾರೆ ಎನ್ನುವ ಮಾತು ಈ ಹಿಂದೆ ಕೇಳಿಬಂದಿತ್ತು. ಇತ್ತೀಚೆಗಷ್ಟೇ ರಿಷಬ್ ದಂಪತಿ ಮಾಲಿವುಡ್ ಸೂಪರ್ ಸ್ಟಾರ್ ಮೋಹನ್ ಲಾಲ್ (Mohanlal) ಅವರನ್ನು ಭೇಟಿ ಆಗಿದ್ದರು.
ʼಕಾಂತಾರ-1ʼ ಅನೌನ್ಸ್ ಬಳಿಕ ರಿಷಬ್ ಯಾವ ಕಲಾವಿದರನ್ನು ಭೇಟಿ ಆದರೂ ಆ ಕಲಾವಿದ ʼಕಾಂತಾರʼದಲ್ಲಿ ನಟಿಸುತ್ತಾರೆ ಎನ್ನುವ ಸುದ್ದಿ ಹರಿದಾಡುತ್ತದೆ. ಮೋಹನ್ ಲಾಲ್ ಅವರನ್ನು ಭೇಟಿ ಆದಾಗಲೂ ಈ ಮಾತು ಕೇಳಿ ಬಂದಿತ್ತು.
ಇದೀಗ ಈ ವಿಚಾರಕ್ಕೆ ಮತ್ತಷ್ಟು ಮಸಾಲೆ ಸೇರಿದ್ದು, ಮೋಹನ್ ಲಾಲ್ ʼಕಾಂತಾರ-1ʼ ಸಿನಿಮಾದಲ್ಲಿ ನಟಿಸಲಿದ್ದಾರೆ. ಅವರು ಸಿನಿಮಾದಲ್ಲಿ ರಿಷಬ್ ಶೆಟ್ಟಿ ಅವರ ತಂದೆಯ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎಂದು ವರದಿ ಆಗಿದೆ.
ಆದರೆ ಈ ಬಗ್ಗೆ ಚಿತ್ರತಂಡದಿಂದ ಯಾವುದೇ ಅಧಿಕೃತ ಮಾಹಿತಿ ಹೊರಬಿದ್ದಿಲ್ಲ.
ಈಗಾಗಲೇ ಚಿತ್ರತಂಡ ತಂಡವು ಜೂನಿಯರ್ ಆರ್ಟಿಸ್ಟ್‌ಗಳಿಗೆ ಆಡಿಷನ್‌ಗಳನ್ನು ನಡೆಸಿದೆ. ಪ್ರಮುಖ ಪಾತ್ರದಲ್ಲಿ ಯಾರೆಲ್ಲಾ ನಟಿಸಲಿದ್ದಾರೆ ಎನ್ನುವ ಬಗ್ಗೆ ಇನ್ನಷ್ಟೇ ಮಾಹಿತಿ ಬರಬೇಕಿದೆ.
ಹೊಂಬಾಳೆ ಫಿಲ್ಮ್ಸ್ ನಿರ್ಮಾಣದ ʼಕಾಂತಾರ ಪ್ರೀಕ್ವೆಲ್ʼ ಪಂಜರ್ಲಿ ದೈವದ ಹುಟ್ಟು ಮತ್ತು ಇತಿಹಾಸದ ಕಥೆಯನ್ನೊಳಗೊಳ್ಳಲಿದೆ ಎನ್ನಲಾಗಿದೆ. ಮುಂದಿನ ವರ್ಷ ಸಿನಿಮಾ ತೆರೆ ಕಾಣುವ ಸಾಧ್ಯತೆಯಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mollywood: ಸೂಪರ್ ಸ್ಟಾರ್ ಮೋಹನ್ ಲಾಲ್‌ಗೆ ‘ಆವೇಶಮ್ʼ ನಿರ್ದೇಶಕ ಆ್ಯಕ್ಷನ್ ಕಟ್
Meena Ganesh: ಮಲಯಾಳಂನ ಹಿರಿಯ ನಟಿ ಮೀನಾ ಗಣೇಶ್ ನಿಧನ
Telugu actor: ಸಹ ನಟಿಗೆ ಲೈಂಗಿಕ ಕಿರುಕುಳ; ಖ್ಯಾತ ನಟನ ಬಂಧನ
Mogilaiah: ಪದ್ಮಶ್ರೀ ಪುರಸ್ಕೃತ, ಜಾನಪದ ಕಲಾವಿದ ಬಳಗಂ ಚಿತ್ರ ಖ್ಯಾತಿಯ ಮೊಗಿಲಯ್ಯ ನಿಧನ
Malayalam actor: ಹಾಲಿವುಡ್‌ನಲ್ಲೂ ಮಿಂಚಿದ್ದ ಮಾಲಿವುಡ್‌ನ ಹಿರಿಯ ನಟ ಥಾಮಸ್ ನಿಧನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.