ನಾರಾಯಣ್‌ ಸಿನಿಮಾದಲ್ಲಿ ಇದು ಬೇಕಿತ್ತಾ?


Team Udayavani, Jun 18, 2017, 11:07 AM IST

gaddappa.jpg

ಎಸ್‌.ನಾರಾಯಣ್‌ ನಿರ್ದೇಶನದ “ಪಂಟ’ ಸಿನಿಮಾದಲ್ಲಿ “ಕುಲುಕು ಕುಲುಕು’ ಎಂಬ ಐಟಂ ಸಾಂಗ್‌ವೊಂದನ್ನು ಮಾಡಲಾಗಿದೆ. ಈ ಹಾಟ್‌ ಹಾಡಿನಲ್ಲಿ ಗಡ್ಡಪ್ಪ ಹಾಗೂ ಸೆಂಚುರಿ ಗೌಡ ಅವರನ್ನು ಕೂಡಾ ಬಳಸಿಕೊಳ್ಳಲಾಗಿದೆ. ಈಗ ಈ ಹಾಡು ಸಾಮಾಜಿಕ ಜಾಲತಾಣದಲ್ಲಿ ಚರ್ಚೆಯಾಗುತ್ತಿದೆ. ಎಸ್‌.ನಾರಾಯಣ್‌ರಂತಹ ಶಿಸ್ತಿನ, ಕನ್ನಡಕ್ಕೆ ಒಳ್ಳೆಯ ಸಿನಿಮಾಗಳನ್ನು ಕೊಟ್ಟ ನಿರ್ದೇಶಕರ ಸಿನಿಮಾದಲ್ಲಿ ಈ ತರಹದ ಹಾಡು ಬೇಕಿತ್ತಾ ಹಾಗೂ 90 + ವಯಸ್ಸಿನ ಸೆಂಚುರಿ ಗೌಡ, ಗಡ್ಡಪ್ಪ ಅವರನ್ನು ಐಟಂ ಸಾಂಗ್‌ನಲ್ಲಿ ಕುಣಿಸಿದ್ದು ಸರಿನಾ ಎಂಬ ವಿಷಯಗಳು ಚರ್ಚೆಯಾಗುತ್ತಿದೆ. 

ಕನ್ನಡ ಚಿತ್ರರಂಗದಲ್ಲಿ ಐಟಂ ಸಾಂಗ್‌, ಡಾಬಾ ಸಾಂಗ್‌ ಹೊಸದಲ್ಲ. ಜೊತೆಗೆ “ತಿಥಿ’ ನಂತರ ಸೆಂಚುರಿ ಗೌಡ, ಗಡ್ಡಪ್ಪ ಅವರ ಬಾಯಿಂದ ಸಾಕಷ್ಟು ಡಬಲ್‌ ಮೀನಿಂಗ್‌, ಪೋಲಿ ಡೈಲಾಗ್‌ಗಳನ್ನು ಹೇಳಿಸಲಾಗಿದೆ. ಆದರೆ, ಈಗ “ಪಂಟ’ದ “ಕುಲುಕು’ ಹಾಡು ಚರ್ಚೆಯಾಗಲು ಕಾರಣ ಎಸ್‌.ನಾರಾಯಣ್‌ ಅವರ ಟ್ರ್ಯಾಕ್‌ ರೆಕಾರ್ಡ್‌. ಕನ್ನಡ ಚಿತ್ರರಂಗದಲ್ಲಿ ಶಿಸ್ತಿನ ನಿರ್ದೇಶಕ ಎಂದು ಗುರುತಿಸಿಕೊಳ್ಳುವ ಜೊತೆಗೆ ರಾಜಕುಮಾರ್‌ರಿಂದ ಹಿಡಿದು ಇವತ್ತಿನ ಬಹುತೇಕ ಸ್ಟಾರ್‌ಗಳನ್ನು ನಿರ್ದೇಶಿಸಿದ ನಾರಾಯಣ್‌ ಸಿನಿಮಾದಲ್ಲಿ ಈ ಹಾಡು ಬೇಕಿತ್ತಾ ಎಂಬಂತಹ ಚರ್ಚೆಗಳು ಸೋಶಿಯಲ್‌ ಮೀಡಿಯಾದಲ್ಲಿ ಹಾಗೂ ಮಾಧ್ಯಮ ವರ್ಗದಲ್ಲಿ ನಡೆಯುತ್ತಿದೆ. 

“ಈ ಹಾಡನ್ನು ಇಷ್ಟಪಟ್ಟು ಸೇರಿಸಿದ್ದಲ್ಲ. ಅದೇ ಕಾರಣಕ್ಕೆ ಈ ಹಾಡನ್ನು ಚಿತ್ರೀಕರಿಸದೆಯೇ ಫೆಬ್ರವರಿಯಲ್ಲಿ ಸಿನಿಮಾ ಬಿಡುಗಡೆ ಮಾಡಲು ಮುಂದಾಗಿದ್ದೆ. ಚಿತ್ರದ ನಿರ್ಮಾಪಕ ಸುಬ್ರಮಣ್ಯ ಅವರಿಗೆ ಈ ಹಾಡು ಕೇಳಿ ಸಖತ್‌ ಇಷ್ಟವಾಗಿದೆ. ಈ ತರಹದ ಮಸಾಲ ಹಾಡು ಚಿತ್ರಕ್ಕೆ ಬೇಕು ಎಂದು ಕೇಳಿಕೊಂಡರು. ಅದಕ್ಕೆ ಕಾರಣ “ಚೌಕ’ ಚಿತ್ರದ “ಅಲ್ಲಾಡ್ಸು ಅಲ್ಲಾಡ್ಸು’ ಹಾಡು. ಆ ಹಾಡು ಬಂದಾಗ ಜನ ಥಿಯೇಟರ್‌ನಲ್ಲಿ ಕುಣಿದಿದ್ದನ್ನು ನೋಡಿದ ಸುಬ್ರಮಣ್ಯ ಅವರು “ಕುಲುಕು’ ಹಾಡನ್ನು ಮಾಡಲೇಬೇಕೆಂದು ನಿರ್ಧರಿಸಿ ಸಿನಿಮಾ ಬಿಡುಗಡೆಯನ್ನೇ ಮುಂದಕ್ಕೆ ಹಾಕಿದರು.

ನನಗೆ ವೈಯಕ್ತಿಕವಾಗಿ ಇಷ್ಟವಿಲ್ಲ ನಿಜ. ಹಾಗಂತ ನಾನು 10 ಜನರ ಮಾತಿಗೆ ಮನ್ನಣೆ ಕೊಡಲೇಬೇಕು. ಮೊದಲು ಹಾಡು ಬೇಡವೆಂದು ನಿರ್ಧರಿಸಿದ್ದೆ. ಆದರೆ, ನಿರ್ಮಾಪಕರು ಬೇಕೇ ಬೇಕೆಂದ ನಂತರ ಈ ಹಾಡನ್ನು ಮಾಡಲು ನಿರ್ಧರಿಸಿದೆವು. ಈಗ ಈ ಹಾಡನ್ನು ಬಿಡುಗಡೆ ಮಾಡಲಾಗಿದೆ. ಎಂಟು ಗಂಟೆಯಲ್ಲಿ 20 ಸಾವಿರಕ್ಕೂ ಹೆಚ್ಚು ಜನ ನೋಡಿದ್ದಾರೆ’ ಎಂದು ಉತ್ತರಿಸುತ್ತಾರೆ ನಾರಾಯಣ್‌.

ಟಾಪ್ ನ್ಯೂಸ್

Belagavi: ಸಿ.ಟಿ. ರವಿ ವಿರುದ್ಧ ಭುಗಿಲೆದ್ದ ಹೆಬ್ಬಾಳಕರ ಬೆಂಬಲಿಗರಿಂದ ಆಕ್ರೋಶ

Belagavi: ಸಿ.ಟಿ. ರವಿ ವಿರುದ್ಧ ಭುಗಿಲೆದ್ದ ಹೆಬ್ಬಾಳಕರ ಬೆಂಬಲಿಗರಿಂದ ಆಕ್ರೋಶ

Belagavi: ಸಿ.ಟಿ. ರವಿಯನ್ನು ಹೆಗಲ ಮೇಲೆ‌ ಹೊತ್ತುಕೊಂಡು ಜೀಪ್ ಗೆ ಹಾಕಿದ ಪೊಲೀಸರು

Belagavi: ಸಿ.ಟಿ. ರವಿಯನ್ನು ಹೆಗಲ ಮೇಲೆ‌ ಹೊತ್ತುಕೊಂಡು ಜೀಪ್ ಗೆ ಹಾಕಿದ ಪೊಲೀಸರು

1-ullala

Mangaluru; ನೇತ್ರಾವತಿ ಸೇತುವೆ ದುರಸ್ತಿ ಆರಂಭ: ಸಂಚಾರ ಸಲಹೆ ನೀಡಿದ ಪೊಲೀಸರು

1-aaammm

Jammu and Kashmir; ಉಗ್ರವಾದ ಪರಿಸರ ವ್ಯವಸ್ಥೆ ಬಹುತೇಕ ಕೊನೆಗೊಂಡಿದೆ: ಶಾ

1-lok-sabha

BJP vs Congress; ಸಂಸತ್ತಿನಲ್ಲಿ ಕೋಲಾಹಲ: ಪೊಲೀಸರಿಗೆ ದೂರು,ಕಾಂಗ್ರೆಸ್ ಪ್ರತಿದೂರು

CT Ravi

Laxmi Hebbalkar; ಅವಾಚ್ಯ ಪದ ಬಳಕೆ ಕೇಸ್: ಸಿ.ಟಿ.ರವಿ ಬಂಧನ

Gadaga: ನೀರಿನ ಟ್ಯಾಂಕರ್ ಹರಿದು 2 ವರ್ಷದ ಮಗು ಸಾವು

Gadaga: ನೀರಿನ ಟ್ಯಾಂಕರ್ ಹರಿದು 2 ವರ್ಷದ ಮಗು ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ʼಯುಐʼಗೆ ಸ್ಯಾಂಡಲ್‌ವುಡ್‌ ಸಾಥ್‌; ಉಪೇಂದ್ರ ಚಿತ್ರ ನೋಡಲು ಕಾತುರ

Upendra: ʼಯುಐʼಗೆ ಸ್ಯಾಂಡಲ್‌ವುಡ್‌ ಸಾಥ್‌; ಉಪೇಂದ್ರ ಚಿತ್ರ ನೋಡಲು ಕಾತುರ

Shiva Rajkumar: ಅಮೆರಿಕದತ್ತ ಶಿವಣ್ಣ; ಚಿತ್ರರಂಗದ ಶುಭ ಹಾರೈಕೆ

Shiva Rajkumar: ಚಿಕಿತ್ಸೆಗಾಗಿ ಅಮೆರಿಕದತ್ತ ಶಿವಣ್ಣ; ಚಿತ್ರರಂಗದ ಶುಭ ಹಾರೈಕೆ

BBK11: ಟಾಸ್ಕ್ ವಿಚಾರದಲ್ಲಿ ಫೈಯರ್ ಚೈತ್ರಾ ಠುಸ್.. ಮನೆಮಂದಿ ಸುಸ್ತು

BBK11: ಟಾಸ್ಕ್ ವಿಚಾರದಲ್ಲಿ ಫೈಯರ್ ಚೈತ್ರಾ ಠುಸ್.. ಮನೆಮಂದಿ ಸುಸ್ತು

BBK11: ಮತ್ತೆ ಬಿಗ್ ಬಾಸ್ ಮನೆಗೆ ಗೋಲ್ಡ್ ಸುರೇಶ್.. ವಿಡಿಯೋದಲ್ಲಿ ಸುಳಿವು

BBK11: ಮತ್ತೆ ಬಿಗ್ ಬಾಸ್ ಮನೆಗೆ ಗೋಲ್ಡ್ ಸುರೇಶ್..? ವಿಡಿಯೋದಲ್ಲಿ ಸುಳಿವು

Sandalwood: ಕಣ್ಣಾ ಮುಚ್ಚೆ ಕಾಡೇ ಗೂಡೇ ತೆರೆಗೆ ಸಿದ್ಧ

Sandalwood: ಕಣ್ಣಾ ಮುಚ್ಚೆ ಕಾಡೇ ಗೂಡೇ ತೆರೆಗೆ ಸಿದ್ಧ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

death

Gangolli: ಲಾರಿ ಪ್ರಯಾಣದ ವೇಳೆ ಕ್ಲೀನರ್‌ ಸಾವು

accident2

Padubidri: ಅಪರಿಚಿತ ವಾಹನ ಢಿಕ್ಕಿ;‌ ಪಾದಚಾರಿಗೆ ತೀವ್ರ ಗಾಯ

Belagavi: ಸಿ.ಟಿ. ರವಿ ವಿರುದ್ಧ ಭುಗಿಲೆದ್ದ ಹೆಬ್ಬಾಳಕರ ಬೆಂಬಲಿಗರಿಂದ ಆಕ್ರೋಶ

Belagavi: ಸಿ.ಟಿ. ರವಿ ವಿರುದ್ಧ ಭುಗಿಲೆದ್ದ ಹೆಬ್ಬಾಳಕರ ಬೆಂಬಲಿಗರಿಂದ ಆಕ್ರೋಶ

de

Padubidri: ಕೆಎಸ್‌ಆರ್‌ಟಿಸಿ ಬಸ್ಸು ಢಿಕ್ಕಿ; ಪಾದಚಾರಿ ಸಾವು

Belagavi: ಸಿ.ಟಿ. ರವಿಯನ್ನು ಹೆಗಲ ಮೇಲೆ‌ ಹೊತ್ತುಕೊಂಡು ಜೀಪ್ ಗೆ ಹಾಕಿದ ಪೊಲೀಸರು

Belagavi: ಸಿ.ಟಿ. ರವಿಯನ್ನು ಹೆಗಲ ಮೇಲೆ‌ ಹೊತ್ತುಕೊಂಡು ಜೀಪ್ ಗೆ ಹಾಕಿದ ಪೊಲೀಸರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.