ನಳಪಾಕ ಬಡಿಸಲು ನವರಸ ನಾಯಕ ರೆಡಿ: ‘ರಾಘವೇಂದ್ರ ಸ್ಟೋರ್ಸ್’ ಬಿಡುಗಡೆ ದಿನಾಂಕ ಫಿಕ್ಸ್
Team Udayavani, Jun 3, 2022, 3:55 PM IST
ಬಹು ನಿರೀಕ್ಷಿತ ಚಿತ್ರಗಳಲ್ಲಿ ಒಂದಾದ ನವರಸ ನಾಯಕ ಜಗ್ಗೇಶ್ ಅಭಿನಯದ ‘ರಾಘವೇಂದ್ರ ಸ್ಟೋರ್ಸ್’ ಬಿಡುಗಡೆಗೆ ದಿನಾಂಕ ನಿಗದಿಯಾಗಿದೆ. ಆಗಸ್ಟ್ ಐದರಂದು ಪ್ರೇಕ್ಷಕರಿಗೆ ‘ರಾಘವೇಂದ್ರ ಸ್ಟೋರ್ಸ್’ ಬಾಗಿಲು ತೆಗೆಯಲಿದೆ.
ಯಶಸ್ವಿ ನಿರ್ದೇಶಕ ಸಂತೋಷ್ ಆನಂದ್ ರಾಮ್ ನಿರ್ದೇಶನದ ‘ರಾಘವೇಂದ್ರ ಸ್ಟೋರ್ಸ್’ ಚಿತ್ರಕ್ಕೆ ಹೊಂಬಾಳೆ ಫಿಲಂಸ್ ಬ್ಯಾನರ್ ನಡಿ ವಿಜಯ್ ಕಿರಗಂದೂರ್ ಬಂಡವಾಳ ಹೂಡಿದ್ದಾರೆ.
ಚಿತ್ರ ಬಿಡುಗಡೆಯ ಬಗ್ಗೆ ಟ್ವೀಟ್ ಮಾಡಿರುವ ಹೊಂಬಾಳೆ ಫಿಲಂಸ್ “‘ವರಮಹಾಲಕ್ಷ್ಮಿಗೆ ನವರಸಗಳ ರಸದೌತಣ ಸವಿಯಲು ಸಿದ್ಧರಾಗಿ” ಎಂದಿದೆ. ಚಿತ್ರದಲ್ಲಿ ಜಗ್ಗೇಶ್ ಅವರು ಅಡುಗೆ ಭಟ್ಟನ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.
ಇದನ್ನೂ ಓದಿ:ಮತ್ತೆ ಪ್ರೇಕ್ಷಕರ ಮುಂದೆ ಬಂದ ಮಾಲಾಶ್ರೀ: ನೈಟ್ ಕರ್ಫ್ಯೂ ನಲ್ಲಿ ಹೊಸ ಲುಕ್
ರಾಜಕುಮಾರ, ಯುವರತ್ನ ಬಳಿಕ ಸಂತೋಷ್ ಆನಂದ್ ರಾಮ್ ವಿಭಿನ್ನ ಸಬ್ಜೆಕ್ಸ್ ನಲ್ಲಿ ಪ್ರೇಕ್ಷಕರ ಮುಂದೆ ಬರುತ್ತಿದ್ದಾರೆ. ಚಿತ್ರಕ್ಕೆ ಅಜನೀಶ್ ಲೋಕನಾಥ್ ಸಂಗೀತವಿದ್ದರೆ, ಶ್ರೀಶ ಕುಡುವಳ್ಳಿ ಕ್ಯಾಮರಾ ಕೈಚಳಕವಿದೆ.
ವರಮಹಾಲಕ್ಷ್ಮಿಗೆ ನವರಸಗಳ ರಸದೌತಣ ಸವಿಯಲು ಸಿದ್ಧರಾಗಿ, ಇದೇ ಆಗಸ್ಟ್ 05, 2022ರಿಂದ!
Get ready for a delicious meal coming your way from Aug 5th, 2022.#RaghavendraStores @Jaggesh2 @santhoshAnand15 @VKiragandur @hombalefilms @AJANEESHB @ShwethaSrivatsa @RgvndraStores#RaghavendraStoresOnAug5 pic.twitter.com/nBgemmbZgv— Raghavendra Stores (@RgvndraStores) June 1, 2022
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gurunandan: ಡಿ.27ಕ್ಕೆ ತೆರೆಗೆ ಬರುತ್ತಿಲ್ಲ ʼರಾಜು ಜೇಮ್ಸ್ ಬಾಂಡ್’ ಚಿತ್ರ
Nodidavaru Enanthare Movie: ನವೀನ್ ಶಂಕರ್ ಚಿತ್ರದ ಟೀಸರ್ ಬಂತು
BBK11: ಸತತ ಮೂರನೇ ವಾರವೂ ಕಳಪೆ ಪಟ್ಟಿ: ಖುಷಿಯಿಂದಲೇ ಜೈಲು ಸೇರಿದ ಚೈತ್ರಾ
Dhruva-Prem: ಡಿ.24ಕ್ಕೆ ʼಕೆಡಿʼ ಶಿವ ಶಿವ ಹಾಡು ರಿಲೀಸ್
Dhruva Sarja: ಪ್ರತಿ ಸಿನಿಮಾವೂ ನನಗೆ ಹೊಸ ಪಾಠ…: ಧ್ರುವ ಹೇಳಿದ್ದೇನು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.