ರಕ್ಷಿತ್ ಬಗ್ಗೆ ಜಗ್ಗೇಶ್ ಟ್ವೀಟ್
Team Udayavani, Oct 7, 2018, 12:04 PM IST
ಜಗ್ಗೇಶ್ ತಮಗೆ ಅನಿಸಿದ್ದನ್ನು ನೇರವಾಗಿ ಹೇಳುವ ಗುಣವುಳ್ಳವರು. ಅದೇ ಕಾರಣದಿಂದ ಟ್ವೀಟರ್‌ನಲ್ಲಿ ತಮಗೆ ಇಷ್ಟವಾದ, ಇಷ್ಟವಾಗದ ವಿಷಯಗಳ ಬಗ್ಗೆ ಹೇಳುತ್ತಲೇ ಇರುತ್ತಾರೆ. ಈ ಬಾರಿ ಜಗ್ಗೇಶ್, ನಟ ರಕ್ಷಿತ್ ಶೆಟ್ಟಿ ಕುರಿತಾಗಿ ಟ್ವೀಟ್ ಮಾಡಿದ್ದಾರೆ. ರಕ್ಷಿತ್ ಅವರ ಸಿನಿಮಾ ಪ್ರೀತಿ ಹಾಗೂ ಚಿತ್ರರಂಗದಲ್ಲಿ ಮುಖವಾಡ ಹಾಕಿ ಬರುವವರನ್ನು ದೂರು ಇಡುವ ಕಲೆ ಕರಗತವಾಗಬೇಕೆಂದೂ ಹೇಳಿದ್ದಾರೆ.
ಜಗ್ಗೇಶ್ ಅವರ ಈ ಟ್ವೀಟ್‌ಗೆ ಅಭಿಮಾನಿಗಳಿಂದ ಒಳ್ಳೆಯ ಪ್ರತಿಕ್ರಿಯೆ ಕೂಡಾ ವ್ಯಕ್ತವಾಗಿದೆ. ರಕ್ಷಿತ್ ಹಾಗೂ ಜಗ್ಗೇಶ್ “ವಾಸ್ತುಪ್ರಕಾರ’ ಸಿನಿಮಾದಲ್ಲಿ ಜೊತೆಯಾಗಿ ನಟಿಸಿದ್ದಾರೆ. ಅಷ್ಟಕ್ಕೂ ಜಗ್ಗೇಶ್ ಮಾಡಿರುವ ಟ್ವೀಟ್ ಏನೆಂದರೆ, “ನಾನು ಕಂಡ ಅದ್ಭುತ ಸಜ್ಜನಿಕೆಯ ಕಲಾ ಬಂಧು. ಸದಾ ಸಿನಿಮಾಗಾಗಿ ತುಡಿಯುವ ಕಲಾತಪಸ್ವಿ.ಇವನಿಗೆ ದೇವರ ದಯೆಯಿಂದ ಇನ್ನು ಎತ್ತರದ ದಿನಗಳು ಕಾದಿದೆ ಎಂದು ನನ್ನ ಮನ ಹೇಳಿತು.
ನಮ್ಮ ಯಶಸ್ಸು ಕಬಳಿಸಿ ಮೇಲೆರಲು ಅನೇಕರು ಮುಖವಾಡ ಹಾಕಿ ಬರುತ್ತಾರೆ. ಇದು ಪ್ರಾಪಂಚಿಕ ವಾಮ ಮಾರ್ಗ ತಂತ್ರ! ಇಂಥವರ ನಗುತ್ತ ಪಕ್ಕ ತಳ್ಳುವ ಕಲೆ ಕರಗತವಾಗಲಿ ಮುಂದೆ!’ ಎಂದು ಟ್ವೀಟ್ ಮಾಡಿದ್ದಾರೆ. ಜಗ್ಗೇಶ್ ಅವರು ಟ್ವೀಟರ್‌ನಲ್ಲಿ ಬಳಸಿರುವ “ನಮ್ಮ ಯಶಸ್ಸು ಕಬಳಿಸಿ ಮೇಲೆರಲು ಅನೇಕರು ಮುಖವಾಡ ಹಾಕಿ ಬರುತ್ತಾರೆ.
ಇದು ಪ್ರಾಪಂಚಿಕ ವಾಮ ಮಾರ್ಗ ತಂತ್ರ’ ಎಂಬ ಅಂಶ ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ. ಈ ಅಂಶವನ್ನು ಜಗ್ಗೇಶ್ ಯಾರ ಕುರಿತಾಗಿ ಹೇಳಿರಬಹುದೆಂಬ ಲೆಕ್ಕಾಚಾರಗಳೂ ಆರಂಭವಾಗಿವೆ.ಅಂದಹಾಗೆ, ಇತ್ತೀಚೆಗೆ ರಕ್ಷಿತ್, ರಶ್ಮಿಕಾ ಜೊತೆಗಿನ ಬ್ರೇಕಪ್‌ನಿಂದ ಹೆಚ್ಚು ಸುದ್ದಿಯಾಗಿದ್ದರು. ಸದ್ಯ ರಕ್ಷಿತ್ ಅವರ “ಅವನೇ ಶ್ರೀಮನ್ನಾರಾಯಣ’ ಚಿತ್ರೀಕರಣ ನಡೆಯುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Sydney: ಮೈದಾನ ತೊರೆದು ಆಸ್ಪತ್ರೆಗೆ ಹೊರಟ ಬುಮ್ರಾ; ಟೀಂ ಇಂಡಿಯಾ ಪಾಳಯದಲ್ಲಿ ಆತಂಕ| Video
Groundwater Quality: ಅಂತರ್ಜಲ ಗುಣಮಟ್ಟ ವೃದ್ಧಿಗೆ ವೈಜ್ಞಾನಿಕ ಮಾರ್ಗೋಪಾಯ ಅಗತ್ಯ
Guns and Roses Review: ನೆತ್ತರ ಹಾದಿ ಪ್ರೇಮ್ ಕಹಾನಿ
Vitla: ಇಡಿ ಅಧಿಕಾರಿಗಳಂತೆ ನಟಿಸಿ ದರೋಡೆ: ದೋಚಿದ್ದು ಸುಮಾರು 30 ಲಕ್ಷ
Sydney Test: ವೇಗಿಗಳ ಉರಿದಾಳಿಗೆ ನಲುಗಿದ ಆಸೀಸ್; ಭಾರತಕ್ಕೆ ಅಲ್ಪ ಮುನ್ನಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.