Jasti Preethi; ಫೇಸ್ ಬುಕ್ ಪೋಸ್ಟ್ ಸಿನಿಮಾವಾಯಿತು..
Team Udayavani, May 2, 2024, 4:09 PM IST
ಲವ್‌ಸ್ಟೋರಿ ಸಿನಿಮಾ ಎಂದಾಗ ಟೈಟಲ್ ಕ್ಯಾಚಿಯಾಗಿರಬೇಕೆಂದು ಚಿತ್ರತಂಡಗಳು ತಲೆಕೆಡಿಸಿಕೊಳ್ಳುತ್ತವೆ. ಅದೇ ರೀತಿ ನವತಂಡವೊಂದು ಲವ್‌ಸ್ಟೋರಿಗೆ “ಜಾಸ್ತಿ ಪ್ರೀತಿ’ ಎಂಬ ಟೈಟಲ್ ಇಟ್ಟಿದೆ. ಇತ್ತೀಚೆಗೆ ಈ ಚಿತ್ರದ ಟ್ರೇಲರ್ ಹಾಗೂ ಹಾಡಿನ ಬಿಡುಗಡೆ ಸಮಾರಂಭ ನಡೆಯಿತು. ಈ ಚಿತ್ರಕ್ಕರೆ “ಮಿಡಿದ ಹೃದಯಗಳ ಮೌನರಾಗ’ ಎಂಬ ಅಡಿಬರಹವಿದೆ.
ರಿಯಲ್ ಎಸ್ಟೇಟ್ ಉದ್ಯಮಿ ಶಿವರಾಂ ಕೊಡತಿ ಬಂಡವಾಳ ಹೂಡಿದ್ದಾರೆ. ಎಸ್‌ಆರ್‌ಕೆ ಕೃಷ್ಣಪ್ಪ ಸರ್ಜಾಪುರ ಸಹ ನಿರ್ಮಾಪಕರಾಗಿ ಗುರುತಿಸಿಕೊಂಡಿದ್ದಾರೆ. ಸಿನಿಮಾಕ್ಕೆ ಕಥೆ,ಚಿತ್ರಕಥೆ, ಸಂಭಾಷಣೆ, ಸಾಹಿತ್ಯ ಬರೆದು ನಿರ್ದೇಶನ ಮಾಡಿರುವುದು ಅರುಣ್ ಮಾನವ್.
ಈ ಸಂದರ್ಭದಲ್ಲಿ ಮಾತನಾಡಿದ ನಿರ್ದೇಶಕರು, “ಪ್ರೀತಿಯ ಅವ್ಯಕ್ತಭಾವ ಜಾಸ್ತಿ ಪ್ರೀತಿಯಾಗಿದೆ. ಸಿನಿಮಾ ಹುಟ್ಟಲು ಫೇಸ್‌ಬುಕ್ ಪೇಜ್ ಕಾರಣವಾಗಿದೆ. ಹೀಗೆ ಒಮ್ಮೆ ಫೇಸ್‌ಬುಕ್ ನೋಡುವಾಗ ಒಂದು ಹುಡುಗಿಯ ಫೋಟೋ ನೋಡಿ ಕರುಳು ಚುರ್ ಅನಿಸಿತು. ಅದರ ಎಳೆಯನ್ನು ತೆಗೆದುಕೊಂಡು ಕಾಲ್ಪನಿಕ ಚಿತ್ರಕಥೆಯನ್ನು ಬರೆಯಲಾಯಿತು. ಎಲ್ಲಿಯೂ ನೋಡದೆ ಇರುವಂತಹ ಪ್ರೀತಿಯನ್ನು ಇದರಲ್ಲಿ ನೋಡಬಹುದು. ಚಿತ್ರ ಯಾವುದೇ ವ್ಯಕ್ತಿಗೆ ಸಂಬಂಧಪಟ್ಟಿರುವುದಿಲ್ಲ. ಯಾವ ದೃಶ್ಯವು ಹಿಂದಿನ ಚಿತ್ರದಲ್ಲಿ ನೋಡಿದಂತೆ ಭಾಸವಾಗುವುದಿಲ್ಲ. ವಿಭಿನ್ನ ನಿರೂಪಣೆ ಹೊಂದಿದ್ದು, ಪ್ರಾರಂಭದಿಂದ ಕೊನೆತನಕ ಊಹಿಸಲು ಕಷ್ಟವಾಗುತ್ತದೆ. ಯಾವಾಗ ಪ್ರೀತಿಯನ್ನು ತೋರ್ಪಡಿಸಲಿಕ್ಕೆ ಆಗುವುದಿಲ್ಲವೋ, ಆಗ ಸೋತು ಹೋಗುತ್ತಾನೆ. ಅದನ್ನು ಇಲ್ಲಿ ಕಾಣಬಹುದು. ಬೆಂಗಳೂರು, ಬಂಗಾರಪೇಟೆ ಸುಂದರ ತಾಣಗಳಲ್ಲಿ ಚಿತ್ರೀಕರಣ ನಡೆಸಲಾಗಿದೆ’ ಎಂದರು.
ಚಿತ್ರದಲ್ಲಿ ನಾಯಕರಾಗಿ ನಟಿಸಿರುವ ಧರ್ಮಕೀರ್ತಿರಾಜ್, “ಚಿತ್ರದಲ್ಲಿ ಇಂಟೆನ್ಸ್ ಲವ್‌ಸ್ಟೋರಿ ತುಂಬಾ ಚೆನ್ನಾಗಿ ಬಂದಿದೆ. ನಿರ್ಮಾಪಕರು ಸಿನಿಮಾಗೆ ಏನು ಕಮ್ಮಿ ಮಾಡಿಲ್ಲ. ಎಲ್ಲರೂ ಸಿನಿಮಾ ಪ್ರೀತಿಯಿಂದ ಕೆಲಸ ಮಾಡಿದ್ದಾರೆ. ನನಗೂ ಒಂದೆ ಕಡೆ ಬ್ರೇಕ್ ಸಿಗಬೇಕಂಬ ಹಂಬಲವಿದೆ. ಇದರಿಂದ ಸಿಗಬಹುದು. ಅದಕ್ಕಾಗಿ ಕಾಯ್ತಾ ಇದ್ದೇನೆ’ ಎಂಬುದು ಅವರ ಮಾತು.
ಕೃಷಿ ತಪಂಡ ನಾಯಕಿ. ಮತ್ತೂಂದು ಜೋಡಿಗಳಾಗಿ ಮುರಳಿರಾಮ್-ಶೋಭರಾಣಿ ನಟಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gurunandan: ಡಿ.27ಕ್ಕೆ ತೆರೆಗೆ ಬರುತ್ತಿಲ್ಲ ʼರಾಜು ಜೇಮ್ಸ್ ಬಾಂಡ್’ ಚಿತ್ರ
Nodidavaru Enanthare Movie: ನವೀನ್ ಶಂಕರ್ ಚಿತ್ರದ ಟೀಸರ್ ಬಂತು
BBK11: ಸತತ ಮೂರನೇ ವಾರವೂ ಕಳಪೆ ಪಟ್ಟಿ: ಖುಷಿಯಿಂದಲೇ ಜೈಲು ಸೇರಿದ ಚೈತ್ರಾ
Dhruva-Prem: ಡಿ.24ಕ್ಕೆ ʼಕೆಡಿʼ ಶಿವ ಶಿವ ಹಾಡು ರಿಲೀಸ್
Dhruva Sarja: ಪ್ರತಿ ಸಿನಿಮಾವೂ ನನಗೆ ಹೊಸ ಪಾಠ…: ಧ್ರುವ ಹೇಳಿದ್ದೇನು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.