ಸುವರ್ಣ ಸುಂದರಿಯಲ್ಲಿ ಜಯಪ್ರದಾ
Team Udayavani, Aug 22, 2018, 11:33 AM IST
ಕನ್ನಡ ಹಾಗೂ ತೆಲುಗಿನಲ್ಲಿ “ಸುವರ್ಣ ಸುಂದರಿ’ ಎಂಬ ಸಿನಿಮಾ ತಯಾರಾಗುತ್ತಿರುವ ವಿಚಾರ ನಿಮಗೆ ಗೊತ್ತಿರಬಹುದು. ಈಗ ಆ ಚಿತ್ರಕ್ಕೆ ಹಿರಿಯ ನಟಿ ಜಯಪ್ರದಾ ಎಂಟ್ರಿಕೊಟ್ಟಿದ್ದಾರೆ. ಚಿತ್ರದಲ್ಲಿ ಅವರು ಪ್ರಮುಖ ಪಾತ್ರ ಮಾಡುತ್ತಿದ್ದಾರೆ. ಈ ಚಿತ್ರವನ್ನು ಎಂ.ಎಸ್.ಎನ್ ಸೂರ್ಯ ಕಥೆ ಬರೆದು ನಿರ್ದೇಶಿಸಿದ್ದಾರೆ.
ಸುಮಾರು ಚಿತ್ರದಲ್ಲಿ ಫ್ಲ್ಯಾಶ್‌ಬ್ಯಾಕ್ ಹೆಚ್ಚಿದ್ದು, ಗ್ರಾಫಿಕ್ ಬಳಕೆ ಮಾಡಲಾಗಿದೆಯಂತೆ. ವಿಜಯನಗರ ಸಾಮ್ರಾಜ್ಯದಿಂದ ಆರಂಭವಾಗುವ ಕಥೆ ಇವತ್ತಿನ ಕಾಲಘಟ್ಟವರೆಗೆ ಸಾಗಿ ಬರಲಿದ್ದು, ಪುನರ್ಜನ್ಮದ ಕಥನವನ್ನೂ ಹೊಂದಿದೆ. ಈ ಚಿತ್ರದಲ್ಲಿ ರಾಮ್, ಸಾಕ್ಷಿ, ಪೂರ್ಣ, ಡಾ ಜಯಪ್ರದಾ, ಮಹಮ್ಮದ್ ಖಾನ್, ಸಾಯಿಕುಮಾರ್, ಅವಿನಾಶ್ ಮತ್ತಿತರರು ನಟಿಸಿದ್ದಾರೆ.
ಈಗಾಗಲೇ ಈ ಚಿತ್ರದ ಮೋಷನ್ ಪೋಸ್ಟರ್ ಅನ್ನು ಸೆಂಚುರಿ ಸ್ಟಾರ್ ಶಿವರಾಜ್ ಕುಮಾರ್ ಅವರು ಬಿಡುಗಡೆ ಮಾಡಿದ್ದಾರೆ. ಚಿತ್ರಕ್ಕೆ ಸಾಯಿ ಕಾರ್ತಿಕ್ ಅವರ ಸಂಗೀತ, ಯಲ್ಲುಮಹಂತಿ ಈಶ್ವರ್ ಅವರ ಛಾಯಾಗ್ರಹಣ, ಎಸ್ ಟೀಮ್ ನಿರ್ಮಾಣ, ಪ್ರವೀಣ್ ಪುಡಿ ಸಂಕಲನ ಈ ಚಿತ್ರಕ್ಕಿದೆ. ಎಂ.ಎಲ್ ಲಕ್ಷ್ಮಿ ಈ ಸಿನಿಮಾವನ್ನು ನಿರ್ಮಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Toxic Movie: ʼಟಾಕ್ಸಿಕ್ʼನಲ್ಲಿ ನಟಿಸಲು ಯಶ್ ಪಡೆದ ಸಂಭಾವನೆ ಎಷ್ಟು?
Toxic Movie: ಕೇವಲ 13ಗಂಟೆಯಲ್ಲೇ ʼಪುಷ್ಪ-2ʼ ದಾಖಲೆ ಉಡೀಸ್ ಮಾಡಿದ ಯಶ್ ʼಟಾಕ್ಸಿಕ್ʼ
Teertharoopa Tandeyavarige: ತೀರ್ಥರೂಪರ ಜೊತೆ ರಚನಾ
Sathish Ninasam: ಅಶೋಕನಿಗೆ ನೀನಾಸಂ ಸತೀಶ್ ಸಾಥ್
Sandalwood: ಉಪ್ಪಿ ʼಯುಐʼ ಓಟಿಟಿ ರಿಲೀಸ್ ಯಾವಾಗ?; ಚಿತ್ರತಂಡದಿಂದ ಸಿಕ್ತು ಸ್ಪಷ್ಟನೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.