Darshan: ಅಡ್ವಾನ್ಸ್ ಬುಕ್ಕಿಂಗ್ನಲ್ಲಿ ‘ಕಾಟೇರ’ ಹವಾ: ಭರ್ಜರಿ ಗೆಲುವಿನ ನಿರೀಕ್ಷೆ
Team Udayavani, Dec 26, 2023, 3:17 PM IST
ನಟ ದರ್ಶನ್ ಅಭಿನಯದ “ಕಾಟೇರ’ ಸಿನಿಮಾದ ಬಿಡುಗಡೆಗೆ ಕೌಂಟ್ ಡೌನ್ ಶುರುವಾಗಿದೆ. ಇದೇ ಶುಕ್ರವಾರ ಸಿನಿಮಾ ರಾಜ್ಯಾದ್ಯಂತ ಅದ್ಧೂರಿಯಾಗಿ ಬಿಡುಗಡೆಯಾಗಲಿದ್ದು, ವರ್ಷದ ಕೊನೆಯ ಬಿಗ್ ಬಜೆಟ್ ಮತ್ತು ಬಿಗ್ ಸ್ಟಾರ್ ಸಿನಿಮಾ “ಕಾಟೇರ’ ವನ್ನು ಕಣ್ತುಂಬಿಕೊಳ್ಳಲು ಅಭಿಮಾನಿಗಳು ಕಾತುರದಿಂದ ಕಾಯುತ್ತಿದ್ದಾರೆ.
ಇನ್ನು ಗುರುವಾರ ಮಧ್ಯರಾತ್ರಿ 12 ಗಂಟೆಗೆ ಹಲವೆಡೆ “ಕಾಟೇರ’ ಸಿನಿಮಾದ ಮೊದಲ ಪ್ರದರ್ಶನ ಆರಂಭವಾಗಲಿದೆ. ಈಗಾಗಲೇ ರಾಜ್ಯಾದ್ಯಂತ ಆಯ್ದ ಚಿತ್ರಮಂದಿರಗಳಲ್ಲಿ “ಕಾಟೇರ’ನ ಅಡ್ವಾನ್ಸ್ ಬುಕ್ಕಿಂಗ್ ಶುರುವಾಗಿದ್ದು, ಹಲವು ಶೋಗಳು ಸೋಲ್ಡೌಟ್ ಆಗಿದೆ. ಬೆಂಗಳೂರಿನ ಕೆ. ಜಿ ರಸ್ತೆಯ ಅನುಪಮಾ ಚಿತ್ರಮಂದಿರದಲ್ಲಿ “ಕಾಟೇರ’ ಬಿಡುಗಡೆಯಾಗಲಿದ್ದು, ದರ್ಶನ್ ಅಭಿಮಾನಿಗಳು ಸಂಭ್ರಮಾಚರಣೆಗೆ ಸಿದ್ಧತೆ ನಡೆಸಿದ್ದಾರೆ. ಇನ್ನುಳಿದಂತೆ ಜೆ. ಪಿ ನಗರದ ಸಿದ್ದೇಶ್ವರ, ಮಾಗಡಿ ರಸ್ತೆಯ ಪ್ರಸನ್ನ ಚಿತ್ರಮಂದಿರಗಳಲ್ಲೂ “ಕಾಟೇರ’ನನ್ನು ಅದ್ಧೂರಿಯಾಗಿ ಬರ ಮಾಡಿಕೊಳ್ಳಲು ಫ್ಯಾನ್ಸ್ ತುದಿಗಾಲಿನಲ್ಲಿದ್ದಾರೆ.
ಈಗಾಗಲೇ ಬೆಳಗಿನ ಜಾವ 5 ಗಂಟೆ ಹಾಗೂ 10 ಗಂಟೆಯ ಶೋಗಳು ಕೆಲವೆಡೆ ಸೋಲ್ಡೌಟ್ ಆಗಿದೆ. ಇನ್ನು ಕೆಲವು ಚಿತ್ರಮಂದಿರಗಳಲ್ಲಿ ಕೆಲ ಶೋಗಳು ಫಾಸ್ಟ್ ಫಿಲ್ಲಿಂಗ್ ಆಗುತ್ತಿದೆ. ಕೆಲವು ಕಡೆಗಳಲ್ಲಿ ಮಧ್ಯರಾತ್ರಿ ಹಾಗೂ ಮುಂಜಾನೆಯ ಶೋಗಳ ಟಿಕೆಟ್ ದರ 1000 ರೂ. ಮುಟ್ಟಿದೆ.
“ಕಾಟೇರ’ ಸಿನಿಮಾದಲ್ಲಿ ದರ್ಶನ್ ಹಳ್ಳಿ ಹೈದನಾಗಿ ಕುಲುಮೆಯಲ್ಲಿ ಕೆಲಸ ಮಾಡುವ ವ್ಯಕ್ತಿಯಾಗಿ ಕಾಣಿಸಿ ಕೊಂಡಿದ್ದಾರೆ. ಹಿರಿಯ ನಟಿ ಮಾಲಾಶ್ರೀ ಪುತ್ರಿ ಆರಾಧನಾ ಈ ಸಿನಿಮಾದ ಮೂಲಕ ನಾಯಕಿಯಾಗಿ ಸ್ಯಾಂಡಲ್ವುಡ್ಗೆ ಪರಿಚಯವಾಗುತ್ತಿದ್ದಾರೆ. ರಾಕ್ಲೈನ್ ವೆಂಕಟೇಶ್ ನಿರ್ಮಾಣದಲ್ಲಿ ಮೂಡಿಬಂದಿರುವ “ಕಾಟೇರ’ ಸಿನಿಮಾಕ್ಕೆ ತರುಣ್ ಸುಧೀರ್ ಆ್ಯಕ್ಷನ್-ಕಟ್ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.