![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Sep 13, 2022, 10:09 AM IST
ಕನ್ನಡದಿಂದ ತಯಾರಾಗುತ್ತಿರುವ ಪ್ಯಾನ್ ಇಂಡಿಯಾ ಸಿನಿಮಾಗಳನ್ನು ಈಗ ಇಡೀ ದೇಶ ತಿರುಗಿ ನೋಡುತ್ತಿದೆ. ಕನ್ನಡದಿಂದ ಪ್ಯಾನ್ ಇಂಡಿಯಾ ಸಿನಿಮಾಗಳು ರಿಲೀಸ್ ಆಗುತ್ತಿವೆ ಎಂದರೆ ಆ ಸಿನಿಮಾದೊಳಗೊಂದು ಗಟ್ಟಿ ಕಥೆ ಇದೆ ಎಂಬ ಮಟ್ಟಕ್ಕೆ ಕನ್ನಡ ಚಿತ್ರಗಳು ಹವಾ ಕ್ರಿಯೇಟ್ ಮಾಡಿವೆ.
ಈಗ ಆ ಸಾಲಿಗೆ ಸೇರುವ ಮತ್ತೂಂದು ಸಿನಿಮಾ “ಕಬ್ಜ’. ಈಗ ಆ ಚಿತ್ರ ಬಿಡುಗಡೆಯ ಹಂತಕ್ಕೆ ಬಂದಿದೆ. ಅದಕ್ಕೂ ಮೊದಲು ಚಿತ್ರದ ಟೀಸರ್ ಬಿಡುಗಡೆಗೆ ದಿನಾಂಕ ನಿಗದಿಯಾಗಿದೆ. ಸೆಪ್ಟೆಂಬರ್ 17 ರ ಸಂಜೆ 5 ಗಂಟೆಗೆ ಆನಂದ್ ಆಡಿಯೋ ಮೂಲಕ ಬಹು ನಿರೀಕ್ಷಿತ ಈ ಚಿತ್ರದ ಟೀಸರ್ ಬಿಡುಗಡೆಯಾಗಲಿದೆ. ಇದಕ್ಕೆ ಕಾರಣ ಉಪೇಂದ್ರ ಅವರ ಹುಟ್ಟುಹಬ್ಬ.
ಸೆ.18 ಉಪೇಂದ್ರ ಹುಟ್ಟುಹಬ್ಬವಿರುವುದರಿಂದ ನಿರ್ದೇಶಕ ಆರ್.ಚಂದ್ರು, ಉಪ್ಪಿಗೆ ಟೀಸರ್ ಗಿಫ್ಟ್ ಮಾಡುತ್ತಿದ್ದಾರೆ. ರಿಯಲ್ ಸ್ಟಾರ್ ಉಪೇಂದ್ರ ಹಾಗೂ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅಭಿನಯದ ಈ ಚಿತ್ರ ಆರಂಭದಿಂದಲೂ ನಿರೀಕ್ಷೆ ಹುಟ್ಟಿಸಿದ್ದು, ಅಭಿಮಾನಿಗಳು ಚಿತ್ರದ ಟೀಸರ್ ಯಾವಾಗ ಎಂದು ಸೋಶಿಯಲ್ ಮೀಡಿಯಾದಲ್ಲಿ ಪ್ರಶ್ನಿಸುತ್ತಲೇ ಇದ್ದರು. ಈಗ ಅದಕ್ಕೆ ಉತ್ತರ ಸಿಗುವ ಸಮಯ ಬಂದಿದೆ.
ಇದನ್ನೂ ಓದಿ:ದಸರಾ ರಜೆ : ದ.ಕ.ದಲ್ಲಿ ಸೆ. 26ರಿಂದ ಅ.10ರ ವರೆಗೆ ,ಉಡುಪಿಯಲ್ಲಿ ಅ.3ರಿಂದ 16ರ ವರೆಗೆ ರಜೆ
ಪ್ಯಾನ್ ಇಂಡಿಯಾ ಮಟ್ಟದಲ್ಲಿ “ಕೆ.ಜಿ.ಎಫ್- 2′ ಚಿತ್ರ ಈಗಾಗಲೇ ವಿಶ್ವದಾದ್ಯಂತ ವಿಜಯ ಪತಾಕೆ ಹಾರಿಸಿದೆ. ಈಗ ಕನ್ನಡದಿಂದ ಮತ್ತೂಂದು ಬಿಗ್ ಬಜೆಟ್ ಚಿತ್ರವಾಗಿ “ಕಬ್ಜ’ ಬಿಡುಗಡೆಯಾಗುತ್ತಿದ್ದು, ಈ ಚಿತ್ರವೂ ಹಿಟ್‌ಲಿಸ್ಟ್ ಸೇರುವ ಸೂಚನೆ ಸಿಕ್ಕಿದೆ. ಬಾಲಿವುಡ್ ಮಂದಿ ಕೂಡಾ ಈ ಚಿತ್ರದತ್ತ ಒಂದು ದೃಷ್ಟಿ ನೆಟ್ಟಿದ್ದಾರೆ. ಇಬ್ಬರು ಸ್ಟಾರ್ ನಟರು ಒಂದೇ ಚಿತ್ರದಲ್ಲಿರುವುದರಿಂದ ಸಹಜವಾಗಿಯೇ ನಿರೀಕ್ಷೆ ಹೆಚ್ಚಿದೆ. ಆರ್. ಚಂದ್ರು ನಿರ್ಮಿಸಿ, ನಿರ್ದೇಶಿಸಿರುವ ಈ ಚಿತ್ರದ ಚಿತ್ರೀಕರಣ ಮುಕ್ತಾಯವಾಗಿದ್ದು, ಶೀಘ್ರದಲ್ಲೇ ಬಿಡುಗಡೆ ದಿನಾಂಕ ಘೋಷಿಸಲಿದೆ ಚಿತ್ರತಂಡ.
Actor Darshan: ಪ್ರೇಮ್ – ದರ್ಶನ್ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್ ಪೋಸ್ಟರ್ ಔಟ್
Mallu Jamkhandi: ʼವಿದ್ಯಾ ಗಣೇಶʼ ನಂಬಿ ಬಂದವರು
Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು
ದಾಂಪತ್ಯ ಜೀವನಕ್ಕೆ ಕಾಲಿಟ್ಟ ಧನಂಜಯ – ಧನ್ಯತಾ: ಮದುವೆ ಬಳಿಕ ನವ ಜೋಡಿ ಹೇಳಿದ್ದೇನು?
Devil Teaser: ಚಾಲೆಂಜ್.. ಹೂಂ.. ಟೀಸರ್‌ನಲ್ಲೇ ʼಡೆವಿಲ್’ ಲುಕ್ ಕೊಟ್ಟ ʼದಾಸʼ
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
You seem to have an Ad Blocker on.
To continue reading, please turn it off or whitelist Udayavani.