Kaddha Chitra: ಕೃತಿಚೌರ್ಯದ ಮೇಲೊಂದು ಚಿತ್ರ
Team Udayavani, Aug 30, 2023, 3:54 PM IST
ನಟ ವಿಜಯ ರಾಘವೇಂದ್ರ, ನಮ್ರತಾ ಸುರೇಂದ್ರನಾಥ್ ಜೋಡಿಯಾಗಿ ನಟಿಸಿರುವ ಕದ್ದ ಚಿತ್ರ’ ಸಿನಿಮಾದ ಮೊದಲ ಟ್ರೇಲರ್ ಬಿಡುಗಡೆ ಯಾಗಿದೆ. ನಿರ್ದೇಶಕರಾದ ಪವನ್ ಒಡೆಯರ್, ರಾಘು ಶಿವಮೊಗ್ಗ ಮೊದಲಾದವರು “ಕದ್ದ ಚಿತ್ರ’ ಟ್ರೇಲರ್ ಬಿಡುಗಡೆ ಕಾರ್ಯಕ್ರಮದಲ್ಲಿ ಹಾಜರಿದ್ದು ಚಿತ್ರತಂಡಕ್ಕೆ ಶುಭ ಹಾರೈಸಿದರು.
ಇದೊಂದು ಕೃತಿಚೌರ್ಯದ ಕಥಾಹಂದರ ಹೊಂದಿರುವ ಸಿನಿಮಾ. ಬರಹಗಾರನೊಬ್ಬನ ಬದುಕಿನ ಕೇಸ್ ಸ್ಟಡಿ ಈ ಸಿನಿಮಾದಲ್ಲಿದೆ. ಜೊತೆಗೆ ಒಂದು ಕ್ರೈಂ ಎಳೆಯನ್ನು ಇಟ್ಟುಕೊಂಡು ಸಿನಿಮಾವನ್ನು ಮಾಡ ಲಾಗಿದೆ ಎಂಬುದು ಚಿತ್ರದ ಕಥಾಹಂದರದ ಬಗ್ಗೆ ಚಿತ್ರತಂಡದ ಮಾತು.
ಇದೇ ವೇಳೆ ಮಾತನಾಡಿದ ನಾಯಕ ನಟ ವಿಜಯ ರಾಘವೇಂದ್ರ, “ಆರಂಭದಲ್ಲಿ ಈ ಥರದ ಪಾತ್ರ ಮಾಡಲು ಹಿಂದೇಟು ಹಾಕಿದ್ದೆ. ಆದರೆ ನಿರ್ದೇಶನ ಸುಹಾಸ್ ಕೃಷ್ಣ ಮತ್ತು ಚಿತ್ರತಂಡದ ಮೇಲಿನ ಭರವಸೆ ಇಟ್ಟುಕೊಂಡು ಈ ಪಾತ್ರ ಒಪ್ಪಿಕೊಂಡೆ. ಪತ್ನಿ ಸ್ಪಂದನಾಗೂ ಈ ಸಿನಿಮಾದ ಕಥೆ, ಪಾತ್ರ ಮತ್ತು ತಂಡದ ಮೇಲೆ ಸಾಕಷ್ಟು ಕಾನ್ಫಿಡೆನ್ಸ್ ಇತ್ತು. ಸಿನಿಮಾದ ಕಥೆ ಮತ್ತು ಪಾತ್ರ ಆಡಿಯನ್ಸ್‌ಗೆ ಇಷ್ಟವಾಗಲಿದೆ’ ಎಂಬ ವಿಶ್ವಾಸ ವ್ಯಕ್ತಪಡಿಸಿದರು.
ಸಂದೀಪ್ ಹೆಚ್. ಕೆ ನಿರ್ಮಿಸಿರುವ “ಕದ್ದ ಚಿತ್ರ’ ಸಿನಿಮಾಕ್ಕೆ ಸುಹಾಸ್ ಕೃಷ್ಣ ನಿರ್ದೇಶನವಿದೆ. “ಕದ್ದ ಚಿತ್ರ’ ಸಿನಿಮಾದಲ್ಲಿ ನಟ ವಿಜಯ ರಾಘವೇಂದ್ರ, ನಮ್ರತಾ ಸುರೇಂದ್ರನಾಥ್ ಅವರೊಂದಿಗೆ ಬೇಬಿ ಆರಾಧ್ಯ, ರಾಘು ಶಿವಮೊಗ್ಗ, ಬಾಲಾಜಿ ಮನೋಹರ್, ಸುಜಿತ್ ಸುಪ್ರಭ, ಸ್ಟೀಫನ್, ವಿನಯ್ ರೆಡ್ಡಿ ಮೊದಲಾದವರು ಇತರ ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ.
“ಕದ್ದ ಚಿತ್ರ’ ಸಿನಿಮಾದ ಹಾಡುಗಳಿಗೆ ಕೃಷ್ಣರಾಜ್ ಸಂಗೀತ ಸಂಯೋಜಿಸಿದ್ದಾರೆ. ಚಿತ್ರಕ್ಕೆ ಗೌತಮ್ ಮನು ಛಾಯಾಗ್ರಹಣ, ಶ್ರೀ ಕ್ರೇಜಿಮೈಂಡ್ಸ್ ಸಂಕಲನವಿದೆ. ಇದೇ ಸೆಪ್ಟೆಂಬರ್ 8ಕ್ಕೆ “ಕದ್ದ ಚಿತ್ರ’ ಸಿನಿಮಾವನ್ನು ಪ್ರೇಕ್ಷಕರ ಮುಂದೆ ತರಲು ಯೋಜನೆ ಹಾಕಿಕೊಂಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Mumbai: ಭಾಗವತಿಕೆ ಮಾಡುತ್ತಿದ್ದಾಗಲೇ ಎದೆನೋವು: ಅಸುನೀಗಿದ ಕುಕ್ಕೆಹಳ್ಳಿ ವಿಟ್ಠಲ ಪ್ರಭು
Infections: ಅಗೋಚರ ಕೊಲೆಗಾರ – ಸೋಂಕುಗಳ ವಿರುದ್ಧದ ಹೋರಾಟದಲ್ಲಿ ನಾವು ಸೋಲುತ್ತಿದ್ದೇವೆಯೇ?
COPD: ಕ್ರೋನಿಕ್ ಒಬ್‌ಸ್ಟ್ರಕ್ಟಿವ್ ಪಲ್ಮನರಿ ಡಿಸೀಸ್ (ಸಿಒಪಿಡಿ)
Maryade Prashne Review: ಮಧ್ಯಮ ವರ್ಗದ ಮರ್ಯಾದೆ ಹೋರಾಟ
Laparoscopic surgery: ಸಂತಾನೋತ್ಪತ್ತಿ ಹೆಚ್ಚಿಸುವ ಲ್ಯಾಪರೊಸ್ಕೋಪಿಕ್ ಶಸ್ತ್ರಚಿಕಿತ್ಸೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.